Homeಮುಖಪುಟಪೋಲಿಯೊ ಲಸಿಕೆ ಬದಲು ಮಕ್ಕಳಿಗೆ ಸ್ಯಾನಿಟೈಸರ್ ಹನಿ ನೀಡಿದ ಆರೋಗ್ಯ ಕಾರ್ಯಕರ್ತರು

ಪೋಲಿಯೊ ಲಸಿಕೆ ಬದಲು ಮಕ್ಕಳಿಗೆ ಸ್ಯಾನಿಟೈಸರ್ ಹನಿ ನೀಡಿದ ಆರೋಗ್ಯ ಕಾರ್ಯಕರ್ತರು

- Advertisement -
- Advertisement -

ಮಹಾರಾಷ್ಟ್ರದ ಯವತ್ಮಾಲ್ ಜಿಲ್ಲೆಯ ಹಳ್ಳಿಯಲ್ಲಿ 12 ಮಕ್ಕಳಿಗೆ ನೀಡಿದ ಪೋಲಿಯೊ ಲಸಿಕೆಯಲ್ಲಿ ಭಾರೀ ನಿರ್ಲಕ್ಷ್ಯದ ಸಂಭವಿಸಿದೆ. ಮಕ್ಕಳಿಗೆ ಪೋಲಿಯೊ ಲಸಿಕೆ ನೀಡುವ ಬದಲು ಸ್ಯಾನಿಟೈಸರ್ ನೀಡಲಾಗಿದೆ ಎಂದು ಅಧಿಕಾರಿಯೊಬ್ಬ ಹೇಳಿಕೆಯನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ.

ಸ್ಯಾನಿಟೈಸರ್‌ ನೀಡಲಾಗಿರುವ 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮಕ್ಕಳ ಪರಿಸ್ಥಿತಿ ಸ್ಥಿರವಾಗಿದೆ ಹಾಗೂ ಪ್ರಕರಣದಲ್ಲಿ ಮೂರು ಆರೋಗ್ಯ ಕಾರ್ಯಕರ್ತರ ವಿರುದ್ದ ಕ್ರಮ ಜರುಗಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ದೆಹಲಿ ಪೊಲೀಸರ ಕೈಗೆ ಲೋಹದ ಲಾಠಿ?: ಇದು ಯಾವುದರ ಸೂಚಕ?

ಭಾನುವಾರ 1-5 ವರ್ಷದೊಳಗಿನ ಮಕ್ಕಳಿಗೆ ರಾಷ್ಟ್ರೀಯ ಪಲ್ಸ್ ಪೋಲಿಯೊ ವ್ಯಾಕ್ಸಿನೇಷನ್ ಚಾಲನೆ ಪ್ರಾರಂಭವಾಗಿತ್ತು. ಈ ಸಂಧರ್ಭದಲ್ಲಿ ಹಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರವೊಂದರಲ್ಲಿ ಈ ಘಟನೆ ನಡೆದಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

5 ವರ್ಷಕ್ಕಿಂತ ಕಡಿಮೆ ವಯಸ್ಸಿನ 12 ಮಕ್ಕಳಿಗೆ ಪೋಲಿಯೊ ಹನಿಗಳಿಗೆ ಬದಲಾಗಿ ಸ್ಯಾನಿಟೈಸರ್ ನೀಡಲಾಗಿದೆ ಎಂದು ಯವತ್ಮಾಲ್ ಜಿಲ್ಲಾ ಪರಿಷತ್ ಸಿಇಒ ಶ್ರೀಕೃಷ್ಣ ಪಂಚಲ್ ತಿಳಿಸಿದ್ದಾರೆ. ಲಸಿಕೆ ಪಡೆದ ನಂತರ ಒಂದು ಮಗು ವಾಂತಿ ಮಾಡಿದ್ದರಿಂದ ಘಟನೆಯ ಬಗ್ಗೆ ಅರಿವಿಗೆ ಬಂದಿದೆ ಎಂದು ಅವರು ಹೇಳಿದ್ದಾರೆ. ಸ್ಯಾನಿಟೈಸರ್ ಹನಿಗಳನ್ನು ನೀಡಿದ ಎಲ್ಲ ಮಕ್ಕಳಿಗೆ ಪೋಲಿಯೊ ಹನಿಗಳನ್ನು ನೀಡಿ ಯವತ್ಮಾಲ್‌ನ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ದಾಖಲಿಸಲಾಗಿದೆ ಎಂದು ಶ್ರೀಕೃಷ್ಣ ಪಂಚಲ್ ತಿಳಿಸಿದ್ದಾರೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಡಾಕ್ಟರ್‌‌, ಅಂಗನವಾಡಿ ಕಾರ್ಯಕರ್ತೆ ಮತ್ತು ಆಶಾ ಸ್ವಯಂಸೇವಕಿ ಸೇರಿದಂತೆ ಮೂವರು ಆರೋಗ್ಯ ಕಾರ್ಯಕರ್ತರು ಘಟನೆ ನಡೆದ ಸಮಯದಲ್ಲಿ ಸ್ಥಳದಲ್ಲಿ ಹಾಜರಿದ್ದರು. “ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದೆ. ಮೂವರು ಆರೋಗ್ಯ ಕಾರ್ಯಕರ್ತರನ್ನು ಅಮಾನತುಗೊಳಿಸುವಂತೆ ಆದೇಶ ಹೊರಡಿಸಲಾಗುವುದು” ಎಂದು ಪಂಚಲ್ ಹೇಳಿದ್ದಾರೆ.

ಇದನ್ನೂ ಓದಿ: ಅಘೋಷಿತ ತುರ್ತುಪರಿಸ್ಥಿತಿ ಜಾರಿ: ಹೋರಾಟಗಾರರ ಟ್ವಿಟರ್ ಅಮಾನತ್ತಿಗೆ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...