Homeಕರ್ನಾಟಕನೀಟ್‌ ವಿರುದ್ಧ ಎಚ್‌ಡಿಕೆ ಸರಣಿ ಟ್ವೀಟ್‌; ನಂತರ ಡಿಲೀಟ್‌- ಕಾರಣ ಸ್ವಾರಸ್ಯಕರ!

ನೀಟ್‌ ವಿರುದ್ಧ ಎಚ್‌ಡಿಕೆ ಸರಣಿ ಟ್ವೀಟ್‌; ನಂತರ ಡಿಲೀಟ್‌- ಕಾರಣ ಸ್ವಾರಸ್ಯಕರ!

- Advertisement -
- Advertisement -

“ನಮ್ಮ ಮಕ್ಕಳ ಜೀವದ ಜತೆ ಚೆಲ್ಲಾಟ ಆಡುತ್ತಿರುವ ನೀಟ್ ಪರೀಕ್ಷೆ ಬಗ್ಗೆ ನಾವು ಮರು ಆಲೋಚನೆ ಮಾಡಬೇಕಿದೆ. ಈಗಾಗಲೇ ತಮಿಳುನಾಡು ಸರಕಾರ ನೀಟ್ ವಿರುದ್ಧ ನಿರ್ಣಯ ಕೈಗೊಂಡಿದೆ. ನಮ್ಮ ಸರಕಾರವೂ ಇಂತಹ ನಿಲುವಿಗೆ ಬರಲಿ. ರಾಜ್ಯದಲ್ಲಿ ಇನ್ನಷ್ಟು ವಿದ್ಯಾರ್ಥಿಗಳು ಸಂಕಲ್ಪ ಅವರ ಹಾದಿ ಹಿಡಿಯುವುದನ್ನು ತಪ್ಪಿಸಬೇಕು” ಎಂದು ಆಶಯ ವ್ಯಕ್ತಪಡಿಸಿ ಸರಣಿ ಟ್ವೀಟ್ ಮಾಡಿದ್ದ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಯವರು ಟ್ವೀಟ್‌ಗಳನ್ನು ಡಿಲೀಟ್ ಮಾಡಿದ್ದಾರೆ.

“ಸೊರಬ ತಾಲ್ಲೂಕಿನ ಚೆನ್ನಪಟ್ಟಣ ಗ್ರಾಮದ ಸಂಕಲ್ಪ ಎಂಬ ವಿದ್ಯಾರ್ಥಿನಿ ಸಾವಿಗೆ ಶರಣಾಗಿರುವುದು ನನಗೆ ತೀವ್ರ ಆಘಾತ ಉಂಟು ಮಾಡಿದೆ. ಹೀಗೆ ಜೀವವನ್ನು ಕೊನೆ ಮಾಡಿಕೊಂಡ ಆ ಯುವತಿಯ ದುರ್ಮರಣ ಎಲ್ಲರಿಗೂ ಪಾಠ ಆಗಬೇಕಿದೆ” ಎಂದು ‘ವಿಜಯವಾಣಿ’ಯಲ್ಲಿ ಪ್ರಕಟವಾದ ಸುದ್ದಿಯನ್ನು ಅವರು ಹಂಚಿಕೊಂಡಿದ್ದರು.

“ನಮ್ಮ ಶಿಕ್ಷಣ ವ್ಯವಸ್ಥೆ ಬದಲಾಗಬೇಕು ಹಾಗೂ ಉನ್ನತ ಶಿಕ್ಷಣ ಬಡ, ಸಾಮಾನ್ಯ ಮಕ್ಕಳಿಗೂ ಸಿಗಬೇಕು ಎನ್ನುವ ಕಾಳಜಿಯ ಜತೆಗೆ, ಯಾರೇ ವಿದ್ಯಾರ್ಥಿಗಳು ಸೀಟು ಸಿಗಲಿಲ್ಲ ಎನ್ನುವ ಕಾರಣಕ್ಕೆ ಸಂಕಲ್ಪ ಅವರಂತೆ ಬದುಕನ್ನು ಕೊನೆ ಮಾಡಿಕೊಳ್ಳಬಾರದು” ಎಂದು ಹೇಳಿದ್ದರು.

“ಅವಕಾಶಗಳು ಆಕಾಶದಷ್ಟು ಇವೆ. ಅನೇಕ ಕ್ಷೇತ್ರಗಳಲ್ಲಿ ಸಾಧನೆ ಮಾಡಲು ಮಾರ್ಗಗಳು ಕೂಡ ಇವೆ. ದೃಢಸಂಕಲ್ಪದೊಂದಿಗೆ ಭವಿಷ್ಯ ಕಂಡುಕೊಳ್ಳಬೇಕು. ಯಾವುದೇ ಕಾರಣಕ್ಕೂ ಸಂಕಲ್ಪ ಅವರಂತೆ ಜೀವ ತೆಗೆದುಕೊಳ್ಳಬಾರದು. ಇದು ನನ್ನ ಕಳಕಳಿಯ ಮನವಿ” ಎಂದು ಕೋರಿದ್ದರು.

“ನಮ್ಮ ಮಕ್ಕಳ ಜೀವದ ಜತೆ ಚೆಲ್ಲಾಟ ಆಡುತ್ತಿರುವ ನೀಟ್ ಪರೀಕ್ಷೆ ಬಗ್ಗೆ ನಾವು ಮರು ಆಲೋಚನೆ ಮಾಡಬೇಕಿದೆ. ಈಗಾಗಲೇ ತಮಿಳುನಾಡು ಸರಕಾರ ನೀಟ್ ವಿರುದ್ಧ ನಿರ್ಣಯ ಕೈಗೊಂಡಿದೆ. ನಮ್ಮ ಸರಕಾರವೂ ಇಂತಹ ನಿಲುವಿಗೆ ಬರಲಿ.  ರಾಜ್ಯದಲ್ಲಿ ಇನ್ನಷ್ಟು ವಿದ್ಯಾರ್ಥಿಗಳು ಸಂಕಲ್ಪ ಅವರ ಹಾದಿ ಹಿಡಿಯುವುದನ್ನು ತಪ್ಪಿಸಬೇಕು” ಎಂದು ಆಗ್ರಹಿಸಿದ್ದರು.


ಇದನ್ನೂ ಓದಿರಿ: ವಿವಾಹೇತರ ಸಂಬಂಧ ಆರೋಪ; ಮಹಿಳೆಯನ್ನು ಕಂಬಕ್ಕೆ ಕಟ್ಟಿ ಚಿತ್ರಹಿಂಸೆ- ವಿಡಿಯೊ ವೈರಲ್‌, ಪ್ರಕರಣ ದಾಖಲು


ನೀಟ್‌ ವಿರುದ್ಧ ಕುಮಾರಸ್ವಾಮಿಯವರು ಎತ್ತಿದ ಮಹತ್ವದ ಚರ್ಚೆಗೆ ಸಂಬಂಧಿಸಿದಂತೆ ವಿಜಯಕರ್ನಾಟಕ ವೆಬ್‌ಸೈಟ್‌ನಲ್ಲಿ ವರದಿ ಕೂಡ ಆಗಿದೆ. “ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ್ದರೂ ವೈದ್ಯೆಯಾಗುವ ಬಯಕೆಗೆ ತಕ್ಕಂತೆ ಸರ್ಕಾರಿ ಕೋಟಾದಲ್ಲಿ ಎಂಬಿಬಿಎಸ್ ಸೀಟು ಪಡೆದುಕೊಳ್ಳಲು ಸಾಧ್ಯವಾಗದ ಕಾರಣಕ್ಕೆ ನೊಂದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಜ್ಯಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ಕನ್ನಡಿಗರನ್ನು ಅವಕಾಶ ವಂಚಿತರನ್ನಾಗಿ ಮಾಡುತ್ತಿರುವ ನೀಟ್‌ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಯವರು ಸರಣಿ ಟ್ವೀಟ್‌ಗಳನ್ನು ಮಾಡಿ, ಘಟನೆ ಬಗ್ಗೆ ಬೇಸರ ಹೊರಹಾಕಿದ್ದಾರೆ” ಎಂದು ವರದಿ ಹೇಳಿದೆ.

ನೀಟ್ ವಿರುದ್ಧ ದನಿ ಎತ್ತಿರುವುದು ನಿಜಕ್ಕೂ ಸ್ವಾಗತಾರ್ಹ ಸಂಗತಿ. ನೀಟ್‌ ಬಡ, ಮಧ್ಯಮ ವರ್ಗದ ಪ್ರತಿಭೆಗಳನ್ನು ಆತಂಕಕ್ಕೆ ತಳ್ಳುತ್ತಿರುವುದು ನಿಜ. ಹೀಗಾಗಿಯೇ ತಮಿಳುನಾಡು ಸರ್ಕಾರ ಮಹತ್ವದ ನಿರ್ಣಯವನ್ನು ಕೈಗೊಂಡಿರುವುದಕ್ಕೆ ಪ್ರಜ್ಞಾವಂತ ವಲಯದಿಂದ ಪ್ರಶಂಸೆಯ ಮಹಾಪೂರವೇ ಹರಿದುಬಂದಿದೆ. ಇಷ್ಟೊಂದು ಮಹತ್ವದ ಸಂಗತಿಯ ಕುರಿತು ಟ್ವೀಟ್ ಮಾಡಿದ ಕುಮಾರಸ್ವಾಮಿಯವರು ಡಿಲೀಟ್ ಮಾಡುವ ಪ್ರಮೇಯವೇನಿತ್ತು ಎಂಬ ಅನುಮಾನಗಳು ಮೂಡುತ್ತವೆ.

ಈ ಕುರಿತು ಫ್ಯಾಕ್ಟ್‌ ಚೆಕ್‌ ಮಾಡಿದಾಗ, ಕುಮಾರಸ್ವಾಮಿಯವರು ಹಂಚಿಕೊಂಡಿದ್ದ ಸುದ್ದಿಯು 2020ನೇ ಇಸವಿಯದ್ದಾಗಿದ್ದು, ಹೀಗಾಗಿ ಅವರು ಟ್ವೀಟ್‌ಗಳನ್ನು ಅಳಿಸಿ ಹಾಕಿದ್ದಾರೆಂದು ಭಾವಿಸಬಹುದಾಗಿದೆ.

ಕುಮಾರಸ್ವಾಮಿಯವರು ಹಂಚಿಕೊಂಡಿರುವ ಸುದ್ದಿ ತುಣುಕು ‘ವಿಜಯವಾಣಿ’ ವೆಬ್‌ಸೈಟ್‌ದಾಗಿತ್ತು. ವಾಟ್ಸ್‌ಆಪ್‌ನಲ್ಲಿ ಬಂದ ಟ್ವಿಟರ್‌ ಲಿಂಕ್‌ನಲ್ಲಿ ಕುಮಾರಸ್ವಾಮಿಯವರು ಹಂಚಿಕೊಂಡಿರುವ ಸುದ್ದಿಯ ಸಾಲುಗಳನ್ನು ಗುರುತಿಸಬಹುದು.

“ಸಂಕಲ್ಪಗೆ 5ನೇ ತರಗತಿಯಲ್ಲಿದ್ದಾಗ ಹೃದಯಾಘಾತವಾಗಿ ಶಸ್ತ್ರಚಿಕಿತ್ಸೆಗೊಳಗಾಗಿ ಚೇತರಿಸಿಕೊಂಡಿದ್ದಳು. ಅಂದಿನಿಂದ ಡಾಕ್ಟರ್‌ ಆಗಬೇಕು ಎಂದು ಕನಸು ಕಟ್ಟಿಕೊಂಡಿದ್ದಳು. ದ್ವಿತೀಯ ಪಿಯುಸಿಯಲ್ಲಿ ಉತ್ತಮ ಅಂಕ ಗಳಿಸಿದ್ದರೂ ನೀಟ್‌ನಲ್ಲಿ ನಿರೀಕ್ಷಿತ ಅಂಕ ಗಳಿಸಲಾಗದ ಕಾರಣ ಸರ್ಕಾರಿ ಕೋಟಾದಲ್ಲಿ ಸೀಟು ಸಿಕ್ಕಿರಲಿಲ್ಲ..” ಎಂದು ಇರುವುದನ್ನು ಗಮನಿಸಬಹುದು.

ವಿಜಯವಾಣಿ ಸುದ್ದಿ ಜಾಲತಾಣದಲ್ಲಿ ಸುದ್ದಿಯನ್ನು ಹುಡುಕಿದಾಗ, ಈ ಮೇಲಿನ ಸಾಲುಗಳಿರುವ ಸುದ್ದಿಯು ಪತ್ತೆಯಾಯಿತು. “ಡಾಕ್ಟರ್‌ ಕನಸು ಕಟ್ಟಿದ್ದ ಯುವತಿ ಆತ್ಮಹತ್ಯೆ; ಶೇ. 96 ಅಂಕ ತೆಗೆದರೂ ಸಿಗದ ಸರ್ಕಾರಿ ಸೀಟು!’ ಶೀರ್ಷಿಕೆಯಲ್ಲಿ ಸುದ್ದಿ ಪ್ರಕಟವಾಗಿದೆ. ಸುದ್ದಿ ಪ್ರಕಟವಾದ ದಿನಾಂಕವನ್ನು ಪರಿಶೀಲಿಸಿದಾಗ, 2020ರ ಡಿಸೆಂಬರ್‌‌ 28 ಎಂದಿರುವುದನ್ನು ಗಮನಿಸಬಹುದು.

ಹಳೆಯ ಸುದ್ದಿ ಎಂದು ಗಮನಿಸದೆ ನೀಟ್ ರದ್ದು ಪ್ರಸ್ತಾಪವನ್ನು ಮಾಡಿದ್ದರಿಂದ ಕುಮಾರಸ್ವಾಮಿಯವರು ಸರಣಿ ಟ್ವೀಟ್‌ಗಳನ್ನು ಡಿಲೀಟ್ ಮಾಡಿರಬಹುದು ಎಂದು ಊಹಿಸಬಹುದು. ಆದರೆ ನೀಟ್ ವಿರುದ್ಧ ಕುಮಾರಸ್ವಾಮಿಯವರು ಎತ್ತಿರುವ ಪ್ರಶ್ನೆ ಮಹತ್ವದ್ದು. ನೀಟ್‌ ಶೈಕ್ಷಣಿಕ ವ್ಯವಸ್ಥೆಗೆ ಅಪಾಯಕಾರಿ. ಯುವತಿಯ ಆತ್ಮಹತ್ಯೆ ಹಳೆಯ ಸುದ್ದಿ ಎಂಬುದನ್ನು ಬಿಟ್ಟರೆ, ನೀಟ್‌ ಬಡ ಮಧ್ಯಮ ವಿದ್ಯಾರ್ಥಿಗಳ ಕತ್ತು ಹಿಸುಕುತ್ತಿರುವುದು ಸುಳ್ಳಲ್ಲ. ಅದರ ವಿರುದ್ಧ ಕರ್ನಾಟಕ ಸರ್ಕಾರ ತಮಿಳುನಾಡು ಸರ್ಕಾರದಂತೆಯೇ ನಿರ್ಣಯ ತೆಗೆದುಕೊಳ್ಳಬೇಕು ಎಂದು ಆಗ್ರಹಿಸುವುದು ಮಹತ್ವದ್ದಾಗಿದೆ.


ಇದನ್ನೂ ಓದಿರಿ: ಫ್ಯಾಕ್ಟ್‌‌ಚೆಕ್: ಕೇರಳಲ್ಲಿ RSS ಕಾರ್ಯಕರ್ತನನ್ನು ಕೊಲ್ಲುತ್ತಿರುವ ವಿಡಿಯೊ ಎಂದು ಸುಳ್ಳು ಹರಡಲಾಗುತ್ತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...