Homeಚಳವಳಿಮಲೆನಾಡಿನಲ್ಲಿ ಮಹಾಮಳೆ: ಭೂಕುಸಿತದ ಭಯದಲ್ಲಿ ಬಡಜನರು - ಮರೀಚಿಕೆಯಾದ ಶಾಶ್ವತ ಪರಿಹಾರ

ಮಲೆನಾಡಿನಲ್ಲಿ ಮಹಾಮಳೆ: ಭೂಕುಸಿತದ ಭಯದಲ್ಲಿ ಬಡಜನರು – ಮರೀಚಿಕೆಯಾದ ಶಾಶ್ವತ ಪರಿಹಾರ

ಮಳೆಗಾಲದಲ್ಲಿ ಪಂಚಾಯ್ತಿಯಲ್ಲಿ, ಅಂಗನವಾಡಿಯಲ್ಲಿ ಮಲಗಿ ಅಂತಾರೆ. ಅಲ್ಲಿ ನೀರಿಲ್ಲ, ಶೌಚಾಲಯವಿಲ್ಲ. ಎಷ್ಟು ವರ್ಷ ನಾವು ಹೀಗೆ ಪರದಾಡಬೇಕು ಎಂದು ಅಳಲು ತೋಡಿಕೊಳ್ಳುತ್ತಾರೆ ಸ್ಥಳೀಯರು

- Advertisement -
- Advertisement -

ಮುಂಗಾರು ಆರಂಭವಾಗಿ ರಭಸದಿಂದ ಸುರಿಯುತ್ತಿದೆ. ಆಗಲೆ ಮಲೆನಾಡಿನ ಹಲವೆಡೆ ಭೂಕುಸಿತ, ಗುಡ್ಡ ಕುಸಿತದ ವರದಿಗಳು ಬರುತ್ತಿವೆ. ಮುನ್ನೆಚ್ಚರಿಸಿ ವಹಿಸಿ, ಕ್ರಮ ಕೈಗೊಳ್ಳಬೇಕಿದ್ದ ಅಧಿಕಾರಿಗಳು ಜನರಿಗೆ ನೋಟಿಸ್ ನೀಡುವುದಕ್ಕೆ ಮಾತ್ರ ಸೀಮಿತರಾಗಿದ್ದಾರೆ ಎನ್ನುವ ಆರೋಪಗಳು ಕೇಳಿಬರುತ್ತಿವೆ. ಪ್ರತಿ ದಿನ ದೊಡ್ಡ ಮಳೆ  ಸುರಿಯುತ್ತಿದ್ದು, ಅಲ್ಲಿನ ಬಡಜನರು ಭಯಭೀತರಾಗಿದ್ದಾರೆ. ಶಾಶ್ವತ ಪರಿಹಾರಕ್ಕಾಗಿ ಅಧಿಕಾರಿಗಳಿಗೆ ಮನವಿ ಸಲ್ಲಿಸುತ್ತಿದ್ದಾರೆ. ಈ ಕುರಿತು ನಾನುಗೌರಿ.ಕಾಂ ಸರಣಿ ವರದಿ ಮಾಡಲು ಮುಂದಾಗಿದೆ. ಅದರ ಮೊದಲ ಕಂತು ಇಲ್ಲಿದೆ.

ಈ ಮೇಲಿನ ಚಿತ್ರ ನೋಡಿ. ಇದು ಕಳೆದ ವರ್ಷ ಸುರಿದ ಮಳೆಗೆ ಮನೆ ಪಕ್ಕದಲ್ಲಿಯೇ ಭೂಕುಸಿತ ಸಂಭವಿಸಿರುವುದು. ಚಿಕ್ಕಮಗಳೂರು ಜಿಲ್ಲೆ, ಕೊಪ್ಪ ತಾಲ್ಲೂಕಿನ, ಮೇಗುಂದ ಹೋಬಳಿ ಬಳಿಯ ಗುಡ್ಡೇತೋಟ ಗ್ರಾಮದಲ್ಲಿ ವಾಸವಾಗಿರುವ ನಾರಾಯಣ್ ಮತ್ತು ಸುಮತಿ ಎಂಬ ದಂಪತಿಗಳಿಗೆ ಸೇರಿದ ಮನೆ ಇದಾಗಿದೆ. ಈ ಘಟನೆ ನಡೆದ ವರ್ಷವಾದರೂ ಅವರಿಗೆ ಯಾವುದೇ ಪುನರ್ವಸತಿ ಕಲ್ಪಿಸಲಾಗಿಲ್ಲ. ಈಗ ಆ ಭಾಗದಲ್ಲಿ ಪುನರಸ ಮಳೆ ಆರಂಭವಾಗಿದೆ. ಈ ಬಾರಿ ಮಳೆಗೆ ಮನೆಯೆ ಕುಸಿಯಬಹುದು ಎಂಬುದು ಅವರ ಆತಂಕ. ಸದ್ಯಕ್ಕೆ ಅವರೀಗ ಗ್ರಾಮದ ಅಂಗನವಾಡಿಯಲ್ಲಿ ಆಶ್ರಯ ಪಡೆದಿದ್ದಾರೆ. ಎಷ್ಟು ದಿನ ಎಂದು ಹೀಗೆಯೇ ಬದುಕುವುದು? ನಮಗೆ ನೆಮ್ಮದಿಯಿಂದ ಬದುಕುವ ಹಕ್ಕಿಲ್ಲವೇ? ಸರ್ಕಾರ, ಅಧಿಕಾರಿಗಳಿಗೆ ನಮ್ಮ ಕಷ್ಟ ತಿಳಿಯುವುದಿಲ್ಲವೇ ಎಂಬುದು ಅವರ ಪ್ರಶ್ನೆಯಾಗಿದೆ.

ಇದು ಅವರೊಬ್ಬರ ಪ್ರಶ್ನೆ ಮಾತ್ರ ಅಲ್ಲ. ಬದಲಿಗೆ ಗುಡ್ಡೆ ತೋಟ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ 16 ಕುಟುಂಬಗಳು ಇದೇ ರೀತಿಯ ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಬಹುತೇಕ ಕೂಲಿ ಕೆಲಸ ಮಾಡುವ ಇವರಿಗೆ ಮನೆ ಬಿಟ್ಟರೆ ಬೇರೆ ಯಾವುದೇ ಜಮೀನು ಇಲ್ಲ. ಪ್ರತಿ ವರ್ಷ ಮಳೆಗಾಲ ಬಂತೆದ್ದರೆ ಸಾಕು ಸಾವಿನ ದವಡೆಗೆ ಹೋದ ಅನುಭವ ಅವರದು. ಹೇಗಾದರೂ ಮಾಡಿ ನಮ್ಮನ್ನು ಇಲ್ಲಿಂದ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಿ. ಬದುಕಲು ಒಂದು ಚಿಕ್ಕ ಸೂರು ಕಟ್ಟಿಸಿಕೊಡಿ ಎಂಬುದು ಅವರ 5 ವರ್ಷದ ಬೇಡಿಕೆ. ಅದಕ್ಕಾಗಿ ಕಂಡ ಕಂಡವರ ಕಾಲು ಹಿಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಅವರ ನೋವು ಕೇಳಬೇಕಾದವರು ಕಂಡು ಕಾಣದಂತಿದ್ದಾರೆ.

“ಈ ಮೂಲಕ ತಮಗೆ ತಿಳಿಯಪಡಿಸುವುದೇನೆಂದರೆ ಕಳೆದ ಒಂದು ವಾರದ ಮಳೆಯಿಂದ ಗುಡ್ಡೇತೋಟದ ಸೈಟ್ ಮನೆಯ ಹಿಂದಿನ ಮತ್ತು ಮುಂದಿನ ಧರೆಗಳು ಜರಿದು ಮನೆಗಳಿಗೆ ಅನಾಹುತವಾಗಿರುವುದರಿಂದ, ಹಾಗೂ ಇನ್ನೂ ಹೆಚ್ಚು ಮಳೆಯಾಗುವ ಸಂಭವವಿದ್ದು, ತಮ್ಮಗಳ ಮನೆಗಳಿಗೆ ಸಮಸ್ಯೆ ಉಂಟಾಗುವ ಸಾಧ್ಯತೆಗಳಿದ್ದು, ನೀವು ಗ್ರಾಮ ಪಂಚಾಯಿತಿಯಿಂದ ಸೂಚಿಸುವವರೆಗೂ ತಮ್ಮ ವಾಸದ ಮನೆಯಿಂದ ಪಂಚಾಯ್ತಿಯಿಂದ ಸೂಚಿಸಿದ ಸ್ಥಳಗಳಿಗೆ ಸ್ಥಳಾಂತರವಾಗಬೇಕಾಗಿ ಹಾಗೂ ರಾತ್ರಿ ವೇಳೆಯಲ್ಲಿ ಕಡ್ಡಾಯವಾಗಿ ತಮ್ಮ ವಾಸದ ಮನೆಗಳಲ್ಲಿ ವಾಸ ಇರಬಾರದಾಗಿ ಈ ಮೂಲಕ ಸೂಚಿಸಿದೆ”

ಇದು ಪ್ರತಿ ವರ್ಷ ಮಳೆಗಾಲ ಬಂದಾಗ ಅಧಿಕಾರಿಗಳು ಗ್ರಾಮಪಂಚಾಯತ್ ಮೂಲಕ ಮನೆ ಮನೆಗಳಿಗೆ ಅಂಟಿಸುವ ಎಚ್ಚರಿಕೆಯ ನೋಟಿಸ್. ಈ ನೋಟೀಸ್ ಅಂಟಿಸಿ ಅವರು ತಮ್ಮ ಜವಾಬ್ದಾರಿಗಳಿಂದ ಕೈ ತೊಳೆದುಕೊಂಡಿದ್ದಾರೆ. ಅಂಗನವಾಡಿ, ಶಾಲೆಗಳಲ್ಲಿ ಉಳಿದುಕೊಳ್ಳಿ ಎಂದು ತಿಳಿಸಿದ್ದು ಬಿಟ್ಟರೆ, ಅವರಿಗೆ ಯಾವುದೇ ಸರಿಯಾದ ಸೌಕರ್ಯಗಳನ್ನು ಒದಗಿಸುವುದಿಲ್ಲ ಎಂಬುದು ನಿವಾಸಿಗಳ ಅಳಲು.

ನಮ್ಮ ಈ 16 ಕುಟುಂಬಗಳಿಗೆ ಒಂದು ಬಸ್‌ ಸ್ಟ್ಯಾಂಡ್ ಇಲ್ಲ. ಮಳೆಗಾಲದಲ್ಲಿ ಪಂಚಾಯ್ತಿಯಲ್ಲಿ, ಅಂಗನವಾಡಿಯಲ್ಲಿ ಮಲಗಿ ಅಂತಾರೆ. ಅಲ್ಲಿ ನೀರಿಲ್ಲ, ಶೌಚಾಲಯವಿಲ್ಲ. ಕೆಲವರ ಮನೆ ಕುಸಿದ ಸಂದರ್ಭದಲ್ಲಿ ಎರಡು ವರ್ಷದ ಹಿಂದೆ ಪಂಚಾಯ್ತಿಯಲ್ಲಿ, ಶಾಲೆಯಲ್ಲಿ ನೆಲೆ ಪಡೆದಿದ್ದಾರೆ. ಆದರೆ ಇಂದಿಗೂ ಅವರು ಅಲ್ಲಿಯೇ ವಾಸವಿದ್ದಾರೆ ಹೊರತು ಅವರಿಗೆ ಮನೆ ಕಟ್ಟಿಸಿಕೊಟ್ಟಿಲ್ಲ. ಈಗ ಅವರಿಗೆ ಬಾಡಿಗೆ ಕಟ್ಟಿ ಎಂದು ಕೇಳುತ್ತಿದ್ದಾರೆ. ಇದು ನಮ್ಮ ದುಸ್ಥಿತಿ ಎನ್ನುತ್ತಾರೆ ಸಂತ್ರಸ್ತರಾದ ನಾರಾಯಣ್.

ಕಳೆದ 5 ವರ್ಷದಿಂದ ಒಂದು ಗೋಮಾಳದ ಜಾಗ ತೋರಿಸಿ, ಅಳತೆ ಮಾಡಿ ಅಲ್ಲಿ ನಿಮಗೆ ಮನೆ ಕಟ್ಟಿಕೊಡುತ್ತೇವೆ ಎಂದು ಎಲ್ಲರೂ ಭರವಸೆ ಕೊಡುತ್ತಿದ್ದಾರೆ. ಅಲ್ಲಿಂದ ನಾವು ಹಲವಾರು ಬಾರಿ ಮನವಿ ಪತ್ರ ಸಲ್ಲಿಸಿದ್ದೇವೆ. ಆದರೆ ಅರಣ್ಯ ಇಲಾಖೆಯವರು ಕೊಡಲಾಗುವುದಿಲ್ಲ ಎನ್ನುತ್ತಿದ್ದಾರೆ. ಸರ್ಕಾರ ಮತ್ತು ಅರಣ್ಯ ಇಲಾಖೆಯ ನಡುವಿನ ಗಲಾಟೆಯಲ್ಲಿ ನಾವು ಮಧ್ಯ ಸಿಕ್ಕಿಕೊಂಡಿದ್ದೇವೆ ಎಂದು ದೂರಿದರು.

ಆ ಭಾಗದಲ್ಲಿ ಜನರೊಟ್ಟಿಗೆ ಕೆಲಸ ಮಾಡುತ್ತಿರುವ ಕರ್ನಾಟಕ ಜನಶಕ್ತಿ ಜಿಲ್ಲಾ ಕಾರ್ಯದರ್ಶಿ ಆನಂದ್‌ರವರು ಮಾತನಾಡಿ, “ಇಲ್ಲಿನ ಜನರು ಜೀವ ಕೈಯಲ್ಲಿ ಹಿಡಿದುಕೊಂಡು ದಿನದೂಡುತ್ತಿದ್ದಾರೆ. ಮಳೆ ಜೋರಾಗುತ್ತಿರುವುದರಿಂದ ಶಾಸಕರು, ಅಧಿಕಾರಿಗಳು ಇಚ್ಚಾಶಕ್ತಿಯಿಂದ ಕೆಲಸ ಮಾಡಬೇಕು. ಈ ಕೂಡಲೇ ಗೋಮಾಳದಲ್ಲಿ ಜಾಗ ನೀಡಬೇಕು ಇಲ್ಲವೇ ಬೇರೆ ಕಡೆ ಶಾಶ್ವತ ಪುನರ್ವಸತಿ ಕಲ್ಪಿಸಬೇಕು. ಯಾವುದೇ ಜೀವ ಹಾನಿಯಾಗಲು ಬಿಡಬಾರದು” ಎಂದು ಒತ್ತಾಯಿಸಿದರು.

ಶೃಂಗೇರಿ ಕ್ಷೇತ್ರದ ಶಾಸಕರಾದ ರಾಜೇಗೌಡರನ್ನು ನಾನುಗೌರಿ.ಕಾಂ ವತಿಯಿಂದ ಸಂಪರ್ಕಿಸಲು ಯತ್ನಿಸಲಾಯಿತು. ಅವರು ಸಂಪರ್ಕಕ್ಕೆ ದೊರಕಿಲ್ಲ. ಪ್ರತಿಕ್ರಿಯೆ ಸಿಕ್ಕಲ್ಲಿ ಅಪ್‌ಡೇಟ್ ಮಾಡಲಾಗುವುದು.

ಇದನ್ನೂ ಓದಿ: ಕರಾವಳಿ ಕರ್ನಾಟಕದ ರಕ್ತಸಿಕ್ತ ಚರಿತ್ರೆಯ ನಿಜ ಕಥನ ‘ನೇತ್ರಾವತಿಯಲ್ಲಿ ನೆತ್ತರು’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...