Homeರಾಜಕೀಯ‘ನಮ್ಮ ಹೋಂವರ್ಕ್‌ ಪರಿಶೀಲಿಸಲು ಅವರು ನಮ್ಮ ಹೆಡ್‌‌ಮಾಸ್ಟರ್‌‌‌ ಅಲ್ಲ: ಲೆಫ್ಟಿನೆಂಟ್‌ ಗವರ್ನರ್‌‌‌‌ ವಿರುದ್ಧ ದೆಹಲಿ ಸಿಎಂ...

‘ನಮ್ಮ ಹೋಂವರ್ಕ್‌ ಪರಿಶೀಲಿಸಲು ಅವರು ನಮ್ಮ ಹೆಡ್‌‌ಮಾಸ್ಟರ್‌‌‌ ಅಲ್ಲ: ಲೆಫ್ಟಿನೆಂಟ್‌ ಗವರ್ನರ್‌‌‌‌ ವಿರುದ್ಧ ದೆಹಲಿ ಸಿಎಂ ಆಕ್ರೋಶ

- Advertisement -
- Advertisement -

ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ ಅವರು ರಾಜ್ಯ ಸರ್ಕಾರದ ಕಾರ್ಯನಿರ್ವಹಣೆಯಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಆರೋಪಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೋಮವಾರ ಅವರ ಮನೆಗೆ ಪ್ರತಿಭಟನಾ ರ್‍ಯಾಲಿ ನಡೆಸಿದ್ದಾರೆ. ಶಾಲಾ ಶಿಕ್ಷಕರನ್ನು ಫಿನ್‌ಲ್ಯಾಂಡ್‌ಗೆ ಕಳುಹಿಸುವ ದೆಹಲಿ ಸರ್ಕಾರದ ಪ್ರಸ್ತಾವನೆಯನ್ನು ಲೆಫ್ಟಿನೆಂಟ್‌ ಗವರ್ನರ್‌‌ ತಿರಸ್ಕರಿಸಿದ್ದು, ಕೇಜ್ರಿವಾಲ್ ಸರ್ಕಾರದ ನಡುವೆ ಮತ್ತೆ ಸಂಘರ್ಷ ಉಂಟು ಮಾಡಿದೆ.

ಲೆಫ್ಟಿನೆಂಟ್‌ ಗವರ್ನರ್‌‌‌ ವಿರುದ್ಧ ವಾಗ್ದಾಳಿ ನಡೆಸಿರುವ ಕೇಜ್ರಿವಾಲ್, “ದೆಹಲಿ ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಬಯಸುತ್ತದೆ ಸರ್ವಾಧಿಕಾರವನ್ನು ಬಯಸುವುದಿಲ್ಲ ಆದರೆ . ಜನರ ಹಕ್ಕುಗಳಿಗಾಗಿ ನಮ್ಮ ಹೋರಾಟ ಮುಂದುವರಿಯುತ್ತದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವರ್ಗಾವಣೆಗೊಂಡ ವಿಷಯಗಳಲ್ಲಿ ನಿರ್ಧಾರ ತೆಗೆದುಕೊಳ್ಳುವ ಅಧಿಕಾರ ಲೆಫ್ಟಿನೆಂಟ್‌ ಗವರ್ನರ್‌‌‌ಗೆ ಇಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟವಾಗಿ ಹೇಳಿದ್ದರೂ ಅವರು ಕೇಳುತ್ತಿಲ್ಲ. ಅವರು ನಿರ್ವಾಹಕರಾಗಿದ್ದು, ಸರ್ವೋಚ್ಚ ಅಧಿಕಾರವನ್ನು ಹೊಂದಿದ್ದಾರೆ. ಅದಕ್ಕಾಗಿ ತಾನು ಏನು ಬೇಕಾದರೂ ಮಾಡಬಹುದು ಎಂದು ಅವರು ಹೇಳುತ್ತಿದ್ದಾರೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

“ದೆಹಲಿ ಸರ್ಕಾರಿ ಶಾಲಾ ಶಿಕ್ಷಕರನ್ನು ಫಿನ್‌ಲ್ಯಾಂಡ್‌ಗೆ ಕಳುಹಿಸುವ ಫೈಲ್ ಪ್ರಸ್ತಾವನೆಯನ್ನು ಲೆಫ್ಟಿನೆಂಟ್‌ ಗವರ್ನರ್‌‌‌ ಹಿಂತಿರುಗಿಸಿ, ವೆಚ್ಚದ ಲಾಭದ ವಿಶ್ಲೇಷಣೆಯನ್ನು ಮಾಡುವಂತೆ ಕೇಳಿದ್ದಾರೆ. ಅವರು ದೇಶದ ಒಳಗಡೆಯೆ ಎಲ್ಲಾದರೂ ಶಿಕ್ಷಕರಿಗೆ ತರಬೇತಿ ನೀಡಿ ಎಂದು ಹೇಳುತ್ತಿದ್ದಾರೆ. ಲೆಫ್ಟಿನೆಂಟ್‌ ಗವರ್ನರ್‌‌ ಮತ್ತು ಬಿಜೆಪಿ ನಮ್ಮ ಮಕ್ಕಳ ಶಿಕ್ಷಣವನ್ನು ಹಾಳು ಮಾಡಲು ಪ್ರಯತ್ನಿಸುತ್ತಿವೆ ಎಂದು ಮುಖ್ಯಮಂತ್ರಿ ಆರೋಪಿಸಿದ್ದಾರೆ.

ರಾಜಕೀಯ ಕಾರಣಗಳಿಗಾಗಿ ದೆಹಲಿ ಸರ್ಕಾರದ ಕಾರ್ಯಗಳನ್ನು ಉದ್ದೇಶಪೂರ್ವಕವಾಗಿ ಅಡ್ಡಿಪಡಿಸಲಾಗುತ್ತಿದೆ ಎಂದು ಕೇಜ್ರಿವಾಲ್ ಆರೋಪಿಸಿದ್ದು, “ಲೆಫ್ಟಿನೆಂಟ್‌ ಗವರ್ನರ್‌ ಅವರು ನಮ್ಮ ಹೋಂ ವರ್ಕ್‌‌ಗಳನ್ನು ಪರಿಶೀಲಿಸಲು ಅವೇರೇನು ನಮ್ಮ ಮುಖ್ಯೋಪಾಧ್ಯಾಯರಲ್ಲ. ಅವರು ನಮ್ಮ ಪ್ರಸ್ತಾಪಗಳಿಗೆ ಹೌದು ಅಥವಾ ಇಲ್ಲ ಎಂದಷ್ಟೆ ಹೇಳಬೇಕು” ಎಂದು ತಿಳಿಸಿದ್ದಾರೆ.

“ಲೆಫ್ಟಿನೆಂಟ್‌ ಗವರ್ನರ್‌ ಸಾಹೇಬರೇ ಶಿಕ್ಷಕರನ್ನು ಫಿನ್‌ಲ್ಯಾಂಡ್‌ಗೆ ಹೋಗಲು ಬಿಡಿ” ಎಂಬ ಫಲಕಗಳನ್ನು ಮುಖ್ಯಮಂತ್ರಿ ಪ್ರತಿಭಟನಾ ರ್‍ಯಾಲಿಯಲ್ಲಿ ಹಿಡಿದಿದ್ದರು.

ಇದೇ ವೇಳೆ ಇಂದು ಆರಂಭವಾಗಬೇಕಿದ್ದ ದೆಹಲಿ ವಿಧಾನಸಭೆ ಅಧಿವೇಶನವನ್ನು ಜನವರಿ 17ಕ್ಕೆ ಮುಂದೂಡಲಾಗಿದೆ.

ಇದನ್ನೂ ಓದಿ: ಗುತ್ತಿಗೆದಾರರಿಂದ ಬಿಜೆಪಿ ಶಾಸಕನ ವಿರುದ್ಧ ಮತ್ತೆ ಕಮೀಷನ್ ಆರೋಪ; ಆಡಿಯೋ ರಿಲೀಸ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...