Homeಕರ್ನಾಟಕರಾಜ್ಯದಲ್ಲಿ ಮುಂದಿನ 5 ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದಲ್ಲಿ ಮುಂದಿನ 5 ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

- Advertisement -
- Advertisement -

ಜೂನ್ ಕೊನೆಯ ವಾರದ ಹೊತ್ತಿಗೆ ಕ್ಷೀಣಗೊಂಡಿದ್ದ ಮುಂಗಾರು ಮತ್ತೆ ಚುರುಕುಗೊಂಡಿದೆ. ಕಳೆದೆರಡು ದಿನಗಳಿಂದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಉತ್ತಮ ಮಳೆಯಾಗುತ್ತಿದೆ. ನಾಳೆಯಿಂದ ಇನ್ನು 5 ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗಲಿದ್ದು ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ಕೋಲಾರ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಜುಲೈ 2 ನೇ ವಾರದಿಂದ 4 ನೇ ವಾರದವರೆಗೆ ಕರ್ನಾಟಕದಾದ್ಯಂತ ವ್ಯಾಪಕ ಮಳೆಯಾಗಲಿದ್ದು ಜಲಾಶಯಗಳ ತಗ್ಗು ಪ್ರದೇಶದಲ್ಲಿರುವವರಿಗೂ ಸುರಕ್ಷಿತರಾಗಲು ಅನೇಕ ಜಿಲ್ಲೆಗಳಲ್ಲಿ ಸೂಚಿಸಲಾಗಿದೆ. ಜುಲೈ 7-8 ರಂದು ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿಎಸ್‌ ಪಾಟೀಲ್ ತಿಳಿಸಿದ್ದಾರೆ.

ದಕ್ಷಿಣ ಕರ್ನಾಟಕ ಮತ್ತು ಉತ್ತರ ಕರ್ನಾಟಕ ಎರಡೂ ಭಾಗದಲ್ಲೂ ಮುಂಗಾರು ಚುರುಕಾಗಿದ್ದು ಕೃಷಿ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ಜೂನ್‌ ತಿಂಗಳಿನಲ್ಲಿ ಭಾರತದಲ್ಲಿ ವಾಡಿಕೆಗಿಂತ 12% ಹೆಚ್ಚು ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತನ್ನ ವರದಿಯಲ್ಲಿ ಹೇಳಿದೆ.

ಪ್ರಾತಿನಿಧಿಕ ಚಿತ್ರ

ಇದನ್ನೂ ಓದಿ: ಪಶ್ಚಿಮ ಘಟ್ಟದಲ್ಲಿ ಮುಂದುವರೆದ ಮಳೆ : ಮುಳುಗಡೆ ಭೀತಿಯಲ್ಲಿ ಬೆಳಗಾವಿ ಜಿಲ್ಲೆಯ ಗ್ರಾಮಗಳು

ಬೆಂಗಳೂರು ನಗರದ ಹಲವು ಭಾಗಗಳಲ್ಲಿ ನಿನ್ನೆ ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಭಾರೀ ಮಳೆಯಾಗಿದೆ. ಮೆಜೆಸ್ಟಿಕ್, ಮಲ್ಲೇಶ್ವರಂ, ರಾಜಾಜಿನಗರ, ಗಾಂಧಿನಗರ, ಗೋವಿಂದರಾಜ ನಗರ, ಕಾಮಾಕ್ಷಿ ಪಾಳ್ಯ, ವಿಜಯನಗರ, ಪಟ್ಟೇಗಾರ ಪಾಳ್ಯ, ಸುಮ್ಮನಹಳ್ಳಿ, ನಾಗರಭಾವಿ, ಜಾಲಹಳ್ಳಿ ಸೇರಿದಂತೆ ಅನೇಕ ಕಡೆ ನಿನ್ನೆ ಮಳೆ ಆರ್ಭಟ ಜೋರಾಗಿತ್ತು.

ಕರಾವಳಿ ಜಿಲ್ಲೆಗಳು, ಮಲೆನಾಡು ಮತ್ತು ಮೈಸೂರು ಭಾಗದಲ್ಲಿಯೂ ಉತ್ತಮ ಮಳೆಯಾಗಿರುವ ವರದಿಯಿದ್ದು ಅನೇಕ ಕಡೆ ಗಾಳಿ ಮಳೆಯ ಕಾರಣದಿಂದ ಮರಗಳು ಧರೆಗುರುಳಿವೆ. ಮೈಸೂರಿನ ಗ್ರಾಮಂತರ ಪ್ರದೇಶದಲ್ಲಿ ವಿದ್ಯುತ್‌ ಕಂಬಗಳು ಮುರಿದು ಬಿದ್ದರಿವುದು ತಿಳಿದು ಬಂದಿದೆ. ದಾವಣಗೆರೆ ಜಿಲ್ಲೆಯಲ್ಲಿ ಒಳ್ಳೆಯ ಮಳೆಯಾಗಿದ್ದು ಮುಸುಕಿನ ಜೋಳ, ಭತ್ತ ಬಿತ್ತಿದ್ದ ರೈತರ ಮೊಗದಲ್ಲಿ ಸಂತಸ ಮೂಡಿದೆ.

ಭಾರತದ ಇತರ ರಾಜ್ಯಗಳಲ್ಲೂ ಮುಂದುವರೆಯಲಿದೆ ಮುಂಗಾರಿನ ಆರ್ಭಟ

ಬಿಹಾರ, ಪಶ್ಚಿಮ ಬಂಗಾಳ, ಅಸ್ಸಾಂ, ಮತ್ತು ಈಶಾನ್ಯ ಭಾರತದ ರಾಜ್ಯಗಳಲ್ಲಿ ಜುಲೈ 5 ರಿಂದ ಆರಂಭವಾಗಿ 5 ದಿನಗಳ ಕಾಲ ಬಿರುಗಾಳಿಯಿಂದ ಕೂಡಿದ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಭಾನುವಾರ ಬಿಡುಗಡೆ ಮಾಡಿದ ವರದಿಯಲ್ಲಿ ಮುನ್ಸೂಚನೆ ನೀಡಿದೆ. ಹರಿಯಾಣ, ದೆಹಲಿ, ಪಶ್ಚಿಮ ಉತ್ತರ ಪ್ರದೇಶದ ಕೆಲವು ಕಡೆ ಜೂನ್ 6 ರಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ನೀಡಿದೆ.

ಶ್ರೀಲಂಕಾ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಭಾರತದಲ್ಲಿ ಉತ್ತಮ ಮಳೆಯಾಗುತ್ತಿದೆ ಎಂದು ಹವಾಮಾನ ಇಲಾಖೆ ತನ್ನ ವರದಿಯಲ್ಲಿ ತಿಳಿಸಿದೆ.


ಇದನ್ನೂ ಓದಿ: ಬಿಹಾರದಲ್ಲಿ ಭಾರಿ ಮಳೆಯ ಹೊಡೆತಕ್ಕೆ ಇಬ್ಬಾಗವಾದ ಸೇತುವೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...