Homeಮುಖಪುಟಮತ್ತೆ ಆರೋಗ್ಯ ಸಮಸ್ಯೆ: ಏಮ್ಸ್‌ಗೆ ದಾಖಲಾದ ಗೃಹಸಚಿವ ಅಮಿತ್‌ ಶಾ

ಮತ್ತೆ ಆರೋಗ್ಯ ಸಮಸ್ಯೆ: ಏಮ್ಸ್‌ಗೆ ದಾಖಲಾದ ಗೃಹಸಚಿವ ಅಮಿತ್‌ ಶಾ

ಕಳೆದ ಮೂರು ದಿನಗಳಿಂದಲೂ ಅವರು ದೇಹದ ನೋವು ಮತ್ತು ಆಯಾಸದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಹಾಗಾಗಿ ಏಮ್ಸ್ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

- Advertisement -
- Advertisement -

ಕೆಲ ದಿನಗಳ ಹಿಂದಷ್ಟೆ ಕೋವಿಡ್‌ನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದ ಗೃಹಸಚಿವ ಅಮಿತ್ ಶಾರವರಿಗೆ ಮತ್ತೆ ಆಯಾಸ ಮತ್ತು ದೇಹದಲ್ಲಿ ನೋವು ಕಾಣಿಸಿಕೊಂಡ ಪರಿಣಾಮ ಅವರು ದೆಹಲಿಯ ಏಮ್ಸ್ ಆಸ್ಪತ್ರೆಗೆ ಇಂದು ಬೆಳಿಗ್ಗೆ ದಾಖಲಾಗಿದ್ದಾರೆ.

55 ವರ್ಷದ ಅಮಿತ್‌ ಶಾ ಆಗಸ್ಟ್ 2ರ ಭಾನುವಾರ ಕೊರೊನಾ ವೈರಸ್‌ ಪಾಸಿಟಿವ್ ಆಗಿದ್ದರು. ಗುರುಗ್ರಾಮ್ ಬಳಿಯ ಮೆಡೆಂತಾ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದು, ಆಗಸ್ಟ್ 14 ರಂದು ಬಿಡುಗಡೆಯಾಗಿದ್ದರು. ತಮ್ಮ ವೈದ್ಯರ ಸಲಹೆಯ ಮೇರೆಗೆ ಮನೆಯಿಂದಲೇ ಕೆಲಸ ನಿರ್ವಹಿಸುತ್ತಿದ್ದರು.

ಕಳೆದ ಮೂರು ದಿನಗಳಿಂದಲೂ ಅವರು ದೇಹದ ನೋವು ಮತ್ತು ಆಯಾಸದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಹಾಗಾಗಿ ಏಮ್ಸ್ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಅಮಿತ್ ಶಾರವರ ಕೋವಿಡ್ ಪರೀಕ್ಷೆ ಫಲಿತಾಂಶ ನೆಗೆಟಿವ್ ಬಂದಿದೆ. ಅವತು ಆರಾಮಾಗಿದ್ದಾರೆ ಮತ್ತು ಆಸ್ಪತ್ರೆಯಿಂದಲೇ ಕೆಲಸ ಮಾಡುತ್ತಾರೆ ಎಂದು ಏಮ್ಸ್‌ನ ಡಾ. ಆರತಿ ವಿಜ್ ತಿಳಿಸಿದ್ದಾರೆ.


ಇದನ್ನೂ ಓದಿ: ಕಳೆದೊಂದು ವಾರದಲ್ಲಿ 8 ಪತ್ರಕರ್ತರ ಮೇಲೆ ಹಲ್ಲೆ: ತೀವ್ರ ಆಕ್ರೋಶ

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ಬಡವರೂ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ, ಮುಸ್ಲಿಮರ ಬಗ್ಗೆ ಮಾತ್ರ ಏಕೆ ಮಾತನಾಡುತ್ತಾರೆ..’; ಪ್ರಧಾನಿ ಮೋದಿ...

0
'ದೇಶದ ಬಡವರು ಅವರ ಆರ್ಥಿಕ ಪರಿಸ್ಥಿತಿಯಿಂದಾಗಿ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ, ಪ್ರಧಾನಿ ನರೇಂದ್ರ ಮೋದಿ ಅವರು ಕೇವಲ ಮುಸ್ಲಿಮರ ಬಗ್ಗೆ ಮಾತನಾಡುತ್ತಿದ್ದಾರೆ' ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಂಗಳವಾರ ಟೀಕಿಸಿದ್ದಾರೆ. 'ಪ್ರತಿಪಕ್ಷಗಳ ಇಂಡಿಯಾ...