Homeಕರ್ನಾಟಕರಾಜ್ಯದ ಹಲವೆಡೆ ಭಾರಿ ಮಳೆ: ನೆಲಕ್ಕುರುಳಿದ ವಿದ್ಯುತ್‌ ಕಂಬಗಳು-ನದಿ ನೀರಿನ ಮಟ್ಟದಲ್ಲಿ ಹೆಚ್ಚಳ

ರಾಜ್ಯದ ಹಲವೆಡೆ ಭಾರಿ ಮಳೆ: ನೆಲಕ್ಕುರುಳಿದ ವಿದ್ಯುತ್‌ ಕಂಬಗಳು-ನದಿ ನೀರಿನ ಮಟ್ಟದಲ್ಲಿ ಹೆಚ್ಚಳ

- Advertisement -
- Advertisement -

ಕರ್ನಾಟಕದಲ್ಲಿ ಮುಂಗಾರು ಚುರುಕುಗೊಂಡಿದ್ದು ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧೆಡೆ ಉತ್ತಮ  ಮಳೆಯಾಗುತ್ತಿದೆ. ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ಕೂಡ ವರುಣನ ಆರ್ಭಟ ಮುಂದುವರೆದಿದ್ದು ಅನೇಕ ಜಿಲ್ಲೆಯಲ್ಲಿ ಮಳೆಯಿಂದ ಹಾನಿಯಾಗಿರುವ ಘಟನೆಗಳು ವರದಿಯಾಗಿವೆ. ಹವಾಮಾನ ಇಲಾಖೆ ಮುಂದಿನ ಎರಡು ದಿನಗಳ ಕಾಲ ರಾಜ್ಯಾದ್ಯಂತ ಭಾರಿ ಮಳೆಯಾಗಲಿದೆ ಎಂಬ ಮುನ್ಸೂಚನೆಯನ್ನು ನೀಡಿದೆ. ಮುಂದಿನ ಒಂದು ವಾರ ಕರಾವಳಿ, ಮಲೆನಾಡಿನಲ್ಲಿ ಜಡಿ ಮಳೆ ಮುಂದುವೆರೆಯುವ ನಿರೀಕ್ಷೆ ಇದೆ. ಜಿಲ್ಲಾಡಳಿತಗಳಿಗೆ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದೆ.

ಕಳೆದ 2 ದಿನಗಳಿಂದ ಕರಾವಳಿ, ಮಲೆನಾಡು ಮತ್ತು ಕಲ್ಯಾಣ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ. ಮುಂಗಾರು ಚುರುಕುಗೊಂಡಿದ್ದು, ಜುಲೈ 11 ಮತ್ತು 12ರಂದು ವಿವಿಧ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿ ಜಿಲ್ಲಾಡಳಿತಗಳು ಆದೇಶ ಹೊರಡಿಸಿದೆ. ಹವಾಮಾನ ಇಲಾಖೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಭಾನುವಾರ ಮತ್ತು ಸೋಮವಾರ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿಯೂ ಕಳೆದೆರಡು ದಿನಗಳಿಂದ ಮಳೆ ಸುರಿಯು‌ತ್ತಿದ್ದು ಶೀತ ಹವಮಾನ ಇದೆ. ಮಳೆಯ ವಾತಾವರಣ ಮುಂದಿನ ಒಂದು ವಾರ ಹೀಗೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಇದನ್ನೂ ಓದಿ: ರಾಜ್ಯದಲ್ಲಿ ಒಂದು ವಾರ ಭಾರಿ ಮಳೆ: ಹವಾಮಾನ ಇಲಾಖೆ ಮಾಹಿತಿ

ಕರಾವಳಿ ಜಿಲ್ಲೆಗಳಲ್ಲಿ ಜುಲೈ 15ರ ತನಕ ಮಳೆ ಆರ್ಭಟ ಮುಂದುವರೆಯಲಿದೆ. ಸಮುದ್ರದಲ್ಲಿ 3.3 ಮೀಟರ್ ತನಕ ಅಲೆಗಳು ಏಳುವ ನಿರೀಕ್ಷೆ ಇದ್ದು, ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಎಚ್ಚರಿಕೆ ನೀಡಲಾಗಿದೆ.

ಶನಿವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದ್ದು, ಬಂಟ್ವಾಳದಲ್ಲಿ ತಡೆಗೋಡೆ ಉರುಳಿ ಬಿದ್ದು ಮಗು ಸೇರಿದಂತೆ ಇಬ್ಬರು ಗಾಯಗೊಂಡಿದ್ದಾರೆ. ಜಿಲ್ಲೆಯ ಬಂಟ್ವಾಳ, ಸುಳ್ಯ, ಮಂಗಳೂರಿನಲ್ಲಿ ಧಾರಾಕಾರ ಮಳೆಗೆ ವಿದ್ಯುತ್‌ ಕಂಬಗಳು ಮತ್ತು ಮರಗಳು ಧರೆಗೆ ಉರುಳಿವೆ. ಹಲವೆಡೆ ರಸ್ತೆ ಸಂಪರ್ಕ ಕಡಿತಗೊಂಡಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಗೆ ತುಂಬಿ ಹರಿಯುತ್ತಿರುವ ಹಳ್ಳ

ಉಡುಪಿ ಜಿಲ್ಲೆಯಲ್ಲೂ ಮಳೆ ಹೊಡೆತ ಮುಂದುವರೆದಿದ್ದು,ಕಾರ್ಕಳ, ಹೆಬ್ರಿ, ಕಾಪು ಮತ್ತು ಬೈಂದೂರು ತಾಲೂಕು ವ್ಯಾಪ್ತಿಯಲ್ಲಿ ಮಳೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಕೊಟ್ಟಿಗೆಹಾರ, ಕಳಸ, ಶೃಂಗೇರಿ, ಕೊಪ್ಪ ಮತ್ತು ಎನ್‌. ಆರ್. ಪುರದಲ್ಲಿ ಸಾಧಾರಣ ಮಳೆ ಸುರಿದಿದೆ.

ಶಿವಮೊಗ್ಗ ಜಿಲ್ಲೆಯ ಸಾಗರ, ತೀರ್ಥಹಳ್ಳಿಯ ಕೋಣಂದೂರು, ಸೊರಬ, ಶಿಕಾರಿಪುರದಲ್ಲಿ ಸಾಧಾರಣ ಮಳೆಯಾಗಿದ್ದರೆ, ಹೊಸನಗರಲ್ಲಿ ಹೆಚ್ಚಿನ ಮಳೆಯಾಗಿದೆ.

ಮಹಾರಾಷ್ಟ್ರ ಮತ್ತು ಕಲ್ಯಾಣ ಕರ್ನಾಟಕದಲ್ಲಿ ಭಾರಿ ಮಳೆ ಸುರಿಯುತ್ತಿರುವುದರಿಂದ ಬೀದರ್‌ನಲ್ಲಿ ಮಾಂಜ್ರಾ ನದಿಗೆ ಅಪಾರ ಪ್ರಮಾಣದ ನೀರು ಹರಿದುಬರುತ್ತಿದೆ. ಸಂತಪುರ-ಠಾಣಾಕುಶನೂರ ನಡುವಿನ ರಸ್ತೆ ಕೊಚ್ಚಿ ಹೋಗಿದ್ದು, ವಾಹನ ಸಂಚಾರ ಸ್ಥಗಿತವಾಗಿದೆ. ನದಿ ಪಾತ್ರದ ತಗ್ಗು ಪ್ರದೇಶದ ಜನರಿಗೆ ಈಗಾಗಲೇ ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚಿಸಲಾಗಿದೆ.

ಕಲಬುರಗಿ ಜಿಲ್ಲೆಯ ಸೇಡಂ, ಚಿಂಚೋಳಿ, ಕಮಲಾಪುರ, ಯಡ್ರಾಮಿಯಲ್ಲಿ ಭಾರಿ ಮಳೆಯಾಗಿದೆ. ಬೀದರ್‌ನಲ್ಲಿ ಸುರಿದ ಮಳೆಗೆ ಹಳ್ಳ-ಕೊಳ್ಳಗಳು ಭರ್ತಿಯಾಗಿವೆ.

ಕೃಷ್ಣಾ ನದಿ ಅಚ್ಚುಕಟ್ಟಿನ ಪ್ರದೇಶದಲ್ಲಿ ಕಳೆದೆರಡು ದಿನಗಳಿಂದ ವರುಣರಾಯ ಬಿಡುವು ನೀಡಿಲ್ಲ. ಮಹಾರಾಷ್ಟ್ರ, ಬೆಳಗಾವಿ ಸೇರಿದಂತೆ ನದಿ ಪಾತ್ರದಲ್ಲಿ ಸುರಿದ ಭಾರಿ ಮಳೆಯ ಕಾರಣಕ್ಕೆ ನದಿಯಲ್ಲಿ ನೀರಿನ ಹರಿವಿನ ಪ್ರಮಾಣ ಹೆಚ್ಚಿದ್ದು ಆಲಮಟ್ಟಿ ಭಾಗದ ರೈತರು ಸಂತೋಷಗೊಂಡಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ಮುಂದಿನ 5 ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಅಂತರ್ಜಾತಿ ವಿವಾಹ; ಹೈದರಾಬಾದ್‌ನಲ್ಲಿ ಮತ್ತೊಬ್ಬ ಯುವಕನ ಕೊಲೆ | Naanu Gauri

ಅಂತರ್ಜಾತಿ ವಿವಾಹ; ಹೈದರಾಬಾದ್‌ನಲ್ಲಿ ಮತ್ತೊಬ್ಬ ಯುವಕನ ಕೊಲೆ

0
ಹೈದರಾಬಾದ್‌ನ ಜನನಿಬಿಡ ಬೇಗಂ ಬಜಾರ್ ಪ್ರದೇಶದಲ್ಲಿ ಶಸ್ತ್ರಸಜ್ಜಿತ ವ್ಯಕ್ತಿಗಳು 21 ವರ್ಷದ ಯುವಕನನ್ನು ಅಂತರ್ಜಾತಿ ವಿವಾಹವಾದ ಕಾರಣಕ್ಕಾಗಿ ಇರಿದು ಕೊಂದಿರುವ ಘಟನೆ ಮೇ 20ರ ಶುಕ್ರವಾರದ ಸಂಜೆ ನಡೆದಿದೆ ಎಂದು ನ್ಯೂಸ್ ಮಿನಿಟ್...