Homeಮುಖಪುಟಉತ್ತರಪ್ರದೇಶ: ಮತ್ತೊಬ್ಬ ಮಹಿಳೆಗಾಗಿ ಹೆಂಡತಿ, ಪುಟ್ಟ ಮಕ್ಕಳನ್ನು ಕೊಂದು, ಮನೆಯಲ್ಲಿ ಹೂತು ಪರಾರಿಯಾಗಿದ್ದ ವ್ಯಕ್ತಿ ಬಂಧನ

ಉತ್ತರಪ್ರದೇಶ: ಮತ್ತೊಬ್ಬ ಮಹಿಳೆಗಾಗಿ ಹೆಂಡತಿ, ಪುಟ್ಟ ಮಕ್ಕಳನ್ನು ಕೊಂದು, ಮನೆಯಲ್ಲಿ ಹೂತು ಪರಾರಿಯಾಗಿದ್ದ ವ್ಯಕ್ತಿ ಬಂಧನ

- Advertisement -
- Advertisement -

ಪಶ್ಚಿಮ ಉತ್ತರಪ್ರದೇಶದ ಕಸ್ಗಂಜ್ ಜಿಲ್ಲೆಯ ಪೊಲೀಸರು 2018 ರಲ್ಲಿ ಪತ್ನಿ ಮತ್ತು ಮಕ್ಕಳನ್ನು ಕೊಲೆಗೈದು, ಮನೆಯಲ್ಲಿ ಹೂತು ಹಾಕಿ, ಅಪರಾಧದಿಂದ ತಪ್ಪಿಸಿಕೊಳ್ಳಲು ತಾನು ಸಾವನ್ನಪ್ಪಿರುವ ಹಾಗೆ ಮತ್ತೊಬ್ಬ ವ್ಯಕ್ತಿಯನ್ನು ಕೊಲೆ ಮಾಡಿ ಪರಾರಿಯಾಗಿದ್ದ ವ್ಯಕ್ತಿಯನ್ನು ಬಂಧಿಸಿದ್ದಾರೆ.

ಪತ್ನಿ ಮತ್ತು ಮಕ್ಕಳನ್ನು ಕೊಲೆ ಮಾಡಿ ಅವರ ಶವಗಳನ್ನು ಮನೆಯಲ್ಲಿಯೇ ಹೂತು ಹಾಕಿದ್ದರು. ಮೂರು ವರ್ಷಗಳ ಹಿಂದಿನ ಘೋರ ಅಪರಾಧ ಪ್ರಕರಣವನ್ನು ಶೋಧಿಸುವಲ್ಲಿ ಸಫಲರಾಗಿದ್ದೇವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪೊಲೀಸರು ಹೇಳುವಂತೆ, 34 ವರ್ಷದ ರಾಕೇಶ್, 2018 ರಲ್ಲಿ ಗ್ರೇಟರ್ ನೋಯ್ಡಾದಲ್ಲಿರುವ ಖಾಸಗಿ ಪ್ರಯೋಗಾಲಯದಲ್ಲಿ ರೋಗಶಾಸ್ತ್ರಜ್ಞನಾಗಿ ಕೆಲಸ ಮಾಡುತ್ತಿದ್ದು, ಮತ್ತೊಬ್ಬ ಮಹಿಳೆಯೊಂದಿಗೆ ಸಂಬಂಧವಿದ್ದ ಕಾರಣ ತನ್ನ ಸಂಸಾರದ ಎಲ್ಲರನ್ನು ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳಡಯನ್ನು ಕೂಡ ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ: ತುಮಕೂರು: ದನ ಮೇಯಿಸಲು ಹೋಗಿದ್ದ ಮಹಿಳೆ ಮೇಲೆ ಅತ್ಯಾಚಾರ, ಕೊಲೆ- ತನಿಖೆಗೆ ತಂಡ ರಚನೆ

ಆರೋಪಿ, ಆತನ ಕುಟುಂಬದ ಮೂವರು ಸದಸ್ಯರು ಹಾಗೂ ಮಹಿಳೆಯನ್ನು ಬಂಧಿಸಲಾಗಿದೆ. ಆರೋಪಿಯ ತಂದೆ ನಿವೃತ್ತ ಪೊಲೀಸ್ ಆಗಿದ್ದು, ಈ ಕೊಲೆಯ ವಿವಿಧ ಹಂತಗಳಲ್ಲಿ ಆರೋಪಿಯ ಕುಟುಂಬ ಆತನಿಗೆ ಸಹಾಯ ಮಾಡಿದೆ ಎಂದು ಪೊಲೀಸರು ಹೇಳಿದ್ದಾರೆ.

“ಆರೋಪಿ ರಾಕೇಶ್, ತನ್ನ ಹೆಂಡತಿ ಮತ್ತು ಇಬ್ಬರು ಮಕ್ಕಳನ್ನು 2018 ರ ಫೆಬ್ರವರಿಯಲ್ಲಿ ಕೊಲೆ ಮಾಡಿದ್ದರು. ಮಕ್ಕಳಲ್ಲಿ ಒಂದು ಮಗುವಿಗೆ ಮೂರು ವರ್ಷ ಮತ್ತೊಂದು ಮಗುವಿಗೆ 18 ತಿಂಗಳು. ಕೊಲೆ ಮಾಡಿ ಶವಗಳನ್ನು ಮನೆಯಲ್ಲಿ ಹೂತು ಹಾಕಿ, ಅದರ ಮೇಲೆ ಸಿಮೆಂಟ್ ಕಾಂಕ್ರಿಟ್ ಹಾಕಿದ್ದರು. ಬಳಿಕ ಪೊಲೀಸ್ ಠಾಣೆಗೆ ತೆರಳಿ ಹೆಂಡತಿ, ತನ್ನ ಮಕ್ಕಳೊಂದಿಗೆ ಕಾಣೆಯಾಗಿದ್ದಾರೆ ಎಂದು ದೂರು ದಾಖಲಿಸಿದ್ದರು” ಎಂದು ಕಸ್ಗಂಜ್ ಪೊಲೀಸ್ ಮುಖ್ಯಸ್ಥ ರೋಹನ್ ಪ್ರಮೋದ್ ಬೋತ್ರೆ ಹೇಳಿದ್ದಾರೆ.

“ಮಗಳು ನಾಪತ್ತೆಯಾದ ಕೆಲವು ತಿಂಗಳುಗಳ ನಂತರ, ರಾಕೇಶ್ ಅವರ ಮಾವ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅಪಹರಣ ಮತ್ತು ವರದಕ್ಷಿಣೆ ಕಿರುಕುಳ ಆರೋಪದ ಮೇಲೆ ನೋಯ್ಡಾದಲ್ಲಿ ಪೋಲಿಸ್ ಕೇಸ್ ದಾಖಲಿಸಿದರು. ನೋಯ್ಡಾ ಪೊಲೀಸರು ಕಾಣೆಯಾದ ಪ್ರಕರಣ ಮತ್ತು ಮಾವ ದಾಖಲಿಸಿದ ಪ್ರಕರಣ ಎರಡನ್ನೂ ತನಿಖೆ ಮಾಡುತ್ತಿದ್ದರು, ಆದರೆ ಎರಡೂ ಪ್ರಕರಣಗಳಲ್ಲಿ ಯಾವುದೇ ಪ್ರಮುಖ ಸುಳಿವು ಸಿಕ್ಕಿರಲಿಲ್ಲ” ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಆಸ್ತಿ ಮಾರಾಟ, ಬೆಲೆ ಏರಿಕೆ: ಕರ್ನಾಟಕ ಕಾಂಗ್ರೆಸ್‌ನಿಂದ ’ಬಿಜೆಪಿಯ ಲೂಟಿಯ ವಿರುದ್ದ ಭಾರತ’ ಅಭಿಯಾನ

“ಈ ಅಪರಾಧಗಳಿಂದ ತಪ್ಪಿಸಿಕೊಳ್ಳಲು ಆರೋಪಿ ಮತ್ತು ಅವನ ಗೆಳತಿ ಸೇರಿಕೊಂಡು ಕಸ್ಗಂಜ್‌ನ ತನ್ನ ಹಳ್ಳಿಯಲ್ಲಿ ರಾಕೇಶ್‌ನನ್ನೇ ಹೋಲುತ್ತಿದ್ದ ಇನ್ನೊಬ್ಬ ವ್ಯಕ್ತಿಯನ್ನು ಕೊಲೆ ಮಾಡಿದ್ದರು. ಕೊಲೆ ಮಾಡಿ ಆತನ ತಲೆ ಮತ್ತು ಕೈಗಳನ್ನು ಕತ್ತರಿಸಿ ಬೇರೆಡೆ ಸುಟ್ಟುಹಾಕಿದರು. ನಂತರ ರಾಕೇಶ್ ಬಟ್ಟೆಗಳನ್ನು ಮೃತದೇಹಕ್ಕೆ ಹಾಕಿ, ತನ್ನ ಗುರುತಿನ ಚೀಟಿಯಲ್ಲಿ ಶವದ ಮೇಲೆ ಎಸೆದು ಹರಿಯಾಣಕ್ಕೆ ಪರಾರಿಯಾಗಿದ್ದರು” ಎಂದು ವಿವರಿಸಿದ್ದಾರೆ.

ಬಳಿಕ ಕಸ್ಗಂಜ್‌ನಲ್ಲಿ ಈ ಕೊಲೆಯ ಬಗ್ಗೆ ದೂರು ದಾಖಲಾಗಿ, ತಲೆಯಿಲ್ಲದ ಶವದ ಡಿಎನ್‌ಎ ಪರೀಕ್ಷೆ ನಡೆಸಿದ ಬಳಿಕ ಇದು ರಾಕೇಶ್ ಶವವಲ್ಲ ಎಂದು ತಿಳಿದು ಬಂದಿದೆ. ನಂತರ ಪೊಲೀಸರು ಈ ಬಗ್ಗೆ ಹೆಚ್ಚಿನ ತನಿಖೆ ಆರಂಭಿಸಿದ್ದಾರೆ. ಆತ ಹರಿಯಾಣದಲ್ಲಿ ದಿಲೀಪ್ ಶರ್ಮಾ ಎಂಬ ಹೆಸರಿನಲ್ಲಿ ವಾಸಿಸುತ್ತಿದ್ದು ಪತ್ತೆಯಾಗಿ ಪೊಲೀಸರು ಬಂಧಿಸಿದ್ದಾರೆ.

ಒಟ್ಟಾರೆ ಮೊದಲು ಮಾಡಿದ ಮೂರು ಕೊಲೆಗಳನ್ನು ಮುಚ್ಚಿಡಲು, ಮತ್ತೊಂದು ಕೊಲೆ ಮಾಡಿ ಪರಾರಿಯಾಗಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೂರು ವರ್ಷಗಳ ಹಿಂದಿನ ಪ್ರಕರಣ ಬಹಿರಂಗವಾಗಿದೆ. ಆದರೆ, ಈ ಘಟನೆಯಿಂದ ಗ್ರೆಟರ್‌ ನೋಯ್ಡಾದ ಜನ ಬೆಚ್ಚಿಬಿದ್ದಿದ್ದಾರೆ.


ಇದನ್ನೂ ಓದಿ: ಜಾಮೀನು ನೀಡದ ನ್ಯಾಯಾಧೀಶನ ಬರ್ಬರ ಕೊಲೆ: ಸುಮೊಟೋ ಪ್ರಕರಣದ ದಾಖಲಿಸಿದ ಸುಪ್ರೀಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...