ಜಾರ್ಖಂಡ್ ರಾಜ್ಯದ 13ನೇ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೇನ್ ಇಂದು (ಜುಲೈ 4) ಸಂಜೆ ಪ್ರಮಾಣ ವಚನ ಸ್ವೀಕರಿಸಿದರು.
ರಾಜ್ಯಪಾಲ ಸಿ.ಪಿ ರಾಧಾಕೃಷ್ಣನ್ ಅವರು ಪ್ರಮಾಣ ವಚನ ಬೋಧಿಸಿದರು. ಈ ಮೂಲಕ 3ನೇ ಬಾರಿಗೆ ಹೇಮಂತ್ ಸೊರೇನ್ ಜಾರ್ಖಂಡ್ ರಾಜ್ಯದ ಸಿಎಂ ಆಗಿ ಅಧಿಕಾರವಹಿಸಿಕೊಂಡರು.
ಜಾರ್ಖಂಡ್ ರಾಜಧಾನಿ ರಾಂಚಿಯಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಕಾಂಗ್ರೆಸ್, ಆರ್‌ಜೆಡಿ ನಾಯಕರು ಸೇರಿದಂತೆ ಪ್ರಮುಖ ಭಾಗಿಯಾಗಿದ್ದರು.
JMM executive president Hemant Soren takes oath as Chief Minister of Jharkhand
Read @ANI Story |https://t.co/yPSwRUfkv2#HemantSoren #Jharkhand #JMM #ChiefMinister pic.twitter.com/cE27C4RquM
— ANI Digital (@ani_digital) July 4, 2024
ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಪಕ್ಷದ ಮುಖ್ಯಸ್ಥರೂ ಆಗಿರುವ ಹೇಮಂತ್ ಸೊರೇನ್, ಪ್ರಮಾಣ ವಚನಕ್ಕೂ ಮುನ್ನ ಮಿತ್ರ ಪಕ್ಷಗಳಾದ ಕಾಂಗ್ರೆಸ್‌ನ ಅಧ್ಯಕ್ಷ ರಾಜೇಶ್ ಠಾಕೂರ್ ಮತ್ತು ಆರ್‌ಜೆಡಿಯ ನಾಯಕ ಸತ್ಯಾನಂದ್ ಭೋಕ್ತಾ ಜೊತೆ ರಾಜಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿಯಾಗಿದ್ದರು.
ಮುಖ್ಯಮಂತ್ರಿಯಾಗಿದ್ದ ಚಂಪೈ ಸೊರೇನ್ ಬುಧವಾರ ರಾಜೀನಾಮೆ ನೀಡಿದ್ದರು. ಈ ಬೆನ್ನಲ್ಲೇ ಜೆಎಂಎಂ ನೇತೃತ್ವದ ಮೈತ್ರಿಕೂಟದ ನಾಯಕರು ಹೇಮಂತ್ ಸೊರೇನ್ ಅವರನ್ನು ಶಾಸಕಾಂಗ ಪಕ್ಷದ ನಾಯಕರಾಗಿ ಅವಿರೋಧವಾಗಿ ಆಯ್ಕೆ ಮಾಡಿದರು. ಆ ಬಳಿಕ ಸೊರೇನ್ ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚಿಸಲು ಹಕ್ಕು ಮಂಡಿಸಿದರು.
ಜಾರಿ ನಿರ್ದೇಶನಾಲಯ (ಇಡಿ) ಜನವರಿ 31ರಂದು ಹಣ ಅಕ್ರಮ ವರ್ಗಾವಣೆ ಆರೋಪದ ಮೇಲೆ ಹೇಮಂತ್ ಸೊರೇನ್ ಅವರನ್ನು ಬಂಧಿಸಿತ್ತು. ಅಕ್ರಮ ವಹಿವಾಟುಗಳು ಮತ್ತು ನಕಲಿ ದಾಖಲೆಗಳ ಮೂಲಕ ರಾಂಚಿಯಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ 8.86 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಯೋಜನೆಯನ್ನು ನಡೆಸಿದ್ದಾರೆ ಎಂದು ಇಡಿ ಆರೋಪಿಸಿದೆ.
ಹೇಮಂತ್ ಸೊರೇನ್ ಬಂಧನಕ್ಕೊಳಗಾದ ಬಳಿಕ ಸರ್ಕಾರ ಪತನಗೊಳ್ಳುವ ಸಾಧ್ಯತೆ ಇತ್ತು. ಈ ವೇಳೆ ಚಂಪೈ ಸೊರೇನ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಹೇಮಂತ್ ಸೊರೇನ್ ಜಾಮೀನು ಪಡೆದು ಜೈಲಿನಿಂದ ಬಿಡುಗಡೆಯಾಗಿರುವ ಹಿನ್ನೆಲೆ, ಚಂಪೈ ಸೊರೇನ್ ಸಿಎಂ ಹುದ್ದೆ ಬಿಟ್ಟು ಕೊಟ್ಟಿದ್ದಾರೆ.
ಇದನ್ನೂ ಓದಿ : ಸನಾತನ ಸಂಸ್ಥೆಯ ಮುಖ್ಯಸ್ಥರ ವಿರುದ್ಧ ತನಿಖೆಗೆ ಕೋರಿ ಎಟಿಎಸ್‌ಗೆ ಪತ್ರ ಬರೆದ ಗೋವಿಂದ್ ಪನ್ಸಾರೆ ಕುಟುಂಬ


