Homeಮುಖಪುಟಕೇಜ್ರಿವಾಲ್‌ಗೆ ವಜಾ ಕೋರಿ 3ನೇ ಬಾರಿ ಅರ್ಜಿ ಸಲ್ಲಿಕೆ: ನಿಮಗೆ ಭಾರೀ ದಂಡ ವಿಧಿಸಬೇಕು ಎಂದ...

ಕೇಜ್ರಿವಾಲ್‌ಗೆ ವಜಾ ಕೋರಿ 3ನೇ ಬಾರಿ ಅರ್ಜಿ ಸಲ್ಲಿಕೆ: ನಿಮಗೆ ಭಾರೀ ದಂಡ ವಿಧಿಸಬೇಕು ಎಂದ ಹೈಕೋರ್ಟ್‌

- Advertisement -
- Advertisement -

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ವಜಾಗೊಳಿಸುವಂತೆ ಕೋರಿ ಮೂರನೇ ಅರ್ಜಿ ಸಲ್ಲಿಸಿರುವ ಅರ್ಜಿದಾರರ ಮೇಲೆ ಭಾರೀ ವೆಚ್ಚವನ್ನು ವಿಧಿಸಬೇಕು ಎಂದು ದೆಹಲಿ ಹೈಕೋರ್ಟ್ ಹೇಳಿದೆ.

ರಾಷ್ಟ್ರ ರಾಜಧಾನಿಯ ಮುಖ್ಯಮಂತ್ರಿ ಸ್ಥಾನದಿಂದ ಅರವಿಂದ್ ಕೇಜ್ರಿವಾಲ್ ಅವರನ್ನು ವಜಾಗೊಳಿಸುವಂತೆ ಕೋರಿ ಸಲ್ಲಿಸಲಾದ ಮನವಿಯನ್ನು ಪ್ರಚಾರಕ್ಕಾಗಿ ಸಲ್ಲಿಸಲಾಗಿದೆ ಮತ್ತು ಮಾಜಿ ಶಾಸಕ ಸಂದೀಪ್ ಕುಮಾರ್ ಮೇಲೆ ಭಾರೀ ವೆಚ್ಚ ವಿಧಿಸಬೇಕು ಎಂದು ದೆಹಲಿ ಹೈಕೋರ್ಟ್ ಹೇಳಿದೆ.

ಕೇಜ್ರಿವಾಲ್ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸುವಂತೆ ಸಲ್ಲಿಸಲಾದ ಮೂರನೇ ಮನವಿ ಇದಾಗಿದೆ. ದೆಹಲಿ ಹೈಕೋರ್ಟ್ ಅರ್ಜಿಯನ್ನು ವರ್ಗಾಯಿಸಿದೆ ಮತ್ತು ಹಂಗಾಮಿ ಮುಖ್ಯ ನ್ಯಾಯಮೂರ್ತಿಗಳ ಪೀಠದ ಮುಂದೆ ವಿಷಯವನ್ನು ಪಟ್ಟಿ ಮಾಡಲು ಆದೇಶಿಸಿದೆ.

ಈ ಹಿಂದೆ ಏಪ್ರಿಲ್ 4ರಂದು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನಮೋಹನ್ ಮತ್ತು ನ್ಯಾಯಮೂರ್ತಿ ಮನ್ಮೀತ್ ಪಿ ಎಸ್ ಅರೋರಾ ಅವರ ಪೀಠವು ಈ ವಿಷಯದ ಕುರಿತು ಪಿಐಎಲ್‌ನ್ನು ಪರಿಗಣಿಸಲು ನಿರಾಕರಿಸಿದೆ. ಮುಖ್ಯಮಂತ್ರಿಯಾಗಿ ಮುಂದುವರಿಯುವುದು ಕೇಜ್ರಿವಾಲ್ ಅವರ ವೈಯಕ್ತಿಕ ಆಯ್ಕೆಯಾಗಿದೆ ಎಂದು ಪೀಠವು ಹೇಳಿತ್ತು.

ಬಂಧಿತ ಮುಖ್ಯಮಂತ್ರಿ ಅಧಿಕಾರದಲ್ಲಿ ಇರುವುದನ್ನು ನಿಷೇಧಿಸುವ ಯಾವುದೇ ಕಾನೂನು ತಡೆಯನ್ನು ತೋರಿಸಲು ಅರ್ಜಿದಾರರು ವಿಫಲರಾಗಿದ್ದಾರೆ ಎಂದು ಗಮನಿಸಿದ ಪೀಠವು  ಪಿಐಎಲ್  ವಜಾಗೊಳಿಸಿದೆ. ಈ ವಿಷಯದಲ್ಲಿ ನ್ಯಾಯಾಂಗದ ಹಸ್ತಕ್ಷೇಪಕ್ಕೆ ಯಾವುದೇ ಅವಕಾಶವಿಲ್ಲ ಮತ್ತು ರಾಜ್ಯದ ಇತರ ಅಂಗಗಳು ಈ ಸಮಸ್ಯೆಯನ್ನು ಪರಿಶೀಲಿಸಬೇಕು ಎಂದು ಕೋರ್ಟ್‌ ಹೇಳಿದೆ.

ಅಬಕಾರಿ ನೀತಿ ಪ್ರಕರಣದಲ್ಲಿ ಭ್ರಷ್ಟಾಚಾರದ ಆರೋಪದ ಮೇಲೆ ಕೇಜ್ರಿವಾಲ್ ಅವರನ್ನು ಮಾರ್ಚ್ 21ರಂದು ತನಿಖಾ ಸಂಸ್ಥೆ ಬಂಧಿಸಿತ್ತು. ಏಪ್ರಿಲ್ 15ರವರೆಗೆ ನ್ಯಾಯಾಂಗ ಬಂಧನಕ್ಕೆ ಅವರನ್ನು ಕಳಹಿಸಲಾಗಿದೆ.

ಇದನ್ನು ಓದಿ: ಚುನಾವಣಾ ಬಾಂಡ್‌ ಹಗರಣದ ಕುರಿತು ಸುಪ್ರೀಂಕೋರ್ಟ್‌ ಮೇಲ್ವಿಚಾರಣೆಯಲ್ಲಿ ತನಿಖೆಗೆ ಸಂಯುಕ್ತ ಕಿಸಾನ್ ಮೋರ್ಚಾ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...