Homeಮುಖಪುಟಗುಜರಾತ್ ಬಂದರಿನಲ್ಲಿ 400 ಕೋಟಿ ರೂ ಮೌಲ್ಯದ ಹೆರಾಯಿನ್ ವಶ

ಗುಜರಾತ್ ಬಂದರಿನಲ್ಲಿ 400 ಕೋಟಿ ರೂ ಮೌಲ್ಯದ ಹೆರಾಯಿನ್ ವಶ

- Advertisement -
- Advertisement -

ಸುಮಾರು 400 ಕೋಟಿ ರೂ ಮೌಲ್ಯದ 77 ಕೆಜಿ ಹೆರಾಯಿನ್ ಸಾಗಿಸುತ್ತಿದ್ದ ಪಾಕಿಸ್ತಾನದ ‘ಅಲ್ ಹುಸೇನಿ’ ಎಂಬ ಮೀನುಗಾರಿಕಾ ದೋಣಿಯನ್ನು ಗುಜರಾತ್ ಕರಾವಳಿಯ ಭಾರತೀಯ ಜಲಪ್ರದೇಶದಲ್ಲಿ ಸೆರೆಹಿಡಿಯಲಾಗಿದೆ ಎಂದು ರಕ್ಷಣಾ ಇಲಾಖೆಯ ಸಾರ್ವಜನಿಕ ಸಂಪರ್ಕ ಕಚೇರಿ (PRO) ಸೋಮವಾರ ಮಾಹಿತಿ ನೀಡಿದೆ.

ಭಾರತೀಯ ಕೋಸ್ಟ್ ಗಾರ್ಡ್ (ICG) ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ನೊಂದಿಗೆ ಜಂಟಿ ಕಾರ್ಯಾಚರಣೆಯನ್ನು ನಡೆಸಿ ದೋಣಿಯಲ್ಲಿದ್ದ ಆರು ಜನರನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದ್ದಾರೆ

“ಭಾರತೀಯ ಕೋಸ್ಟ್ ಗಾರ್ಡ್, ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಜಂಟಿ ಕಾರ್ಯಾಚರಣೆಯಲ್ಲಿ ಸುಮಾರು 400 ಕೋಟಿ ರೂ ಮೌಲ್ಯದ 77 ಕೆಜಿ ಹೆರಾಯಿನ್ ಹೊತ್ತೊಯ್ಯುತ್ತಿದ್ದ ಪಾಕಿಸ್ತಾನದ ಮೀನುಗಾರಿಕಾ ದೋಣಿ ‘ಅಲ್ ಹುಸೇನಿ’ ಮತ್ತು 6 ಸಿಬ್ಬಂದಿಯನ್ನು ಭಾರತೀಯ ಜಲಪ್ರದೇಶದಲ್ಲಿ ವಶಪಡಿಸಿಕೊಂಡಿದ್ದಾರೆ” ಎಂದು PRO ಗುಜರಾತ್ ಡಿಫೆನ್ಸ್ ಟ್ವೀಟ್ ಮಾಡಿದೆ.

ದೋಣಿಯನ್ನು ಜಖುಗೆ ತಂದಿದ್ದು ವಿಚಾರಣೆ ನಡೆಯುತ್ತಿದೆ ಎನ್ನಲಾಗಿದೆ.

ಇತ್ತೀಚೆಗೆ ತಾನೇ ಅದಾನಿ ಮಾಲೀಕತ್ವದಲ್ಲಿರುವ ಗುಜರಾತ್‌ನ ಮುಂದ್ರಾ ಬಂದರಿನಲ್ಲಿ ಸುಮಾರು ಮೂರು ಟನ್‌ಗಳ 20 ಸಾವಿರ ಕೋಟಿ ರೂಪಾಯಿ ಮೌಲ್ಯಗಳ ಹೆರಾಯಿನ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಬಂದರಿನ ಅಧಿಕಾರಿಗಳು ಹೇಳಿದ್ದರು.

ಈ ವಿಚಾರಕ್ಕೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಪ್ರಧಾನಿ ಮೋದಿ ಮತ್ತು ಒಕ್ಕೂಟ ಸರರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದೆ. “ಎರಡು ಕಂಟೈನರ್‌ಗಳಲ್ಲಿ 21 ಸಾವಿರ ಕೋಟಿ ಮೌಲ್ಯದ ಹೆರಾಯಿನ್‌ ಭಾರತಕ್ಕೆ ತರುವಲ್ಲಿ ಮೋದಿ ಮಿತ್ರ ಅದಾನಿಯ ಪಾತ್ರದ ಬಗ್ಗೆ ತನಿಖೆ ಏಕಿಲ್ಲ?” ಎಂದು ಪ್ರಶ್ನಿಸಿತ್ತು.


ಇದನ್ನೂ ಓದಿ: ಗುಜರಾತ್‌ನಲ್ಲಿ ಹೆರಾಯಿನ್ ವಶ: ಮೋದಿ ಮಿತ್ರ ಅದಾನಿಯ ಪಾತ್ರದ ಬಗ್ಗೆ ತನಿಖೆ ಏಕಿಲ್ಲ?- ಕಾಂಗ್ರೆಸ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...