Homeಕರ್ನಾಟಕಬೆಂಗಳೂರಿನಲ್ಲಿ ಭಾರೀ ಮಳೆ: ಕೆಆರ್‌ ಸರ್ಕಲ್‌ನ ಅಂಡರ್‌ಪಾಸ್‌ನಲ್ಲಿ ಸಿಲುಕಿ ಯುವತಿ ಸಾವು

ಬೆಂಗಳೂರಿನಲ್ಲಿ ಭಾರೀ ಮಳೆ: ಕೆಆರ್‌ ಸರ್ಕಲ್‌ನ ಅಂಡರ್‌ಪಾಸ್‌ನಲ್ಲಿ ಸಿಲುಕಿ ಯುವತಿ ಸಾವು

- Advertisement -
- Advertisement -

ಬೆಂಗಳೂರಿನಲ್ಲಿ ಇಂದು (ಭಾನುವಾರ) ಮಧಾಹ್ನ ಸುರಿದ ಭಾರೀ ಮಳೆಗೆ ಯುವತಿಯೊಬ್ಬಳು ಸಾವನ್ನಪ್ಪಿದ್ದಾಳೆ. ಆಂಧ್ರಪ್ರದೇಶದಿಂದ ರಾಜ್ಯಕ್ಕೆ ಪ್ರವಾಸಕ್ಕೆ ಬಂದಿದ್ದರು ಎಂದು ತಿಳಿದುಬಂದಿದೆ.

ನಗರದಲ್ಲಿ ಮಧಾಹ್ನ 3 ಗಂಟೆ ಸುಮಾರಿಗೆ ಸುರಿದ ಆಲಿಕಲ್ಲು ಮಳೆಯಿಂದ ರಸ್ತೆ ತುಂಬೆಲ್ಲಾ ನೀರು ತುಂಬಿಕೊಂಡಿತ್ತು. ಕೆಆರ್‌ ವೃತ್ತದ ಬಳಿ ಇರುವ ಅಂಡರ್‌ಪಾಸ್‌ (ಕೆಳಸೇತುವೆ) ಸಂಪೂರ್ಣ ನೀರು ತುಂಬಿತ್ತು. ಆ ಮೂಲಕ ತೆರಳಿದ ಕಾರು ಮಳೆಗೆ ಮುಳುಗಡೆಯಾಗಿದ್ದು, ಆ ಕಾರಿನಲ್ಲಿದ್ದ ಕುಟುಂಬಸ್ಥರು ಸಿಲುಕಿಕೊಂಡಿರು. ಕೂಡಲೇ ಅಲ್ಲಿದ್ದ ಆಟೋ ಚಾಲಕರು ಗಮನಿಸಿ ರಕ್ಷಣೆಗೆ ಮುಂದಾಗಿದ್ದು, ಆ ಕಾರಿನಲ್ಲಿದ್ದ ಆರು ಜನರ ಪೈಕಿ ಒಬ್ಬಳು ಯುವತಿ ಸಾವಿಗೀಡಾಗಿದ್ದಾಳೆ.

ಮೃತ ಯುವತಿ ಭಾನುರೇಖಾ (22) ಎಂದು ಗುರುತಿಸಲಾಗಿದೆ. ಶಾಲೆ, ಕಾಲೇಜುಗಳಿಗೆ ರಜೆ ಇರುವ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದ 6 ಜನರ ಕುಟುಂಬ ಬೆಂಗಳೂರಿಗೆ ಪ್ರವಾಸಕ್ಕೆಂದು ಬಂದಿದ್ದರು ಎಂದು ಮೂಲಗಳು ತಿಳಿಸಿವೆ.

ಯುವತಿ ಪ್ರಜ್ಞೆ ತಪ್ಪಿದ್ದಾಳೆ ಎಂದು ಆಕೆಯನ್ನು ಸಮೀಪದ ಸೆಂಟ್‌ ಮಾರ್ಥಾಸ್‌ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ, ಆಸ್ಪತ್ರೆಯಲ್ಲಿ ತ್ವರಿತವಾಗಿ ದಾಖಲಾತಿ ಮಾಡಿಕೊಂಡು ಚಿಕಿತ್ಸೆ ನೀಡಿಲ್ಲ ಎಂಬ ಆರೋಪವನ್ನು ಪೋಷಕರು ಹಾಗೂ ಸ್ಥಳೀಯ ಪ್ರತ್ಯಕ್ಷದರ್ಶಿಗಳು ಮಾಡಿದ್ದಾರೆ. ಈ ಬಗ್ಗೆ ಆಸ್ಪತ್ರೆಯಲ್ಲಿ ಗಲಾಟೆ ಮಾಡಿದ್ದಾರೆ.

ಆಸ್ಪತ್ರೆಗೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಅವರು, ಮೃತ ಮಹಿಳೆ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ನಡೆದ ಘಟನೆ ಬಗ್ಗೆ ಮಾಹಿತಿ ಪಡೆದುಕೊಂಡರು. ಬಳಿಕ ಮಾತನಾಡಿದ ಅವರು, ”ಮಳೆಯಿಂದ ಸಂಕಷ್ಟಕ್ಕೆ ಸಿಲುಕಿ ಆಸ್ಪತ್ರೆ ಸೇರಿರುವವರ ಖರ್ಚನ್ನು ಸರ್ಕಾರವೇ ಭರಿಸಲಿದೆ” ಎಂದು ತಿಳಿಸಿದ್ದಾರೆ.

”ನಾವು ಈಗಷ್ಟೇ ಅಧಿಕಾರಕ್ಕೆ ಬಂದಿದ್ದೇವೆ. ನಗರದಲ್ಲಿ ಕೆಲವು ಅವೈಜ್ಞಾನಿಕ ಅಂಡರ್ ಪಾಸ್‌ಗಳಿವೆ. ಅದನ್ನ ಸರಿಪಡಿಸುವ ಕೆಲಸ ಮಾಡುತ್ತೇವೆ. ಆಸ್ಪತ್ರೆಯಿಂದ ನಿರ್ಲಕ್ಷ್ಯ ಆಗಿದ್ದರೆ ಕ್ರಮ ತೆಗೆದುಕೊಳ್ಳುತ್ತೇವೆ. ಆದರೆ ರೋಗಿ ಆಸ್ಪತ್ರೆಗೆ ಬರುವಷ್ಟೊತ್ತಿಗೆ ಮೃತಪಟ್ಟಿದ್ದರು ಅಂತ ವೈದ್ಯರು ಹೇಳುತ್ತಿದ್ದಾರೆ. ಏನೇ ಆಗಿದ್ದರೂ ಪರಿಶೀಲನೆ ಮಾಡಿ ಕ್ರಮ ಕೈಗೊಳ್ಳುತ್ತೇವೆ” ಎಂದು ಹೇಳಿದ್ದಾರೆ.

ಕೆಆರ್‌ ವೃತ್ತದ ಅಂಡರ್‌ ಪಾಸ್‌ನಲ್ಲಿ ಸಾಕಷ್ಟು ನೀರು ತುಂಬಿ ಸಿಲಿಕಿದ್ದ ವಾಹನಗಳನ್ನು ಅಗ್ನಿ ಶಾಮಕ ಸಿಬ್ಬಂದಿ ಹೊರತೆಗಿದಿದ್ದಾರೆ. ಸದ್ಯ ನೀರನ್ನು ಸಹ ಮೋಟರ್‌ ಪಂಪ್‌ ಬಳಸಿ ಹೊರ ಹಾಕಲಾಗುತ್ತಿದೆ. ಸದ್ಯ ಅಂಡರ್‌ಪಾಸ್‌ ಬಳಸದಂತೆ ಸಂಚಾರಿ ಪೊಲೀಸರ್‌ ಸೂಚನೆ ನೀಡಿದ್ದಾರೆ.

ಈ ಬಗ್ಗೆ  ಮಾಜಿ ಸಿಎಂ ಕುಮಾರಸ್ವಾಮಿ ಸರಣಿ ಟ್ವೀಟ್ ಮಾಡಿ ಬಿಬಿ ಎಂಪಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ”ಬೆಂಗಳೂರು ನಗರದಲ್ಲಿ ಇಂದು ಸುರಿದ ಭಾರೀ ಮಳೆಯಿಂದ ಕೆ.ಆರ್.ವೃತ್ತದ ಅಂಡರ್ ಪಾಸ್ ನಲ್ಲಿ ಮಳೆನೀರಿಗೆ ಸಿಲುಕಿ ಇನ್ಫೋಸಿಸ್ ಉದ್ಯೋಗಿ ಭಾನುರೇಖಾ ಎಂಬ ಯುವತಿ ಸಾವನ್ನಪ್ಪಿರುವ ಸುದ್ದಿ ತಿಳಿದು ತೀವ್ರ ಆಘಾತವಾಯಿತು. ರಭಸ ಮಳೆಯ ಮುನ್ನೆಚ್ಚರಿಕೆ ಇದ್ದರೂ ಬಿಬಿಎಂಪಿ ಆಡಳಿತ ಎಚ್ಚೆತ್ತುಕೊಳ್ಳದೇ ಇರುವುದು ನಿರ್ಲಕ್ಷ್ಯದ ಪರಮಾವಧಿ” ಎಂದು ಕಿಡಿಕಾರಿದ್ದಾರೆ.

ಅಂಡರ್ ಪಾಸ್ ಗಳಲ್ಲಿ ಕಸಕಡ್ಡಿ ತೆಗೆದು ಸರಾಗವಾಗಿ ನೀರು ಹರಿದು ಹೋಗುವಂತೆ ಮಾಡಬೇಕಾಗಿದ್ದ ಪಾಲಿಕೆ, ಮೈಮರೆತು ಕರ್ತವ್ಯಲೋಪ ಎಸಗಿದೆ. ಪ್ರತೀಸಲವೂ ಮಳೆ ಬಂದಾಗ ಅವಾಂತರ, ಪ್ರಾಣಹಾನಿ ಸಂಭವಿಸಿದ ಮೇಲೆ ಪಾಲಿಕೆ ಎಚ್ಚೆತ್ತುಕೊಳ್ಳುತ್ತದೆ, ಯಾಕೆ? ಮಳೆ ಬಂದರೆ ಜನರು ಸಾಯಲೇಬೇಕೆ?” ಎಂದು ಪ್ರಶ್ನಿಸಿದ್ದಾರೆ.

”ಭಾರೀ ಮಳೆ ಸುರಿಯುತ್ತಿದ್ದ ಅಪಾಯದ ಸಮಯದಲ್ಲಿ ವಾಹನ ಚಾಲಕರು ಅತ್ಯಂತ ಎಚ್ಚರಿಕೆಯಿಂದ ವಾಹನ ಚಾಲನೆ ಮಾಡಬೇಕು. ಅಂಡರ್ ಪಾಸ್ ನಲ್ಲಿ ನೀರು ತುಂಬಿಕೊಂಡಿದ್ದನ್ನು ಕಂಡ ಮೇಲೂ ಚಾಲಕ ಕಾರನ್ನು ಅಂಡರ್ ಪಾಸ್ ಮೂಲಕ ಚಾಲನೆ ಮಾಡಬಾರದಿತ್ತು. ಸಂಚಾರಿ ಪೊಲೀಸರು ಮೊದಲೇ ಮುನ್ನೆಚ್ಚರಿಕೆ ನೀಡಬೇಕಿತ್ತು” ಎಂದಿದ್ದಾರೆ.

”ಬಿಬಿಎಂಪಿ ಅಧಿಕಾರಿಗಳು ಕೂಡಲೇ ನಗರದ ಉದ್ದಗಲಕ್ಕೂ ಎಲ್ಲಾ ಅಂಡರ್ ಪಾಸ್ ಗಳನ್ನು ವಿಸ್ತೃತವಾಗಿ ಪರಿಶೀಲಿಸಿ, ಕಸಕಡ್ಡಿ ವಿಲೇವಾರಿ ಮಾಡಿಸಿ ಮಳೆನೀರು ಸರಾಗವಾಗಿ ಹರಿದುಹೋಗುವಂತೆ ಮಾಡಬೇಕು. ಇನ್ನೊಂದು ಪ್ರಾಣನಷ್ಟವೂ ಆಗುವುದಕ್ಕೆ ಅವಕಾಶ ನೀಡಬಾರದು” ಎಚ್ಚರಿಸಿದ್ದಾರೆ.

ಮೃತ ನತದೃಷ್ಟ ಯುವತಿ ಕುಟುಂಬಕ್ಕೆ ಪರಿಹಾರ ನೀಡಿರುವುದು ಸ್ವಾಗತಾರ್ಹ. ಆದರೆ, ಇಂತಹ ದುರಂತಗಳು ಮರುಕಳಿಸದಂತೆ ರಾಜ್ಯ ಕಾಂಗ್ರೆಸ್ ನೇತೃತ್ವದ ಸರಕಾರ ಶಾಶ್ವತ ಪರಿಹಾರ ರೂಪಿಸಬೇಕು. ಅಂಡರ್ ಪಾಸ್, ರಸ್ತೆ, ಚರಂಡಿ, ಒಳಚರಂಡಿಗಳ ನಿರ್ವಹಣೆಯನ್ನು ಸಮರ್ಪಕವಾಗಿ ಮಾಡಬೇಕು ಎನ್ನುವುದು ನನ್ನ ಆಗ್ರಹ” ಎಂದು ಟ್ವೀಟ್ ಎಚ್‌ಡಿಕೆ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...