Homeಮುಖಪುಟಆಂಧ್ರಪ್ರದೇಶ: ನಿಗೂಢ ಕಾಯಿಲೆಗೆ ಸೀಸ ಮತ್ತು ನಿಕ್ಕಲ್ ಅಂಶ ಕಾರಣ- ತಜ್ಞರು

ಆಂಧ್ರಪ್ರದೇಶ: ನಿಗೂಢ ಕಾಯಿಲೆಗೆ ಸೀಸ ಮತ್ತು ನಿಕ್ಕಲ್ ಅಂಶ ಕಾರಣ- ತಜ್ಞರು

ಅಸ್ವಸ್ಥರಾಗಿರುವ 505 ಜನರಲ್ಲಿ 370 ಕ್ಕೂ ಹೆಚ್ಚು ಜನರು ಚೇತರಿಸಿಕೊಂಡಿದ್ದಾರೆ ಮತ್ತು ಇನ್ನೂ 120 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

- Advertisement -
- Advertisement -

ಕಳೆದ ನಾಲ್ಕು ದಿನಗಳಿಂದ ಆಂಧ್ರಪ್ರದೇಶದ ಏಲೂರು ನಗರದಲ್ಲಿ ಕಾಣಿಸಿಕೊಂಡಿರುವ ನಿಗೂಢ ಖಾಯಿಲೆಗೆ ಕುಡಿಯುವ ನೀರು ಮತ್ತು ಹಾಲಿನಲ್ಲಿನ ಸೀಸ ಮತ್ತು ನಿಕ್ಕಲ್ ಅಂಶ ಮೂಲ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ಕಂಡುಬಂದಿದೆ. ಈ ನಿಗೂಢ ಕಾಯಿಲೆ ಇದುವರೆಗೆ ಒಂದು ಜೀವವನ್ನು ಬಲಿ ತೆಗೆದುಕೊಂಡಿದ್ದು, 500 ಕ್ಕೂ ಹೆಚ್ಚು ಮಂದಿ ಅನಾರೋಗ್ಯಕ್ಕೆ ಒಳಗಾಗಿದ್ದಾರೆ.

ಏಮ್ಸ್ ಮತ್ತು ರಾಜ್ಯ ಮತ್ತು ಕೇಂದ್ರ ಸಂಸ್ಥೆಗಳ ತಜ್ಞರ ತಂಡಗಳ ಪ್ರಾಥಮಿಕ ಸಂಶೋಧನೆಗಳ ಆಧಾರದ ಮೇಲೆ ಆರೋಗ್ಯ ಅಧಿಕಾರಿಗಳು ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಅವರಿಗೆ ವರದಿ ಸಲ್ಲಿಸಿದರು.

ಏಮ್ಸ್ ತಜ್ಞರು ಸಿದ್ಧಪಡಿಸಿದ ವರದಿಯನ್ನು ಉಲ್ಲೇಖಿಸಿ ಸೀಸ ಮತ್ತು ನಿಕ್ಕಲ್ ಅಂಶವೇ ನಿಗೂಢ ಕಾಯಿಲೆಗೆ ಕಾರಣವಾಗಿರುವ ಅಂಶಗಳಾಗಿವೆ ಎಂದು ಮುಖ್ಯಮಂತ್ರಿ ಕಚೇರಿ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ: ಆಂಧ್ರ ಪ್ರದೇಶ: ನಿಗೂಢ ಕಾಯಿಲೆಗೆ ಓರ್ವ ಬಲಿ, 315ಕ್ಕೂ ಅಧಿಕ ಮಂದಿ ಅಸ್ವಸ್ಥ

 

ಕಳೆದ ಶನಿವಾರ ರಾತ್ರಿಯಿಂದ ಫಿಟ್ಸ್ ಮತ್ತು ವಾಕರಿಕೆಗಳಿಂದ ಬಳಲುತ್ತಿದ್ದ ಜನರು ಇದ್ದಕ್ಕಿದ್ದಂತೆ ಪ್ರಜ್ಞೆ ತಪ್ಪಿ ಬೀಳುತ್ತಿದ್ದರು. 3-5 ನಿಮಿಷಗಳ ಕಾಲ ವಾಂತಿ, ಕೆಲವು ನಿಮಿಷಗಳವರೆಗೆ ಮರೆವು, ಆತಂಕ, ವಾಂತಿ, ತಲೆನೋವು ಮತ್ತು ಬೆನ್ನು ನೋವಿನಿಂದ ಜನರು ಪರದಾಡುತ್ತಿದ್ದರು ಎಂದು ಜಿಜಿಹೆಚ್ ವೈದ್ಯರು ಹೇಳಿದ್ದಾರೆ.

ಇದನ್ನೂ ಓದಿ: ಭಾರತ್ ಬಂದ್ ಯಶಸ್ವಿ: ದೇಶಾದ್ಯಂತದ ಹೋರಾಟದ ಚಿತ್ರಗಳು

“ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಕೆಮಿಕಲ್ ಟೆಕ್ನಾಲಜಿ ಮತ್ತು ಇತರ ಸಂಸ್ಥೆಗಳು ಹೆಚ್ಚಿನ ಪರೀಕ್ಷೆಗಳನ್ನು ನಡೆಸುತ್ತಿವೆ ಮತ್ತು ಶೀಘ್ರದಲ್ಲೇ ಫಲಿತಾಂಶಗಳನ್ನು ನಿರೀಕ್ಷಿಸಲಾಗಿದೆ. ರೋಗಿಗಳ ದೇಹದಲ್ಲಿ ಸೀಸ ಮತ್ತು ನಿಕ್ಕಲ್ ಲೋಹದ ಅಂಶ ಹೆಚ್ಚಿದ್ದು, ಸಮಗ್ರ ತನಿಖೆ ನಡೆಸಲು ಮತ್ತು ರೋಗಿಗಳ ಚಿಕಿತ್ಸೆ ಮೇಲೆ ನಿರಂತರವಾಗಿ ನಿಗಾವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮುಖ್ಯಮಂತ್ರಿ ನಿರ್ದೇಶನ ನೀಡಿದ್ದಾರೆ” ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಅಸ್ವಸ್ಥರಾಗಿರುವ 505 ಜನರಲ್ಲಿ 370 ಕ್ಕೂ ಹೆಚ್ಚು ಜನರು ಚೇತರಿಸಿಕೊಂಡಿದ್ದಾರೆ ಮತ್ತು ಇನ್ನೂ 120 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿಜಯವಾಡ ಮತ್ತು ಗುಂಟೂರಿನ ಸರ್ಕಾರಿ ಆಸ್ಪತ್ರೆಗಳಿಗೆ ಇನ್ನೂ 19 ಜನರನ್ನು ಉತ್ತಮ ಚಿಕಿತ್ಸೆಗಾಗಿ ಕಳುಹಿಸಲಾಗಿದೆ ಎಂದು ಏಲೂರಿನ ಆರೋಗ್ಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆ ನಿಯೋಜಿಸಿರುವ ತಜ್ಞರ ಹೊರತಾಗಿ, ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ರಚಿಸಿದ ಮೂವರು ಸದಸ್ಯರ ತಂಡವು ಮಂಗಳವಾರ ಎಲೂರಿಗೆ ಆಗಮಿಸಿ, ಮಾದರಿಗಳನ್ನು ಸಂಗ್ರಹಿಸಲು ನಿಗೂಢ ಕಾಯಿಲೆ ಹರಡಿರುವ ಪ್ರದೇಶಗಳನ್ನು ಸುತ್ತುವರೆದಿದೆ.

ಮುಖ್ಯಮಂತ್ರಿ ವೈ.ಎಸ್‌.ಜಗನ್‌ಮೋಹನ್‌ ರೆಡ್ಡಿ ಏಲೂರಿಗೆ ಭೇಟಿ ನೀಡಿದ್ದು, ರೋಗಿಗಳ ಯೋಗಕ್ಷೇಮ ವಿಚಾರಿಸಿದ್ದಾರೆ.  ಸಂತ್ರಸ್ತರು ಚೆನ್ನಾಗಿ ಚೇತರಿಸಿಕೊಳ್ಳುತ್ತಿದ್ದಾರೆ ಮತ್ತು ಭಯಪಡುವ ಅಗತ್ಯವಿಲ್ಲ ಎಂದು ಉಪಮುಖ್ಯಮಂತ್ರಿ ಮತ್ತು ಆರೋಗ್ಯ ಸಚಿವ ಅಲ್ಲಾ ಕಾಳಿ ಕೃಷ್ಣ ಶ್ರೀನಿವಾಸ್ ಹೇಳಿದ್ದರು.

ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ತಂಡವು ನಡೆಸಿದ ತನಿಖೆಯಲ್ಲಿ ರೋಗಿಗಳ ರಕ್ತದ ಮಾದರಿಗಳಲ್ಲಿ ಸೀಸ ಮತ್ತು ನಿಕ್ಕಲ್ ಕಣಗಳು ಕಂಡುಬಂದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಂತೆಯೇ, ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಕೆಮಿಕಲ್ ಟೆಕ್ನಾಲಜಿ ಸಹ ಪರೀಕ್ಷೆಗಳನ್ನು ನಡೆಸುತ್ತಿದ್ದು ವರದಿಗಾಗಿ ಕಾಯುತ್ತಿದ್ದೇವೆ ಎಂದು ಪ್ರಕಟಣೆ ತಿಳಿಸಿದೆ.

ಸೀಸ ಮತ್ತು ನಿಕ್ಕಲ್ ಕಣಗಳು ವಿಷಕಾರಿ ಕೈಗಾರಿಕಾ ತ್ಯಾಜ್ಯ ವಿಸರ್ಜನೆಯಾಗಿರಬಹುದು, ಅದು ಕುಡಿಯುವ ನೀರಿನೊಂದಿಗೆ ಬೆರೆತುಹೋಗುತ್ತದೆ ಎನ್ನಲಾಗಿದೆ.


ಇದನ್ನೂ ಓದಿ: ಭಾರತದಲ್ಲಿ ಕೊರೊನಾ ಲಸಿಕೆ ಬಳಕೆಗೆ ಅನುಮತಿ ಕೋರಿದ ಫೈಝರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...