Homeಮುಖಪುಟಇಡಿ ಅಧಿಕಾರಿಗಳ ವಿರುದ್ಧ ಎಸ್ಸಿ ಎಸ್ಟಿ ದೌರ್ಜನ್ಯ ಕಾಯ್ದೆಯಡಿ ದೂರು ದಾಖಲಿಸಿದ ಹೇಮಂತ್ ಸೊರೇನ್

ಇಡಿ ಅಧಿಕಾರಿಗಳ ವಿರುದ್ಧ ಎಸ್ಸಿ ಎಸ್ಟಿ ದೌರ್ಜನ್ಯ ಕಾಯ್ದೆಯಡಿ ದೂರು ದಾಖಲಿಸಿದ ಹೇಮಂತ್ ಸೊರೇನ್

- Advertisement -
- Advertisement -

ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳ ವಿರುದ್ಧ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗ (ದೌರ್ಜನ್ಯ ತಡೆ) ಕಾಯ್ದೆಯಡಿ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.

ಇಡಿ ಅಧಿಕಾರಿಗಳು ವಿಚಾರಣೆಯ ನೆಪದಲ್ಲಿ ನನಗೆ ಕಿರುಕುಳ ಕೊಡುತ್ತಿದ್ದಾರೆ. ಇಡಿ ಕ್ರಮವು ನಮ್ಮ ಸಮುದಾಯಕ್ಕೆ ಅಪಮಾನವನ್ನುಂಟು ಮಾಡಿದೆ ಎಂದು ಹೇಮಂತ್ ಸೊರೇನ್ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

ನಾವು ಮುಖ್ಯಮಂತ್ರಿಗಳಿಂದ ದೂರು ಸ್ವೀಕರಿಸಿದ್ದೇವೆ. ಇಡಿಯ ಕೆಲ ಹಿರಿಯ ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ರಾಂಚಿಯ ಹಿರಿಯ ಪೊಲೀಸ್ ಅಧೀಕ್ಷಕ ಚಂದನ್ ಕುಮಾರ್ ಸಿನ್ಹಾ ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಆಪಾದಿತ ಭೂ ಹಗರಣದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋರೆನ್ ಅವರನ್ನು ರಾಂಚಿಯಲ್ಲಿರುವ ಅವರ ನಿವಾಸದಲ್ಲಿ ಇಡಿ ವಿಚಾರಣೆ ನಡೆಸಿದೆ. ಸೊರೇನ್ ಅವರನ್ನು ಬಂಧಿಸುವ ಸಾಧ್ಯತೆ ಇದೆ ಅವರ ಪಕ್ಷದ ಮೂಲಗಳು ತಿಳಿಸಿವೆ.

ಸೊರೇನ್ ಅವರ ದೆಹಲಿಯ ಮನೆಯಲ್ಲಿ ಪರಿಶೀಲನೆ ನಡೆಸಲು ಇಡಿ ಅಧಿಕಾರಿಗಳು ಸೋಮವಾರ ಬೆಳಿಗ್ಗೆ ಹೋಗಿದ್ದರು. ಈ ವೇಳೆ ನಾಟಕೀಯ ಬೆಳವಣಿಗೆ ನಡೆದಿತ್ತು. ಸೊರೇನ್ ಅವರು ಏಕಾಏಕಿ ಮನೆಯಿಂದ ನಾಪತ್ತೆಯಾಗಿದ್ದರು. ಇಡಿ ಅಧಿಕಾರಿಗಳು ₹36 ಲಕ್ಷ ನಗದು ಹಾಗೂ ₹1 ಕೋಟಿಗೂ ಹೆಚ್ಚು ಬೆಲೆ ಬಾಳುವ ಬಿಎಂಡಬ್ಲ್ಯು ಎಕ್ಸ್‌7 ಕಾರನ್ನು ವಶಪಡಿಸಿಕೊಂಡಿದ್ದಾರೆ. ಮಂಗಳವಾರ ಸೊರೇನ್ ಅವರು ರಾಂಚಿಯಲ್ಲಿ ಕಾಣಿಸಿಕೊಂಡಿದ್ದರು. ಇಂದು (ಬುಧವಾರ) ಸಲ್ಲಿಸಿದ ದೂರಿನಲ್ಲಿ ಬಿಎಂಡಬ್ಲ್ಯು ಕಾರಿನ ಮಾಲೀಕ ನಾನಲ್ಲ. ನಾನು ಯಾವುದೇ ಅಕ್ರಮ ಹಣವನ್ನು ಹೊಂದಿಲ್ಲ ಎಂದು ಹೇಮಂತ್ ಸೊರೇನ್ ಹೇಳಿದ್ದಾರೆ.

ಇದನ್ನೂ ಓದಿ: ಜ್ಞಾನವಾಪಿ ಮಸೀದಿ ನೆಲಮಹಡಿಯಲ್ಲಿ ಹಿಂದೂಗಳಿಗೆ ಪ್ರಾರ್ಥನೆಗೆ ಅವಕಾಶ ನೀಡಿದ ಕೋರ್ಟ್‌

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

0
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಇಂದು (ಏ.30) ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಹೊಳೆನರಸೀಪುರ ನಗರ...