Homeಮುಖಪುಟಹೇಮಂತ್ ಸೊರೆನ್ ಅರೆಸ್ಟ್‌: ಜಾರ್ಖಾಂಡ್‌ಗೆ ನೂತನ ಸಿಎಂ

ಹೇಮಂತ್ ಸೊರೆನ್ ಅರೆಸ್ಟ್‌: ಜಾರ್ಖಾಂಡ್‌ಗೆ ನೂತನ ಸಿಎಂ

- Advertisement -
- Advertisement -

ಜಾರ್ಖಾಂಡ್‌ ಸಿಎಂ ಹುದ್ದೆಗೆ  ಹೇಮಂತ್ ಸೊರೆನ್ ರಾಜೀನಾಮೆ ಬೆನ್ನಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ರಾಂಚಿಯಲ್ಲಿ ಅವರನ್ನು ಬಂಧಿಸಿದ್ದಾರೆ. ಭೂ ಹಗರಣ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಜಾರ್ಖಂಡ್ ಮುಕ್ತಿ ಮೋರ್ಚಾ(ಜೆಎಂಎಂ) ನಾಯಕ ಮತ್ತು ಜಾರ್ಖಾಂಡ್‌ ಸಿಎಂ ಹೇಮಂತ್ ಸೊರೆನ್ ಅವರನ್ನು 7 ಗಂಟೆಗಳ ಕಾಲ ವಿಚಾರಣೆ ನಡೆಸಿದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಳಿಕ ಅವರನ್ನು ಬಂಧಿಸಿದ್ದಾರೆ.

ಜಾರ್ಖಾಂಡ್‌ ರಾಜ್ಯಪಾಲ ಸಿ ಪಿ ರಾಧಾಕೃಷ್ಣನ್ ಅವರನ್ನು ಭೇಟಿ ಮಾಡಿ ಹೇಮಂತ್ ಸೊರೆನ್ ರಾಜೀನಾಮೆ ಸಲ್ಲಿಸಿದ ಕೆಲವೇ ಕ್ಷಣಗಳಲ್ಲಿ ಈ ಬಂಧನ ನಡೆದಿದೆ. ಆಡಳಿತಾರೂಢ ಮೈತ್ರಿಕೂಟವು ಹೇಳಿದಂತೆ ಹೇಮಂತ್ ಸೊರೆನ್ ಅವರ ಆಪ್ತ ಮತ್ತು ರಾಜ್ಯ ಸಾರಿಗೆ ಸಚಿವ ಚಂಪೈ ಸೊರೆನ್ ಅವರು ಮುಖ್ಯಮಂತ್ರಿ ಸ್ಥಾನವನ್ನು ವಹಿಸಿಕೊಳ್ಳಲಿದ್ದಾರೆ. ನೂತನ ಮುಖ್ಯಮಂತ್ರಿಯಾಗಿ ಚಂಪೈ ಸೊರೆನ್ ಪ್ರಮಾಣ ವಚನ ಸ್ವೀಕರಿಸಲು ಸಜ್ಜಾಗಿದ್ದು, ಈಗಾಗಲೇ ಬೆಂಬಲಿಗ ಶಾಸಕರೊಂದಿಗೆ ಚಂಪೈ ಸೊರೆನ್ ಅವರು ರಾಜ್ಯಪಾಲರನ್ನು ಭೇಟಿ ಮಾಡಿ ಪ್ರಮಾಣ ವಚನಕ್ಕೆ ಅನುಮತಿ ಕೇಳಿದ್ದಾರೆ.

ಬುಧವಾರ ಜಾರ್ಖಂಡ್ ಪೊಲೀಸರು ಹೇಮಂತ್‌ ಸೋರೆನ್ ನೀಡಿದ ದೂರಿನ ಆಧಾರದ ಮೇಲೆ  ಹಿರಿಯ ಇಡಿ ಅಧಿಕಾರಿಗಳ ವಿರುದ್ಧ ಎಸ್ಸಿ, ಎಸ್ಟಿ ಕಾಯ್ದೆಯಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ಇಡಿ ಅಧಿಕಾರಿಗಳು ವಿಚಾರಣೆಯ ನೆಪದಲ್ಲಿ ನನಗೆ ಕಿರುಕುಳ ಕೊಡುತ್ತಿದ್ದಾರೆ. ಇಡಿ ಕ್ರಮವು ನಮ್ಮ ಸಮುದಾಯಕ್ಕೆ ಅಪಮಾನವನ್ನುಂಟು ಮಾಡಿದೆ ಎಂದು ಹೇಮಂತ್ ಸೊರೇನ್ ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದರು.

ಈ ಹಿಂದೆ ಹೇಮಂತ್ ಸೊರೆನ್ ಅವರನ್ನು ಮೂರು ಬಾರಿ ಅವರನ್ನು ವಿಚಾರಣೆ ಮಾಡಲಾಗಿತ್ತು. ಮೊದಲ ನವೆಂಬರ್ 2021ರಲ್ಲಿ EDಯ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತು ಜನವರಿ 20 ಮತ್ತು 31ರಂದು ಕ್ರಮವಾಗಿ ಎರಡನೇ ಮತ್ತು ಮೂರನೇ ಸಮನ್ಸ್ ರಾಂಚಿಯಲ್ಲಿ ಭೂಮಿ ಮಾರಾಟ ಮತ್ತು ಖರೀದಿಗೆ ಸಂಬಂಧಿಸಿದಂತೆ ವಿಚಾರಣೆ ನಡೆಸಿತ್ತು.

ಸೊರೇನ್ ಅವರ ದೆಹಲಿಯ ಮನೆಯಲ್ಲಿ ಪರಿಶೀಲನೆ ನಡೆಸಲು ಇಡಿ ಅಧಿಕಾರಿಗಳು ಸೋಮವಾರ ಬೆಳಿಗ್ಗೆ ಹೋಗಿದ್ದರು. ಈ ವೇಳೆ ನಾಟಕೀಯ ಬೆಳವಣಿಗೆ ನಡೆದಿತ್ತು. ಸೊರೇನ್ ಅವರು ಏಕಾಏಕಿ ಮನೆಯಿಂದ ನಾಪತ್ತೆಯಾಗಿದ್ದರು. ಇಡಿ ಅಧಿಕಾರಿಗಳು 36 ಲಕ್ಷ ನಗದು ಹಾಗೂ 1 ಕೋಟಿಗೂ ಹೆಚ್ಚು ಬೆಲೆ ಬಾಳುವ ಬಿಎಂಡಬ್ಲ್ಯು ಎಕ್ಸ್‌7 ಕಾರನ್ನು ವಶಪಡಿಸಿಕೊಂಡಿದ್ದಾರೆ. ಮಂಗಳವಾರ ಸೊರೇನ್ ಅವರು ರಾಂಚಿಯಲ್ಲಿ ಕಾಣಿಸಿಕೊಂಡಿದ್ದರು. ಬುಧವಾರ ಸಲ್ಲಿಸಿದ ದೂರಿನಲ್ಲಿ ಬಿಎಂಡಬ್ಲ್ಯು ಕಾರಿನ ಮಾಲೀಕ ನಾನಲ್ಲ. ನಾನು ಯಾವುದೇ ಅಕ್ರಮ ಹಣವನ್ನು ಹೊಂದಿಲ್ಲ ಎಂದು ಹೇಮಂತ್ ಸೊರೇನ್ ಹೇಳಿದ್ದರು.

600 ಕೋಟಿ ಭೂ ಹಗರಣಕ್ಕೆ ಸಂಬಂಧಿಸಿದ ಆಪಾದಿತ ಮನಿ ಲಾಂಡರಿಂಗ್ ಪ್ರಕರಣದಲ್ಲಿ ವಿಚಾರಣೆಗಾಗಿ ಏಳು ಸಮನ್ಸ್‌ಗಳನ್ನು ಹೇಮಂತ್ ಸೊರೆನ್‌ಗೆ ನೀಡಲಾಗಿತ್ತು. ಬಂಧನದ ನಿರೀಕ್ಷೆಯಲ್ಲಿದ್ದ ಸೊರೆನ್‌ ಮಂಗಳವಾರ ಮೈತ್ರಿಕೂಟದ ಶಾಸಕರೊಂದಿಗೆ ಸಭೆ ನಡೆಸಿ ತಮ್ಮ ಉತ್ತರಾಧಿಕಾರಿಯ ಪ್ರಶ್ನೆಗೆ ಚರ್ಚೆ ನಡೆಸಿದರು. ಅವರ ಪತ್ನಿ ಕಲ್ಪನಾ ಸೊರೆನ್ ಸಿಎಂ ಹುದ್ದೆ ನೀಡುತ್ತಾರೆ ಎಂಬ ನಿರೀಕ್ಷೆ ಇತ್ತು, ಆದರೆ ನವೆಂಬರ್‌ನಲ್ಲಿ ನಡೆಯಲಿರುವ ರಾಜ್ಯ ಚುನಾವಣೆಗಳನ್ನು ಗಮನಿಸಿ ಈ ಆಲೋಚನೆಯನ್ನು ಕೈಬಿಡಲಾಗಿದೆ ಎನ್ನಲಾಗಿದೆ.

ಭೂ ಹಗರಣ ಪ್ರಕರಣವು ಸರ್ಕಾರಿ ಜಮೀನಿನ ಮಾಲೀಕತ್ವವನ್ನು ಬದಲಾಯಿಸುವ ಮತ್ತು ಅದನ್ನು ಬಿಲ್ಡರ್‌ಗಳಿಗೆ ಮಾರಾಟ ಮಾಡುವ ದೊಡ್ಡ ದಂಧೆಯನ್ನು ಒಳಗೊಂಡಿದೆ ಇಡಿ ಆರೋಪಿಸಿದೆ. ಈ ಪ್ರಕರಣದಲ್ಲಿ 2011ರ ಬ್ಯಾಚ್‌ನ ಐಎಎಸ್ ಅಧಿಕಾರಿ ಛಾವಿ ರಂಜನ್ ಅವರು ರಾಜ್ಯ ಸಮಾಜ ಕಲ್ಯಾಣ ಇಲಾಖೆಯ ನಿರ್ದೇಶಕರು ಮತ್ತು ರಾಂಚಿಯ ಉಪ ಆಯುಕ್ತರಾಗಿ ಸೇವೆ ಸಲ್ಲಿಸಿದ 14 ಜನರನ್ನು ಇದುವರೆಗೆ ಬಂಧಿಸಲಾಗಿದೆ.

ಇದನ್ನು ಓದಿ: ಬಿಜೆಪಿಯಲ್ಲಿ ವಿಲೀನಗೊಂಡ ಕೇರಳ ಜನಪಕ್ಷಂ

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...