Homeಮುಖಪುಟಹೆಡ್ಗೆವಾರ್, ಸಾವರ್ಕರ್, ಸೂಲಿಬೆಲೆ ಪಾಠ ಕೈ ಬಿಟ್ಟಿದ್ದೇವೆ: ಶಿಕ್ಷಣ ಸಚಿವ ಮಧು ಬಂಗಾರಪ್ಪ

ಹೆಡ್ಗೆವಾರ್, ಸಾವರ್ಕರ್, ಸೂಲಿಬೆಲೆ ಪಾಠ ಕೈ ಬಿಟ್ಟಿದ್ದೇವೆ: ಶಿಕ್ಷಣ ಸಚಿವ ಮಧು ಬಂಗಾರಪ್ಪ

- Advertisement -
- Advertisement -

ಹಿಂದಿನ ಬಿಜೆಪಿ ಸರ್ಕಾರದಲ್ಲಿ ಆದೇಶವೇ ಇಲ್ಲದೆ, ಕಾನೂನುಬಾಹಿರವಾಗಿ ಪಠ್ಯ ಪರಿಷ್ಕರಣೆ ನಡೆದಿದೆ ಎಂಬ ಆರೋಪ ಕೇಳಿಬಂದಿತ್ತು. ಅಲ್ಲದೇ ಯಾವುದೇ ಅರ್ಹತೆ ಇಲ್ಲದ ರೋಹಿತ್ ಚಕ್ರತೀರ್ಥ ಎಂಬ ಬಲಪಂಥೀಯ ಟ್ರೋಲರ್‌ ಒಬ್ಬರ ಅಧ್ಯಕ್ಷತೆಯಲ್ಲಿ ಸಮಾಜವಿರೋಧಿ ಪಠ್ಯಗಳನ್ನು ಸೇರಿಸಲಾಗಿದೆ ಎಂದು ಆರೋಪಿಸಿ ಪ್ರತಿಭಟನೆಗಳು ಜರುಗಿದ್ದವು. ನಾವು ಅಧಿಕಾರಕ್ಕೆ ಬಂದರೆ ಆ ಪಠ್ಯಗಳನ್ನು ಕೈಬಿಡುತ್ತೇವೆ ಎಂದು ಕಾಂಗ್ರೆಸ್ ಪಕ್ಷ ಹೇಳಿತ್ತು. ಇಂದು ನಡೆದ ಸಂಪುಟ ಸಭೆಯಲ್ಲಿ ಬಿಜೆಪಿ ಸರ್ಕಾರದ ಮಾಡಿದ ಪಠ್ಯ ಪರಿಷ್ಕರಣೆಯ ಬದಲಾವಣೆಗಳನ್ನು ತೆಗೆದುಹಾಕಿದ್ದೇವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

“ಹೆಡ್ಗೆವಾರ್, ಸಾವರ್ಕರ್, ಸೂಲಿಬೆಲೆ ಪಾಠ ಕೈ ಬಿಟ್ಟಿದ್ದೇವೆ. ಅಲ್ಲದೇ ಮಕ್ಕಳು ಕಲಿಯಲೇಬೇಕಿದ್ದ, ಆದರೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೈಬಿಟ್ಟಿದ್ದ, ಸಾವಿತ್ರಿ ಬಾಯಿ ಫುಲೆ ಪಾಠ, ನೀ ಹೋದ ಮರುದಿನ ಎಂಬ ಅಂಬೇಡ್ಕರ್ ಬಗೆಗಿನ ಪದ್ಯ ಮತ್ತು ಮಗಳಿಗೆ ಬರೆದ ಪತ್ರಗಳಂತಹ ಪಠ್ಯಗಳನ್ನು ಸೇರಿಸಿದ್ದೇವೆ” ಎಂದು ತಿಳಿಸಿದ್ದಾರೆ.

ಹಳೆಯ ಪಠ್ಯಗಳನ್ನು ಹಾಗೆಯೇ ಉಳಿಸಿಕೊಳ್ಳಲಾಗಿದೆ. ಆದರೆ ಬಿಜೆಪಿ ತಂದಿದ್ದ ಬದಲಾವಣೆಗಳನ್ನು ತೆಗೆಯಲಾಗಿದೆ. ಈಗಾಗಲೇ ಪಠ್ಯಪುಸ್ತಕಗಳು ಮುದ್ರಣಗೊಂಡಿರುವುದರಿಂದ ಕೆಲ ಪಾಠಗಳನ್ನು ಮಾಡದಂತೆ ಆದೇಶ ನೀಡಲಾಗುವುದು. ಇನ್ನು ಸೇರಿಸಬೇಕಾದ ಪಠ್ಯಗಳ ಸಪ್ಲಿಮೆಂಟರಿ ಬುಕ್ ಕೊಡುತ್ತೇವೆ. ಸರ್ಕಾರಕ್ಕೆ ಹೊರೆಯಾಗದಂತೆ ಸರಳವಾಗಿ ಪಠ್ಯ ಪರಿಷ್ಕರಣೆ ಮಾಡಿದ್ದೇವೆ ಎಂದು ಮಧು ಬಂಗಾರಪ್ಪ ತಿಳಿಸಿದ್ದಾರೆ.

ಇದನ್ನೂ ಓದಿ: ಪಠ್ಯ ಪರಿಷ್ಕರಣೆ: 8 ತಪ್ಪು ತಿದ್ದಲು ಮುಂದಾದ ಸರ್ಕಾರ; ಹಾಗೆಯೇ ಉಳಿದ ಸಾಲು ಸಾಲು ಎಡವಟ್ಟು!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಸಿಎಂ ಸಿದ್ದರಾಮಯ್ಯ

0
ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ" ಎಂಬ ಬಿಜೆಪಿಗರ ಆರೋಪಕ್ಕೆ...