Homeಕರ್ನಾಟಕರಾಜ್ಯದಲ್ಲಿ ಮಳೆ ಅಬ್ಬರ, ಭರ್ತಿಯಾದ ಡ್ಯಾಂಗಳು: ನದಿಪಾತ್ರದ ಜನರಲ್ಲಿ ಪ್ರವಾಹ ಭೀತಿ

ರಾಜ್ಯದಲ್ಲಿ ಮಳೆ ಅಬ್ಬರ, ಭರ್ತಿಯಾದ ಡ್ಯಾಂಗಳು: ನದಿಪಾತ್ರದ ಜನರಲ್ಲಿ ಪ್ರವಾಹ ಭೀತಿ

ರಾಜ್ಯದ ಶಿವಮೊಗ್ಗ, ಹಾಸನ, ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಮತ್ತು ಕೊಡಗಿನಲ್ಲಿ ಧಾರಾಕಾರ ಮಳೆಯಾಗುವ ಮುನ್ಸೂಚನೆ ಇದ್ದು, ಏಳು ಜಿಲ್ಲೆಗಳಲ್ಲೂ ರೆಡ್ ಅಲರ್ಟ್ ಮುಂದುವರಿಸಲಾಗಿದೆ.

- Advertisement -
- Advertisement -

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯದ ಕರಾವಳಿ, ಮಲೆನಾಡು, ಕೊಡಗು ಭಾಗಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಜಲಾಶಯಗಳ ಒಳಹರಿವು ಹೆಚ್ಚಾಗುತ್ತಿದೆ. ಬಹುತೇಕ ಡ್ಯಾಂಗಳು ತುಂಬಿದ್ದು, ಮತ್ತಷ್ಟು ಡ್ಯಾಂಗಳು ಭರ್ತಿಯಾಗುವ ಹಂತದಲ್ಲಿವೆ.

ಕೊಡಗಿನಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಕೆ.ಆರ್.ಎಸ್ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದ್ದು, ಜಲಾಶಯದಿಂದ ನದಿಗೆ 40 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗುತ್ತಿದೆ. ನದಿ ಪಾತ್ರದ ಜನರಿಗೆ ವಾಹನದಲ್ಲಿ ಧ್ವನಿವರ್ಧಕದ ಮೂಲಕ ಪ್ರವಾಹ ಭೀತಿಯ ಪ್ರಕಟಣೆ ಮಾಡಲಾಗುತ್ತಿದೆ.

ಇದನ್ನೂ ಓದಿ: ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಐಕ್ಯ ಹೋರಾಟ: ನಾಳೆಯಿಂದ ’ಜನತಾ ಅಧಿವೇಶನ’

ತುಂಗಭದ್ರಾ ಜಲಾಶಯಕ್ಕೂ ಒಳ ಹರಿವು ಹೆಚ್ಚಾಗಿದ್ದು, ಜಲಾಶಯದಿಂದ 1 ಲಕ್ಷ ಕ್ಯೂಸೆಕ್​ ನೀರನ್ನು ಹೊರಬಿಡಲಾಗಿದೆ. ಇದರಿಂದ ಹಂಪಿಯ ಪುರಂದರದಾಸರ ಮಂಟಪ, ಸಾಲುಮಂಟಪ, ಧಾರ್ಮಿಕ ವಿಧಿಗಳನ್ನು ಮಾಡುವ ಮಂಟಪಗಳು ಸೇರಿದಂತೆ ಹಲವು ಸ್ಮಾರಕಗಳು ಮುಳುಗಡೆಯಾಗಿವೆ ಎಂದು ವರದಿಯಾಗಿದೆ. ಸಂಜೆ ವೇಳೆಗೆ ಮತ್ತೆ 1.5 ಲಕ್ಷ ಕ್ಯೂಸೆಕ್​ ನೀರು ಹೊರಬಿಡುವ ಸಾಧ್ಯತೆ ಇದೆ. ಹೀಗಾಗಿ ನದಿಪಾತ್ರದ ಜನರು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.

ಶರಾವತಿ ಕೊಳ್ಳದಲ್ಲೂ ಒಂದು ವಾರದಿಂದ ನಿರಂತರ ಮಳೆ ಸುರಿಯುತ್ತಿರುವ ಕಾರಣ ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ 1,810 ಅಡಿಗೆ ತಲುಪಿದೆ ಎಂದು ಕೆಪಿಸಿ ಮೂಲಗಳು ತಿಳಿಸಿವೆ. ಜಲಾಶಯ ಭರ್ತಿಯಾಗಲು 8 ಅಡಿ ಮಾತ್ರ ಬಾಕಿ ಇದೆ. ಮಳೆ ಹೀಗೆ ಬಂದರೆ ಹೆಚ್ಚುವರಿ ನೀರನ್ನು ಹೊರಕ್ಕೆ ಬಿಡಲಾಗುತ್ತದೆ.

ಇದನ್ನೂ ಓದಿ: ಪ್ರತಿಪಕ್ಷಗಳ ಭಾರಿ ವಿರೋಧದ ನಡುವೆ ಎರಡು ಕೃಷಿ ಮಸೂದೆ ಅಂಗೀಕಾರ

ಉಡುಪಿ ಜಿಲ್ಲೆ ಪ್ರವಾಹಕ್ಕೆ ತತ್ತರಿಸಿದ್ದು, ಜಿಲ್ಲೆಯ ಹಲವು ಗ್ರಾಮಗಳು ಜಲಾವೃತವಾಗಿವೆ. ಜನರ ರಕ್ಷಣೆಗೆ 250 ಸದಸ್ಯರ SDRF ತಂಡವನ್ನು ಜಿಲ್ಲೆಗೆ ಕಳುಹಿಸಲಾಗಿತ್ತು. ರಸ್ತೆ ಸಂಪರ್ಕ ಕಡಿತವಾಗಿರುವ ಕಾರಣ ಜನರನ್ನು ಸುರಕ್ಷಿತ ಸ್ಥಳಗಳಿಗೆ ಕಳುಹಿಸಲು ಸೇನಾ ಹೆಲಿಕಾಪ್ಟರ್‌ ನೀಡಲು ಗೃಹಸಚಿವ ಬಸವಾರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್.ಅಶೋಕ್‌ಗೆ ಮನವಿ ಮಾಡಿದ್ದಾರೆ.

PC:Times of India

ಸದ್ಯ ರಾಜ್ಯದ ಶಿವಮೊಗ್ಗ, ಹಾಸನ, ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಮತ್ತು ಕೊಡಗಿನಲ್ಲಿ ಧಾರಾಕಾರ ಮಳೆಯಾಗುವ ಮುನ್ಸೂಚನೆ ಇದ್ದು, ಏಳು ಜಿಲ್ಲೆಗಳಲ್ಲೂ ರೆಡ್ ಅಲರ್ಟ್ ಮುಂದುವರಿಸಲಾಗಿದೆ.


ಇದನ್ನೂ ಓದಿ: ಕೊರೊನಾ ಪ್ರಕರಣ ಹೆಚ್ಚಳ ಹಿನ್ನೆಲೆ: ಸೆ. 21ರಿಂದ ಶಾಲಾ-ಕಾಲೇಜು ತೆರೆಯುವುದಿಲ್ಲ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

2023ರಲ್ಲಿ ತೀವ್ರ ಹಸಿವಿನಿಂದ ತತ್ತರಿಸಿದ 282 ಮಿಲಿಯನ್ ಜನರು: ಆಹಾರದ ಅಭಾವಕ್ಕೆ ವಿಶ್ವಸಂಸ್ಥೆ ಉಲ್ಲೇಖಿಸಿದ...

0
ಕಳೆದ ವರ್ಷ ಪ್ರಪಂಚದಾದ್ಯಂತ ಆಹಾರ ಅಭದ್ರತೆ ಸ್ಥಿತಿ ಭಾರೀ ಹದಗೆಟ್ಟಿದೆ, 2023ರಲ್ಲಿ ಸುಮಾರು 282 ಮಿಲಿಯನ್ ಜನರು ತೀವ್ರ ಹಸಿವಿನಿಂದ ಬಳಲಿದ್ದಾರೆ, ಇದರಲ್ಲಿ ವಿಶೇಷವಾಗಿ ಯುದ್ಧಪೀಡಿತ ಗಾಝಾ ಮತ್ತು ಸುಡಾನ್‌ನಲ್ಲಿ ಹೆಚ್ಚಿನ ಜನರು...