ಜನರ ಆಕ್ರೋಶಕ್ಕೆ ಮಣಿದ ಸರ್ಕಾರ: ಆರೋಗ್ಯ ಕಾರ್ಯಕರ್ತರ ವಿಮಾ ಯೋಜನೆ ಮುಂದುವರಿಕೆ

ಕೊರೊನಾ ಎರಡನೇ ಅಲೆ ತೀವ್ರವಾಗಿರುವ ಹೊತ್ತಿನಲ್ಲಿ ಆರೋಗ್ಯ ಕಾರ್ಯಕರ್ತರ ವಿಮಾ ಯೋಜನೆ ರದ್ದು ಮಾಡಿ ತೀವ್ರ ಟೀಕೆಗೆ ಗುರಿಯಾಗಿದ್ದ ಕೇಂದ್ರ ಸರ್ಕಾರ, 50 ಲಕ್ಷ ರೂಪಾಯಿ ವಿಮಾ ಯೋಜನೆಯನ್ನು ಒಂದು ವರ್ಷದವರೆಗೆ ವಿಸ್ತರಿಸಿದೆ.

ಕೊರೊನಾ ಸಾಂಕ್ರಾಮಿಕ ಸಮಯದಲ್ಲಿ ಯಾವುದೇ ತೊಂದರೆಯಿಂದಾಗಿ ಮೃತಪಟ್ಟ ಆರೋಗ್ಯ ಕಾರ್ಯಕರ್ತರಿಗಾಗಿ ಪ್ರಧಾನ್ ಮಂತ್ರಿ ಗರಿಬ್ ಕಲ್ಯಾಣ್ ಪ್ಯಾಕೇಜ್ (ಪಿಎಂಜಿಕೆಪಿ) ಯ ಅಡಿಯಲ್ಲಿ ಆರೋಗ್ಯ ವಿಮಾ ಯೋಜನೆಯನ್ನು ಪ್ರಾರಂಭಿಸಲಾಗಿತ್ತು.

ತಲಾ 50 ಲಕ್ಷ ರೂಪಾಯಿವರೆಗೆ ವಿಮಾ ಸೌಲಭ್ಯ ನೀಡುವುದಾಗಿ ಘೋಷಿಸಿ, ಕಳೆದ ವರ್ಷದ ಮಾರ್ಚ್‌‌ನಲ್ಲಿ ಈ ಯೋಜನೆಯನ್ನು ಜಾರಿಗೊಳಿಸಲಾಗಿತ್ತು. ಸಫಾಯಿ ಕರ್ಮಚಾರಿಗಳು, ವಾರ್ಡ್ ಬಾಯ್ ಗಳು, ನರ್ಸ್ ಗಳು, ಆಶಾ ಕಾರ್ಯಕರ್ತೆಯರು, ಅರೆ ವೈದ್ಯಕೀಯ ಸಿಬ್ಬಂದಿ, ತಂತ್ರಜ್ಞರು, ವೈದ್ಯರು ಮತ್ತು ವಿಶೇಷ ತಜ್ಞರು ಹಾಗೂ ಇತರೆ ಆರೋಗ್ಯ ಕಾರ್ಯಕರ್ತರನ್ನು ವಿಶೇಷ ವಿಮಾ ಯೋಜನೆ ವ್ಯಾಪ್ತಿಗೆ ಸೇರ್ಪಡೆ ಮಾಡಲಾಗಿತ್ತು.

ಇದನ್ನೂ ಓದಿ: ಕೊರೊನಾ ವಿರುದ್ಧ ಹೋರಾಡುತ್ತಿರುವ ಆರೋಗ್ಯ ಕಾರ್ಯಕರ್ತರ ವಿಮಾ ಯೋಜನೆ ಕೈಬಿಟ್ಟ ಕೇಂದ್ರ!

ಆರಂಭದಲ್ಲಿ 90 ದಿನಗಳ ಅವಧಿಗೆ ಸೀಮಿತವಾಗಿದ್ದ ಯೋಜನೆಯನ್ನು ಬಳಿಕ ಒಂದು ವರ್ಷದ ಅವಧಿಗೆ ವಿಸ್ತರಿಸಲಾಗಿತ್ತು. ನಂತರನ ಕೊರೊನಾ ವ್ಯಾಪಕವಾಗಿರುವ ಈ ಹೊತ್ತಿನಲ್ಲಿ ಈ ವರ್ಷದ ಮಾರ್ಚ್ 24 ರಂದು ಇದನ್ನು ರದ್ದು ಮಾಡುವುದಾಗಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿತ್ತು.

ಕೇಂದ್ರ ಸರ್ಕಾರದ ವಿಮಾ ಯೋಜನರ ಕೈಬಿಟ್ಟ ಆದೇಶಕಕೆ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ವಿಮೆಯನ್ನು ಮುಂದುವರೆಸಲು ಆಗ್ರಹ ಪಡಿಸಲಾಗಿತ್ತು. ಇದರಿಂದ ಎಚ್ಚೇತ್ತುಕೊಂಡಿರುವ ಸರ್ಕಾರ ಯೋಜನೆಕೇಂಯನ್ನು ಒಂದು ವರ್ಷಕ್ಕೆ ವಿಸ್ತರಿಸಿದೆ. ಈ ಬಗ್ಗೆ ಆರೋಗ್ಯ ಸಚಿವ ಹರ್ಷವರ್ಧನ್ ಕೂಡ ಟ್ವೀಟ್ ಮಾಡಿದ್ದಾರೆ.

ಆರೋಗ್ಯ ಕಾರ್ಯಕರ್ತರಿಗೆ ವಿಮಾ ಯೋಜನೆಯನ್ನು ವಿಸ್ತರಿಸುವಂತೆ ಕೋರಿ ಭಾರತೀಯ ವೈದ್ಯಕೀಯ ಸಂಘವು ಏಪ್ರಿಲ್ 19, ಸೋಮವಾರ ಭಾರತ ಸರ್ಕಾರಕ್ಕೆ ಪತ್ರ ಬರೆದಿತ್ತು. ಪಿಎಂಜಿಕೆಪಿ ಅಡಿಯಲ್ಲಿ ಇದುವರೆಗೆ ಕೇವಲ 287 ಮಂದಿಯ ವಿಮೆಯನ್ನು ಮಾತ್ರ ಕ್ಲೈಮ್ ಮಾಡಲಾಗಿದೆ.


ಇದನ್ನೂ ಓದಿ: ‘ಒಂದು ದೇಶ, ಒಂದು ದರ’ ಯಾಕಾಗಬಾರದು?; ಲಸಿಕೆ ವಿಷಯದಲ್ಲಿ ರಾಜ್ಯಗಳ ಪರ ನಿಂತ ಕಾಂಗ್ರೆಸ್

LEAVE A REPLY

Please enter your comment!
Please enter your name here