Homeಮುಖಪುಟಹೆಲಿಕಾಪ್ಟರ್‌‌ ಅವಘಡ: ಆರು ಮಂದಿಯ ಗುರುತು ಪತ್ತೆ ಹಚ್ಚಿದ ಸೇನೆ

ಹೆಲಿಕಾಪ್ಟರ್‌‌ ಅವಘಡ: ಆರು ಮಂದಿಯ ಗುರುತು ಪತ್ತೆ ಹಚ್ಚಿದ ಸೇನೆ

- Advertisement -
- Advertisement -

ಮೂರು ಸೇನೆಯ ಮುಖ್ಯಸ್ಥರಾಗಿದ್ದ ಬಿಪಿನ್ ರಾವತ್ ಮತ್ತು ಅವರ ಪತ್ನಿಯ ಸಾವಿಗೆ ಕಾರಣವಾದ ಹೆಲಿಕಾಪ್ಟರ್ ಅಪಘಾತದ ಸಂದರ್ಭದಲ್ಲಿ ಸಾವಿಗೀಡಾದ ಇತರ ಯೋಧರ ಮೃತದೇಹಗಳ ಪತ್ತೆ ಕಾರ್ಯ ಮುಂದುವರಿದಿದೆ. ಇಬ್ಬರು ಭಾರತೀಯ ಸೇನೆಯ ಯೋಧರು ಮತ್ತು ನಾಲ್ವರು ಐಎಎಫ್ ಸಿಬ್ಬಂದಿಗಳ ಮೃತ ದೇಹಗಳನ್ನು ಗುರುತಿಸಲಾಗಿದೆ.

ಡಿಎನ್‌ಎ ಪರೀಕ್ಷೆ ಪರಿಶೀಲಿಸಿದ ನಂತರ, ಪಾರ್ಥಿವ ಶರೀರಗಳನ್ನು ಅಂತಿಮ ವಿಧಿಗಳಿಗಾಗಿ ಅವರ ಕುಟುಂಬಗಳಿಗೆ ಹಸ್ತಾಂತರಿಸಲಾಗುತ್ತಿದೆ.

“ಲ್ಯಾನ್ಸ್‌ ನಾಯಕ್‌ ಬಿ.ಸಾಯಿ ತೇಜ ಮತ್ತು ಲ್ಯಾನ್ಸ್‌ ನಾಯಕ್‌ ವಿವೇಕ್ ಕುಮಾರ್ ಅವರ ಪಾರ್ಥಿವ ಶರೀರವನ್ನು ಗುರುತಿಸಲಾಗಿದೆ. ಪಾರ್ಥಿವ ಶರೀರವನ್ನು ಕುಟುಂಬ ಸದಸ್ಯರಿಗೆ ಹಸ್ತಂತರಿಸಲಾಗುವುದು” ಎಂದು ಸೇನಾ ಮೂಲಗಳು ತಿಳಿಸಿವೆ.

ಅಂತಿಮ ವಿಧಿವಿಧಾನಗಳಿಗಾಗಿ ಪಾರ್ಥಿವ ಶರೀರವನ್ನು ಸೂಕ್ತ ಸೇನಾ ಗೌರವದೊಂದಿಗೆ ವಿಮಾನ ಮೂಲಕ ಸ್ಥಳಾಂತರಿಸಲಾಗುವುದು. ಲ್ಯಾನ್ಸ್‌ ನಾಯಕ್‌ ಬಿ ಸಾಯಿ ತೇಜ ಅವರ ದೇಹವನ್ನು ಬೆಂಗಳೂರಿಗೆ ತರಲಾಗುವುದು. ಲ್ಯಾನ್ಸ್ ನಾಯಕ್‌ ವಿವೇಕ್ ಕುಮಾರ್ ಅವರ ದೇಹವನ್ನು ಗಗ್ಗಾಲ್‌ಗೆ ತರಲಾಗುವುದು.

ಎಲ್ಲ ನಾಲ್ವರು ಐಎಎಫ್ ಸಿಬ್ಬಂದಿಯ ಗುರುತಿನ ಕಾರ್ಯ ಪೂರ್ಣಗೊಂಡಿದೆ. ವಿಂಗ್ ಕಮಾಂಡರ್ ಚೌಹಾಣ್ ಅವರ ಪಾರ್ಥಿವ ಶರೀರವನ್ನು ಹೊತ್ತ ವಿಮಾನ ಆಗ್ರಾಕ್ಕೆ ತೆರಳಲಿದೆ. ಸ್ಕ್ವಾಡ್ರನ್ ಲೀಡರ್ ಕುಲದೀಪ್ ಅವರನ್ನು ಹೊತ್ತ ಎರಡನೇ ವಿಮಾನವು ಪಿಲಾನಿಗೆ ಹೋಗಲಿದೆ. JWO ಪ್ರದೀಪ್ ಮತ್ತು JWO ದಾಸ್ ಅವರ ಪಾರ್ಥಿವ ಶರೀರವನ್ನು ಕ್ರಮವಾಗಿ ಸೂಲೂರು ಮತ್ತು ಭುವನೇಶ್ವರಕ್ಕೆ ಕಳುಹಿಸಲಾಗುತ್ತದೆ. ಬಳಿಕ ಕುಟುಂಬಗಳಿರುವಲ್ಲಿಗೆ ಕೊಂಡೊಯ್ಯಲಾಗುತ್ತದೆ.

ಹೆಲಿಕಾಪ್ಟರ್ ಅವಘಡದಲ್ಲಿ 13 ಮಂದಿ ಯೋಧರು ಮೃತಪಟ್ಟಿದ್ದಾರೆ. ಒಂಬತ್ತು ಜನರನ್ನು ಈಗ ಗುರುತಿಸಲಾಗಿದೆ. ಉಳಿದವರನ್ನು ಆದಷ್ಟು ಬೇಗ ಗುರುತಿಸುವ ಪ್ರಯತ್ನ ನಡೆಯುತ್ತಿದೆ ಎಂದು ಮೂಲಗಳು ಹೇಳಿವೆ.


ಇದನ್ನೂ ಓದಿರಿ: ಬಿಪಿನ್ ರಾವತ್‌ ಅವರನ್ನು ನಿಂದಿಸಿದರೆ ಕಾನೂನು ಕ್ರಮ: ಬೊಮ್ಮಾಯಿ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...