Homeಕರ್ನಾಟಕಹಾಸನ ಜಿಲ್ಲೆಯಲ್ಲಿ ಹೃದಯಾಘಾತ ಹೆಚ್ಚಳ: ವರದಿ ಪಡೆಯುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ

ಹಾಸನ ಜಿಲ್ಲೆಯಲ್ಲಿ ಹೃದಯಾಘಾತ ಹೆಚ್ಚಳ: ವರದಿ ಪಡೆಯುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ

- Advertisement -
- Advertisement -

ಹಾಸನ ಜಿಲ್ಲೆಯಲ್ಲಿ ಸಂಭವಿಸುತ್ತಿರುವ ಸರಣಿ ಹೃದಯಘಾತ ಪ್ರಕರಣಗಳ ಕುರಿತು ವರದಿ ಪಡೆಯಲು ಸೂಚಿಸಿರುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೋಮವಾರ (ಜೂನ್.30) ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ಅವರು, “ಹಾಸನ ಜಿಲ್ಲೆಯಲ್ಲಿ ಒಂದು ತಿಂಗಳ ಅವಧಿಯಲ್ಲಿ 18 ಹೃದಯಾಘಾತಗಳು ಸಂಭವಿಸಿರುವುದನ್ನು ಆರೋಗ್ಯ ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ಹೃದಯಾಘಾತಗಳು ಹೆಚ್ಚಾಗುತ್ತಿರುವ ಕುರಿತಂತೆ ಜಯದೇವ ಸಂಸ್ಥೆಯ ನಿರ್ದೇಶಕರ ಅಧ್ಯಕ್ಷತೆಯಲ್ಲಿ ತಜ್ಞರಿಂದ ಅಧ್ಯಯನ ನಡೆಸಿ ವರದಿ ಪಡೆಯುವಂತೆ ಈಗಾಗಲೇ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮಾಹಿತಿ ನೀಡಿದ್ದಾರೆ.

ಹಠಾತ್ ಹೃದಯಾಘಾತಗಳನ್ನು ತಡೆಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆಯನ್ನು ಜಾರಿಗೆ ತಂದಿದೆ. ಆದರೆ, ಇತ್ತೀಚೆಗೆ ಯುವಕರು ಹೃದಯಾಘಾತಕ್ಕೆ ಒಳಗಾಗುತ್ತಿರುವುದರ ಬಗ್ಗೆ ಸಮಗ್ರ ಸಂಶೋಧನೆಯ ಅಗತ್ಯತೆ ಇದೆ. ಬದಲಾದ ಜೀವನ ಶೈಲಿ, ಆಹಾರ, ಅಸಾಂಕ್ರಾಮಿಕ ರೋಗಗಳು ಹೃದಯಾಘಾತಗಳು ಹೆಚ್ಚಾಗಲು ಕಾರಣ ಎಂಬುದು ಮೇಲ್ನೋಟಕ್ಕೆ ಕಂಡುಬಂದರೂ, ಹಾಸನದ ಪ್ರಕರಣ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಇದಕ್ಕೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ತಜ್ಞರ ತಂಡದಿಂದ ಅಧ್ಯಯನ ನಡೆಸಿ 10 ದಿನಗಳ ಒಳಗಾಗಿ ವರದಿ ಪಡೆಯಲು ಸೂಚಿಸಲಾಗಿದೆ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಕಳೆದ ಎರಡು ವರ್ಷಗಳಿಂದ ದೇಶದಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚಾಗಿವೆ. ಕೋವಿಡ್ ಲಸಿಕೆಯ ಅಡ್ಡ ಪರಿಣಾಮವೇ ಇದಕ್ಕೆ ಕಾರಣ ಎಂದು ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ. ಹಾಗಾಗಿ, 2025ರ ಫೆಬ್ರವರಿ 14ರಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬೆಂಗಳೂರಿನ ಶ್ರೀ ಜಯದೇವ ಹೃದ್ರೋಗ ಸಂಸ್ಥೆ ನಿರ್ದೇಶಕರ ಅಧ್ಯಕ್ಷತೆಯಲ್ಲಿ 10 ಮಂದಿ ತಜ್ಞರ ಸಮಿತಿ ರಚಿಸಿ ಆದೇಶಿಸಿದೆ.

ಈ ಸಮಿತಿ ಹಾಸನ ವೈದ್ಯಕೀಯ ವಿಜ್ಞಾನ ಮಹಾವಿದ್ಯಾಲಯದ (ಹಿಮ್ಸ್) ಸಹಯೋಗದೊಂದಿಗೆ ಹಾಸನ ಜಿಲ್ಲೆಯ ಹೃದಯಾಘಾತ ಪ್ರಕರಣಗಳ ಕುರಿತು 10 ದಿನಗಳ ಒಳಗೆ ವರದಿ ನೀಡಲು ಸೂಚಿಸಲಾಗಿದೆ.

ಜುಲೈ 1ರ ಪ್ರಜಾವಾಣಿ ವರದಿ ಪ್ರಕಾರ, ಹಾಸನ ಜಿಲ್ಲೆಯಲ್ಲಿ 2025ರ ಮೇ 20ರಿಂದ ಜೂನ್‌ 30ರವರೆಗೆ 21 ಜನರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಈ ಪೈಕಿ ನಾಲ್ವರು ಬೆಂಗಳೂರಿನಲ್ಲಿ ಮೃತಪಟ್ಟಿದ್ದಾರೆ. 25 ವರ್ಷದೊಳಗಿನ ಮೂವರು ಯುವತಿಯರು ಹಾಗೂ ಇಬ್ಬರು ಯುವಕರು ಮೃತಪಟ್ಟಿದ್ದಾರೆ. 30 ವರ್ಷ ಮೇಲಿನ 16 ಜನರು ಮೃತಪಟ್ಟಿದ್ದಾರೆ.

ಬೆಂಗಳೂರು: ಕಸದ ಲಾರಿಯಲ್ಲಿ ಮಹಿಳೆ ಶವ ಪತ್ತೆ: ಲಿವ್-ಇನ್ ಸಂಗಾತಿ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...