Homeಮುಖಪುಟಆಕೆಯ ಹೆಸರು 'ದಿಶಾ ರವಿ ಜೋಸೇಫ್' ಅಲ್ಲ!: ಸುಳ್ಳಿನ ವಿರುದ್ಧ ದಿಶಾ ಸ್ನೇಹಿತರ ಆಕ್ರೋಶ

ಆಕೆಯ ಹೆಸರು ‘ದಿಶಾ ರವಿ ಜೋಸೇಫ್’ ಅಲ್ಲ!: ಸುಳ್ಳಿನ ವಿರುದ್ಧ ದಿಶಾ ಸ್ನೇಹಿತರ ಆಕ್ರೋಶ

- Advertisement -
- Advertisement -

ರೈತರ ಪ್ರತಿಭಟನೆಯ ಕುರಿತು ಜಾಗತಿಕ ಪರಿಸರ ಹೋರಾಟಗಾರ್ತಿ ಗ್ರೆಟಾ ಹಂಚಿಕೊಂಡ ಟೂಲ್‌ಕಿಟ್ ಪ್ರಕರಣದಲ್ಲಿ ಬೆಂಗಳೂರು ಮೂಲದ ದಿಶಾ ರವಿಯನ್ನು ಬಂಧಿಸಲಾಗಿದೆ. ಇದರ ಬೆನ್ನಲ್ಲೇ ದಿಶಾ ರವಿಯ ಕುರಿತು ಬಿಜೆಪಿ ಐಟಿ ಸೆಲ್ ಕೆಲವು ಸುಳ್ಳು ಮಾಹಿತಿಗಳನ್ನು ಹಂಚಿಕೊಳ್ಳುತ್ತಿದೆ. ಇದನ್ನು ಕೆಲವು ಪ್ರಮುಖರೇ ಕುರುಡಾಗಿ ಅನುಸರಿಸುತ್ತಿದ್ದಾರೆ. ಇದರಲ್ಲಿ ದಿಶಾ ಕ್ರಿಶ್ಚಿಯನ್ ಎನ್ನುವ ಸುಳ್ಳೂ ಒಂದು.

ಟ್ವಿಟರ್‌ನಲ್ಲಿ ನೂರಾರು ಜನರು ದಿಶಾಳ ನಿಜವಾದ ಹೆಸರು, ‘ದಿಶಾ ರವಿ ಜೋಸೆಫ್’ ಎಂದು ಪ್ರತಿಪಾದಿಸುತ್ತಿದ್ದಾರೆ. ಆದರೆ ಈ ಪ್ರತಿಪಾದನೆಯನ್ನು ತಿರಸ್ಕರಿಸಿದ ಆಕೆಯ ಕುಟುಂಬ ಮತ್ತು ಸ್ನೇಹಿತರು ಅವಳ ಪೂರ್ಣ ಹೆಸರು ‘ದಿಶಾ ಅನ್ನಪ್ಪ ರವಿ’ ಎಂದು ಸ್ಪಷ್ಟಪಡಿಸಿದ್ದಾರೆ.

ದಿಶಾ ಅವರ ಕೌಟುಂಬಿಕ ವಕೀಲರು ಮತ್ತು ಆಪ್ತ ಸ್ನೇಹಿತರಾದ ಪ್ರಸನ್ನ ಎಂಬುವವರು, “ಅವರ ತಾಯಿಯ ಹೆಸರು ಮಂಜುಳ ​​ನಂಜಯ್ಯ, ತಂದೆಯ ಹೆಸರು ರವಿ. ಅವರು ಕರ್ನಾಟಕದ ತುಮಕೂರು ಜಿಲ್ಲೆಯ ತಿಪಟೂರಿನವರು” ಎಂದು ದಿ ನ್ಯೂಸ್‌ ಮಿನಿಟ್‌ಗೆ ಹೇಳಿದ್ದಾರೆ.

ಇದನ್ನೂ ಓದಿ: ನಿಮ್ಮ ಮನುಜ ನಿಷ್ಠೆ, ಧರ್ಮ ನಿಷ್ಠೆಯ ಬಗ್ಗೆ ಸಂದೇಹವಿದೆ: ಪೇಜಾವರರ ವಿರುದ್ಧ ಭುಗಿಲೆದ್ದ ಆಕ್ರೋಶ

“ದಿಶಾಳ ವಿರುದ್ಧ ಸಂಚು ರೂಪಿಸಲು ಟ್ವಿಟರ್‌ನಲ್ಲಿ ನಕಲಿ ಮಾಹಿತಿಗಳನ್ನು ಹಂಚಿಕೊಳ್ಳಲಾಗುತ್ತಿದೆ. ಆಕೆ ಯಾವ ಧರ್ಮಕ್ಕೆ ಸೇರಿದವಳಾದರೇನು? ಅದು ಇಲ್ಲಿ ಅಪ್ರಸ್ತುತ. ಅವಳು ಕ್ರಿಶ್ಚಿಯನ್ ಆಗಿರಲಿ ಅಥವಾ ಹಿಂದೂವಾಗಿರಲಿ. ಅದು ಈ ವಿಷಯಕ್ಕೆ ಹೇಗೆ ಸಂಬಂಧಪಡುತ್ತದೆ. ಅವಳು ಪ್ರಕೃತಿ ಪ್ರೇಮಿಯಾಗಿದ್ದು, ಎಲ್ಲಾ ಕಡೆಯಿಂದಲೂ ಅವಳಿಗೆ ಸ್ನೇಹಿತರಿದ್ದಾರೆ. ಅಕೆ ಲಿಂಗಾಯತ ಕುಟುಂಬದವಳಾಗಿದ್ದರೂ ಸಹ ಯಾವುದೇ ಧರ್ಮವನ್ನು ಅನುಸರಿಸಿಲ್ಲ. ದ್ವೇಷ ಹರಡಲು ಬಳಸುವ ಈ ಧಾರ್ಮಿಕ ಗುರುತುಗಳನ್ನು ನಾವು ಇನ್ನೂ ನಿರಾಕರಿಸದಿರುವುದು ದುರದೃಷ್ಟಕರ” ಎಂದು ಅವರು ಹೇಳಿದರು.

ಅಷ್ಟೆ ಅಲ್ಲದೇ ದಿಶಾಳ ಕುಟುಂಬವು ಈ ಕೆಲಸಕ್ಕಾಗಿ ವಿದೇಶದಿಂದ ಹಣ ಪಡೆದುಕೊಂಡಿದೆ ಎಂದೂ ಕೆಲವರು ಆರೋಪಿಸುತ್ತಿದ್ದಾರೆ. ಜೊತೆಗೆ ಆಕೆಯ ಬಗ್ಗೆ ಅಸಹ್ಯಕರವಾದ ಸುಳ್ಳನ್ನು ಹರಿಬಿಡಲಾಗುತ್ತಿದೆ. ಕೆಲವು ಕನ್ನಡದ ಚಾನೆಲ್‌ಗಳೂ ಕೂಡ ಈ ಸುಳ್ಳು ಮಾಹಿತಿಯನ್ನು ಹರಡುತ್ತಿವೆ. ಆದರೆ ಇದು ಶುದ್ಧ ಸುಳ್ಳು ಎಂದು ಹೇಳಿದರು.

ದಿಶಾ ಅವರ ಸ್ನೇಹಿತರೊಬ್ಬರು ಅಕೆಯ ಧರ್ಮಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿದ್ದು, “ಅವಳ ಹೆಸರು ದಿಶಾ ಎ ರವಿ. ಈಕೆಯ ಧರ್ಮದ ವಿಷಯ ಈಗ ಯಾಕೆ ಚರ್ಚೆಯಾಗುತ್ತಿದೆ. ಯಾರು ಯಾವ ಧರ್ಮ ಅಥವಾ ಜಾತಿಗೆ ಸೇರಿದ್ದರೇನು. ಆಕೆ ಭಾರತೀಯಳು. ನಾವೆಲ್ಲರೂ ಈ ರಾಷ್ಟ್ರದ ಒಳಿತಿಗಾಗಿ ಮತ್ತು ಮಾನವೀಯತೆಗಾಗಿ ಒಟ್ಟಿಗೆ ಬರುತ್ತಿದ್ದೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ದಿಶಾ ಬಂಧನ: ದೆಹಲಿ ಪೊಲೀಸರಿಗೆ ದೆಹಲಿ ಮಹಿಳಾ ಆಯೋಗದ ನೋಟಿಸ್

ದಿಶಾ ರವಿ ಜೋಸೆಫ್ ಎಂಬುದು ಟ್ವಿಟರ್ ನಲ್ಲಿ ಇಂದು (ಬುಧವಾರ) ಟ್ರೆಂಡಿಂಗ್ ಆಗುತ್ತಿದ್ದು, ಈಕೆ ಕೇರಳದ ಸಿರಿಯನ್ ಕ್ರಿಶ್ಚಿಯನ್ ಎನ್ನುವ ಟ್ವೀಟ್‌ಗಳು ಹರಿದಾಡುತ್ತಿದೆ. ಜೊತೆಗೆ ದಿಶಾ ಮತ್ತು ನಿಕಿತಾ ಜಾಕೋಬ್ ಅವರನ್ನು ಬಂಧಿಸಲು ದೆಹಲಿಯಿಂದ ಜಾಮೀನು ರಹಿತ ವಾರೆಂಟ್ ಹೊರಡಿಸಲಾಗಿದೆ. ಬೆಳಿಗ್ಗೆ 10 ಗಂಟೆಯ ಸುಮಾರಿಗೆ 10,000 ಕ್ಕೂ ಹೆಚ್ಚಿನ ಟ್ವೀಟ್‌ಗಳು ಈ ಸುಳ್ಳನ್ನೇ ಪ್ರತಿಪಾದಿಸುತ್ತಿದ್ದವು.

ಆಕೆಯ ಹೆಸರಿನ ಬಗ್ಗೆ ತಪ್ಪು ಮಾಹಿತಿ ಹೊಂದಿರುವ ಟ್ವೀಟ್‌ಗಳಲ್ಲಿ 9,000 ಕ್ಕೂ ಹೆಚ್ಚು ಲೈಕ್‌ಗಳು ಮತ್ತು 3,000 ರಿಟ್ವೀಟ್‌ಗಳಿವೆ.

ಆಕೆಯ ಬಂಧನದ ನಂತರ, ದಿಶಾ ರವಿ ಅವರೊಂದಿಗೆ ಸಂಪರ್ಕ ಹೊಂದಿದೆಯೆಂದು ಹೇಳಿಕೊಂಡು ಅನೇಕ ನಕಲಿ ಟ್ವಿಟರ್ ಖಾತೆಗಳು ಸಹ ರಚನೆಯಾಗಿವೆ. ಆದರೆ, ದಿಶಾ ಅವರ ಆಪ್ತರು ಆಕೆಯ ಹೆಸರಿನಲ್ಲಿ ಯಾವುದೇ ಟ್ವಿಟ್ಟರ್ ಖಾತೆಯನ್ನು ತೆರೆದಿಲ್ಲ ಮತ್ತು ಟ್ವೀಟ್‌ಗಳನ್ನೂ ಮಾಡುತ್ತಿಲ್ಲ ಎಂದು ಕುಟುಂಬದವರೆ ದೃಢಪಡಿಸಿದ್ದಾರೆ.

ಇದನ್ನೂ ಓದಿ: ನಮ್ಮ ಪೂಜೆಯ ಎದುರು ಇವರ ‘ರಾಮ ಜಪ’ ಕಾಲು ಭಾಗಕ್ಕೂ ಸಾಲದು; ಇವರದು ಧಾರ್ಮಿಕ…

ರೈತರ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದ ಗ್ರೇಟಾ ಥನ್‌ಬರ್ಗ್ ಟೂಲ್‌ಕಿಟ್ ಒಂದನ್ನು ಹಂಚಿಕೊಂಡಿದ್ದರು. ಇದರಲ್ಲಿ ಭಯೋತ್ಪಾದಕರ ಕೈವಾಡವಿದೆ ಮತ್ತು ಖಲೀಸ್ತಾನಿಗಳ ಹಸ್ತಕ್ಷೇಪವಿದೆ ಎಂದು ದೆಹಲಿ ಪೊಲೀಸರು ಆರೋಪಿಸಿದ್ದರು. ಇದಕ್ಕೆ ಸಂಬಂಧಿಸಿದಂತೆ ಫೆಬ್ರವರಿ 4 ರಂದು ಎಫ್‌ಐಆರ್ ಕೂಡ ದಾಖಲಾಗಿತ್ತು.

ದಿಶಾ ಹಂಚಿಕೊಂಡಿರುವ ಟೂಲ್‌ಕಿಟ್‌ನಲ್ಲಿ, “ರೈತರ ಹೋರಾಟವನ್ನು ತೀವ್ರಗೊಳಿಸಲು ಏನು ಮಾಡಬಹದು? ನಾವಿರುವಲ್ಲಿಂದಲೇ ರೈತ ಹೋರಾಟವನ್ನು ಹೇಗೆ ಬೆಂಬಲಿಸಬಹುದು?” ಎನ್ನುವುದರ ಬಗ್ಗೆ ಕೆಲವು ಮಾಹಿತಿಗಳಿವೆ ಅಷ್ಟೆ. ಆದರೆ ಇದಕ್ಕೆ ಖಲೀಸ್ತಾನದ ನಂಟಿನ ಆರೋಪ ಹೊರಿಸಿ, ಭಯೋತ್ಪಾದಕ ಕೃತ್ಯ ಎಂದು ಬಿಂಬಿಸಿ, ದೇಶದ್ರೋಹ ಪ್ರಕರಣ ದಾಖಲಿಸುವಷ್ಟು ಸರ್ಕಾರದ ನಿದ್ದೆಗೆಡಿಸಿದೆಯೆಂದರೆ ಇದನ್ನು ನಾವು ಯಾವ ದೃಷ್ಟಿಕೋನದಿಂದ ನೋಡಬೇಕು?


ಇದನ್ನೂ ಓದಿ: ಲೀ ಪೆಟ್ರೋಲ್ ದರ ರೂ. 06!, ರಾಮದೇವ್ ಯೋಗ ಭಂಗಿಯಲ್ಲಿ ನೋಡಿದರೆ: ತರೂರ್ ವ್ಯಂಗ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...