ಅಕ್ಟೋಬರ್ 5ರ ಬುಧವಾರದಂದು ಬೆಂಗಳೂರು ಸೇರಿದಂತೆ ರಾಜ್ಯದ ಇತರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ರಾಜ್ಯದ ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ‘ ಯಲ್ಲೊ ಅಲರ್ಟ್’ ನೀಡಲಾಗಿದೆ. ಕೇಂದ್ರ ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳಿಗೂ ಯಲ್ಲೊ ಅಲರ್ಟ್ ನೀಡಲಾಗಿದೆ.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಮಳೆಯಾಗುತ್ತಿದೆ. ಆದರೆ, ಉತ್ತರ ಕರ್ನಾಟಕದ ಪ್ರದೇಶಗಳಲ್ಲಿ ಮಳೆ ಕಡಿಮೆಯಾಗಲಿದೆ ಎಂದು ಐಎಂಡಿ ಹೇಳಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರುವುದರಿಂದ ತಂಪು ವಾತಾವರಣವಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
ಬೆಂಗಳೂರಿನ ಸುತ್ತಮುತ್ತಲಿನ ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರದಲ್ಲೂ ತುಂತುರು ಮಳೆಯಾಗುವ ಸಾಧ್ಯತೆ ಇದೆ.
ಇದನ್ನೂ ಓದಿ: ಮಹಿಳೆಯರಿಗೆ ಸ್ವಾತಂತ್ರ್ಯ, ಸಮಾನ ಅವಕಾಶ ನೀಡುವುದು ಅಗತ್ಯ: ಮೋಹನ್ ಭಾಗವತ್
ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರಿ ಮಳೆಯ ಪರಿಣಾಮ ರಾಜ್ಯದ ವಿವಿಧ ಭಾಗಗಳಲ್ಲಿ ಪ್ರವಾಹದಂತಹ ಪರಿಸ್ಥಿತಿ ಉಂಟಾಗಿತ್ತು. ಮಳೆಯಿಂದಾಗಿ ಬೆಂಗಳೂರಿನ ಉತ್ತರ, ದಕ್ಷಿಣ ಮತ್ತು ಪೂರ್ವದ ಪ್ರಮುಖ ಪ್ರದೇಶಗಳು ಜಲಾವೃತವಾಗಿದ್ದವು. ನೆರೆಯನ್ನು ಸಮರ್ಪಕವಾಗಿ ನಿಭಾಯಿಸದ ಕಾರಣಕ್ಕೆ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ಕೂಡಾ ವ್ಯಕ್ತವಾಗಿತ್ತು.
ಬೆಂಗಳೂರಿನ ಸರ್ಜಾಪುರ ರಸ್ತೆ, ಸಿಲ್ಕ್ ಬೋರ್ಡ್, ಎಚ್‌ಎಸ್‌ಆರ್ ಲೇಔಟ್, ವರ್ತೂರು, ಇಕೋ ಸ್ಪೇಸ್, ಬೆಳ್ಳಂದೂರು, ದೊಡ್ಡಕನ್ನೆಲಿ ಕೂಡ ಮಳೆಯಿಂದ ಜಲಾವೃತಗೊಂಡಿದ್ದವು. ಹಲವು ಪ್ರದೇಶಗಳಲ್ಲಿ ವಾಹನಗಳು ನೀರಿನಲ್ಲಿ ಸಿಲುಕಿರುವ ದೃಶ್ಯಗಳು ಕಂಡುಬಂದಿದ್ದವು.
ಚಿತ್ರದುರ್ಗ ಜಿಲ್ಲೆಯ ಕೋಳೂರು ಗ್ರಾಮದ ದ್ವೀಪವೊಂದರಲ್ಲಿ ಸೆಪ್ಟೆಂಬರ್ 9ರಂದು ಸುರಿದ ಮಳೆಯಿಂದಾಗಿ ನೀರಿನ ಮಟ್ಟ ಏರಿಕೆಯಾಗಿ ಐವರು ರೈತರು ಸಿಕ್ಕಿಬಿದ್ದಿದ್ದರು. ಕೂಡಲೇ ಗ್ರಾಮದ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ತಂಡವನ್ನು ಕಳುಹಿಸಿ, ಐವರು ರೈತರನ್ನು ರಕ್ಷಿಸಿದ್ದರು.
ಇದನ್ನೂ ಓದಿ: ರೆಡ್ ಅಲರ್ಟ್-ಯೆಲ್ಲೋ ಅಲರ್ಟ್: ಹವಾಮಾನ ಇಲಾಖೆ ಹೊರಡಿಸುವ ಎಚ್ಚರಿಕೆಗಳ ಅರ್ಥ ಗೊತ್ತೆ?



Hi