Homeಮುಖಪುಟಮಿಚಾಂಗ್ ಚಂಡಮಾರುತಕ್ಕೆ ತಮಿಳುನಾಡು ತತ್ತರ: ಜನ ಜೀವನ ಅಸ್ತವ್ಯಸ್ತ, ರೈಲು, ವಿಮಾನ ಸಂಚಾರ ಸ್ಥಗಿತ

ಮಿಚಾಂಗ್ ಚಂಡಮಾರುತಕ್ಕೆ ತಮಿಳುನಾಡು ತತ್ತರ: ಜನ ಜೀವನ ಅಸ್ತವ್ಯಸ್ತ, ರೈಲು, ವಿಮಾನ ಸಂಚಾರ ಸ್ಥಗಿತ

- Advertisement -
- Advertisement -

ಬಂಗಾಳಕೊಲ್ಲಿಯಲ್ಲಿ ರೂಪುಗೊಂಡಿರುವ ‘ಮಿಚಾಂಗ್’ ಚಂಡಮಾರುತ ತಮಿಳುನಾಡಿನಲ್ಲಿ ಭಾರೀ ಅವಾಂತರ ಸೃಷ್ಟಿಸಿದೆ.

ಚಂಡಮಾರುತದ ಪರಿಣಾಮ ರಾಜಧಾನಿ ಚೆನ್ನೈ ಸೇರಿದಂತೆ ತಮಿಳುನಾಡಿನ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ರಸ್ತೆ, ಮನೆಗಳು ಜಲಾವೃತಗೊಂಡು ಜನ ಜೀವನ ಅಸ್ತವ್ಯಸ್ತವಾಗಿದೆ.

ಚಂಡಮಾರುತದ ಪರಿಣಾಮ ಡಿಸೆಂಬರ್ 5ರವರೆಗೆ ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಳೆ ಪರಿಣಾಮ ಇಂದು( ಸೋಮವಾರ) ಚೆನ್ನೈ, ತಿರುವಲ್ಲೂರು, ಚೆಂಗಲ್ ಪಟ್ಟು, ಕಾಂಜಿಪುರಂ ಜಿಲ್ಲಾಡಳಿತಗಳು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದವು. ನಾಳೆಯೂ ರಜೆ ಮುಂದುವರಿಯುವ ಸಾಧ್ಯತೆ ಇದೆ.

ಚೆನ್ನೈ ಮತ್ತು ತಿರುವಲ್ಲೂರು ಜಿಲ್ಲೆಗಳ ಜನರು ಡಿ.4 ಮತ್ತು 5ರಂದು ಮನೆಗಳಿಂದ ಹೊರ ಬರದಂತೆ ಈಗಾಗಲೇ ಸೂಚನೆ ನೀಡಲಾಗಿದೆ. ಬೀಚ್ ಗಳಿಗೆ ಪ್ರವೇಶ ನಿರ್ಬಂಧಿಸಲಾಗಿದೆ.

ಡಿಸೆಂಬರ್‌ 3ರಿಂದ 7ರವರೆಗೆ  ತಮಿಳುನಾಡಿನಾದ್ಯಂತ 144 ರೈಲುಗಳ ಸಂಚಾರ ಸ್ಥಗಿತಗೊಳಿಸಲಾಗಿದೆ. ರನ್ ವೇಯಲ್ಲಿ ನೀರು ನಿಂತ ಪರಿಣಾಮ ಚೆನ್ನೈ ವಿಮಾನ ನಿಲ್ದಾಣಕ್ಕೆ ಆಗಮಿಸಬೇಕಿದ್ದ ಹಲವು ವಿಮಾನಗಳನ್ನು ರದ್ದುಗೊಳಿಸಲಾಗಿದೆ. ತಮಿಳುನಾಡಿನ ಸುಮಾರು 16 ಜಿಲ್ಲೆಗಳಿಗೆ ಮಳೆ ಮುನ್ಸೂಚನೆ ನೀಡಲಾಗಿದೆ.

ನಾಳೆ ಆಂಧ್ರ ಪ್ರದೇಶದ ಕರಾವಳಿಗೆ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ. ಅಲ್ಲಿನ ರಾಜ್ಯಗಳ ಸರ್ಕಾರ ಸಮುದ್ರ ತೀರ ಪ್ರದೇಶಗಳಲ್ಲಿ ಎಲ್ಲಾ ರೀತಿಯ ಮುನ್ನೆಚ್ಚರಿಕಾ ವ್ಯವಸ್ಥೆಗಳನ್ನು ಮಾಡಿಕೊಂಡಿದೆ.

ಇದನ್ನೂ ಓದಿ : ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಗುಂಡಿನ ಚಕಮಕಿಯಲ್ಲಿ 13 ಮಂದಿ ಸಾವು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ: ರೇವಣ್ಣ ನಿವಾಸದಲ್ಲಿ ಎಸ್‌ಐಟಿ ತಂಡದಿಂದ ಸ್ಥಳ ಮಹಜರು

0
ಸಂಸದ ಪ್ರಜ್ವಲ್ ರೇವಣ್ಣ ವಿರುದ್ದ ಮಹಿಳೆಯೊಬ್ಬರು ದಾಖಲಿಸಿರುವ ಲೈಂಗಿಕ ದೌರ್ಜನ್ಯ ದೂರಿಗೆ ಸಂಬಂಧಿಸಿದಂತೆ ತನಿಖೆ ಕೈಗೊಂಡಿರುವ ಎಸ್‌ಐಟಿ ತಂಡ, ಇಂದು (ಮೇ 4) ಹಾಸನದ ಹೆಚ್‌.ಡಿ ರೇವಣ್ಣ ಅವರ ನಿವಾಸದಲ್ಲಿ ಮಹಜರು ನಡೆಸಿದೆ. ಡಿವೈಎಸ್‌ಪಿ...