Homeಮುಖಪುಟಮುಂಬೈ ಭಾರಿ ಮಳೆ: ಭೂಕುಸಿತದಿಂದ 23 ಸಾವು

ಮುಂಬೈ ಭಾರಿ ಮಳೆ: ಭೂಕುಸಿತದಿಂದ 23 ಸಾವು

- Advertisement -
- Advertisement -

ಮುಂಬೈನಲ್ಲಿ ಸುರಿದ ಭಾರಿ ಮಳೆಯಿಂದಾಗಿ ಚೆಂಬೂರ್ ಮತ್ತು ವಿಖ್ರೋಲಿ ಪ್ರದೇಶಗಳಲ್ಲಿ ಭೂಕುಸಿತವಾಗಿದ್ದು, ಎರಡು ಪ್ರತ್ಯೇಕ ಘಟನೆಗಳಲ್ಲಿ ಒಟ್ಟು 23 ಜನರು ಸಾವನ್ನಪ್ಪಿದ್ದಾರೆ. ದುರಂತದಿಂದಾಗಿ ಮೃತಪಟ್ಟವರಿಗೆ ಒಕ್ಕೂಟ ಸರ್ಕಾರ ತಲಾ 2 ಲಕ್ಷ ಪರಿಹಾರ ಘೋಷಿಸಿದೆ.

ಘಟನೆಯಲ್ಲಿ ಹಲವಾರು ಜನರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲದೆ, ಘಟನೆ ನಡೆದ ಸ್ಥಳದಲ್ಲಿ ರಾಷ್ಟ್ರೀಯ ವಿಪತ್ತು ಸ್ಪಂದನಾ ಪಡೆ (ಎನ್‌ಡಿಆರ್‌ಎಫ್‌) ರಕ್ಷಣಾ ಕಾರ್ಯಾಚರಣೆಯಿಂದ ನಡೆಯುತ್ತಿದೆ.

ಇದನ್ನೂ ಓದಿ: ಅನ್‌‌ಲಾಕ್‌ 4.0 – ಪದವಿ ಕಾಲೇಜ್‌ ಜು.26 ರಿಂದ ಆಫ್‌ಲೈನ್‌ ಕ್ಲಾಸ್‌, ಥಿಯೇಟರ್‌‌ 50% ಸಾಮರ್ಥ್ಯದೊಂದಿಗೆ ಅನುಮತಿ

ಜುಲೈ 17 ಮತ್ತು ಜುಲೈ 18 ರ ಮಧ್ಯರಾತ್ರಿ ಮುಂಬೈನಲ್ಲಿ ಭಾರೀ ಮಳೆ ಸುರಿದಿದೆ. ಇದರಿಂದಾಗಿ ಚೆಂಬೂರ್‌ನ ವಾಶಿ ನಾಕಾ ಪ್ರದೇಶದಲ್ಲಿ ಭೂಕುಸಿತ ಉಂಟಾಗಿದ್ದು, ಕೆಲವು ಮನೆಗಳ ಗೋಡೆ ಕುಸಿದು ಒಟ್ಟು 17 ಜನರು ಪ್ರಾಣ ಕಳೆದುಕೊಂಡಿದ್ದಾರೆ.

ಮತ್ತೊಂದು ಘಟನೆಯಲ್ಲಿ, ಮುಂಬೈನ ವಿಖ್ರೋಲಿ ಎಂಬಲ್ಲಿ ಭಾನುವಾರ ಮುಂಜಾನೆ ವಸತಿ ಕಟ್ಟಡ ಕುಸಿದು ಬಿದ್ದ ಪರಿಣಾಮ ಆರು ಜನರು ಮೃತಪಟ್ಟಿದ್ದಾರೆ. ಎನ್‌ಡಿಆರ್‌ಎಫ್‌ ತಂಡದವರು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಬೃಹತ್ ಮುಂಬೈ ಕಾರ್ಪೋರೇಷನ್ ತಿಳಿಸಿದೆ.

ಮೃತರ ಕುಟುಂಬಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿ, ಪರಿಹಾರ ನಿಧಿಯಿಂದ ಮೃತರ ಸಂಬಂಧಿಕರಿಗೆ ತಲಾ 2 ಲಕ್ಷ ರೂ.ಗಳನ್ನು ನೀಡುವುದಾಗಿ ಘೋಷಿಸಿದರು. ಗಾಯಗೊಂಡವರಿಗೆ 50000ರೂ. ನೀಡಲಾಗುವುದು ಎಂದು ಟ್ವೀಟ್‌ ಮಾಡಿದ್ದಾರೆ.

ಇದನ್ನೂ ಓದಿ: ಅಕ್ಟೋಬರ್‌ 1 ರಿಂದ ವಿವಿ ಮತ್ತು ಕಾಲೇಜ್‌‌ಗಳ ಹೊಸ ಶೈಕ್ಷಣಿಕ ವರ್ಷ ಪ್ರಾರಂಭ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ದಲಿತ ಕುಟುಂಬದ ಮೂವರ ಹತ್ಯೆ ಪ್ರಕರಣ: ಪೊಲೀಸರ ವರ್ಗಾವಣೆ

0
ಉತ್ತರಪ್ರದೇಶದ ಕೌಶಂಬಿ ಜಿಲ್ಲೆಯ ಸಂದೀಪನ್ ಘಾಟ್ ಪ್ರದೇಶದಲ್ಲಿ ಜಮೀನು ವಿವಾದಕ್ಕೆ ಸಂಬಂಧಿಸಿ ದಲಿತ ಕುಟುಂಬದ ಮೂವರು ಸದಸ್ಯರ ಹತ್ಯೆ ನಡೆದಿದ್ದು, ಇದೀಗ ಸ್ಥಳೀಯ ಪೊಲೀಸ್ ಠಾಣಾಧಿಕಾರಿ ಮತ್ತು ಹೊರಠಾಣೆ ಪ್ರಭಾರ ಅಧಿಕಾರಿಯನ್ನು ವರ್ಗಾಯಿಸಲಾಗಿದೆ. ಸಾಂದೀಪನ್...