Homeಚಳವಳಿ’ಆಳುವವರ ಗುಂಡಿಗೆ ಎದೆ ಕೊಟ್ಟಾದರೂ ಸರಿಯೇ, ದೇಶ ವಿಭಜನೆಯನ್ನು ತಡೆಯೋಣ’: ಅಜಾದ್

’ಆಳುವವರ ಗುಂಡಿಗೆ ಎದೆ ಕೊಟ್ಟಾದರೂ ಸರಿಯೇ, ದೇಶ ವಿಭಜನೆಯನ್ನು ತಡೆಯೋಣ’: ಅಜಾದ್

ವಾಸ್ತವವೆಂದರೆ ದೇಶದ ಬಹುಸಂಖ್ಯಾತ ಜನರು ಈ ಕಾಯ್ದೆಗಳ ವಿರುದ್ಧವಿದ್ದಾರೆ. ಆದರೆ ಮಾಧ್ಯಮಗಳು ಅದನ್ನು ತೋರಿಸುತ್ತಿಲ್ಲ ಎಂದು ಅಜಾದ್‌ ತಿಳಿಸಿದ್ದಾರೆ.

- Advertisement -
- Advertisement -

ಜನವರಿ 16ರಂದು ಗುರುವಾರ ತಿಹಾರ್ ಜೈಲಿನಿಂದ ಬಿಡುಗಡೆಯಾದ ನಂತರ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್‌ರವರು CAA, NRC, NPRಗೆ ಸಂಬಂಧಿಸಿದ ದಾಖಲೆಗಳನ್ನು ತೋರಿಸುವುದಿಲ್ಲ ಎಂದು ಘೋಷಿಸಿದ್ದಾರೆ.

ಕ್ವಿಂಟ್‌ನೊಡನೆ ಮಾತನಾಡಿದ ಅವರು ‘Here by Choice, Not by Chance’ (ನಾವು ಇಲ್ಲಿಗೆ ಬಂದಿರುವುದು ಆಯ್ಕೆಯಿಂದ, ಆಕಸ್ಮಿಕವಾಗಿ ಅಲ್ಲ) ಇದ್ದೇವೆ ಎಂದು ಘೋಷಿಸಿದ್ದಾರೆ.

“ಇದು ನಮ್ಮ ದೇಶ. ನಾವು ಇಲ್ಲಿರುವುದು ನಮ್ಮ ಆಯ್ಕೆಯಿಂದ, ಆಕಸ್ಮಿಕವಾಗಿ ಅಲ್ಲ. ಧರ್ಮದ ಆಧಾರದ ಮೇಲೆ ದೇಶವನ್ನು ವಿಭಜಿಸುವ ಮತ್ತು ದೇಶದ ನಾಗರಿಕರಿಂದ ದಾಖಲೆಗಳನ್ನು ಕೇಳುವ ಪ್ರಕ್ರಿಯೆಯು ಸಂವಿಧಾನದ 14 ಮತ್ತು 15 ನೇ ವಿಧಿಗಳಿಗೆ ವಿರುದ್ಧವಾಗಿದೆ”

– ಚಂದ್ರಶೇಖರ್‌ ಅಜಾದ್

“ದೇಶವನ್ನು ವಿಭಜಿಸುವ ಆಳುವ ಶಕ್ತಿಗಳು ಮುಂದಾದಾಗ ಬಂಧನಕ್ಕೊಳಗಾಗುವುದು ಮಾತ್ರವಲ್ಲದೆ ಅವರ ಗುಂಡಿಗೆ ಎದೆ ಕೊಟ್ಟಾದರೂ ಸರಿಯೇ ದೇಶವನ್ನು ವಿಭಜಿಸದಂತೆ ತಡೆಯುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ” ಎಂದು ಅವರು ಹೇಳಿದರು.

ಅಲ್ಲದೆ, ‘ಹಿಂದೂ ರಾಷ್ಟ್ರ’ ರಚಿಸುವ ಕಾರ್ಯಸೂಚಿಯು ವಾಸ್ತವವಾಗಿ ಆರ್‌ಎಸ್‌ಎಸ್‌ದ್ದಾಗಿದೆಯೇ ಹೊರತು ಸರ್ಕಾರದದ್ದಲ್ಲ ಎಂದು ಅವರು ತಿಳಿಸಿದರು.

ಸರ್ಕಾರವು ತನ್ನ ನಿರ್ಧಾರವನ್ನು ಸಾರ್ವಜನಿಕರಿಂದ ಪರಿಶೀಲಿಸಬಹುದು ಎಂದ ಅವರು, ವಾಸ್ತವವೆಂದರೆ ದೇಶದ ಬಹುಸಂಖ್ಯಾತ ಜನರು ಈ ಕಾಯ್ದೆಗಳ ವಿರುದ್ಧವಿದ್ದಾರೆ. ಆದರೆ ಮಾಧ್ಯಮಗಳು ಅದನ್ನು ತೋರಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

26 ದಿನಗಳ ಕಾಲ ನ್ಯಾಯಾಂಗ ಬಂಧನದಿಂದ ಬಿಡುಗಡೆಯಾಗಿರುವ ಆಜಾದ್ ಇಂದು ಮಧ್ಯಾಹ್ನ 1 ಗಂಟೆಗೆ ಜಮಾ ಮಸೀದಿಗೆ ಭೇಟಿ ನೀಡಲಿದ್ದು, ನಂತರ ರವಿದಾಸ್ ದೇವಸ್ಥಾನ, ಗುರುದ್ವಾರ ಮತ್ತು ಚರ್ಚ್‌ಗೆ ಭೇಟಿ ನೀಡಲಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...