Homeಮುಖಪುಟಜಮ್ಮು ಮತ್ತು ಕಾಶ್ಮೀರದಲ್ಲಿ ಕಟ್ಟೆಚ್ಚರ: ಉಗ್ರರ ಬಗ್ಗೆ ಸುಳಿವು ನೀಡಿದವರಿಗೆ ₹5 ಲಕ್ಷ ಬಹುಮಾನ ಘೋಷಣೆ

ಜಮ್ಮು ಮತ್ತು ಕಾಶ್ಮೀರದಲ್ಲಿ ಕಟ್ಟೆಚ್ಚರ: ಉಗ್ರರ ಬಗ್ಗೆ ಸುಳಿವು ನೀಡಿದವರಿಗೆ ₹5 ಲಕ್ಷ ಬಹುಮಾನ ಘೋಷಣೆ

- Advertisement -
- Advertisement -

ಪೂಂಚ್: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಭಯೋತ್ಪಾದಕರು ಅಥವಾ ಅವರ ಸಹಚರರ ಉಪಸ್ಥಿತಿ ಅಥವಾ ಚಲನವಲನದ ಬಗ್ಗೆ ಯಾವುದೇ ವಿಶ್ವಾಸಾರ್ಹ ಮತ್ತು ಖಚಿತ ಮಾಹಿತಿ ನೀಡಿದವರಿಗೆ ₹5 ಲಕ್ಷ ಬಹುಮಾನ ನೀಡುವುದಾಗಿ ಪೊಲೀಸರು ಸೋಮವಾರ ಘೋಷಿಸಿದ್ದಾರೆ. 

ಮಾಹಿತಿದಾರರ ಗುರುತನ್ನು ಕಟ್ಟುನಿಟ್ಟಾಗಿ ಗೌಪ್ಯವಾಗಿಡಲಾಗುವುದು ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ. ಸಾರ್ವಜನಿಕರಿಗೆ ಜಾಗರೂಕರಾಗಿರಿ ಎಂದು ಹೇಳುವ ಜೊತೆಗೆ ಭಯೋತ್ಪಾದಕರಿಗೆ ಆಹಾರ, ಆಶ್ರಯ, ಸಾರಿಗೆ ಸೇರಿದಂತೆ ಯಾವುದೇ ರೀತಿಯ ಬೆಂಬಲ ನೀಡುವ ವ್ಯಕ್ತಿಗಳ ಬಗ್ಗೆ ಮಾಹಿತಿ ನೀಡುವಂತೆ ಅವರು ಮನವಿ ಮಾಡಿದ್ದಾರೆ.

ಸಾರ್ವಜನಿಕರು ಪೊಲೀಸ್ ನಿಯಂತ್ರಣ ಕೊಠಡಿ ಮತ್ತು ಉಪವಿಭಾಗೀಯ ಅಧಿಕಾರಿಗಳ ಮೀಸಲಾದ ವಾಟ್ಸಾಪ್ ಮತ್ತು ಟೆಲಿಗ್ರಾಮ್ ಸಂಖ್ಯೆಗಳ ಮೂಲಕ ಅಥವಾ ಹತ್ತಿರದ ಪೊಲೀಸ್ ಠಾಣೆ ಅಥವಾ ಪೋಸ್ಟ್ ಅನ್ನು ನೇರವಾಗಿ ಸಂಪರ್ಕಿಸಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೆಹಲಿ ಕಾರು ಬಾಂಬ್‌ ಸ್ಫೋಟ ಪ್ರಕರಣದಲ್ಲಿ ಹಲವು ವೈದ್ಯರನ್ನು ಬಂಧಿಸಿದ ಬಳಿಕ ‘ವೈಟ್‌ ಕಾಲರ್‌ ಭಯೋತ್ಪಾದನೆ’ ಬಗ್ಗೆ ಚರ್ಚೆ ಆರಂಭವಾಗಿದೆ. ಈ ಹಿನ್ನೆಲೆ ಜಮ್ಮು ರೈಲು ನಿಲ್ದಾಣದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಅಲ್ಲದೇ ರೈಲು ನಿಲ್ದಾಣದಲ್ಲಿ ಒಳಬರುವ ಮತ್ತು ಹೊರಹೋಗುವ ಎಲ್ಲಾ ಪ್ರಯಾಣಿಕರ ಲಗೇಜ್‌ಗಳನ್ನು ತಪಾಸಣೆ ನಡೆಸಲಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಪೂಂಚ್ ಜಿಲ್ಲೆಯಲ್ಲಿ ಭದ್ರತಾ ಕ್ರಮಗಳನ್ನು ಹೆಚ್ಚಿಸಲಾಗಿದ್ದು, ಭಯೋತ್ಪಾದಕ ಜಾಲಗಳನ್ನು ನಾಶಮಾಡಲು ಮತ್ತು ನಾಗರಿಕರ ಜೀವಗಳನ್ನು ರಕ್ಷಿಸಲು ಸಮುದಾಯದ ಸಹಕಾರ ಅತ್ಯಗತ್ಯ ಎಂದು ಅಧಿಕಾರಿಗಳು ಒತ್ತಿ ಹೇಳುತ್ತಿದ್ದಾರೆ. 

ಭದ್ರತಾ ದೃಷ್ಟಿಯಿಂದ ಪೊಲೀಸರು ಮತ್ತು ಅರೆಸೈನಿಕ ಸಿಬ್ಬಂದಿ ಪ್ರಯಾಣಿಕರ ಲಗೇಜ್‌ಗಳನ್ನು ತಪಾಸಣೆ ನಡೆಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...