Homeಮುಖಪುಟಪುತ್ರ ವ್ಯಾಮೋಹದ ಎಫೆಕ್ಟ್‌; ಮೂರು ವರ್ಷ ಬಿಜೆಪಿ ಅಧಿಕಾರದಲ್ಲಿರುವುದು ಖಚಿತ, ಬಿಎಸ್‌ವೈ ಸ್ಥಾನ ಅನಿಶ್ಚಿತ!

ಪುತ್ರ ವ್ಯಾಮೋಹದ ಎಫೆಕ್ಟ್‌; ಮೂರು ವರ್ಷ ಬಿಜೆಪಿ ಅಧಿಕಾರದಲ್ಲಿರುವುದು ಖಚಿತ, ಬಿಎಸ್‌ವೈ ಸ್ಥಾನ ಅನಿಶ್ಚಿತ!

ಮಾಜಿ ಪ್ರಧಾನಿ ದೇವೇಗೌಡ ಮತ್ತು ಜೆಡಿಎಸ್‌ ಪಾಲಿಗೆ ಕಂಟಕವಾಗಿ ಪರಿಣಮಿಸಿದ್ದ ಅದೇ ಪುತ್ರ ವ್ಯಾಮೋಹ ಮುಖ್ಯಮಂತ್ರಿ ಯಡಿಯೂರಪ್ಪ ರಾಜಕೀಯ ಭವಿಷ್ಯಕ್ಕೂ ಮುಳ್ಳಾಗಿರುವುದು ಬಹುತೇಕ ಸ್ಪಷ್ಟವಾಗಿದೆ.

- Advertisement -
- Advertisement -

ಅದು 2006ರ ಸಮಯ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಸರ್ಕಾರ ರಾಜ್ಯದಲ್ಲಿ ಅಧಿಕಾರದಲ್ಲಿತ್ತು. ಧರ್ಮಸಿಂಗ್‌ ಮುಖ್ಯಮಂತ್ರಿಯಾಗಿದ್ದರೆ, ಸಿದ್ದರಾಮಯ್ಯ ಉಪ ಮುಖ್ಯಮಂತ್ರಿಯಾಗಿದ್ದರು. ಆದರೆ, ಆಗತಾನೆ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿ ವಿಧಾನಸಭೆ ಪ್ರವೇಶಿಸಿದ್ದ ಹೆಚ್‌.ಡಿ. ಕುಮಾರಸ್ವಾಮಿ ನಾಡಿನ ಹಿರಿಯ ರಾಜಕಾರಣಿ ಧರ್ಮಸಿಂಗ್‌ ಪಾಲಿಗೆ ಅಕ್ಷರಶಃ ದುಸ್ವಪ್ನದಂತೆ ಕಾಡಿದ್ದರು. ಕೊನೆಗೆ ಮೈತ್ರಿ ಸರ್ಕಾರವನ್ನೇ ಬೀಳಿಸಿ ಬಿಜೆಪಿ ಜೊತೆಗೆ ಕೈಜೋಡಿಸಿ ಅಪವಿತ್ರ ಮೈತ್ರಿಗೆ ನಾಂದಿ ಹಾಡಿದ್ದರು.

ಕರ್ನಾಟಕ ರಾಜಕಾರಣದ ಪಾಲಿಗೆ ಈಗಲೂ ಇದೊಂದು ಅಪವಿತ್ರ ಮೈತ್ರಿ ಮತ್ತು ಜೆಡಿಎಸ್‌ ರಾಜಕೀಯ ಹಾದಿಯ ಒಂದು ಪ್ರಮಾದ ಎಂದೇ ಬಣ್ಣಿಸಲಾಗುತ್ತದೆ. ಅಂದು ಈ ಮೈತ್ರಿಯನ್ನು ಸುಲಭಕ್ಕೆ ಮುರಿಯಬಹುದಾದ ಶಕ್ತಿ ಮಾಜಿ ಪ್ರಧಾನಿ ದೇವೇಗೌಡರಿಗೆ ಇತ್ತು. ಆದರೆ, ಪುತ್ರ ವ್ಯಾಮೋಹ ಅವರ ಕೈಯನ್ನು ಕಟ್ಟಿಹಾಕಿತ್ತು. ದಶಕದ ಹಿಂದೆ ಹೀಗೆ ನಡೆದುಹೋದ ಒಂದು ರಾಜಕೀಯ ಪ್ರಮಾದಕ್ಕೆ ಈಗಲೂ ಜೆಡಿಎಸ್‌ ಬೆಲೆ ತೆರುತ್ತಲೇ ಇದೆ.

ದಶಕದ ಹಿಂದಿನ ಈ ರಾಜಕೀಯ ಇತಿಹಾಸವನ್ನು ಈಗ ನೆನೆಪು ಮಾಡಿಕೊಳ್ಳುವುದಕ್ಕೂ ಒಂದು ಕಾರಣ ಇದೆ. ಅದೇನೆಂದರೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಮತ್ತು ಅವರ ಮಗ ಸೂಪರ್‌ ಸಿಎಂ ಖ್ಯಾತಿಯ ಬಿ.ವೈ. ವಿಜಯೇಂದ್ರ.

ಕುಟುಂಬ ರಾಜಕಾರಣ ಮತ್ತು ಪುತ್ರ ವ್ಯಾಮೋಹ ಇಂದು ಜೆಡಿಎಸ್‌ ಪಕ್ಷಕ್ಕೆ ಮುಳುವಾಗಿರುವಂತೆಯೇ, ಇದೇ ಪುತ್ರ ವ್ಯಾಮೋಹ ಮತ್ತು ತನ್ನ ರಾಜಕೀಯ ಉತ್ತರಾಧಿಕಾರಿಯನ್ನು ಬಿಜೆಪಿಯಲ್ಲಿ ಉಳಿಸಿಹೋಗಬೇಕು ಎಂಬ ಯಡಿಯೂರಪ್ಪ ಅವರ ಮಹತ್ವಾಕಾಂಕ್ಷೆ ಅವರ ರಾಜಕೀಯ ಹಾದಿಗೆ ಮುಳ್ಳಾಗಲಿದೆಯೇ? ಎಂಬ ಮಹತ್ವದ ಪ್ರಶ್ನೆಗಳು ಇಂದು ರಾಜ್ಯ ರಾಜಕೀಯದಲ್ಲಿ ತಲೆ ಎತ್ತುತ್ತಿವೆ. ಇದಕ್ಕೆ ಕಾರಣಗಳೂ ಇಲ್ಲದೆ ಏನಿಲ್ಲ.

ಈತ ಶಾಸಕನೇನಲ್ಲ ಅದರೂ ಸೂಪರ್‌ ಸಿಎಂ ಹೆಸರು ವಿಜಯೇಂದ್ರ!

ಯಡಿಯೂರಪ್ಪ ನಾಲ್ಕು ಬಾರಿ ಸಿಎಂ ಆಗಿ ಆಯ್ಕೆಯಾದವರು. ಒಂದು ಬಾರಿಯೂ ಸಹ ಪೂರ್ಣ ಪ್ರಮಾಣದ ಸಿಎಂ ಆಗಿ ಅಧಿಕಾರ ನಡೆಸದಿದ್ದರೂ ಸಹ ಈಗಲೂ ಬಿಜೆಪಿಯಲ್ಲಿ ಅವರನ್ನು ಹೊರತುಪಡಿಸಿ ಬೇರೆ ಯಾರನ್ನೂ ಸಹ ಸಿಎಂ ಸ್ಥಾನದಲ್ಲಿ ಕಲ್ಪಿಸಿಕೊಳ್ಳುವುದು ಸಾಧ್ಯವಿಲ್ಲ. ಇದೇ ಕಾರಣಕ್ಕೆ ಬಿಜೆಪಿಯಲ್ಲಿ 75 ವಯಸ್ಸಿನ ಮೇಲ್ಪಟ್ಟವರಿಗೆ ರಾಜಕೀಯ ನಿವೃತ್ತಿ ನೀಡಲಾಗುತ್ತಿದ್ದರೂ ಬಿಎಸ್‌ವೈ ಅವರನ್ನು ಮಾತ್ರ  ಹೈಕಮಾಂಡ್‌ ಏನೂ ಮಾಡಲು ಸಾಧ್ಯವಾಗಿಲ್ಲ.

ಕಳೆದ ಮೂರು ಅವಧಿಯಲ್ಲೂ ಸಹ ಯಡಿಯೂರಪ್ಪನವರಿಗೆ ಮಗ ವಿಜಯೇಂದ್ರ ಅವರನ್ನು ತಮ್ಮ ರಾಜಕೀಯ ಉತ್ತರಾಧಿಕಾರಿಯಾಗಿ ಬೆಳೆಸುವ ಯಾವುದೇ ಇರಾದೆ ಇರಲಿಲ್ಲ ಎಂದೇ ಹೇಳಲಾಗುತ್ತಿದೆ. ಏಕೆಂದರೆ ಯಡಿಯೂರಪ್ಪನವರ ಹಿಂದೆ ಸಂಸದೆ ಶೋಭಾ ಕರಂದ್ಲಾಜೆ ಇದ್ದರು. ಶೋಭ ಅವರನ್ನೇ ಯಡಿಯೂರಪ್ಪ ಅವರ ಉತ್ತರಾಧಿಕಾರಿ ಎಂದು ಬಿಂಬಿಸಲಾಗಿತ್ತು. ಆದರೆ, ಸಿಎಂ ಕುಟುಂಬದಲ್ಲಿ ನಡೆದ ಬಿಕ್ಕಟ್ಟಿನ ಕಾರಣಕ್ಕೆ ಇಂದು ಶೋಭಾ ಕರಂದ್ಲಾಜೆ ಅವರ ಜಾಗಕ್ಕೆ ಮಗ ವಿಜಯೇಂದ್ರ ಬಂದು ನಿಂತಿದ್ದಾರೆ. ಮತ್ತು ಇವರೇ ಯಡಿಯೂರಪ್ಪವರ ರಾಜಕೀಯ ಉತ್ತರಾಧಿಕಾರಿ ಎಂಬುದರಲ್ಲಿ ಎರಡು ಮಾತಿಲ್ಲ.

ವಿಜಯೇಂದ್ರ

ಈ ಬೆಳವಣಿಗೆ ಇಷ್ಟಕ್ಕೆ ಸೀಮಿತವಾಗಿದ್ದರೆ ಸಮಸ್ಯೆ ಇರುತ್ತಿರಲಿಲ್ಲವೇನೋ? ಆದರೆ, ಇದನ್ನೂ ದಾಟಿ ವಿಜಯೇಂದ್ರ ಇಂದು ಅಕ್ಷರಶಃ ಸೂಪರ್‌ ಸಿಎಂ ಎಂಬಂತೆ ವರ್ತಿಸುತ್ತಿದ್ದಾರೆ. ವಿಜಯೇಂದ್ರ ಮೂಲತಃ  ಶಾಸಕರಲ್ಲ, ಇನ್ನೂ ಪಕ್ಷದಲ್ಲೂ ಅವರಿಗೆ ದೊಡ್ಡ ಸ್ಥಾನಮಾನವೇನೂ ಇಲ್ಲ. ಕೆ.ಆರ್‌ ಪೇಟೆ ಉಪ ಚುನಾವಣೆ ಗೆಲುವನ್ನು ಹೊರತುಪಡಿಸಿ ಬೇರೆ ಯಾವ ದಾಖಲೆಯೂ ಅವರ ಬೆನ್ನಿಗಿಲ್ಲ. ಆದರೂ ಯಾವ ಕ್ಷೇತ್ರಕ್ಕೆ ಎಷ್ಟು ಅನುದಾನ ನೀಡಬೇಕು ಎಂಬಲ್ಲಿಂದ ಸರ್ಕಾರದ ಮಹತ್ವದ ಯೋಜನೆ-ಕಾಮಗಾರಿಗಳವರೆಗೆ ಎಲ್ಲವೂ ವಿಜಯೇಂದ್ರ ಅವರ ಅಂಕೆಯಲ್ಲೇ ನಡೆಯುತ್ತಿದೆ ಎಂಬುದು ಇಂದು ಗುಟ್ಟಾಗೇನು ಉಳಿದಿಲ್ಲ.

ಯಡಿಯೂರಪ್ಪನವರಿಗೆ ಕಾದಿದೆಯಾ ಕಂಟಕ?

ಮೊದಲೇ ಹೇಳಿದಂತೆ ಬಿ.ಎಸ್‌. ಯಡಿಯೂರಪ್ಪ ನಾಲ್ಕು ಬಾರಿ ಈ ರಾಜ್ಯದ ಸಿಎಂ ಆದರೂ ಸಹ ಪೂರ್ಣ ಅವಧಿಯ ಅಧಿಕಾರವನ್ನು ಪೂರೈಸಿಲ್ಲ. ಆದರೆ, ಇದೇ ಮೊದಲ ಬಾರಿಗೆ ಅವರಿಗೆ ಮುಂದಿನ ಮೂರು ವರ್ಷ ಸಿಎಂ ಆಗಿ ಮುಂದುವರೆಯುವ ಅವಕಾಶ ಇದೆ. ಈ ನಡುವೆ ಇಂತಹ ಸವರ್ಣಾವಕಾಶವನ್ನು ಸ್ವತಃ ಅವರೇ ತಮ್ಮ ಕೈಯಾರೆ ಹಾಳು ಮಾಡಿಕೊಳ್ಳುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿದೆ. ಇದಕ್ಕೆ ಕಾರಣ ಪುತ್ರ ವ್ಯಾಮೋಹ.

ಇಂದು ರಾಜ್ಯ ಬಿಜೆಪಿಯಲ್ಲಿ ಮೇಲ್ನೋಟಕ್ಕೆ ಎಲ್ಲವೂ ಸರಿ ಇದ್ದಂತೆ ಕಂಡುಬಂದರೂ ಸಹ ಪಕ್ಷದೊಳಗಿನ ಒಳ ಬೇಗುದಿ ಇನ್ನೂ ತಣ್ಣಗಾಗಿಲ್ಲ. ಒಂದೆದೆ ಡಿಸಿಎಂ ಸ್ಥಾನಕ್ಕೆ ಶ್ರೀರಾಮುಲು ಹಿಡಿದ ಪಟ್ಟು ಇನ್ನೂ ಸಡಿಲಿಸಿಲ್ಲ ಮತ್ತೊಂದೆಡೆ ಸಚಿವ ಸ್ಥಾನಾಕಾಂಕ್ಷಿಗಳಾದ ಉಮೇಶ್‌ ಕತ್ತಿ, ರೇಣುಕಾಚಾರ್ಯ, ಮುರುಗೇಶ್‌ ನಿರಾಣಿಯಂತಹ ಹಿರಿಯ ಶಾಸಕರು ಯಡಿಯೂರಪ್ಪ ವಿರುದ್ಧ ತೆರೆಯ ಮರೆಯಲ್ಲೇ ಕತ್ತಿ ಮಸೆಯುತ್ತಿರುವುದೇನೂ ಇಂದು ಗುಟ್ಟಾಗಿ ಉಳಿದಿಲ್ಲ. ಈ ನಡುವೆ ಯಡಿಯೂರಪ್ಪನವರ ಪುತ್ರ ವ್ಯಾಮೋಹ ಮತ್ತು ವಿಜಯೇಂದ್ರ ಅವರ ಸೂಪರ್‌ ಸಿಎಂ ನಡವಳಿಕೆ ಭವಿಷ್ಯದಲ್ಲಿ ಯಡಿಯೂರಪ್ಪವರಿಗೆ ದುಬಾರಿಯಾಗುವ ಎಲ್ಲಾ ಲಕ್ಷಣಗಳನ್ನೂ ಕಣ್ಣೆದುರು ತೆರೆದಿಟ್ಟಿದೆ.

ಪಕ್ಷದ ಹಿರಿಯ ಶಾಸಕರು ತಮ್ಮ ಕ್ಷೇತ್ರದ ಕುಂದುಕೊರತೆಗಳನ್ನು ಹೇಳಿಕೊಳ್ಳಲು ಬಂದರೂ ಸಹ ಯಡಿಯೂರಪ್ಪ ಎಲ್ಲರಿಗೂ ವಿಜಯೇಂದ್ರ ಕಡೆಗೆ ಬೊಟ್ಟು ಮಾಡುತ್ತಿದ್ದಾರೆ. ಇದು ಸಾಮಾನ್ಯವಾಗಿ ಎಲ್ಲಾ ಶಾಸಕರ ಅಸಮಾಧಾನಕ್ಕೆ ಕಾರಣವಾಗಿದೆ. ಹೀಗಾಗಿ ಸದ್ದಿಲ್ಲದೆ ಸಿಎಂ ವಿರುದ್ಧ ಒಂದು ಗುಂಪು ಧೃವೀಕರಣಗೊಳ್ಳುತ್ತಿದೆ. ಉಮೇಶ್‌ ಕತ್ತಿ ಇದರ ನಾಯಕ ಎನ್ನಲಾಗುತ್ತಿದೆ.

ಉಮೇಶ್‌ ಕತ್ತಿ

ಇದಲ್ಲದೆ ಮೊನ್ನೆ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಸ್ವತಃ 15ಕ್ಕೂ ಹೆಚ್ಚು ಲಿಂಗಾಯತ ಸಮುದಾಯದ ಶಾಸಕರು ಈ ವಿಚಾರವನ್ನು ಎತ್ತಿದ್ದಾರೆ, ಬಿಎಸ್‌ವೈ ನಡೆಯನ್ನು ಖಂಡಿಸಿದ್ದಾರೆ. ವಿಜಯಪುರದ ವಿವಾದಾತ್ಮಕ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಸಹ, “ನಾನು ವಾಜಪೇಯಿ ಕಾಲದಲ್ಲಿ ಕೇಂದ್ರ ಸಚಿವನಾಗಿದ್ದವನು. ನನ್ನಂತವನು ಅನುದಾಕ್ಕಾಗಿ ಕೋರಿ ಶಾಸಕನಾಗಿ ವಿಧಾನಸಭೆಯನ್ನೂ ಪ್ರವೇಶಿಸದ ವಿಜಯೇಂದ್ರನ ಎದುರು ನಿಲ್ಲಬೇಕೆ?” ಎಂದು ಕಟುವಾಗಿ ಟೀಕಿಸಿದ್ದಾರೆ ಎನ್ನಲಾಗುತ್ತಿದೆ.

ಬಸನಗೌಡ ಪಾಟೀಲ ಯತ್ನಾಳ್‌

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಬಳಿ ರಾಜ್ಯದ ಹಿರಿಯ ಬಿಜೆಪಿ ಶಾಸಕರು ಈಗಾಗಲೇ ಈ ಕುರಿತ ದೂರನ್ನು ತಲುಪಿಸಿದ್ದಾರೆ. ಅಲ್ಲದೆ, ಬಿಎಸ್‌ವೈ ವಿರುದ್ದ ಉಮೇಶ್‌ ಕತ್ತಿ ನೇತೃತ್ವದಲ್ಲಿ ಸದ್ದಿಲ್ಲದೆ ಒಂದು ಬಣ ಬಂಡಾಯವೇಳಲು ಸಿದ್ಧತೆ ನಡೆಸಿದ್ದಾರೆ ಎಂಬಂತಹ ಮಾಹಿತಿಗಳು ಲಭ್ಯವಾಗುತ್ತಿವೆ. ಒಂದು ವೇಳೆ ಇದು ನಿಜವಾದರೆ ಮುಂದಿನ ಮೂರು ವರ್ಷಗಳ ಕಾಲ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇರುವುದು ಖಚಿತ. ಆದರೆ, ಬಿಎಸ್‌ವೈ ಸಿಎಂ ಸ್ಥಾನ ಅನಿಶ್ಚಿತ ಎನ್ನಲಾಗುತ್ತಿದೆ.

ಒಟ್ಟಾರೆ ಪ್ರಸ್ತುತ ರಾಜ್ಯ ರಾಜಕೀಯದ ಎಲ್ಲಾ ಸನ್ನಿವೇಶಗಳನ್ನೂ ಹಿಂದಿನ ರಾಜಕೀಯ ಇತಿಹಾಸದ ಜೊತೆಗೆ ತಾಳೆ ಹಾಕಿ ನೋಡಿದರೆ ಮಾಜಿ ಪ್ರಧಾನಿ ದೇವೇಗೌಡ ಮತ್ತು ಜೆಡಿಎಸ್‌ ಪಾಲಿಗೆ ಕಂಟಕವಾಗಿ ಪರಿಣಮಿಸಿದ್ದ ಅದೇ ಪುತ್ರ ವ್ಯಾಮೋಹ ಮುಖ್ಯಮಂತ್ರಿ ಯಡಿಯೂರಪ್ಪ ರಾಜಕೀಯ ಭವಿಷ್ಯಕ್ಕೂ ಮುಳ್ಳಾಗಿರುವುದು ಬಹುತೇಕ ಸ್ಪಷ್ಟವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...