Homeಚಳವಳಿ‘ಜೈಲನ್ನು ತೋರಿಸಿ ನಮ್ಮನ್ನು ಬೆದರಿಸಲಾಗದು’ - ಬಿಡುಗಡೆಗೊಂಡ ವಿದ್ಯಾರ್ಥಿ ಹೋರಾಟಗಾರರ ಘೋಷಣೆಗಳಿವು!

‘ಜೈಲನ್ನು ತೋರಿಸಿ ನಮ್ಮನ್ನು ಬೆದರಿಸಲಾಗದು’ – ಬಿಡುಗಡೆಗೊಂಡ ವಿದ್ಯಾರ್ಥಿ ಹೋರಾಟಗಾರರ ಘೋಷಣೆಗಳಿವು!

- Advertisement -
- Advertisement -

ಇವರು ವಿದ್ಯಾರ್ಥಿಗಳು ಮತ್ತು ಹೋರಾಟಗಾರರು. ಜೈಲಿನಂದ ಬಿಡುಗಡೆಗೊಂಡ ಇವರು ಮತ್ತೆ ಪ್ರಭುತ್ವಕ್ಕೆ ಸವಾಲು ಹಾಕಿದ್ದಾರೆ. ‘‘ಜೈಲನ್ನು ತೋರಿಸಿ ನಮ್ಮನ್ನು ಹೆದರಿಸಬೇಡಿ. ಅನ್ಯಾಯದ ವಿರುದ್ಧ ನಮ್ಮ ಪ್ರತಿಭಟನೆ ನಿರಂತರ…..’’ ಎಂದು ಹೇಳಿದ್ದಾರೆ.

ನತಾಶಾ ನರ್ವಾಲ್‍, ದೇವಾಂಗನಾ ಕಾಳಿತಾ ಮತ್ತು ಆಸಿಫ್ ಇಕ್ಬಾಲ್ ತನ್ಹಾ ಅವರು ದೆಹಲಿಯ ತಿಹಾರ್ ಜೈಲಿನಿಂದ ಹೊರ ಬಂದಿದ್ದಾರೆ. ಈಶಾನ್ಯ ದೆಹಲಿ ಗಲಭೆ ಪ್ರಕರಣದಲ್ಲಿ ಪಿತೂರಿ ನಡೆಸಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿತ್ತು.

“ಇದು ಸರ್ಕಾರದ ಹತಾಶೆಯನ್ನು ತೋರಿಸುತ್ತದೆ. ನಾವು ಅವರಿಗೆ ಹೆದರದ ಮಹಿಳೆಯರು” ಎಂದು ಕಾಳಿತಾ ಜೈಲು ದ್ವಾರಗಳಿಂದ ಹೊರಬಂದ ನಂತರ ಸುದ್ದಿಗಾರರಿಗೆ ತಿಳಿಸಿದ್ದಾರೆ. ಅವರನ್ನು ಸ್ವಾಗತಿಸಲು ಅಲ್ಲಿ ವಿದ್ಯಾರ್ಥಿ ಬೆಂಬಲಿಗರು ನೆರೆದಿದ್ದರು.

ನತಾಶಾ ನರ್ವಾಲ್‍‌, “ಈ ಪ್ರಕರಣವು ಇನ್ನೂ ನ್ಯಾಯಾಲಯದಲ್ಲಿ ಇರುವುದರಿಂದ ಪ್ರತಿಕ್ರಿಯಿಸಲು ಬಯಸುವುದಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ನಾವು ಪ್ರಮಾಣಪತ್ರ ಹೊಂದಿದ ಗೂಂಡಾಗಳು: ಶಿವಸೇನೆಯ ಸಂಜಯ್ ರಾವತ್

“ನಾವು ನಂಬಿದ್ದನ್ನು ಎತ್ತಿಹಿಡಿದಿದ್ದಕ್ಕಾಗಿ ದೆಹಲಿ ಹೈಕೋರ್ಟ್‍ಗೆ ಧನ್ಯವಾದ ಹೇಳಲು ನಾವು ಬಯಸುತ್ತೇವೆ. ನಾವು ಮಾಡಿದ ಯಾವುದೇ ಪ್ರತಿಭಟನೆಯು ಭಯೋತ್ಪಾದನೆಯಲ್ಲ. ಇದು ಮಹಿಳೆಯರ ನೇತೃತ್ವದ ಪ್ರಜಾತಾಂತ್ರಿಕ ಪ್ರತಿಭಟನೆಯಾಗಿದೆ” ಎಂದು ಅವರು ಹೇಳಿದ್ದಾರೆ.

“ಅವರು ನಮಗೆ ಜೈಲುವಾಸದ ಬೆದರಿಕೆ ಹಾಕಲು ಸಾಧ್ಯವಿಲ್ಲ. ಅವರು ನಮ್ಮನ್ನು ಜೈಲಿನಲ್ಲಿರಿಸುವುದಾಗಿ ಬೆದರಿಕೆ ಹಾಕಿದರೆ, ಅದು ನಮ್ಮ ಹೋರಾಟವನ್ನು ಮುಂದುವರಿಸುವ ಸಂಕಲ್ಪವನ್ನು ಬಲಪಡಿಸುತ್ತದೆ” ಎಂದು ನತಾಶಾ ನರ್ವಾಲ್‍ ಹೇಳಿದ್ದಾರೆ. ಅವರ ತಂದೆ ಮಹಾವೀರ್ ನರ್ವಾಲ್‍ ಮೇ ತಿಂಗಳಲ್ಲಿ ಕೊರೊನಾದಿಂದ ನಿಧನರಾಗಿದ್ದರು. ನತಾಶಾರನ್ನು ಸ್ವೀಕರಿಸಲು ಬಂದ ಅವರ ಸಹೋದರ, “ನಾವು ನಮ್ಮ ತಂದೆಯನ್ನು ಕಳೆದುಕೊಂಡಿದ್ದೇವೆ. ಬದುಕಿದ್ದರೆ ಅವರು ಇವತ್ತು ಮಗಳನ್ನು ಕರೆದೊಯ್ಯಲು ಇಲ್ಲಿಗೆ ಬರುತ್ತಿದ್ದರು” ಎಂದು ಹೇಳಿದ್ದಾರೆ.

“ತಂದೆಯ ಮರಣವನ್ನು ನಾನು ಹೇಗೆ ಎದುರಿಸುತ್ತೇನೆಂದು ನನಗೆ ತಿಳಿದಿಲ್ಲ…ಸೆರೆವಾಸದ ವ್ಯವಸ್ಥೆಯು ನಮ್ಮ ಪ್ರೀತಿಪಾತ್ರರಿಂದ ನಮ್ಮನ್ನು ಹೇಗೆ ಬೇರ್ಪಡಿಸುತ್ತದೆ ಎಂಬುದಕ್ಕೆ ಇದು ಒಂದು ಸೂಚನೆ ಅಥವಾ ಜ್ಞಾಪನೆ ಆಗಿರಬೇಕು. ನನ್ನ ಪ್ರಕರಣವನ್ನು ಹೈಲೈಟ್‍ ಮಾಡಲಾಗಿದೆ. ಆದರೆ ನನಗೆ ಒಂದು ಫೋನ್‍ ಕಾಲ ಕೂಡ ತಲುಪದಂತೆ ಮಾಡಲಾಗಿತ್ತು” ಎಂದು ನರ್ವಾಲ್‍ ಎನ್‍ಡಿಟಿವಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ತಬ್ಲೀಘಿ ಜಮಾತ್‌ ಗುರಿಯಾಗಿಸಿ ಕಾರ್ಯಕ್ರಮ: ಸುವರ್ಣ ನ್ಯೂಸ್‌ ಮತ್ತು ನ್ಯೂಸ್‌‌ 18 ಕನ್ನಡಕ್ಕೆ 1.5 ಲಕ್ಷ ದಂಡ

“ಭಯೋತ್ಪಾದನೆ ಮತ್ತು ಭಿನ್ನಾಭಿಪ್ರಾಯದ ನಡುವಿನ ರೇಖೆಯು ಮಸುಕಾಗಿರುವಂತಹ ಹಂತಕ್ಕೆ ನಾವು ಹೇಗೆ ತಲುಪಿದ್ದೇವೆ ಎಂದು ನಾವು ನಮ್ಮನ್ನು ಕೇಳಿಕೊಳ್ಳಬೇಕು. ಜನರನ್ನು ಕ್ಷುಲ್ಲಕ ಆರೋಪಗಳ ಕಾರಣಕ್ಕೆ ಜೈಲಿಗೆ ಹಾಕಲಾಗುತ್ತಿದೆ. ಜನರು ಪ್ರತಿಭಟಿಸಿದ ಕೂಡಲೆ ಅದು ಭಯೋತ್ಪಾದನೆಯಲ್ಲ” ಎಂದು ನರ್ವಾಲ್ ‍ಹೇಳಿದ್ದಾರೆ.

ನತಾಶಾ ನರ್ವಾಲ್‍ ಮತ್ತು ಇತರ ಇಬ್ಬರು ವಿದ್ಯಾರ್ಥಿ ಹೋರಾಟಗಾರರನ್ನು ಕಳೆದ ವರ್ಷ ಬಂಧಿಸಲಾಗಿತ್ತು.

ದೆಹಲಿ ಹೈಕೋರ್ಟ್‌ ಕಳೆದ ವರ್ಷ ಮೇ ತಿಂಗಳಲ್ಲಿ ಕಠಿಣ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಬಂಧಿಸಲ್ಪಟ್ಟಿದ್ದ ನರ್ವಾಲ್‍, ಕಾಳಿತಾ ಮತ್ತು ಆಸಿಫ್ ಇಕ್ಬಾಲ್ ತನ್ಹಾ ಅವರಿಗೆ ಜಾಮೀನು ನೀಡಿದ ಎರಡು ದಿನಗಳ ನಂತರ ಈ ಮೂವರನ್ನು ತಕ್ಷಣ ಬಿಡುಗಡೆ ಮಾಡುವ ಆದೇಶ ಬಂದಿದೆ.

ಮೂವರು ವಿದ್ಯಾರ್ಥಿ ಹೋರಾಟಗಾರರಿಗೆ ಜಾಮೀನು ನೀಡುವ ದೆಹಲಿ ಹೈಕೋರ್ಟ್‌ ತೀರ್ಪಿನ ವಿರುದ್ಧ ದೆಹಲಿ ಪೊಲೀಸ್ ಮನವಿಯನ್ನು ಸುಪ್ರೀಂಕೋರ್ಟ್‌ ಇಂದು (ಶುಕ್ರವಾರ) ವಿಚಾರಣೆ ನಡೆಸಲಿದೆ.

ಇದನ್ನೂ ಓದಿ: ನಿಯಂತ್ರಿಸಲು ಸಾಧ್ಯವಾಗದ ಎಲ್ಲವನ್ನೂ ಮೋದಿ ಸರ್ಕಾರ ಧ್ವಂಸ ಮಾಡುತ್ತಿದೆ: ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...