Homeಮುಖಪುಟಹೇಮಾ ಸಮಿತಿ ವರದಿ| ತನಿಖೆಗೆ ಸಂತ್ರಸ್ತರ ಅಸಹಕಾರ: ಕೆಲ ಪ್ರಕರಣಗಳನ್ನು ಕೈಬಿಡಲು ಮುಂದಾದ ಎಸ್‌ಐಟಿ

ಹೇಮಾ ಸಮಿತಿ ವರದಿ| ತನಿಖೆಗೆ ಸಂತ್ರಸ್ತರ ಅಸಹಕಾರ: ಕೆಲ ಪ್ರಕರಣಗಳನ್ನು ಕೈಬಿಡಲು ಮುಂದಾದ ಎಸ್‌ಐಟಿ

- Advertisement -
- Advertisement -

ಮಲಯಾಳಂ ಚಲನಚಿತ್ರೋದ್ಯಮದಲ್ಲಿನ ಮಹಿಳೆಯರ ಮೇಲಿನ ಲೈಂಗಿಕ ಶೋಷಣೆ ಮತ್ತು ಸ್ತ್ರೀದ್ವೇಷದ ಕುರಿತು ಹೇಮಾ ಸಮಿತಿ ನೀಡಿದ ವರದಿಗೆ ಸಂಬಂಧಿಸಿದ ಕೆಲ ಪ್ರಕರಣಗಳನ್ನು ಕೈಬಿಡಲು ಕೇರಳ ಪೊಲೀಸರು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ.

ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ಸಾಕಷ್ಟು ಸಾಕ್ಷ್ಯಗಳನ್ನು ಸಂಗ್ರಹಿಸಲು ಸಾಧ್ಯವಾಗುತ್ತಿಲ್ಲ. ಸಂತ್ರಸ್ತರು ತನಿಖೆಗೆ ಅಸಹಕಾರ ತೋರುತ್ತಿದ್ದಾರೆ. ಆದ್ದರಿಂದ 35 ಕ್ರಿಮಿನಲ್ ಪ್ರಕರಣಗಳಲ್ಲಿ ‘ಫರ್ದರ್ ಆಕ್ಷನ್ ಡ್ರಾಪ್ಡ್’ (ಎಫ್‌ಎಡಿ) ವರದಿಗಳನ್ನು ಸಲ್ಲಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ದಿ ಹಿಂದೂ ವರದಿ ಮಾಡಿದೆ.

ಅಧಿಕೃತ ಮೂಲಗಳ ಪ್ರಕಾರ, ಎಸ್‌ಐಟಿ ಮತ್ತು ನ್ಯಾಯಾಲಯ ಪದೇ ಪದೇ ಸಮನ್ಸ್ ಜಾರಿ ಮಾಡಿದರೂ, ಸಂತ್ರಸ್ತರು ಪ್ರಕರಣಗಳಿಗೆ ಸಂಬಂಧಿಸಿದಂತೆ ಹೇಳಿಕೆಗಳನ್ನು ನೀಡಲು ನಿರಾಕರಿಸಿದ್ದಾರೆ ಎಂದು ವರದಿ ಹೇಳಿದೆ.

ತನಿಖೆಯಲ್ಲಿ ಯಾವುದೇ ಪ್ರಗತಿ ಕಾಣದ ಕಾರಣ 21 ಪ್ರಕರಣಗಳಲ್ಲಿ ಎಫ್‌ಎಡಿ ವರದಿಗಳನ್ನು ಸಲ್ಲಿಸಲಾಗಿದೆ. ಉಳಿದ 14 ಪ್ರಕರಣಗಳನ್ನು ಕೂಡ ತಾತ್ಕಾಲಿಕವಾಗಿ ಕೈಬಿಡುವ ಸಾಧ್ಯತೆಯಿದೆ ಎಂದು ತನಿಖೆಯ ನೋಡಲ್ ಅಧಿಕಾರಿ ಮತ್ತು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕಿ ಜಿ. ಪೂಂಗುಝಿಲಿ ತಿಳಿಸಿದ್ದಾರೆ.

“ಶಾಶ್ವತವಾಗಿ ಪ್ರಕರಣಗಳನ್ನು ಕೈಬಿಟ್ಟಿಲ್ಲ”

“ಕಾನೂನು ಹಾಗೂ ಕಾರ್ಯವಿಧಾನಗಳ ಭಾಗವಾಗಿ ಸದ್ಯಕ್ಕೆ ಪ್ರಕರಣಗಳಲ್ಲಿ ತನಿಖೆಯನ್ನು ಅಂತ್ಯಗೊಳಿಸಲಾಗುತ್ತಿದೆ. ಆದರೆ, ಯಾವುದೇ ಪ್ರಕರಣಗಳನ್ನು ಶಾಶ್ವತವಾಗಿ ಕೈಬಿಡುವುದಿಲ್ಲ. ಸಂತ್ರಸ್ತರು ಯಾವುದೇ ಹಂತದಲ್ಲೂ ಮುಂದೆ ಬಂದು ಹೇಳಿಕೆ ದಾಖಲಿಸಲು ಅವಕಾಶವಿದೆ. ಹಾಗೇನಾದರು ಆದರೆ, ತನಿಖೆ ಮುಂದುವರಿಯಲಿದೆ” ಎಂದು ಪೂಂಗುಝಿಲಿ ಸ್ಪಷ್ಟಪಡಿಸಿದ್ದಾಗಿ ವರದಿ ಹೇಳಿದೆ.

ಎಸ್‌ಐಟಿ ಸಂತ್ರಸ್ತರಿಗೆ ಮೂರು ಸುತ್ತಿನ ನೋಟಿಸ್‌ಗಳನ್ನು ನೀಡಿದೆ. ನ್ಯಾಯಾಲಯ ಕೂಡ ಮೂರು ಬಾರಿ ಸಮನ್ಸ್ ಜಾರಿ ಮಾಡಿದೆ. ಆದರೂ, ಸಂತ್ರಸ್ತರಿಂದ ಯಾವುದೇ ಪ್ರತಿಕ್ರಿಯೆಗಳು ಬಂದಿಲ್ಲ. ಇಂತಹ ಸ್ಥಿತಿಯಲ್ಲಿ ಮುಂದಿನ ತನಿಖೆ ಅಸಾಧ್ಯವಾಗಿದೆ ಎಂದು ಪೂಂಗುಝಿಲಿ ಹೇಳಿದ್ದಾರೆ.

ಈ ಹಿನ್ನಡೆಯ ಹೊರತಾಗಿಯೂ, ಹೇಮಾ ಸಮಿತಿ ವರದಿ ಮತ್ತು ಸಂತ್ರಸ್ತರ ಆರೋಪಗಳನ್ನು ಆಧರಿಸಿ ದಾಖಲಾಗಿರುವ ಸುಮಾರು 70 ಇತರ ಪ್ರಕರಣಗಳ ಪೊಲೀಸ್ ತನಿಖೆಗಳು ಮುಂದುವರೆದಿವೆ. ಇವುಗಳಲ್ಲಿ, ಸುಮಾರು 25 ಪ್ರಕರಣಗಳಲ್ಲಿ ಈಗಾಗಲೇ ಚಾರ್ಜ್‌ಶೀಟ್‌ಗಳನ್ನು ಸಲ್ಲಿಸಲಾಗಿದೆ.

ಗಮನಾರ್ಹವಾಗಿ, ಈಗಾಗಲೇ ಸಲ್ಲಿಸಿರುವ ಆರೋಪ ಪಟ್ಟಿಯಲ್ಲಿ ಶಾಸಕ ಎಂ. ಮುಖೇಶ್, ಸಿದ್ದಿಕ್, ಜಯಸೂರ್ಯ, ಎಡವೇಲ ಬಾಬು, ಮಣಿಯನ್‌ಪಿಳ್ಳೈ ರಾಜು ಮತ್ತು ರಂಜಿತ್ ಸೇರಿದಂತೆ ಮಲಯಾಳಂ ಚಲನಚಿತ್ರೋದ್ಯಮದ ಪ್ರಮುಖ ವ್ಯಕ್ತಿಗಳ ಹೆಸರಿದೆ.

ಮಲಯಾಳಂ ಚಿತ್ರೋದ್ಯಮದಲ್ಲಿ ಮಹಿಳಾ ಕಲಾವಿದರು ಅನುಭವಿಸುತ್ತಿರುವ ಲೈಂಗಿಕ ಮತ್ತು ಇತರ ಶೋಷಣೆಗಳ ಕುರಿತು ಅಧ್ಯಯನ ನಡೆಸಿ ವರದಿ ನೀಡಲು ಜುಲೈ 2017 ರಲ್ಲಿ ಹೇಮಾ ಸಮಿತಿಯನ್ನು ಸರ್ಕಾರ ರಚಿಸಿತ್ತು. ಈ ಸಮಿತಿ 31 ಡಿಸೆಂಬರ್ 2019ರಂದು ಸರ್ಕಾರಕ್ಕೆ ವರದಿ ಸಲ್ಲಿಸಿತ್ತು. ಈ ವರದಿಯನ್ನು ಸುಮಾರು ಐದು ವರ್ಷಗಳ ಬಳಿಕ,19 ಆಗಸ್ಟ್ 2024ರಂದು ಬಹಿರಂಗಗೊಳಿಸಲಾಗಿದೆ.

“ವಾಕ್ ಸ್ವಾತಂತ್ರ್ಯ ಎಂದರೆ ಇನ್ನೊಬ್ಬರ ಭಾವನೆಗಳಿಗೆ ನೋವುಂಟು ಮಾಡುವುದು ಎಂದಲ್ಲ”: ಶರ್ಮಿಸ್ತಾ ಪನೋಲಿಗೆ ಜಾಮೀನು ನೀಡಲು ಹೈಕೋರ್ಟ್ ನಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...