Homeಕರ್ನಾಟಕಕಲಬುರಗಿ: ಮಕ್ಕಳಿಂದ ಶೌಚಾಲಯ ಸ್ವಚ್ಛತೆ ಪ್ರಕರಣ; ಮುಖ್ಯ ಶಿಕ್ಷಕಿ ವಿರುದ್ಧ ಎಫ್‌ಐಆರ್‌

ಕಲಬುರಗಿ: ಮಕ್ಕಳಿಂದ ಶೌಚಾಲಯ ಸ್ವಚ್ಛತೆ ಪ್ರಕರಣ; ಮುಖ್ಯ ಶಿಕ್ಷಕಿ ವಿರುದ್ಧ ಎಫ್‌ಐಆರ್‌

- Advertisement -
- Advertisement -

ಕಲಬುರಗಿಯ ಮೌಲಾನಾ ಆಝಾದ್ ಮಾದರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛತೆ ಮತ್ತು ಮುಖ್ಯಶಿಕ್ಷಕಿ ನಿವಾಸದಲ್ಲಿ ತೋಟಗಾರಿಕೆ ಕೆಲಸವವನ್ನು ಮಾಡಲು ವಿದ್ಯಾರ್ಥಿಗಳ ಬಳಕೆ ಆರೋಪ ಕೇಳಿ ಬಂದಿತ್ತು, ಇದೀಗ ಶಾಲಾ ಮುಖ್ಯ ಶಿಕ್ಷಕಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶಾಲಾ ವಿದ್ಯಾರ್ಥಿಯೋರ್ವನ ಪೋಷಕರ ದೂರಿನ ಮೇರೆಗೆ ಮೌಲಾನಾ ಆಜಾದ್ ಮಾದರಿ ಇಂಗ್ಲಿಷ್ ಮಾದ್ಯಮ  ಶಾಲೆಯ ಮುಖ್ಯೋಪಾಧ್ಯಾಯಿನಿ ಜೋಹರ್ ಜಬೀನಾ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಮುಖ್ಯೋಪಾಧ್ಯಾಯಿನಿ ವಿದ್ಯಾರ್ಥಿಗಳಲ್ಲಿ ಶಾಲೆಯ ಶೌಚಾಲಯಗಳನ್ನು ಶುಚಿ ಮಾಡಿಸುತ್ತಿದ್ದರು ಮತ್ತು ಪ್ರಾಂಶುಪಾಲೆಯ ನಿವಾಸದ ತೋಟದಲ್ಲಿ ಕೆಲಸ ಮಾಡಿಸುತ್ತಿದ್ದರು. ಮನೆಕೆಲಸಕ್ಕೆ ವಿದ್ಯಾರ್ಥಿಗಳನ್ನು ಬಳಸಿಕೊಳ್ಳದಂತೆ ಮುಖ್ಯಶಿಕ್ಷಕಿಗೆ ಎಚ್ಚರಿಕೆ ನೀಡಿದರೂ ಸುಧಾರಿಸಲಿಲ್ಲ ಎಂದು ದೂರುದಾರ ಮಹಮ್ಮದ್ ಜಮೀರ್ ದೂರಿನಲ್ಲಿ ಉಲ್ಲೇಖಿಸಿದ್ದರು.

ಜಮೀರ್ ನೀಡಿದ ದೂರಿನ ಮೇರೆಗೆ ನಾವು ಐಪಿಸಿ ಸೆಕ್ಷನ್ 506 ಮತ್ತು ಕರ್ನಾಟಕ ಮ್ಯಾನುಯಲ್ ಸ್ಕ್ಯಾವೆಂಜರ್ಸ್ ಮತ್ತು ಪುನರ್ವಸತಿ ಕಾಯಿದೆ 2013ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದೇವೆ ಎಂದು ರೋಜಾ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಅನೀಸ್ ಮುಜಾವರ್ ತಿಳಿಸಿದ್ದಾರೆ. ಈ ಬಗ್ಗೆ ಶಾಲೆಗೆ ಭೇಟಿ ನೀಡಿ ಇತರೆ ವಿದ್ಯಾರ್ಥಿಗಳು  ಶೌಚಾಲಯ ಸ್ವಚ್ಛಗೊಳಿಸುತ್ತಿದ್ದರಾ ಅಥವಾ ಪ್ರಾಂಶುಪಾಲರ ಮನೆಯಲ್ಲಿ ಕೆಲಸ ಮಾಡುತ್ತಿದ್ದಾರಾ ಎಂಬ ಬಗ್ಗೆ ತನಿಖೆ ನಡೆಸುವುದಾಗಿ ತಿಳಿಸಿದ್ದಾರೆ.

ಶನಿವಾರ ಎಲ್ಲಾ ವಿದ್ಯಾರ್ಥಿಗಳು ತಮ್ಮ ಮನೆಗಳನ್ನು ತಲುಪಿದರೂ ನನ್ನ ಮಗ ಮಧ್ಯಾಹ್ನ ಮನೆಗೆ ಬಂದಿಲ್ಲ. ನಾನು ನನ್ನ ಮಗನನ್ನು ಹುಡುಕಿಕೊಂಡು ಶಾಲೆಗೆ ಹೋಗಿದ್ದೆ, ಆದರೆ ಅವನು ಶಾಲೆಯ ಮುಖ್ಯೋಪಾಧ್ಯಾಯಿನಿಯೊಂದಿಗೆ ಹೋಗಿದ್ದಾನೆ ಎಂದು ಬೇರೆಯವರು ನನಗೆ ಹೇಳಿದರು. ಅವರ ಮನೆಗೆ ಹೋಗಿ ನೋಡಿದಾಗ ನನ್ನ ಮಗ ಮುಖ್ಯೋಪಾಧ್ಯಾಯಿನಿ ಜೊಹರಾ ಜಬೀನ್ ಅವರ ಮನೆಯ ತೋಟದಲ್ಲಿ ಕೆಲಸ ಮಾಡುತ್ತಿದ್ದುದನ್ನು ನಾನು ಕಂಡುಕೊಂಡೆ. ಈ ಬಗ್ಗೆ ನಾನು ತಕ್ಷಣ ಪೊಲೀಸರಿಗೆ ದೂರು ನೀಡಿದ್ದೇನೆ ಎಂದು  ದೂರುದಾರ ಜಮೀರ್ ಹೇಳಿದ್ದಾರೆ.

ಶಿಕ್ಷಣ ಇಲಾಖೆ ಡಿಸೆಂಬರ್‌ನಲ್ಲಿ ಈ ಕುರಿತು ಆದೇಶವನ್ನು ಹೊರಡಿಸಿದ್ದು, ವಿದ್ಯಾರ್ಥಿಗಳ ಕೈಯ್ಯಲ್ಲಿ  ಶೌಚಾಲಯ ಸ್ವಚ್ಛಗೊಳಿಸುವುದನ್ನು ನಿಷೇಧಿಸಿದೆ. ಶಿಕ್ಷಣ ಇಲಾಖೆ ಆಯುಕ್ತರಾದ ಬಿ.ಬಿ.ಕಾವೇರಿ ಈ ಕುರಿತು ಸುತ್ತೋಲೆ ಹೊರಡಿಸಿದ್ದು, ಶಿಕ್ಷಣ ಇಲಾಖೆಯ ಅಧಿಕಾರಿಗಳು, ಶಾಲಾ ಮುಖ್ಯ ಶಿಕ್ಷಕರು ಮತ್ತು ಸಿಬ್ಬಂದಿಗಳು ವಿದ್ಯಾರ್ಥಿಗಳನ್ನು ಶಾಲಾ ಶೌಚಾಲಯ ಸ್ವಚ್ಛತೆಗೆ ಬಳಸಿಕೊಳ್ಳುವಂತಿಲ್ಲ. ಶೌಚಾಲಯ ಸ್ವಚ್ಛತೆಗೆ ಬಳಸಿದರೆ ಎಫ್‍ಐಆರ್ ದಾಖಲಿಸುವುದಾಗಿ ಎಚ್ಚರಿಕೆ ನೀಡಿದ್ದರು.

ಇದಕ್ಕೂ ಮೊದಲು ಕೋಲಾರದ ಮಾಲೂರು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯೊಂದರಲ್ಲಿ ಈ ಮೊದಲು ಶಾಲಾ ವಿದ್ಯಾರ್ಥಿಗಳನ್ನು ಶೌಚ ಗುಂಡಿಗೆ ಇಳಿಸಿ ಸ್ವಚ್ಛತೆ ಮಾಡಿಸಲಾಗಿತ್ತು. ಘಟನೆಯ ಪೋಟೋ ವೈರಲ್‌ ಆಗುತ್ತಿದ್ದಂತೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಪ್ರಾಂಶುಪಾಲೆ ಭಾರತಮ್ಮ, ಸಹ ಶಿಕ್ಷಕ ಮುನಿಯಪ್ಪ ಅವರನ್ನು ಕೋಲಾರ ಪೊಲೀಸರು ಬಂಧಿಸಿದ್ದರು.

ಇದರ ಬೆನ್ನಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ತವರು ಜಿಲ್ಲೆ ಶಿವಮೊಗ್ಗದಲ್ಲಿ ವಿದ್ಯಾರ್ಥಿಗಳು ಶೌಚಾಲಯಗಳನ್ನು ಸ್ವಚ್ಛಗೊಳಿಸುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು. ಮುಖ್ಯ ಶಿಕ್ಷಕ ಶಂಕರಪ್ಪ ಹಾಗೂ ಇತರ ಶಿಕ್ಷಕರು ವಿದ್ಯಾರ್ಥಿಗಳಿಂದ ಶೌಚಾಲಯಗಳನ್ನು ಮಾಡಿಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.

ಇದಲ್ಲದೆ ಬೆಂಗಳೂರು ಉತ್ತರದ ಅಂದ್ರಹಳ್ಳಿಯ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳು ಶೌಚಾಲಯ ಸ್ವಚ್ಛತೆ ಮಾಡುವ ವಿಡಿಯೋ ವೈರಲ್‌ ಆಗಿತ್ತು. ಘಟನೆಗೆ ಸಂಬಂಧಿಸಿ ಬಿಇಓ ಆಂಜನಪ್ಪ ಅವರ ದೂರಿನ ಮೇರೆಗೆ ಬ್ಯಾಡರಹಳ್ಳಿ ಠಾಣೆ ಪೊಲೀಸರು ಶಾಲೆಯ ಮುಖ್ಯ ಶಿಕ್ಷಕಿ ಲಕ್ಷ್ಮೀದೇವಮ್ಮ ಅವರ ಮೇಲೆ ಪ್ರಕರಣ ದಾಖಲಿಸಿ ಬಂಧಿಸಿದ್ದರು.

ಇದನ್ನು ಓದಿ: ಇಸ್ರೇಲ್‌-ಪ್ಯಾಲೆಸ್ತೀನ್‌ ಯುದ್ಧ: ಭಾರತದಲ್ಲಿ ಮುಸ್ಲಿಮ್‌ ವಿರೋಧಿ ಪ್ರಚಾರಕ್ಕೆ ಸಾಮಾಜಿಕ ಮಾದ್ಯಮವನ್ನು ಹೇಗೆ ಬಳಸಲಾಗಿದೆ?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಸಿಎಂ ಸಿದ್ದರಾಮಯ್ಯ

0
ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ" ಎಂಬ ಬಿಜೆಪಿಗರ ಆರೋಪಕ್ಕೆ...