Homeಕರ್ನಾಟಕರಾಜ್ಯಾಧ್ಯಕ್ಷ, ವಿಪಕ್ಷ ನಾಯಕನ ಸ್ಥಾನಕ್ಕೆ ಬಿಜೆಪಿಯಲ್ಲಿ ಭಾರೀ ಪೈಪೋಟಿ; ದಲಿತರಿಗೆ ಅವಕಾಶ ಯಾಕಿಲ್ಲ?- ಜಿಗಜಿಣಗಿ ಪ್ರಶ್ನೆ

ರಾಜ್ಯಾಧ್ಯಕ್ಷ, ವಿಪಕ್ಷ ನಾಯಕನ ಸ್ಥಾನಕ್ಕೆ ಬಿಜೆಪಿಯಲ್ಲಿ ಭಾರೀ ಪೈಪೋಟಿ; ದಲಿತರಿಗೆ ಅವಕಾಶ ಯಾಕಿಲ್ಲ?- ಜಿಗಜಿಣಗಿ ಪ್ರಶ್ನೆ

- Advertisement -
- Advertisement -

ರಾಜ್ಯದಲ್ಲಿ ಚುನಾವಣೆ ಮುಗಿದು, ಸರ್ಕಾರ ರಚನೆಯಾಗಿ ತಿಂಗಳು ಕಳೆದರೂ ಬಿಜೆಪಿಯಲ್ಲಿ ಇನ್ನೂ ವಿರೋಧ ಪಕ್ಷದ ಸ್ಥಾನ ಭರ್ತಿ ಆಗಿಲ್ಲ, ಮತ್ತೊಂದೆಡೆ ಹೀನಾಯವಾಗಿ ಸೋತಿರುವ ಬಿಜೆಪಿಯು, ರಾಜ್ಯಾಧ್ಯಕ್ಷ ಸ್ಥಾನ ಬದಲಾವಣೆಯ ಚರ್ಚೆಗಳು ಜೋರಾಗಿದೆ. ಇದೀಗ ರಾಜ್ಯ ಬಿಜೆಪಿ ನಾಯಕರಲ್ಲಿ ರಾಜ್ಯಾಧ್ಯಕ್ಷ ಹಾಗೂ ವಿಧಾನಸಭೆಯ ಪ್ರತಿಪಕ್ಷ ನಾಯಕನ ಸ್ಥಾನಕ್ಕಾಗಿ ತೀವ್ರ ಪೈಪೋಟಿ ಮುಂದುವರಿದಿದೆ.

ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿಯ ಹಿರಿಯ ನಾಯಕ ಬಸನಗೌಡ ಪಾಟೀಲ್‌ ಯತ್ನಾಳ್‌ ಪ್ರಬಲ ಆಕಾಂಕಿಗಳಾಗಿದ್ದು, ಉಭಯ ನಾಯಕರು ಈ ಬಗ್ಗೆ ಹೇಳಿಕೆಗಳನ್ನು ನೀಡುತ್ತಾ ಬಂದಿದ್ದಾರೆ. ಇದರ ಹೊರತಾಗಿ, ಆರ್.ಅಶೋಕ್, ಅಶ್ವತ್ಥ ನಾರಾಯಣ ಅವರ ಹೆಸರೂ ವಿಪಕ್ಷ ನಾಯಕನ ಸ್ಥಾನಕ್ಕೆ ಕೇಳಿಬಂದಿದೆ.

ಇನ್ನು ಪಕ್ಷದ ರಾಜ್ಯಾಧ್ಯಕ್ಷರ ಬದಲಾವಣೆಯ ಬೇಡಿಕೆ ಪಕ್ಷದ ಆಂತರಿಕ ವಲಯಗಳಲ್ಲಿ ಕೇಳಿಬಂದಿದೆ. ಮಾಜಿ ಸಚಿವ ವಿ. ಸೋಮಣ್ಣ ಹಾಗೂ ಹಿರಿಯ ಸಂಸದ ರಮೇಶ್ ಜಿಗಜಿಣಗಿ ತಾವು ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಗಳೆಂದು ಬಹಿರಂಗವಾಗಿಯೇ ಹೇಳಿಕೊಂಡಿದ್ದಾರೆ. ಜುಲೈ 3ರಂದು ವಿಧಾನ ಸಭೆಯ ಜಂಟಿ ಅಧಿವೇಶನ ನಡೆಯಲಿರುವುದರಿಂದ ಅದಕ್ಕೂ ಮುನ್ನ ಬಿಜೆಪಿ ಹೈಕಮಾಂಡ್ ವಿಪಕ್ಷ ನಾಯಕನನ್ನು ಆಯ್ಕೆ ಮಾಡುವ ಸಾಧ್ಯತೆ ಬಹುತೇಕ ಖಚಿತವಾಗಿದೆ.

ದಲಿತರು ಬಿಜೆಪಿ ಅಧ್ಯಕ್ಷ ಆಗಬಾರದೇ? ನಾನೂ ಆಕಾಂಕ್ಷಿ ಎಂದ ಜಿಗಜಿಣಗಿ

ಮಾಜಿ ಸಚಿವ ವಿ ಸೋಮಣ್ಣ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಆಗುವ ಬಯಕೆಯನ್ನು ವಿಜಯಪುರ ಸಂಸದ ರಮೇಶ್ ಜಿಗಜಿಣಗಿ ಹೊರ ಹಾಕಿದ್ದಾರೆ. ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಭಾಗಿಯಾಗಲು ಆಗಮಿಸಿದ್ದ ವೇಳೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ರಾಜ್ಯಾಧ್ಯಕ್ಷ ಯಾರು ಆಗಬೇಕು ಎಂಬುದನ್ನು ಬಹಿರಂಗ ಚರ್ಚೆ ಮಾಡುವುದು ಸರಿಯಲ್ಲ. ನಮ್ಮದು ರಾಷ್ಟ್ರೀಯ ಪಕ್ಷ ರಾಷ್ಟ್ರೀಯ ನಾಯಕರ ರಾಜ್ಯಾಧ್ಯಕ್ಷರನ್ನು ಆಯ್ಕೆ ಮಾಡ್ತಾರೆ. ಎಲ್ಲರಿಗೂ ರಾಜ್ಯಾಧ್ಯಕ್ಷ ಆಗಬೇಕು ಎಂಬ ಆಶಯ ಇರುವುದು ಸಹಜ. ನಾನೂ ಬಿಜೆಪಿಯ ಹಿರಿಯ ನಾಯಕ ಅವಕಾಶ ಕೊಟ್ಟರೆ ನಾನು ಕೂಡ ರಾಜ್ಯಾಧ್ಯಕ್ಷನಾಗುವೆ. ಬಿಜೆಪಿಯಲ್ಲಿ ದಲಿತರು ರಾಜ್ಯದ ಅಧ್ಯಕ್ಷ ಆಗಬಾರದೇ? ಎಂದು ಪ್ರಶ್ನಿಸಿದರು.

ರಾಜ್ಯಾಧ್ಯಕ್ಷ ಸ್ಥಾನ ನೀಡುವಂತೆ ಕೇಳಿದ್ದೀರಾ ಎಂಬ ಮಾಧ್ಯಮಗಳ ಪ್ರಶ್ನೆಗೆ, ಎಲ್ಲಿ ಕೇಳಬೇಕು ಎಂಬುದು ನನಗೆ ಗೊತ್ತಿದೆ. ನನಗೂ ರಾಜ್ಯಾಧ್ಯಕ್ಷ ಸ್ಥಾನ ನೀಡುವಂತೆ ಕೋರುತ್ತೇನೆ ಎಂದು ರಮೇಶ ಜಿಗಜಿಣಗಿ ತಮ್ಮ ಆಶಯ ವ್ಯಕ್ತಪಡಿಸಿದರು.

ರಮೇಶ್ ಜಿಗಜಿಣಗಿ, ವಿಜಯಪುರ ಸಂಸದ

ನನಗಿಂತ ಬುದ್ಧಿವಂತರು ಇದ್ದರೆ ಅವರಿಗೆ ಅಧ್ಯಕ್ಷ ಸ್ಥಾನ ನೀಡಲಿ: ಸೋಮಣ್ಣ

”ಪಕ್ಷ ನೀಡಿದ ಕೆಲಸ ಒಪ್ಪಿಕೊಂಡ ಕಾರಣಕ್ಕಾಗಿ ನಾನು ಈಗ ನಿರುದ್ಯೋಗಿಯಾಗಿದ್ದೇನೆ. ಆದರೆ, ಸುಮ್ಮನೆ ಕೂರುವವನಲ್ಲ. ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿರ್ವಹಿಸಲು ಸಿದ್ಧ” ಎಂದು ಮಾಜಿ ಸಚಿವ ವಿ. ಸೋಮಣ್ಣ ಹೇಳಿದರು.

ಬಿಜೆಪಿ ರಾಜ್ಯ ಘಟಕದ ಕಚೇರಿಯಲ್ಲಿ ಭಾನುವಾರ ನಡೆದ ಪಕ್ಷದ ಕಾನೂನು ಪ್ರಕೋಷ್ಠದ ರಾಜ್ಯ ಕಾರ್ಯಕಾರಿಣಿಯಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ”ಬಿಜೆಪಿ ಸೇರಿದ ಬಳಿಕ ಅನೇಕ ಸವಾಲುಗಳನ್ನು ಎದುರಿಸಿದ್ದೇನೆ. ಯಾವುದಕ್ಕೂ ವಿಚಲಿತನಾಗಿಲ್ಲ. ನಾನು ಸನ್ಯಾಸಿ ಅಲ್ಲ ಎಂದು ಈಗಾಗಲೇ ಹೇಳಿರುವೆ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯೂ ಹೌದು ಎಂಬುದನ್ನು ಬಹಿರಂಗಪಡಿಸಿದ್ದೇನೆ” ಎಂದರು.

”ಅಧಿಕಾರ ಇರಲಿ, ಇಲ್ಲದಿರಲಿ ಜನರ ಜತೆಗಿದ್ದು ಕೆಲಸ ಮಾಡುತ್ತೇನೆ. ಒಳಗೊಂದು, ಹೊರಗೊಂದು ಮಾತನಾಡಲು ನನಗೆ ಬರುವುದಿಲ್ಲ. ಹಿಂದೆ, ಮುಂದೆ ಮಾತನಾಡಿದವರ ನೀತಿಪಾಠ ನನಗೆ ಗೊತ್ತಿದೆ. ಪಕ್ಷದ ವರಿಷ್ಠರು ನಿರ್ಧಾರ ಕೈಗೊಳ್ಳುವವರೆಗೆ ಕಾಯೋಣ. ನನಗಿಂತ ಬುದ್ಧಿವಂತರು ಯಾರಾದರೂ ಇದ್ದರೆ ಅವರಿಗೆ ಅಧ್ಯಕ್ಷ ಸ್ಥಾನ ನೀಡಲಿ” ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

”ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದರೆ ನಾನು ನಿರಾಯಾಸವಾಗಿ ಗೆಲ್ಲುತ್ತಿದ್ದೆ. ಪಕ್ಷದ ವರಿಷ್ಠರ ಸೂಚನೆಯಂತೆ ‘ಫೋರ್’, ‘ಸೆಕ್ಸ್’ ಹೊಡೆಯಲು ಹೋಗಿ ಎರಡೂ ಕಡೆ ಸೋತು, ನಿರುದ್ಯೋಗಿಯಾಗಿದ್ದೇನೆ” ಎಂದು ಬೇಸರ ವ್ಯಕ್ತಪಡಿಸಿದರು.

ವಿ ಸೋಮಣ್ಣ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...