Homeಮುಖಪುಟಹೇಮಾ ಸಮಿತಿ ವರದಿ : ಎಸ್‌ಐಟಿಗೆ ನೋಡಲ್ ಅಧಿಕಾರಿ ನೇಮಿಸಲು ಹೈಕೋರ್ಟ್ ಆದೇಶ

ಹೇಮಾ ಸಮಿತಿ ವರದಿ : ಎಸ್‌ಐಟಿಗೆ ನೋಡಲ್ ಅಧಿಕಾರಿ ನೇಮಿಸಲು ಹೈಕೋರ್ಟ್ ಆದೇಶ

- Advertisement -
- Advertisement -

ನ್ಯಾಯಮೂರ್ತಿ ಹೇಮಾ ಸಮಿತಿ ವರದಿಗೆ ಸಂಬಂಧಿಸಿದ ಪ್ರಕರಣಗಳ ವಿಶೇಷ ತನಿಖಾ ತಂಡಕ್ಕೆ ನೋಡಲ್ ಅಧಿಕಾರಿಯನ್ನು ನೇಮಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ನ.27) ಸೂಚಿಸಿದೆ.

ಆರೋಪಿಗಳು ಅಥವಾ ಇತರ ಯಾವುದೇ ವ್ಯಕ್ತಿಗಳಿಂದ ಕಿರುಕುಳದ ಪ್ರಕರಣಗಳಲ್ಲಿ ಸಂತ್ರಸ್ತರು ಮತ್ತು ಸಾಕ್ಷಿಗಳು ನೋಡಲ್ ಅಧಿಕಾರಿಯನ್ನು ಸಂಪರ್ಕಿಸಬೇಕು ಎಂದು ಕೋರ್ಟ್ ನಿರ್ದೇಶಿಸಿದೆ.

ನ್ಯಾಯಮೂರ್ತಿ ಎ.ಕೆ.ಜಯಶಂಕರನ್ ನಂಬಿಯಾರ್ ಮತ್ತು ನ್ಯಾಯಮೂರ್ತಿ ಸಿ.ಎಸ್.ಸುಧಾ ಅವರನ್ನೊಳಗೊಂಡ ವಿಭಾಗೀಯ ಪೀಠವು, ನೋಡಲ್ ಅಧಿಕಾರಿಯ ಹೆಸರು ಮತ್ತು ಸಂಪರ್ಕ ವಿವರಗಳ ಬಗ್ಗೆ ಹೆಚ್ಚಿನ ಪ್ರಚಾರ ನಡೆಸುವಂತೆ ಎಸ್‌ಐಟಿಗೆ ಸೂಚಿಸಿದೆ.

ನೋಡಲ್ ಅಧಿಕಾರಿಯನ್ನು ನೇಮಿಸಿ ಅವರ ಸಂಪರ್ಕ ಸಾಧ್ಯವಾಗಿಸಿಬಿಟ್ಟರೆ, ಬೆದರಿಕೆಗೆ ಒಳಗಾಗಿರುವ ಮತ್ತು ಇತರ ಸಂತ್ರಸ್ತರು, ಸಾಕ್ಷಿಗಳು ಮುಂದೆ ಬಂದು ದೂರು ದಾಖಲಿಸುತ್ತಾರೆ. ಪ್ರಸ್ತುತ ತನಿಖೆ ನಡೆಯುತ್ತಿರುವ ಪ್ರಕರಣಗಳ ಸಂತ್ರಸ್ತರು ಮತ್ತು ಸಾಕ್ಷಿಗಳು ಬೆದರಿಕೆ ಎದುರಿಸಿದರೆ ತಕ್ಷಣ ವರದಿ ಮಾಡುತ್ತಾರೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಹೇಮಾ ಸಮಿತಿಯ ವರದಿಗೆ ಸಂಬಂಧಿಸಿದ ಅನೇಕ ಸಂತ್ರಸ್ತರು ಮತ್ತು ಸಾಕ್ಷಿಗಳು ಬೆದರಿಕೆಯ ಸಮಸ್ಯೆ ಎದುರಿಸುತ್ತಿದ್ದಾರೆ. ಆದ್ದರಿಂದ ಸಾಕ್ಷಿಗಳು ಮತ್ತು ಸಂತ್ರಸ್ತರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಕಾರ್ಯವಿಧಾನದ ಅವಶ್ಯಕತೆಯಿದೆ ಎಂದು ವುಮೆನ್ ಇನ್ ಸಿನಿಮಾ ಕಲೆಕ್ಟಿವ್ (ಡಬ್ಲ್ಯುಸಿಸಿ) ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು. ಅದರ ವಿಚಾರಣೆ ನಡೆಸಿದ ನ್ಯಾಯಾಲಯ ನೋಡಲ್ ಅಧಿಕಾರಿಯ ನೇಮಕಕ್ಕೆ ಸೂಚಿಸಿದೆ.

ನೋಡಲ್ ಅಧಿಕಾರಿಯ ನೇಮಕದ ಬಗ್ಗೆ ಎಸ್‌ಐಟಿ ವರದಿ ನೀಡಬೇಕು. ನೇಮಕಗೊಂಡ ನೋಡಲ್ ಅಧಿಕಾರಿ ಸಂತ್ರಸ್ತರು ಮತ್ತು ಸಾಕ್ಷಿಗಳ ಸಂಪರ್ಕದ ಮುಖ್ಯ ಬಿಂದುವಾಗಿ ಕಾರ್ಯನಿರ್ವಹಿಸಬೇಕು ಎಂದು ನ್ಯಾಯಾಲಯ ಆದೇಶಿಸಿದೆ.

ಇದನ್ನೂ ಓದಿ : ಲೋಕಸಭೆ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಪ್ರಿಯಾಂಕಾ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...