Homeಕರ್ನಾಟಕಅಕ್ಟೋಬರ್ 21 ರಿಂದ ಬೆಂಗಳೂರಿನಲ್ಲಿ ಭಾರಿ ಮಳೆ: ಹವಾಮಾನ ಇಲಾಖೆ

ಅಕ್ಟೋಬರ್ 21 ರಿಂದ ಬೆಂಗಳೂರಿನಲ್ಲಿ ಭಾರಿ ಮಳೆ: ಹವಾಮಾನ ಇಲಾಖೆ

- Advertisement -
- Advertisement -

ಅಕ್ಟೋಬರ್ 18 ರಿಂದ ಅಕ್ಟೋಬರ್ 20 ರ ನಡುವೆ ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದ್ದು, ಅ.21 ರಿಂದ ನಗರದಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಾಹಿತಿ ನೀಡಿದೆ.

ಬೆಂಗಳೂರು ಜೊತೆಗೆ ಮೈಸೂರು, ಹಾಸನ, ರಾಮನಗರ, ಚಾಮರಾಜನಗರದಲ್ಲಿಯೂ ಅಕ್ಟೋಬರ್ 21 ರಂದು ಭಾರಿ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ.

“ಬೆಂಗಳೂರಿನಲ್ಲಿ ಇನ್ನೆರಡು ದಿನಗಳ ಕಾಲ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಇಡೀ ರಾಜ್ಯದಲ್ಲಿ ಅಕ್ಟೋಬರ್ 18, 19 ಮತ್ತು 20 ರಂದು ಮಳೆ ಸ್ವಲ್ಪ ಕಡಿಮೆಯಾಗಲಿದೆ. ಆದರೆ, ಅ. 21 ರಿಂದ ದಕ್ಷಿಣ ಜಿಲ್ಲೆಗಳಾದ ಮೈಸೂರು, ರಾಮನಗರ, ಚಾಮರಾಜನಗರ, ಹಾಸನಗಳಲ್ಲಿ ಭಾರೀ ಮಳೆಯಾಗಲಿದೆ” ಎಂದು ಬೆಂಗಳೂರಿನ ಐಎಂಡಿ ಮುಖ್ಯಸ್ಥೆ ಗೀತಾ ಅಗ್ನಿಹೋತ್ರಿ ಹೇಳಿದ್ದಾರೆ.

ಇದನ್ನೂ ಓದಿ: ಸುರಿಯುತ್ತಿರುವ ಮಳೆಯ ನಡುವೆ ಛತ್ರಿಯಡಿಯಲ್ಲಿ ನಿಂತು ಗಿಡಕ್ಕೆ ನೀರುಣಿಸಿದ ಮುಖ್ಯಮಂತ್ರಿ ಚೌಹಾಣ್!

ಜೊತೆಗೆ ಅಕ್ಟೋಬರ್ 21 ರಿಂದ ಬೆಂಗಳೂರಿನಲ್ಲಿಯೂ ಭಾರಿ ಮಳೆಯಾಗಲಿದೆ ಎಂದು ಮಾಹಿತಿ ನೀಡಿದ್ದಾರೆ. ಅಕ್ಟೋಬರ್ 17 ರಂದು, ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 63 ಮಿಮೀ ಮಳೆಯಾಗಿದ್ದು, ಒಟ್ಟು ಅಕ್ಟೋಬರ್‌ನಲ್ಲಿ 348 ಮಿಮೀ ಮಳೆಯಾಗಿದೆ ಎಂದು ಹೇಳಿದ್ದಾರೆ.

ನಗರದಲ್ಲಿ ಈಗಾಗಲೇ ಹಲವು ಕಟ್ಟಡಗಳು ಕುಸಿಯುತ್ತಿದ್ದು, ಮಳೆ ಹೆಚ್ಚಾದರೇ ಮತ್ತಷ್ಟು ಕಟ್ಟಡಗಳು ಕುಸಿಯುವ ಭೀತಿ ಜನರಲ್ಲಿದೆ. ಬಿಬಿಎಂಪಿ ಈಗಾಗಲೇ 404 ಕಟ್ಟಡಗಳು ಶಿಥಿಲಾವಸ್ಥೆಯಲ್ಲಿವೆ ಎಂಬುದನ್ನು ಸರ್ವೆಯಲ್ಲಿ ತಿಳಿಸಿದೆ.

ಈ ನಡುವೆಯೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಗರದಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಳೆಯಿಂದ ಹಾನಿಗೊಳಗಾದ ಎಚ್.ಎಸ್.ಆರ್ ಬಡಾವಣೆ, ಮಡಿವಾಳ, ಹೊಸೂರು ರಸ್ತೆ, ಸಿಲ್ಕ್ ಬೋರ್ಡ್ ಜಂಕ್ಷನ್ ಪ್ರದೇಶಗಳಿಗೆ ಭೇಟಿ ನೀಡಿದ್ದರು.

15 ರಿಂದ 20 ಕೆರೆಗಳ ನೀರು ಮೇಲ್ಮಟ್ಟದಿಂದ ಅಗರ ಕೆರೆಗೆ ಹರಿದು ಬರುತ್ತಿದೆ. ಇದರಿಂದ ಅಗರ ಪಕ್ಕದಲ್ಲಿರುವ ಬಡಾವಣೆಗಳಿಗೆ ನೀರು ಮನೆಗಳಿಗೆ ನುಗ್ಗಿ ಅನಾಹುತಗಳಾಗಿವೆ. ಇದನ್ನು ತಡೆಗಟ್ಟಿ ಸಾಮರ್ಥ್ಯವನ್ನು ಹೆಚ್ಚಿಸಲು ಮುಖ್ಯ ಚರಂಡಿ ದುರಸ್ಥಿ ಮಾಡಲು ಸೂಚನೆ ನೀಡಲಾಗಿದೆ. ಕೆರೆಗಳ ಸಂಗ್ರಹ ಸಾಮರ್ಥ್ಯವನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು ಎಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.


ಇದನ್ನೂ ಓದಿ: ಕೇರಳ: ಭಾರಿ ಮಳೆಗೆ 18 ಮಂದಿ ಸಾವು, ಹಲವರು ನಾಪತ್ತೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಚುನಾವಣೆಯಲ್ಲಿ ಬೆಂಬಲಿಸಿಲ್ಲ ಎಂದು ದಲಿತರ ಮೇಲೆ ಹಲ್ಲೆ ಪ್ರಕರಣ: YSRCP ಮುಖಂಡನಿಗೆ ಜೈಲು

0
1996ರಲ್ಲಿ ನಡೆದಿದ್ದ ದಲಿತರ ಮೇಲಿನ ದೌರ್ಜನ್ಯ ಮತ್ತು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ (ವೈಎಸ್‌ಆರ್‌ಸಿಪಿ) ಮುಖಂಡ ತೋಟ ತ್ರಿಮೂರ್ತಿಲು ಸೇರಿದಂತೆ ಒಂಬತ್ತು ಮಂದಿಯನ್ನು ವಿಶಾಖಪಟ್ಟಣ ನ್ಯಾಯಾಲಯವು ದೋಷಿ ಎಂದು ಘೋಷಿಸಿ...