Homeಮುಖಪುಟಐಕ್ಯ ಹೋರಾಟ: 3ನೇ ದಿನದ ಪರ್ಯಾಯ ಅಧಿವೇಶನದ ನಿರ್ಣಯಗಳ ವಿವರ ಇಲ್ಲಿದೆ

ಐಕ್ಯ ಹೋರಾಟ: 3ನೇ ದಿನದ ಪರ್ಯಾಯ ಅಧಿವೇಶನದ ನಿರ್ಣಯಗಳ ವಿವರ ಇಲ್ಲಿದೆ

ಇಂದಿನ ಪರ್ಯಾಯ ಜನತಾ ಅಧಿವೇಶನದ ಸಭಾಪತಿಗಳಾದ ವೀರ ಸಂಗಯ್ಯನವರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಂದಿರುವ ನಾಲ್ಕು ಮಸೂದೆಗಳನ್ನು ಮತಕ್ಕೆ ಹಾಕಿದಾಗ ಸರ್ವಾನುಮತದಿಂದ ಅವು ತಿರಸ್ಕೃತವಾದವು. ಸಭೆಯ ಪರವಾಗಿ ಬಿ.ಆರ್.ಪಾಟಿಲ್ ರವರು ಮಸೂದೆಗಳ ಪ್ರತಿಗಳನ್ನು ಹರಿಯುವುದರ ಮೂಲಕ ಸಾಂಕೇತಿಕ ಪ್ರತಿಭಟನೆಯನ್ನು ಸೂಚಿಸಿದರು.

- Advertisement -
- Advertisement -

ರೈತ ಮತ್ತು ಕಾರ್ಮಿಕ ವಿರೋಧಿ ಮಸೂದೆಗಳು ಮತ್ತು ಸುಗೀವಾಜ್ಞೆಗಳನ್ನು ತಿರಸ್ಕರಿಸಿ ಮತ್ತು ವಿಧಾನಸಭಾ ಅಧಿವೇಶನಕ್ಕೆ ಪರ್ಯಾಯವಾಗಿ, ಐಕ್ಯ ಹೋರಾಟ ಸಮಿತಿಯಿಂದ ನಡೆಸಿದ ಜನತಾ ಅಧಿವೇಶನದ ಮೂರನೇ ದಿನದ ನಿರ್ಣಯಗಳ ಪೂರ್ಣಪಾಠ ಇಲ್ಲಿದೆ.

ದೇಶದಲ್ಲಿ ರೈತ ವಿರೋಧಿ ನೀತಿಗಳನ್ನು ಯಾವುದೇ ಚರ್ಚೆ, ಮತಯಾಚನೆಯೂ ಮಾಡದೆ ಸರ್ವಾಧಿಕಾರಿ ರೀತಿಯಲ್ಲಿ ಅಧಿವೇಶನದಲ್ಲಿ ಜಾರಿ ಮಾಡಲಾಗಿದೆ. ಇನ್ನು ಕರ್ನಾಟಕ ಸರ್ಕಾರವೂ ಕೂಡ ’ಉಳುವವರೇ ಭೂಮಿಯ ಒಡೆಯರು’ ಎಂಬ ಭೂ ಸುಧಾರಣೆಗೆ ತಿದ್ದುಪಡಿ ಮಾಡಿ ಕಾರ್ಪೊರೇಟ್ ಕುಳಗಳಿಗೆ, ಹಣವಂತರಿಗೆ ಮಾತ್ರ ಭೂಮಿ ಎಂಬಂತಹ ಸುಗ್ರೀವಾಜ್ಞೆ ಹೊರಡಿಸಿ, ಅದರ ಜಾರಿಗೆ ಮುಂದಾಗಿದೆ.

ಈ ಸಂದರ್ಭದಲ್ಲಿ ಕರ್ನಾಟಕದ ರೈತ, ಕಾರ್ಮಿಕ, ದಲಿತ ಹಾಗೂ ಕನ್ನಡಪರ, ಪ್ರಗತಿಪರ ದೇಶಪ್ರೇಮಿ ಎಲ್ಲಾ ಸಂಘಟನೆಗಳು ಒಟ್ಟುಗೂಡಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಈ ನಡೆಯ ವಿರುದ್ಧ, ಕರ್ನಾಟಕದ ವಿಧಾನಸಭಾ ಅಧಿವೇಶನ ಆರಂಭವಾದ ದಿನದಿಂದ ಅಹೋರಾತ್ರಿ ಹೋರಾಟ ಮತ್ತು ಪರ್ಯಾಯ ಜನತಾ ಅಧಿವೇಶನವನ್ನು ನಡೆಸುತ್ತಿವೆ.

ಇದನ್ನೂ ಓದಿ: ರೈತವಿರೋಧಿ ಕಾಯ್ದೆಗಳನ್ನು ಹಿಂಪಡೆಯದಿದ್ದರೆ, ಯಡಿಯೂರಪ್ಪನವರ ಕುರ್ಚಿ ಉಳಿಯುವುದಿಲ್ಲ: ಬಡಗಲಪುರ ನಾಗೇಂದ್ರ

ಪರ್ಯಾಯ ಅಧಿವೇಶನದ ಮೂರನೇ ದಿನವಾದ ಇಂದು, ರೈತ, ಕಾರ್ಮಿಕ, ಜನವಿರೋಧಿ ಸುಗ್ರೀವಾಜ್ಞೆಗಳು ಮತ್ತು ಮಸೂದೆಗಳ ಕುರಿತು ಅರಿವು ಮೂಡಿಸುವ ವಿಚಾರಗೋಷ್ಟಿ ನಡೆಯಿತು.

ವಿ. ಗಾಯತ್ರಿಯವರು ಭೂಸುಧಾರಣೆ ಕಾಯ್ದೆಗೆ ಆಗಿರುವ ತಿದ್ದುಪಡಿಗಳ ದುಷ್ಪರಿಣಾಮಗಳ ಬಗ್ಗೆ ಮಾತನಾಡಿ, “ಮುಖ್ಯವಾಗಿ, ಜಲಾಶಯಗಳಿಗೆ, ಸರ್ಕಾರಿ ಯೋಜನೆಗಳಿಗೆ, ಆರೋಗ್ಯ ಮುಂತಾದ ಕಾರಣಗಳಿಗೆ ಭೂಮಿ ಕಳೆದುಕೊಂಡಿರುವ ರೈತರ ಪಾಡು ಶೋಚನೀಯವಾಗಿದ್ದು ಅವರು ಮತ್ತೆಂದೂ ಭೂಮಿಯನ್ನು ಹೊಂದಲಾರರು. ದಲಿತರು ಜಮೀನನ್ನು ಮಾರಬಾರದು. ಒಂದು ವೇಳೆ ಮಾರಿದರೂ ಅವುಗಳನ್ನು ಅವರಿಗೇ ಮರಳಿಸಬೇಕೆಂಬ ಕಾನೂನು ಇದೆ. ಆದರೆ, ಅದನ್ನು ಮಾಡದೆ ಅವರನ್ನು ಪುಸಲಾಯಿಸಿ ಅವರು ಜಮೀನು ಮಾರಿಕೊಳ್ಳುವಂತೆ ಮಾಡಲಾಗುತ್ತಿದೆ. ಅಲ್ಲದೆ, ಖರೀದಿಸಿದ ಭೂಮಿಯನ್ನು ಬಂಡವಾಳ ಹೂಡುವವರು ಹಲವಾರು ವರ್ಷಗಳು ಖಾಲಿ ಬಿಟ್ಟು, ಕಪ್ಪು ಹಣವನ್ನು ಬಿಳಿಮಾಡಿಕೊಳ್ಳುವ ಹುನ್ನಾರವೂ ನಡೆಯುತ್ತಿದೆ. ಎಪಿಎಂಸಿ ಕಾಯ್ದೆಯಲ್ಲಿರುವ ಲೋಪಗಳನ್ನು ಸರಿಪಡಿಸಲು ರೈತಪರವಾದ ತಿದ್ದುಪಡಿಗಳ ಅವಶ್ಯಕತೆಯಿದೆ. ಆದರೆ, ಈಗಿನ ತಿದ್ದುಪಡಿಗಳು ರೈತವಿರೋಧಿಯಾಗಿವೆ” ಎಂದು ಹೇಳಿದರು.

ಇದನ್ನೂ ಓದಿ: ರೈತವಿರೋಧಿ ಸುಗ್ರಿವಾಜ್ಞೆಗಳು ಬೇಡ: ಕೇಂದ್ರದ ವಿರುದ್ಧ ತಿರುಗಿಬಿದ್ದ ರೈತರು

ರೈತ ಸಂಘದ ರಮೇಶ್ ಹೂಗಾರ್ ಮಾತನಾಡಿ, “ವಿದ್ಯುಚ್ಛಕ್ತಿಯ ಖಾಸಗೀಕರಣದಿಂದ ರೈತರ ಪಂಪ್ ಸೆಟ್ಟುಗಳಿಗೆ ಉಚಿತ ವಿದ್ಯುಚ್ಛಕ್ತಿಯನ್ನು ನಿಲ್ಲಿಸಿ ಅವರು ಖಾಸಗಿ ಕಂಪನಿಗಳಿಗೆ ದುಬಾರಿ ಬೆಲೆ ತೆತ್ತು ಕಂಪನಿಗಳ ಕಪಿಮುಷ್ಟಿಯಲ್ಲಿ ಸಿಲುಕಿಹಾಕಿಕೊಳ್ಳಬೇಕಾಗುತ್ತದೆ” ಎಂದು ಹೇಳಿದರು.

ಕರ್ನಾಟಕ ಪ್ರಾಂತ್ಯ ರೈತ ಸಂಘದ ಟಿ. ಯಶವಂತ್, “ಎಪಿಎಂಸಿ ಕಾಯ್ದೆಯನ್ನು ದುರ್ಬಲಗೊಳಿಸಿ, ಕೊನೆಗೆ ಎಪಿಎಂಸಿಗಳನ್ನು ಮುಚ್ಚುವ ಹುನ್ನಾರ ಇದು. ಎಪಿಎಂಸಿಯ ಚುನಾಯಿತ ಪ್ರತಿನಿಧಿಗಳ ಅಧಿಕಾರ ಎಪಿಎಂಸಿಯ ಆಚೆ ಇಲ್ಲದಿರುವುದರಿಂದ ಅವರು ರೈತರ ಸಮಸ್ಯೆಗಳಿಗೆ ಸ್ಪಂದಿಸಲಾರರು. ಅಲ್ಲದೆ, ರೈತರು ನ್ಯಾಯಾಲಯಕ್ಕೆ ಮೊರೆಹೋಗಲಾರರು. ಅವರು ನ್ಯಾಯಾಲಯಗಳಿಗೆ ಹೋದರೂ ನ್ಯಾಯಾಲಯಗಳು ಆ ವ್ಯಾಜ್ಯಗಳನ್ನು ಸ್ವೀಕರಿಸುವಂತಿಲ್ಲ ಎಂಬ ಅಪಾಯಕಾರಿ ಅಂಶ ಕಾನೂನಿನಲ್ಲಿ ತರಲಾಗಿಲ್ಲ. ಇದು ಎಲ್ಲರಿಗೂ ಎಚ್ಚರಿಕೆಯ ಸಂದೇಶ. ವರ್ತಕರು ನೀಡಬೇಕಾದ ಸೆಸ್‌ ಅನ್ನು ಕಡಿಮೆ ಮಾಡಿ ಎಪಿಎಂಸಿಗಳು ಆದಾಯವಿಲ್ಲದೆ ಮುಚ್ಚುವಂತೆ ಮಾಡಿ, ಕೊನೆಗೆ ಖಾಸಗಿ ಕಂಪನಿಗಳ ಪಾರಮ್ಯಕ್ಕೆ ದಾರಿಕೊಡಲಾಗುತ್ತಿದೆ” ಎಂದು ವಿವರಿಸಿದರು.

ಇದನ್ನೂ ಓದಿ: ಮೂರು ಬೇಡಿಕೆಗಳ ಈಡೇರಿಕೆಗೆ ಪಟ್ಟು: ಪ್ರತಿಪಕ್ಷಗಳಿಂದ ರಾಜ್ಯಸಭಾ ಅಧಿವೇಶನ ಬಾಯ್ಕಟ್

ಕಾರ್ಮಿಕರ ನಾಯಕರಾದ ಕಾಳಪ್ಪನವರು, “ಈ ಕಾನೂನುಗಳನ್ನು ಕಾರ್ಮಿಕ ವಿರೋಧಿ ಧೋರಣೆಯ ಭಾಗವಾಗಿ ನೋಡಬೇಕು. ಅನೇಕ ಕಾರ್ಮಿಕಪರ ಕಾನೂನುಗಳನ್ನು ದುರ್ಬಲಗೊಳಿಸಿ ಕಾರ್ಮಿಕರ ಶೋಷಣೆಗೆ ದಾರಿಮಾಡಿಕೊಡಲಾಗಿದೆ” ಎಂದು ಹೇಳಿದರು.

ಮಾಜಿ ಶಾಸಕರಾದ ಬಿ.ಆರ್. ಪಾಟಿಲ್, “ರಾಜಕಾರಣದ ಅವನತಿಯಿಂದಾಗಿ ಈ ರೀತಿಯ ಜನವಿರೋಧಿ ಕಾಯ್ದೆಗಳು ಬರುತ್ತಿವೆ. ದುಷ್ಟ ರಾಜಕಾರಣಿ, ವರ್ತಕ ಮತ್ತು ಅಧಿಕಾರಿಗಳ ಅಪವಿತ್ರ ಮೈತ್ರಿಯಿಂದ ನೈಸರ್ಗಿಕ ಸಂಪನ್ಮೂಲಗಳು ಸಂವಿಧಾನದ ಆಶಯಕ್ಕೆ ವಿರುದ್ಧವಾಗಿ ಕೆಲವರ ಪಾಲಾಗುತ್ತಿವೆ” ಎಂದು ವಿಷಾದ ವ್ಯಕ್ತಪಡಿಸಿದರು.

ಇಂದಿನ ಪರ್ಯಾಯ ಜನತಾ ಅಧಿವೇಶನದ ಸಭಾಪತಿಗಳಾದ ವೀರ ಸಂಗಯ್ಯನವರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಂದಿರುವ ನಾಲ್ಕು ಮಸೂದೆಗಳನ್ನು ಮತಕ್ಕೆ ಹಾಕಿದಾಗ ಸರ್ವಾನುಮತದಿಂದ ಅವು ತಿರಸ್ಕೃತವಾದವು. ಸಭೆಯ ಪರವಾಗಿ ಬಿ.ಆರ್.ಪಾಟಿಲ್ ರವರು ಮಸೂದೆಗಳ ಪ್ರತಿಗಳನ್ನು ಹರಿಯುವುದರ ಮೂಲಕ ಸಾಂಕೇತಿಕ ಪ್ರತಿಭಟನೆಯನ್ನು ಸೂಚಿಸಿದರು.


ಇದನ್ನೂ ಓದಿ: ಸುಗ್ರೀವಾಜ್ಞೆ ಮೂಲಕ APMC ಕಾಯ್ದೆಗೆ ತಿದ್ದುಪಡಿ ತರಲು ರಾಜ್ಯಗಳಿಗೆ ಪತ್ರ ಬರೆದಿದ್ದ ಕೇಂದ್ರ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...