Homeಕರ್ನಾಟಕಯಡಿಯೂರಪ್ಪ, ಪ್ರಜ್ವಲ್ ರೇವಣ್ಣ, ರಮೇಶ್ ಜಾರಕಿಹೊಳಿ ಪ್ರಕರಣಗಳ ವಿಚಾರಣೆ ಮುಂದೂಡಿಕೆ

ಯಡಿಯೂರಪ್ಪ, ಪ್ರಜ್ವಲ್ ರೇವಣ್ಣ, ರಮೇಶ್ ಜಾರಕಿಹೊಳಿ ಪ್ರಕರಣಗಳ ವಿಚಾರಣೆ ಮುಂದೂಡಿಕೆ

- Advertisement -
- Advertisement -

ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದೂಡಿದ ಹೈಕೋರ್ಟ್

ತನ್ನ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ.

ಪೋಕ್ಸೊ ಪ್ರಕರಣ ರದ್ದುಪಡಿಸುವಂತೆ ಹಾಗೂ ಇದೇ ಪ್ರಕರಣದಲ್ಲಿ ಜಾಮೀನು ಮಂಜೂರು ಮಾಡುವಂತೆ ಕೋರಿ ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅರ್ಜಿ ಸಲ್ಲಿಸಿದ್ದರು. ಇಂದು (ಸೆ.9) ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠದಲ್ಲಿ ವಿಚಾರಣೆ ನಡೆಯಿತು.

ಪ್ರೊ. ರವಿವರ್ಮ ಕುಮಾರ್‌ ಅವರನ್ನು ವಿಶೇಷ ಸರ್ಕಾರಿ ಅಭಿಯೋಜಕರನ್ನಾಗಿ ಸೆಪ್ಟೆಂಬರ್‌ 3ರಂದು ನೇಮಕ ಮಾಡಲಾಗಿದೆ ಎಂದು ವಕೀಲ ಅಶೋಕ್‌ ನಾಯ್ಕ್‌ ನ್ಯಾಯಾಲಯಕ್ಕೆ ತಿಳಿಸಿದರು. ಈ ಹಿನ್ನೆಲೆ ಅರ್ಜಿಗಳ ವಿಚಾರಣೆಯನ್ನು ಸೆಪ್ಟೆಂಬರ್‌ 19ಕ್ಕೆ ಮುಂದೂಡಲಾಗುವುದು ನ್ಯಾಯಾಲಯ ಹೇಳಿದೆ.

ಅತ್ಯಾಚಾರ ಪ್ರಕರಣ | ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಸೆ. 12ಕ್ಕೆ ಮುಂದೂಡಿಕೆ

ಹಾಸನ ಜಿಲ್ಲೆ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಅತ್ಯಾಚಾರ ಪ್ರಕರಣದಲ್ಲಿ ಜೆಡಿಎಸ್‌ನ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್‌ ಸೆಪ್ಟೆಂಬರ್‌ 12ಕ್ಕೆ ಮುಂದೂಡಿದೆ.

ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಪ್ರಕರಣದ ವಿಚಾರಣೆಯನ್ನು ನಡೆಸಿದ್ದು, ಗೌಪ್ಯ ವಿಚಾರಣೆಗೆ ಸಂಬಂಧಿಸಿದಂತೆ ಮುಖ್ಯ ನ್ಯಾಯಮೂರ್ತಿಗಳಿಂದ ಆದೇಶ ಪಡೆಯಲಾಗುವುದು ಎಂದು ತಿಳಿಸಿದೆ.

ಸಂತ್ರಸ್ತೆಯರ ಖಾಸಗಿತನ ಕಾಪಾಡುವ ದೃಷ್ಟಿಯಿಂದ ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿಗಳನ್ನು ಗೌಪ್ಯವಾಗಿ ವಿಚಾರಣೆ ನಡೆಸುವಂತೆ ರಾಜ್ಯ ಸರ್ಕಾರ ಕಳೆದ ವಿಚಾರಣೆಯಲ್ಲಿ ಕೋರಿತ್ತು. ಇದನ್ನು ಪರಿಶೀಲಿಸುವುದಾಗಿ ನ್ಯಾಯಾಲಯ ಹೇಳಿತ್ತು.

ಪ್ರಜ್ವಲ್‌ ಪರವಾಗಿ ಹಿರಿಯ ವಕೀಲ ಪ್ರಭುಲಿಂಗ ನಾವದಗಿ ವಾದ ಮಂಡಿಸಿದ್ದಾರೆ. “ನಮಗೆ ಆರೋಪ ಪಟ್ಟಿ ನೀಡಿಲ್ಲ. ಆರೋಪ ಪಟ್ಟಿ ನೀಡಬೇಕು” ಎಂದು ಹೇಳಿದ್ದಾರೆ. “ವಿಚಾರಣಾಧೀನ ನ್ಯಾಯಾಲಯ ಸಂಜ್ಞೇ ಪರಿಗಣಿಸಿದ ಬಳಿಕ ನಿಮಗೆ ಆರೋಪ ಪಟ್ಟಿ ನೀಡಲಿದೆ” ಎಂದು ಪೀಠ ಹೇಳಿದೆ.

“ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿರುವುದೇ ಸರಿಯಲ್ಲ. ಮೊದಲಿಗೆ ದೂರಿನಲ್ಲಿ ಅತ್ಯಾಚಾರ ಆರೋಪ ಇರಲಿಲ್ಲ. ವಿಚಾರಣಾ ಹಂತದಲ್ಲಿ ಅತ್ಯಾಚಾರ ಆರೋಪ ಮಾಡಲಾಗಿದೆ” ಎಂದು ಅವರ ಪರ ವಕೀಲರು ವಾದಿಸಿದ್ದಾರೆ.

ಸಿಡಿ ಪ್ರಕರಣ | ಎಸ್‌ಐಟಿ ರಚನೆ ಪ್ರಶ್ನಿಸಿ ರಮೇಶ್‌ ಜಾರಕಿಹೊಳಿ ಸಲ್ಲಿಸಿದ ಅರ್ಜಿ ವಿಚಾರಣೆ ಮುಂದೂಡಿಕೆ

ಸಿಡಿ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚನೆ ಮಾಡಿರುವುದನ್ನು ಪ್ರಶ್ನಿಸಿ ಮಾಜಿ ಸಚಿವ, ಬಿಜೆಪಿ ಶಾಸಕ ರಮೇಶ್‌ ಜಾರಕಿಹೊಳಿ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಮುಂದೂಡಿದೆ.

ಸಂತ್ರಸ್ತೆ, ಎಸ್‌ ಶ್ರವಣ್‌ ಕುಮಾರ್‌ ಮತ್ತು ಬಿ.ಎಂ ನರೇಶ್‌ ಅವರು ತಮ್ಮ ವಿರುದ್ಧ ರಮೇಶ್‌ ಜಾರಕಿಹೊಳಿ ದಾಖಲಿಸಿರುವ ಎಫ್‌ಐಆರ್‌ ರದ್ದುಪಡಿಸುವಂತೆ ಕೋರಿರುವ ಅರ್ಜಿಗಳ ವಿಚಾರಣೆಯನ್ನೂ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಸೆಪ್ಟೆಂಬರ್ 16ಕ್ಕೆ ಮುಂದೂಡಿಕೆ ಮಾಡಿದೆ.

ಇದನ್ನೂ ಓದಿ : ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಐವರು ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಎನ್‌ಐಎ ಸಿದ್ಧತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...