Homeಮುಖಪುಟಗೃಹಜ್ಯೋತಿ, ಗೃಹ ಲಕ್ಷ್ಮಿ ಯೋಜನೆಗೆ ಚಾಲನೆ ಕುರಿತು ಸಿಎಂ ಸಿದ್ದರಾಮಯ್ಯ ನೀಡಿದ ಸಂಪೂರ್ಣ ಮಾಹಿತಿ ಇಲ್ಲಿದೆ..

ಗೃಹಜ್ಯೋತಿ, ಗೃಹ ಲಕ್ಷ್ಮಿ ಯೋಜನೆಗೆ ಚಾಲನೆ ಕುರಿತು ಸಿಎಂ ಸಿದ್ದರಾಮಯ್ಯ ನೀಡಿದ ಸಂಪೂರ್ಣ ಮಾಹಿತಿ ಇಲ್ಲಿದೆ..

- Advertisement -
- Advertisement -

ರಾಜ್ಯ ಸರ್ಕಾರ ಘೋಷಿಸಿರುವ ಗ್ಯಾರಂಟಿ ಯೋಜನೆಗಳ ಬಗ್ಗೆ ಸಾಕಷ್ಟು ಜನರಿಗೆ ಹಲವು ಗೊಂದಲಗಳು ಹುಟ್ಟಿಕೊಂಡಿದ್ದವು. ಆದರೆ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕೃತ ಸಿಎಂ ಆಫ್​ ಕರ್ನಾಟಕ ಟ್ವಿಟರ್​ ಖಾತೆಯಲ್ಲಿ ಸರಣಿ ಟ್ವೀಟ್ ಮೂಲಕ ಸಂಪೂರ್ಣ ಮಾಹಿತಿ ಹಂಚಿಕೊಂಡಿದ್ದಾರೆ.

”ರಾಜ್ಯ ಸರ್ಕಾರ ಘೋಷಿಸಿರುವ ಗ್ಯಾರಂಟಿ ಯೋಜನೆಗಳಲ್ಲಿ ಗೃಹಜ್ಯೋತಿ ಯೋಜನೆ ಆಗಸ್ಟ್‌ 1 ರಂದು ಹಾಗೂ ಗೃಹ ಲಕ್ಷ್ಮಿ ಯೋಜನೆಗೆ ಆಗಸ್ಟ್‌ 17- 18 ರಂದು ಚಾಲನೆ ನೀಡಲು ತಯಾರಿ ನಡೆಸಲಾಗುತ್ತಿದೆ” ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾಗಿ ಟ್ವೀಟ್​ನಲ್ಲಿ ಉಲ್ಲೇಖಿಸಲಾಗಿದೆ.

”ಎಲ್ಲ ಗ್ಯಾರಂಟಿ ಯೋಜನೆಗಳಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಅತ್ಯಂತ ಸರಳಗೊಳಿಸಬೇಕು. ಅನಗತ್ಯ ಮಾಹಿತಿ, ದಾಖಲೆಗಳನ್ನು ಕೇಳಬಾರದು ಎಂದು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಜೊತೆಗೆ ಅರ್ಜಿಗಳನ್ನು ತಿರಸ್ಕರಿಸಿದಲ್ಲಿ, ಅದು ಸಕಾರಣವಾಗಿರಬೇಕು. ಕುಂಟು ನೆಪ ನೀಡಿ ತಿರಸ್ಕರಿಸುವಂತಿಲ್ಲ ಎಂದು ಎಚ್ಚರಿಕೆಯನ್ನು ನೀಡಿದ್ದೇನೆ” ಎಂದು ಹೇಳಲಾಗಿದೆ.

”ಎಲ್ಲ ಗ್ಯಾರಂಟಿ ಯೋಜನೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಅರ್ಜಿಗಳು ಸಲ್ಲಿಕೆಯಾಗುವ ಕಾರಣ, ಅಪಾರ ಪ್ರಮಾಣದ ದತ್ತಾಂಶ ಸಲ್ಲಿಕೆಗೆ ಅನುಗುಣವಾಗಿ ಸೇವಾ ಸಿಂಧು ಪೋರ್ಟಲ್‌ ನ ಸಾಮರ್ಥ್ಯ ವೃದ್ಧಿಸುವಂತೆ ಇ-ಆಡಳಿತ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದೇನೆ” ಎಂದು ಸಿದ್ದರಾಮಯ್ಯ ಹೇಳಿದ್ದಾಗಿ ಉಲ್ಲೇಖಿಸಲಾಗಿದೆ.

”ಗೃಹ ಜ್ಯೋತಿ ಯೋಜನೆಗೆ ಆಗಸ್ಟ್‌ 1 ರಂದು ಕಲಬುರಗಿಯಲ್ಲಿ ಚಾಲನೆ ನೀಡುವ ಕುರಿತು ಯೋಚಿಸುತ್ತಿದ್ದೇವೆ. ಈ ಯೋಜನೆಯ ಮಾರ್ಗಸೂಚಿಗಳ ಕುರಿತು ಇರುವ ಎಲ್ಲ ಗೊಂದಲಗಳನ್ನು ನಿವಾರಿಸಿ, ನಾಗರಿಕರಿಗೆ ಅರಿವು ಮೂಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ: ಹೆಚ್ಚಿನ ಕಂಡಿಷನ್‌ಗಳಿಲ್ಲದೆ ಐದು ಗ್ಯಾರಂಟಿಗಳನ್ನು ಘೋಷಿಸಿದ ಸಿದ್ದರಾಮಯ್ಯ

”ಗೃಹ ಜ್ಯೋತಿ ಯೋಜನೆಗೆ ಸೇವಾ ಸಿಂಧು ಪೋರ್ಟಲ್‌ ಮೂಲಕ ನೋಂದಾಯಿಸಲು ಅವಕಾಶವಿದೆ. ಇದಲ್ಲದೆ, ಎಸ್ಕಾಂಗಳ ಎಲ್ಲ ಕಚೇರಿಗಳಲ್ಲಿ ಹೆಲ್ಪ್‌ ಡೆಸ್ಕ್‌ ಸ್ಥಾಪಿಸಲಾಗುವುದು. ಜೂನ್‌ 15 ರಿಂದ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಲಿದೆ. ಬೆಂಗಳೂರು ಒನ್‌, ಕರ್ನಾಟಕ ಒನ್‌, ಗ್ರಾಮ ಒನ್‌ ಕೇಂದ್ರಗಳ ಮೂಲಕ ಹಾಗೂ ಮನೆಯಲ್ಲಿಯೇ ಕಂಪ್ಯೂಟರ್‌ ಮೂಲಕ ಅಥವಾ ಮೊಬೈಲ್‌ ಆಪ್‌ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುವುದು” ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

”ಹೊಸ ಮನೆ, ಹೊಸ ಬಾಡಿಗೆದಾರರಿಗೆ ರಾಜ್ಯದ ವಿದ್ಯುತ್‌ ಬಳಕೆಯ ಸರಾಸರಿ ಆಧಾರದಲ್ಲಿ ಉಚಿತ ವಿದ್ಯುತ್‌ ಸೌಲಭ್ಯ ನೀಡಲಾಗುವುದು. ಒಂದು ವರ್ಷದ ಸರಾಸರಿ ಲಭ್ಯವಾದ ನಂತರ, ಈ ದತ್ತಾಂಶವನ್ನು ಆಧರಿಸಿ, ಉಚಿತ ವಿದ್ಯುತ್‌ ಸೌಲಭ್ಯ ನೀಡಲಾಗುವುದು” ಎಂದು ತಿಳಿಸಲಾಗಿದೆ.

”ಹಳೆ ವಿದ್ಯುತ್‌ ಬಿಲ್‌ ಬಾಕಿ ಪಾವತಿಗೆ ಸೆಪ್ಟೆಂಬರ್‌ 30 ರ ವರೆಗೆ ಅವಕಾಶ ಕಲ್ಪಿಸಲಾಗಿದೆ. ಗೃಹಜ್ಯೋತಿ ಯೋಜನೆಗೆ ಆಧಾರ್‌, ಆರ್. ಆರ್. ಸಂಖ್ಯೆ, ಬಾಡಿಗೆದಾರರು ಕರಾರು ಪತ್ರ ಹಾಗೂ ಅದೇ ವಿಳಾಸದ ಮತದಾರರ ಗುರುತು ಚೀಟಿ ಮಾಹಿತಿ ಸಲ್ಲಿಸಿ, ಸೌಲಭ್ಯ ಪಡೆಯಬಹುದಾಗಿದೆ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

”ಗೃಹ ಲಕ್ಷ್ಮಿ ಯೋಜನೆಯನ್ನು ಆಗಸ್ಟ್‌ 17 ಅಥವಾ 18 ರಂದು ಬೆಳಗಾವಿಯಲ್ಲಿ ಚಾಲನೆ ನೀಡುವ ಕುರಿತು ಚರ್ಚಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಜೂನ್‌ 15 ರಿಂದ ಪ್ರಾರಂಭವಾಗಲಿದೆ. ಈ ಯೋಜನೆಗೆ ಆನ್‌ಲೈನ್‌ ನಲ್ಲಿ ಸೇವಾ ಸಿಂಧು ಪೋರ್ಟಲ್‌ ಮೂಲಕ ಅರ್ಜಿ ಸಲ್ಲಿಸಬಹುದು. ಅಂತೆಯೇ ನಾಡಕಚೇರಿಗಳಲ್ಲಿ ಖುದ್ದಾಗಿ ಅರ್ಜಿ ಸಲ್ಲಿಸಬಹುದು. ಇದಕ್ಕಾಗಿ ಪ್ರತ್ಯೇಕ ಕೌಂಟರುಗಳನ್ನು ಸ್ಥಾಪಿಸಲು ತೀರ್ಮಾನಿಸಲಾಗಿದೆ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

”ಅರ್ಜಿದಾರರು ರೇಷನ್‌ ಕಾರ್ಡ್‌ ಸಂಖ್ಯೆ, ಯಜಮಾನಿಯ ಹಾಗೂ ಪತಿಯ ಆಧಾರ್‌ ಕಾರ್ಡ್‌ ಸಂಖ್ಯೆ, ಆಧಾರ್‌ ಸಂಯೋಜನೆಯಾಗಿರುವ ಬ್ಯಾಂಕ್‌ ಖಾತೆಯ ವಿವರವನ್ನು ಒದಗಿಸಬೇಕು. ಈ ದಾಖಲೆಗಳ ಪ್ರತಿಗಳನ್ನು ಆಫ್‌ಲೈನ್‌ ಅರ್ಜಿಗಳೊಂದಿಗೂ ಸಲ್ಲಿಸಬಹುದು” ಎಂದು ಸಿಎಂ ಆಫ್​ ಕರ್ನಾಟಕ ಟ್ವೀಟ್ ಮಾಡಿದೆ.

”ಅರ್ಹ ಫಲಾನುಭವಿಗಳಿಗೆ ಡಿಬಿಟಿ ಮೂಲಕ ನೇರವಾಗಿ ಬ್ಯಾಂಕ್‌ ಖಾತೆಗೆ ನೆರವಿನ ಮೊತ್ತ ಜಮೆ ಆಗಲಿದೆ. ಗೃಹಲಕ್ಷ್ಮಿ ಯೋಜನೆಯು ರಾಜ್ಯದ ಶೇ. 85 ಕ್ಕೂ ಹೆಚ್ಚು ಕುಟುಂಬಗಳನ್ನು ತಲುಪಲಿದೆ ಎಂದು ಅಂದಾಜಿಸಲಾಗಿದೆ. ತೆರಿಗೆ ಪಾವತಿದಾರರಲ್ಲದ ಎಪಿಎಲ್‌ ಕಾರ್ಡುದಾರರಿಗೂ ಈ ಸೌಲಭ್ಯ ದೊರೆಯಲಿದೆ” ಎಂದು ಟ್ವೀಟ್ ಮಾಡಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...