Homeಚಳವಳಿಸುರಿವ ಮಳೆ - ಕೊರೆವ ಚಳಿಯಲ್ಲಿಯೂ ಪಟ್ಟು ಬಿಡದ ಪ್ರತಿಭಟನಾ ನಿರತ ರೈತರು!

ಸುರಿವ ಮಳೆ – ಕೊರೆವ ಚಳಿಯಲ್ಲಿಯೂ ಪಟ್ಟು ಬಿಡದ ಪ್ರತಿಭಟನಾ ನಿರತ ರೈತರು!

- Advertisement -
- Advertisement -

ಕೇಂದ್ರದ ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿ ಕಳೆದ ಒಂದು ತಿಂಗಳಿನಿಂದ ರೈತರು ಪ್ರತಿಭಟನೆ ಮಾಡುತ್ತಿದ್ದು, ಹೊಸ ವರ್ಷದ ಮೊದಲ ದಿನವೇ 1.1 ಸೆಲ್ಸಿಯಸ್ ತಾಪಮಾನ ಇತ್ತು. ಈ ಕೊರೆವ ಚಳಿಯ ನಡುವೆಯೂ ರೈತರು ಪ್ರತಿಭಟನೆ ಮುಂದುವರೆಸಿದ್ದರು. ಇಂದು ದೆಹಲಿಯಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಇದಕ್ಕೂ ಜಗ್ಗದ ರೈತರು ತಮ್ಮ ಹೋರಾಟ ಮುಂದುವರೆಸಿದ್ದಾರೆ.

ಈ ಕುರಿತು ಎಎನ್‌ಐ ವರದಿ ಮಾಡಿದ್ದು, “ದೆಹಲಿಯಲ್ಲಿ ರೈತರು ನಡೆಸುತ್ತಿರುವ 37ನೇ ದಿನಕ್ಕೆ ಕಾಲಿಟ್ಟಿದ್ದು, ಮಳೆ-ಚಳಿಯ ನಡುವೆಯೂ ತಮ್ಮ ಪ್ರತಿಭಟನೆ ಮುಂದುವರಿಸುತ್ತಿದ್ದಾರೆ” ಎಂದು ಟ್ವೀಟ್ ಮಾಡಿದೆ.

“ನಮ್ಮ ಕುಟುಂಬವನ್ನು ಬಿಟ್ಟು ಈ ಅಪಾಯಕಾರಿ ವಾತಾವರಣದ ನಡುವೆ ದೆಹಲಿಯ ಬೀದಿಯಲ್ಲಿದ್ದೇವೆ. ನಮ್ಮ ಬೇಡಿಕೆಗಳನ್ನು ಸರ್ಕಾರ ನಾಳೆ ಒಪ್ಪಿಕೊಳ್ಳಲಿದೆ ಎಂಬ ಆಶಾವಾದದಲ್ಲಿದ್ದೇವೆ” ಎಂದು ಪ್ರತಿಭಟನಾ ನಿರತ ರೈತರು ಹೇಳಿದ್ದಾರೆ.

ಇದನ್ನೂ ಓದಿ: ರಾಜ್ಯ ಬಿಜೆಪಿಯಲ್ಲಿ ಬಿರುಕು: ಯತ್ನಾಳ್ ವಿರುದ್ಧ ರಾಷ್ಟ್ರ ನಾಯಕರಿಗೆ ದೂರು ನೀಡಿದ ಸಿಎಂ ಬೆಂಬಲಿಗರು!

ಕಳೆದ ಒಂದು ತಿಂಗಳಿನಿಂದ ಲಕ್ಷಾಂತರ ರೈತರು ದೆಹಲಿಯ ಗಡಿಯಲ್ಲಿ ಪ್ರತಿಭಟನೆ ಮಾಡುತ್ತಿದ್ದು, ಕೇಂದ್ರ ಸರ್ಕಾರದ ರೈತ ವಿರೋಧಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸುತ್ತಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಜೊತೆ ಆರು ಸುತ್ತಿನ ಮಾತುಕತೆಗಳು ನಡೆದಿದ್ದು, ಅವುಗಳೆಲ್ಲವೂ ವಿಫಲವಾಗಿವೆ.

ಇದನ್ನೂ ಓದಿ: ಬಿಜೆಪಿ ಮೇಲೆ ನಂಬಿಕೆಯಿಲ್ಲ, ಕೊರೊನಾ ಲಸಿಕೆ ತೆಗೆದುಕೊಳ್ಳುವುದಿಲ್ಲ: ಅಖಿಲೇಶ್ ಯಾದವ್

“ಡಿಸಂಬರ್ 30 ರಂದು ನಡೆದ ಆರನೇ ಸುತ್ತಿನ ಮಾತುಕತೆಯಲ್ಲಿ, ರೈತರ 4 ಪ್ರಮುಖ ಬೇಡಿಕೆಗಳಲ್ಲಿ ಕೇಂದ್ರ ಸರ್ಕಾರ ಎರಡಕ್ಕೆ ಒಪ್ಪಿಗೆ ನೀಡಲಾಗಿದ್ದು, ಉಳಿದ ಎರಡು ಬೇಡಿಕೆಗಳ ಕುರಿತಂತೆ ಜನವರಿ 4 ರಂದು ಮತ್ತೊಂದು ಸುತ್ತಿನ ಮಾತುಕತೆಯಲ್ಲಿ ತೀರ್ಮಾನವಾಗಲಿದೆ. ಅಲ್ಲಿ ತಮ್ಮ ಬೇಡಿಕೆಗಳನ್ನು ಈಡೆರಿಸದಿದ್ದರೆ ದೇಶದಾದ್ಯಂತ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ರೈತರು ಎಚ್ಚರಿಕೆ ಕೊಟ್ಟಿದ್ದಾರೆ.

ಹೊಸ ಕೃಷಿ ಕಾನೂನುಗಳ ವಿರುದ್ಧ ದೆಹಲಿಯ ಗಡಿಗಳಲ್ಲಿ ರೈತರು ನಡೆಸುತ್ತಿರುವ ಹೋರಾಟದ ಪರಿಣಾಮವಾಗಿ ಪ್ರಸಕ್ತ ಹಣಕಾಸು ವರ್ಷದ 3 ನೇ ತ್ರೈಮಾಸಿಕದಲ್ಲಿ 70,000 ಕೋಟಿ ರೂ.ಗಳ ಆರ್ಥಿಕ ನಷ್ಟವಾಗಲಿದೆ ಎಂದು PHD ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿ ತಿಳಿಸಿತ್ತು.


ಇದನ್ನೂ ಓದಿ: ಲವ್ ಜಿಹಾದ್ ಎಂಬ ಕಪೋಲಕಲ್ಪಿತ: ಮತಾಂತರ ವಿರೋಧ ಕಾಯ್ದೆಯ ಅವಾಂತರ..

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...