ಆರೋಗ್ಯ ಇಲಾಖೆ ಹಗರಣ : ಹಿಮಾಚಲ ಪ್ರದೇಶ ರಾಜ್ಯ ಬಿಜೆಪಿ ಅಧ್ಯಕ್ಷ ರಾಜೀನಾಮೆ

Health department scam: Himachal Pradesh state BJP president resigns

ಹಿಮಾಚಲ ಪ್ರದೇಶ ರಾಜ್ಯ ಬಿಜೆಪಿ ಅಧ್ಯಕ್ಷ ರಾಜೀವ್ ಬಿಂದಾಲ್ ಅವರು ರಾಜ್ಯದಲ್ಲಿ ಆರೋಗ್ಯ ಸಲಕರಣೆಗಳ ಖರೀದಿ ಹಗರಣದ ಆರೋಪದ ಮೇಲೆ “ಉನ್ನತ ನೈತಿಕ ಕಾರಣಗಳಿಗಾಗಿ” ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

ರಾಜ್ಯದ ಆರೋಗ್ಯ ಇಲಾಖೆಯಲ್ಲಿ ನಡೆದ ಹಗರಣದಿಂದಾಗಿ ಅದರ ನಿರ್ದೇಶಕ ಡಾ.ಎ.ಕೆ.ಗುಪ್ತಾ ಅವರನ್ನು ಮೇ 20 ರಂದು ಬಂಧಿಸಿದ ನಂತರ ಮಾಜಿ ಆರೋಗ್ಯ ಸಚಿವರಾಗಿರುವ ಹಿಮಾಚಲ ಪ್ರದೇಶದ ಬಿಜೆಪಿ ಅಧ್ಯಕ್ಷ ರಾಜೀವ್ ಬಿಂದಾಲ್ ತಮ್ಮ ಸ್ಥಾನ ತೊರೆದಿದ್ದಾರೆ.

ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಬರೆದ ಪತ್ರದಲ್ಲಿ, ಐದು ಬಾರಿ ಶಾಸಕ ಮತ್ತು ಮಾಜಿ ಸ್ಪೀಕರ್‌ ಆಗಿರು ಬಿಂದಾಲ್ ಅವರು ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪವನ್ನು ನಿರಾಕರಿಸಿದ್ದಾರೆ.

ಆರೋಗ್ಯ ಸಲಕರಣೆಗಳ ಖರೀದಿ ಒಪ್ಪಂದಕ್ಕೆ ಸಹಿ ಹಾಕಲು ಸರಬರಾಜುದಾರರಿಂದ 5 ಲಕ್ಷ ರೂಪಾಯಿ ಲಂಚ ನೀಡುವಂತೆ ಒತ್ತಾಯಿಸಿ ಡಾ.ಗುಪ್ತಾ ಅವರ ಆಡಿಯೋ ರೆಕಾರ್ಡಿಂಗ್ ಅನ್ನು ಮೇ 20 ರಂದು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿದ್ದು, ನಂತರ ಅವರನ್ನು ವಜಾಗೊಳಿಸಿ, ಬಂಧಿಸಿ, ವಿಜಿಲೆನ್ಸ್ ತನಿಖೆಗೆ ಆದೇಶಿಸಲಾಗಿದೆ.

ಈ ಕುರಿತು ಸಿಬಿಐ ತನಿಖೆಗೆ ಪ್ರತಿಪಕ್ಷ ಕಾಂಗ್ರೆಸ್ ಒತ್ತಾಯಿಸುತ್ತಿದೆ, ಆದರೆ ಬಿಂದಾಲ್ ಯಾವುದೇ ಬಿಜೆಪಿ ನಾಯಕರ ಪಾಲ್ಗೊಳ್ಳುವಿಕೆಯನ್ನು ನಿರಾಕರಿಸಿದ್ದಾರೆ. ಆದರೆ ನೈತಿಕ ಕಾರಣಗಳನ್ನು ಉಲ್ಲೇಖಿಸಿ ತಮ್ಮ ಹುದ್ದೆ ತ್ಯಜಿಸಿದ್ದಾರೆ.


ಇದನ್ನೂ ಓದಿ: ಮೇ 31ರ ಬಳಿಕವೂ ಮತ್ತೆರೆಡು ವಾರ ಲಾಕ್‌ಡೌನ್ ಮುಂದುವರೆಯುವ ಸಾಧ್ಯತೆ?

Donate

ಜನಪರ ಪತ್ರಿಕೋದ್ಯಮದ ಉಳಿವು ಮತ್ತು ಬೆಳವಣಿಗೆಗಾಗಿ ನಿಮ್ಮ ನಿರಂತರ ಆರ್ಥಿಕ ನೆರವು ಅಗತ್ಯ. ನಿಮ್ಮಿಂದ ಸಾಧ್ಯವಿರುವಷ್ಟು ಹೆಚ್ಚಿನ ವಂತಿಗೆಯನ್ನು ನೀಡಲು ಕೆಳಗಿನ ಲಿಂಕುಗಳನ್ನು ಕ್ಲಿಕ್ಕಿಸಿ.
ಒಂದು ವೇಳೆ ಈ ಲಿಂಕಿನ ಮೂಲಕ ಹಣ ಪಾವತಿ ಮಾಡುವುದಕ್ಕೆ ಅಡಚಣೆ ಇದ್ದರೆ, ಈ ಪುಟದ ಮೇಲೆ ಅಥವಾ ಕೆಳಗೆ ಇರುವ ವಂತಿಗೆ – Donate ಬಟನ್.ಅನ್ನು ಕ್ಲಿಕ್ಕಿಸಿ.
ಧನ್ಯವಾದಗಳು
Independent journalism can’t be independent without your support, contribute by clicking below.

LEAVE A REPLY

Please enter your comment!
Please enter your name here