Homeಮುಖಪುಟಉತ್ತರಪ್ರದೇಶ: 7ನೇ ಹಂತದ ಮತದಾನದ ದಿನ ಉಷ್ಣಾಘಾತದಿಂದ 33 ಚುನಾವಣಾ ಸಿಬ್ಬಂದಿ ಸಾವು

ಉತ್ತರಪ್ರದೇಶ: 7ನೇ ಹಂತದ ಮತದಾನದ ದಿನ ಉಷ್ಣಾಘಾತದಿಂದ 33 ಚುನಾವಣಾ ಸಿಬ್ಬಂದಿ ಸಾವು

- Advertisement -
- Advertisement -

ಉತ್ತರಪ್ರದೇಶದಲ್ಲಿ 7ನೇ ಹಾಗೂ ಅಂತಿಮ ಹಂತದ ಮತದಾನದ ಸಂದರ್ಭ ಉಷ್ಣಾಘಾತದಿಂದ 33 ಚುನಾವಣಾ ಸಿಬ್ಬಂದಿ ಮೃತಪಟ್ಟಿದ್ದಾರೆ ಎಂದು ಉತ್ತರಪ್ರದೇಶದ ಮುಖ್ಯ ಚುನಾವಣಾಧಿಕಾರಿ ನವದೀಪ್ ರಿನ್ವಾ ಹೇಳಿದ್ದಾರೆ.

ಮತದಾನದ ಕೊನೆಯ ದಿನದಂದು ಕೇವಲ ಒಂದು ರಾಜ್ಯದಲ್ಲಿ ಬಿಸಿಲ ಹೊಡೆತದಿಂದ ಸಾವನ್ನಪ್ಪಿರುವ ಈ ಅಂಕಿ-ಅಂಶಗಳು ಅಚ್ಚರಿ ಮೂಡಿಸಿದೆ. ಮೃತರಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಭದ್ರತಾ ಸಿಬ್ಬಂದಿ, ನೈರ್ಮಲ್ಯ ಸಿಬ್ಬಂದಿ ಮತ್ತು ಮತಗಟ್ಟೆ ಸಿಬ್ಬಂದಿಗಳು ಸೇರಿದ್ದಾರೆ. ಮೃತರ ಕುಟುಂಬಗಳಿಗೆ ಸೂಕ್ತವಾದ ಹಣಕಾಸು ಪರಿಹಾರವನ್ನು ಒದಗಿಸಲಾಗುವುದು ಎಂದು ರಿನ್ವಾ ಹೇಳಿದ್ದಾರೆ.

45 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚಿನ ತಾಪಮಾನದಿಂದ ಅನೇಕ ಸ್ಥಳಗಳಲ್ಲಿ ತೀವ್ರವಾದ ಶಾಖದ ಅಲೆಯಿಂದ ಅನೇಕ ಸಾವುಗಳ ವರದಿಯಾಗಿದೆ. ಬಲ್ಲಿಯಾ ನಗರದಲ್ಲಿ ಮತದಾನ ಮಾಡಲು ಸರತಿ ಸಾಲಿನಲ್ಲಿದ್ದ ಮತದಾರ ರಾಮ್ ಬದಾನ್ ಚೌಹಾಣ್ ಅವರು ಬಿದ್ದು ಪ್ರಜ್ಞೆ ಕಳೆದುಕೊಂಡರು. ಅವರನ್ನು ಕೂಡಲೇ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಯಿತು. ಆದರೆ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ.

ಆಯಾ ಕ್ಷೇತ್ರಗಳಲ್ಲಿ ಮೃತಪಟ್ಟ ಚುನಾವಣಾ ಸಿಬ್ಬಂದಿ ಕುರಿತು ವರದಿ ಸಲ್ಲಿಸುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ನಿರ್ದೇಶಿಸಲಾಗಿದೆ. ಜಿಲ್ಲಾಡಳಿತ ಮೃತಪಟ್ಟ ಚುನಾವಣಾ ಸಿಬ್ಬಂದಿಯ ಮರಣೋತ್ತರ ಪರೀಕ್ಷೆಯ ವರದಿಯನ್ನು ಕೂಡ ಸಲ್ಲಿಸಲಿದ್ದಾರೆ ಎಂದು ರಿನ್ವಾ ತಿಳಿಸಿದ್ದಾರೆ.

ಝಾನ್ಸಿ ನಗರದಲ್ಲಿ ಶನಿವಾರ ತಾಪಮಾನ 46.9C ತಲುಪಿದೆ ಎಂದು ಭಾರತೀಯ ಹವಾಮಾನ ಇಲಾಖೆ  ತಿಳಿಸಿದೆ. ಹಿಂದೂಸ್ತಾನ್ ಟೈಮ್ಸ್ ಪತ್ರಿಕೆಯು ಶನಿವಾರ ದೇಶಾದ್ಯಂತ ಶಾಖದ ಪ್ರಭಾವದಿಂದ ಒಟ್ಟು 58 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿಸಿದೆ. ನೆರೆಯ ಬಿಹಾರ, ಒಡಿಶಾ ಮತ್ತು ಮಧ್ಯಪ್ರದೇಶ ರಾಜ್ಯಗಳಲ್ಲಿ ಈ ಸಾವುಗಳು ವರದಿಯಾಗಿವೆ.

ತಾಪಮಾನದಿಂದಾಗಿ ಬಿಹಾರದಲ್ಲಿ ಶನಿವಾರ ಕನಿಷ್ಠ 10 ಸಾವುಗಳು ಸಂಭವಿಸಿವೆ, ಒಡಿಶಾದಲ್ಲಿ ಕನಿಷ್ಠ 9 ಸಾವುಗಳು ಸಂಭವಿಸಿದೆ. ಒಬ್ಬ ವ್ಯಕ್ತಿಗೆ ನಿರ್ಜಲೀಕರಣಗೊಂಡಾಗ, ತೀವ್ರವಾದ ಶಾಖವು ಅವರ ರಕ್ತವನ್ನು ಗಡಸನ್ನಾಗಿಸತ್ತದೆ ಮತ್ತು ಇದು ಅಂಗಾಂಗಳ ವೈಫಲ್ಯವನ್ನು ಉಂಟುಮಾಡುತ್ತದೆ ಎಂದು ತಜ್ಞರು ಹೇಳಿದ್ದಾರೆ.

ಬೇಸಿಗೆಯ ಉಷ್ಣತೆಯು ಭಾರತಕ್ಕೆ ಹೊಸದೇನಲ್ಲ, ವೈಜ್ಞಾನಿಕ ಸಂಶೋಧನೆಯು ಹವಾಮಾನ ಬದಲಾವಣೆಯು ಶಾಖದ ಅಲೆಗಳು ದೀರ್ಘ ಮತ್ತು ಹೆಚ್ಚು ತೀವ್ರವಾಗಲು ಕಾರಣವಾಗುತ್ತದೆ ಎಂದು ಕಂಡುಹಿಡಿದಿದೆ.

ಇದನ್ನು ಓದಿ: ವಿಧಾನ ಪರಿಷತ್‌ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...