Homeಅಂತರಾಷ್ಟ್ರೀಯಇಸ್ರೇಲ್-ಇರಾನ್ ಕಾಳಗಕ್ಕೆ ಹಿಝ್ಬುಲ್ಲಾ ಎಂಟ್ರಿ : ಐಡಿಎಫ್‌ ದಾಳಿಗೆ ಬೈರುತ್‌ನಲ್ಲಿ 10 ಸಾವು

ಇಸ್ರೇಲ್-ಇರಾನ್ ಕಾಳಗಕ್ಕೆ ಹಿಝ್ಬುಲ್ಲಾ ಎಂಟ್ರಿ : ಐಡಿಎಫ್‌ ದಾಳಿಗೆ ಬೈರುತ್‌ನಲ್ಲಿ 10 ಸಾವು

- Advertisement -
- Advertisement -

ಅಮೆರಿಕ, ಇಸ್ರೇಲ್, ಇರಾನ್ ಮತ್ತು ಗಲ್ಫ್ ರಾಷ್ಟ್ರಗಳ ನಡುವಿನ ಸಂಘರ್ಷಕ್ಕೆ ಈಗ ಹಿಝ್ಬುಲ್ಲಾ ಎಂಟ್ರಿಯಾಗಿದೆ. ಇಸ್ರೇಲ್ ಮತ್ತು ಲೆಬನಾನ್‌ನ ಹಿಝ್ಬುಲ್ಲಾ ನಡುವಿನ ಕಾಳಗ ಸೋಮವಾರ (ಮಾ.2) ತೀವ್ರಗೊಂಡಿದೆ.

ಇಸ್ರೇಲ್ ಪಡೆಗಳು ಹಿಝ್ಬುಲ್ಲಾವನ್ನು ಗುರಿಯಾಗಿಸಿಕೊಂಡು ಲೆಬನಾನ್ ರಾಜಧಾನಿ ಬೈರುತ್ ಮೇಲೆ ಭೀಕರ ವೈಮಾನಿಕ ದಾಳಿಗಳನ್ನು ನಡೆಸಿವೆ ಎಂದು ವರದಿಯಾಗಿದೆ.

ಸುಮಾರು ಒಂದು ವರ್ಷದ ಶಾಂತಿಯ ನಂತರ, ಹಿಝ್ಬುಲ್ಲಾ ಗುಂಪು ಸೋಮವಾರ ಬೆಳಿಗ್ಗೆ ಇಸ್ರೇಲ್ ಮೇಲೆ ದಾಳಿ ನಡೆಸುವ ಮೂಲಕ ಯುದ್ಧ ರಂಗಕ್ಕೆ ಮತ್ತೆ ಮರಳಿದೆ. ಹಿಝ್ಬುಲ್ಲಾ ಇಸ್ರೇಲ್‌ನ ಹೈಫಾ ಸಮೀಪವಿರುವ ಕ್ಷಿಪಣಿ ರಕ್ಷಣಾ ಕೇಂದ್ರವನ್ನು ಗುರಿಯಾಗಿಸಿಕೊಂಡು ಡ್ರೋನ್ ಮತ್ತು ಕ್ಷಿಪಣಿ ದಾಳಿ ನಡೆಸಿದೆ.

ಅಮೆರಿಕ-ಇಸ್ರೇಲ್ ಜಂಟಿ ವೈಮಾನಿಕ ದಾಳಿ ನಡೆಸಿ ಇರಾನ್‌ ಪರಮೋಚ್ಚ ನಾಯಕ ಅಯಾತುಲ್ಲಾ ಅಲೀ ಖಮೇನಿ ಅವರನ್ನು ಹತ್ಯೆ ಮಾಡಿರುವುದಕ್ಕೆ ಪ್ರತೀಕಾರವಾಗಿ ಇಸ್ರೇಲ್ ಮೇಲೆ ದಾಳಿ ಮಾಡಿದ್ದೇವೆ ಎಂದು ಹಿಝ್ಬುಲ್ಲಾ ಹೇಳಿಕೊಂಡಿದೆ.

ಹಿಜ್ಬುಲ್ಲಾದ ದಾಳಿಗೆ ಪ್ರತಿಯಾಗಿ ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್) ಬೈರುತ್ ಮೇಲೆ ಭಾರೀ ದಾಳಿ ನಡೆಸಿವೆ.ಬೈರುತ್‌ನ ದಕ್ಷಿಣ ಉಪನಗರವಾದ ದಹಿಯೆಹ್ ಪ್ರದೇಶವನ್ನು ಇಸ್ರೇಲ್ ಗುರಿಯಾಗಿಸಿಕೊಂಡಿದೆ. ಇದು ಹಿಝ್ಬುಲ್ಲಾದ ಪ್ರಬಲ ನೆಲೆಯಾಗಿದೆ.

ಪ್ರಾಥಮಿಕ ವರದಿಗಳ ಪ್ರಕಾರ, ಈ ದಾಳಿಯಲ್ಲಿ ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ. ಹಿಝ್ಬುಲ್ಲಾದ ಕೆಲವು ಹಿರಿಯ ನಾಯಕರನ್ನು ಗುರಿಯಾಗಿಸಿ ಈ ದಾಳಿ ಮಾಡಲಾಗಿದೆ ಎಂದು ಇಸ್ರೇಲ್ ಹೇಳಿದೆ.

ಹಿಝ್ಬುಲ್ಲಾ ಮೇಲಿನ ದಾಳಿ ಇನ್ನಷ್ಟು ತೀವ್ರಗೊಳಿಸುವ ಸೂಚನೆ ಕೊಟ್ಟಿರುವ ಇಸ್ರೇಲ್, ದಕ್ಷಿಣ ಲೆಬನಾನ್‌ನ ಸುಮಾರು 50 ಹಳ್ಳಿಗಳ ಜನರಿಗೆ ತಕ್ಷಣವೇ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಎಚ್ಚರಿಕೆ ನೀಡಿದೆ.

ಹಿಝ್ಬುಲ್ಲಾ ದಾಳಿ ಖಂಡಿಸಿದ ಲೆಬನಾನ್ ಸರ್ಕಾರ

ಲೆಬನಾನ್‌ ಪ್ರಧಾನ ಮಂತ್ರಿ ನವಾಫ್ ಸಲಾಮ್ ಅವರು ಹಿಝ್ಬುಲ್ಲಾದ ಕ್ರಮವನ್ನು ಖಂಡಿಸಿದ್ದಾರೆ. ಹಿಝ್ಬುಲ್ಲಾ ನಡೆ ‘ಬೇಜವಾಬ್ದಾರಿತನದಿಂದ ಕೂಡಿದೆ’ ಮತ್ತು ಇದು ಇಸ್ರೇಲ್‌ಗೆ ದಾಳಿ ಮಾಡಲು ನೆಪ ಮಾಡಿಕೊಟ್ಟಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಲೆಬನಾನ್ ಮತ್ತೊಂದು ದೊಡ್ಡ ಯುದ್ಧವನ್ನು ಭರಿಸುವ ಸ್ಥಿತಿಯಲ್ಲಿಲ್ಲ ಎಂದು ಅವರು ಹೇಳಿದ್ದಾರೆ.

ವರದಿಗಳ ಪ್ರಕಾರ, ಇಸ್ರೇಲ್ ಮತ್ತು ಹಿಝ್ಬುಲ್ಲಾ ನಡುವೆ ದಾಳಿ-ಪ್ರತಿದಾಳಿ ಪ್ರಾರಂಭಗೊಂಡ ಬಳಿಕ, ಬೈರುತ್ ನಗರದಾದ್ಯಂತ ದಟ್ಟವಾದ ಹೊಗೆ ಆವರಿಸಿದೆ. ಜನರು ಭಯದಿಂದ ಸುರಕ್ಷಿತ ಪ್ರದೇಶಗಳತ್ತ ಧಾವಿಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಂಗೇರಿ ಚುನಾವಣೆಯಲ್ಲಿ ತೀವ್ರ ಬಲಪಂಥೀಯ ವಿಕ್ಟರ್ ಒರ್ಬಾನ್‌ಗೆ ಸೋಲು : ಟ್ರಂಪ್ ಆಪ್ತನ ಯುಗಾಂತ್ಯ

ಹಂಗೇರಿಯ ಸಾರ್ವತ್ರಿಕ ಚುನಾವಣೆಯಲ್ಲಿ, ಕಳೆದ 16 ವರ್ಷಗಳಿಂದ ದೇಶವನ್ನು ಆಳಿದ ತೀವ್ರ ಬಲಪಂಥೀಯ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಪ್ತ ವಿಕ್ಟರ್ ಒರ್ಬಾನ್ ಸೋಲಾಗಿದೆ. ಆರ್ಥಿಕ ಸ್ಥಗಿತ ಮತ್ತು ಹೆಚ್ಚುತ್ತಿರುವ ಜೀವನ ವೆಚ್ಚದ...

ಹಾರ್ಮುಝ್ ಜಲಸಂಧಿ ಮೇಲೆ ನಿಯಂತ್ರಣ ಸಾಧಿಸಲು ಮುಂದಾದ ಅಮೆರಿಕ : ಕಠಿಣ ಕ್ರಮದ ಎಚ್ಚರಿಕೆ ನೀಡಿದ ಇರಾನ್

ಇಸ್ಲಾಮಾಬಾದ್‌ನಲ್ಲಿ ಆಯೋಜಿಸಿದ್ದ ಅಮೆರಿಕ-ಇರಾನ್ ನಡುವಿನ ಐತಿಹಾಸಿಕ ಶಾಂತಿ ಮಾತುಕತೆ ವಿಫಲವಾದ ಬೆನ್ನಲ್ಲೇ, ಹಾರ್ಮುಝ್ ಜಲಸಂಧಿಯ ಸುತ್ತಲಿನ ಪರಿಸ್ಥಿತಿ ಗಂಭೀರ ಸ್ವರೂಪ ಪಡೆದುಕೊಂಡಿದೆ.  ಮಾತುಕತೆ ವಿಫಲವಾದ ನಂತರ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹಾರ್ಮುಝ್...

ಕೇರಳ: ಕಣ್ಣೂರು ದಂತ ಕಾಲೇಜಿನಲ್ಲಿ ದಲಿತ ಬಿಡಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಕ್ರೂರ ಜಾತಿ ನಿಂದನೆ, ಅವಮಾನ ಆರೋಪ

ಕೇರಳದಲ್ಲಿ ನಡೆದ ಜಾತಿ ಆಧಾರಿತ ಕಿರುಕುಳದ ಆಘಾತಕಾರಿ ಪ್ರಕರಣದಲ್ಲಿ, ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.   ಆರ್‌.ಎಲ್ ನಿತಿನ್ ರಾಜ್ ಅವರ ಕುಟುಂಬವು...

ಜಬ್ಬಾರ್​ರನ್ನು ಎಂಎಲ್‌ಸಿ ಮಾಡಿದ್ದು ನಾವು, ಪಕ್ಷದ ಅನ್ನ ತಿಂದ ಮೇಲೆ ಕೆಲಸ ಮಾಡಬೇಕಿತ್ತು : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನರ ಪ್ರತಿಕ್ರಿಯೆ ಚೆನ್ನಾಗಿತ್ತು, ನಾವು ಗೆಲುವು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ. ನಮ್ಮ ಮತದಾರ ಬಂಧುಗಳು ಉತ್ತಮವಾಗಿ ಮತದಾನ ಮಾಡಿದ್ದಾರೆ. ಒಳ್ಳೆಯ ಅಂತರದಲ್ಲಿ ಕಾಂಗ್ರೆಸ್‌ ಪಕ್ಷ ಗೆಲ್ಲುತ್ತೆ,...

ಧಾರವಾಡ: ಯುವ ಕಾಂಗ್ರೆಸ್ ನಾಯಕ ಫೈರೋಜ್ ಖಾನ್ ಪಠಾಣ್ ಹತ್ಯೆ; ಮೂವರು ಆರೋಪಿಗಳ ಬಂಧನ

ಧಾರವಾಡದಲ್ಲಿ ಶುಕ್ರವಾರ ತಡರಾತ್ರಿ ಯುವ ಕಾಂಗ್ರೆಸ್ ನಾಯಕನೊಬ್ಬನನ್ನು ಅವರ ನಿವಾಸದೊಳಗೆ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ನಗರದಾದ್ಯಂತ ಆಘಾತದ ಅಲೆಗಳನ್ನು ಸೃಷ್ಟಿಸಿದೆ. ಮೃತ ವ್ಯಕ್ತಿಯನ್ನು ಫೈರೋಜ್ ಖಾನ್ ಪಠಾಣ್ (34) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ,...

ಮಧ್ಯಪ್ರದೇಶದ ಕಟ್ನಿಯಲ್ಲಿ ಮಹಾರಾಷ್ಟ್ರಕ್ಕೆ ರೈಲಿನಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ 163 ಅಪ್ರಾಪ್ತ ಬಾಲಕರ ರಕ್ಷಣೆ; 8 ಮಂದಿ ಬಂಧನ

ಕಟ್ನಿ: ಬಿಹಾರದಿಂದ ಮಹಾರಾಷ್ಟ್ರಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎನ್ನಲಾದ 163 ಅಪ್ರಾಪ್ತ ಬಾಲಕರನ್ನು ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಎಕ್ಸ್‌ಪ್ರೆಸ್ ರೈಲಿನಿಂದ ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಆರು ರಿಂದ 13 ವರ್ಷದೊಳಗಿನ...

ನಗರಪಾಲಿಕೆ ಚುನಾವಣೆಯಲ್ಲಿ ನಮಗೆ ಅಧಿಕಾರಕ್ಕೆ ಬರಲು ಒಂದು ಅವಕಾಶ ನೀಡಿ: ಬೆಂಗಳೂರಿಗರಿಗೆ ಎಚ್‌.ಡಿ ಕುಮಾರಸ್ವಾಮಿ ಮನವಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಡಿಯಲ್ಲಿರುವ ಐದು ಮಹಾನಗರ ಪಾಲಿಕೆಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವ ಮೂಲಕ ಅಧಿಕಾರಕ್ಕೆ ಬರುವ ಅವಕಾಶ ನೀಡುವಂತೆ ದೇವೇಗೌಡ ನೇತೃತ್ವದ ಜೆಡಿಎಸ್ ಶನಿವಾರ ಬೆಂಗಳೂರಿನ ಜನರನ್ನು...

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿ.ಕೆ ಶಿವಕುಮಾರ್; ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಸಮಿತಿ ವಿಸರ್ಜನೆ

ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗಕ್ಕೆ ನೀಡಿದ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಂಗೀಕರಿಸಿದ್ದಾರೆ, ಜೊತೆಗೆ ಅಲ್ಪಸಂಖ್ಯಾತ ಘಟಕ ಸಮಿತಿಯನ್ನೂ ವಿಸರ್ಜಿಸಿದ್ದಾರೆ ಎಂದು ವರದಿಯಾಗಿದೆ. ಕೆಪಿಸಿಸಿ ಅಲ್ಪಸಂಖ್ಯಾತ...

‘ಯುದ್ಧ ಭುಗಿಲೆದ್ದು ಪಾಕಿಸ್ತಾನ ಶಾಂತಿ ಸ್ಥಾಪಿಸಲು ವಿಫಲವಾದರೆ, ಇಸ್ರೇಲ್ ಮೇಲೆ ದಾಳಿ ಮಾಡುವುದು ನಮ್ಮ ಕರ್ತವ್ಯ’: ಟರ್ಕಿ ಅಧ್ಯಕ್ಷ ಎರ್ಡೋಗನ್

ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಇಸ್ರೇಲ್ ವಿರುದ್ಧ ತೀಕ್ಷ್ಣ ಎಚ್ಚರಿಕೆ ನೀಡಿದ್ದು, ನಡೆಯುತ್ತಿರುವ ಸಂಘರ್ಷವನ್ನು ಶಮನಗೊಳಿಸಲು ರಾಜತಾಂತ್ರಿಕ ಪ್ರಯತ್ನಗಳು ವಿಫಲವಾದರೆ ಸಂಭಾವ್ಯ ಕ್ರಮ ಕೈಗೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಕಠಿಣ ಪದಗಳ ಹೇಳಿಕೆಯಲ್ಲಿ,...

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (92) ಅವರು ಭಾನುವಾರ (ಏ.12) ನಿಧನರಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯ ಡಾ. ಪ್ರತೀತ್ ಸಮ್ದಾನಿ...