Homeಕರ್ನಾಟಕಬೆಂಗಳೂರು ಕಾಲ್ತುಳಿತ: ಮುಚ್ಚಿದ ಲಕೋಟೆಯಲ್ಲಿ ಪ್ರತಿಕ್ರಿಯೆ ಸಲ್ಲಿಸಲು ಸರ್ಕಾರಕ್ಕೆ ಹೈಕೋರ್ಟ್ ಅನುಮತಿ

ಬೆಂಗಳೂರು ಕಾಲ್ತುಳಿತ: ಮುಚ್ಚಿದ ಲಕೋಟೆಯಲ್ಲಿ ಪ್ರತಿಕ್ರಿಯೆ ಸಲ್ಲಿಸಲು ಸರ್ಕಾರಕ್ಕೆ ಹೈಕೋರ್ಟ್ ಅನುಮತಿ

- Advertisement -
- Advertisement -

ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ದುರಂತ ಸಂಬಂಧ ತನ್ನ ಪ್ರತಿಕ್ರಿಯೆ ಅಥವಾ ಸ್ಥಿತಿಗತಿ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಇಂದು(ಜೂ.10) ಅವಕಾಶ ನೀಡಿದೆ.

ಜೂನ್ 4ರಂದು ಕಾಲ್ತುಳಿತ ಸಂಭವಿಸಿ 11 ಜನರು ಸಾವನ್ನಪ್ಪಿದ್ದರು ಮತ್ತು 40ಕ್ಕೂ ಅಧಿಕ ಜನರು ಗಾಯಗೊಂಡಿದ್ದರು. ಈ ಸಂಬಂಧ ಜೂನ್ 5ರಂದು ಹೈಕೋರ್ಟ್‌ ಸ್ವಯಂ ಪ್ರೇರಿತ ವಿಚಾರಣೆ ಕೈಗೆತ್ತಿಕೊಂಡಿತ್ತು. ಬಳಿಕ ವಿಚಾರಣೆಯನ್ನು ಇಂದಿಗೆ (ಜೂ.10) ಮುಂದೂಡಿತ್ತು.

ಇಂದು ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ. ಕಾಮೇಶ್ವರ ರಾವ್‌ ಮತ್ತು ನ್ಯಾಯಮೂರ್ತಿ ಸಿ.ಎಂ ಜೋಶಿ ಅವರ ವಿಭಾಗೀಯ ಪೀಠ ವಿಚಾರಣೆ ಮುಂದುವರಿಸಿತು.

ವಿಚಾರಣೆ ಆರಂಭವಾಗುತ್ತಿದ್ದಂತೆ ಅಡ್ವೊಕೇಟ್‌ (ಎಜಿ) ಜನರಲ್‌ ಕೆ. ಶಶಿಕಿರಣ್‌ ಶೆಟ್ಟಿ ಅವರು “ನಮ್ಮ ಪ್ರತಿಕ್ರಿಯೆ ಸಲ್ಲಿಸಲಾಗಿಲ್ಲ. ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಮೈಕೆಲ್‌ ಕುನ್ಹಾ ನೇತೃತ್ವದಲ್ಲಿ ವಿಚಾರಣಾ ಆಯೋಗ ರಚಿಸಲಾಗಿದ್ದು, ಒಂದು ತಿಂಗಳ ಕಾಲಮಿತಿ ನಿಗದಿಪಡಿಸಲಾಗಿದೆ. ಬೆಂಗಳೂರು ಪೊಲೀಸ್‌ ಆಯುಕ್ತರು ಸೇರಿ ಐವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಆರ್‌ಸಿಬಿ, ಡಿಎನ್‌ಎ ಅಧಿಕಾರಿಗಳ ಜಾಮೀನು ಅರ್ಜಿಗಳು ಬಾಕಿ ಇದ್ದು, ಇಲ್ಲಿ ಹೇಳುವುದನ್ನು ಅವರು ಅಲ್ಲಿ ಬಳಕೆ ಮಾಡಿಕೊಳ್ಳುವ ಸಾಧ್ಯತೆ ಇದೆ” ಎಂದರು.

ಅದಕ್ಕೆ ಪೀಠವು “ನ್ಯಾಯಾಲಯದ ನಿರ್ದೇನಕ್ಕೆ ನೀವು ಪ್ರತಿಕ್ರಿಯೆ ಸಲ್ಲಿಸುವುದಿಲ್ಲ ಎಂದು ಹೇಳುತ್ತಿದ್ದೀರಾ?” ಎಂದಿತು. ಈ ವೇಳೆ ಎಜಿ ಅವರು “ದಯಮಾಡಿ ಈ ಅರ್ಜಿಯ ವಿಚಾರಣೆಯನ್ನು ನಾಳೆಗೆ ಮುಂದೂಡಬೇಕು. ಕೆಲವು ವಿಚಾರಗಳಿವೆ ಸ್ವಾಮಿ” ಎಂದರು.

ಆಗ ಮತ್ತೆ ಪೀಠವು “ಸಮಸ್ಯೆ ಏನಿದೆ?” ಎಂದು ಮರು ಪ್ರಶ್ನಿಸಿತು. ಇದಕ್ಕೆ ಎಜಿ ಅವರು “ಮುಕ್ತ ನ್ಯಾಯಾಲಯದಲ್ಲಿ ಹೇಳುವುದರಿಂದ ಪೂರ್ವಾಗ್ರಹ ಉಂಟಾಗಲಿದೆ. ಸ್ವತಂತ್ರ ವಿಚಾರಣಾ ಆಯೋಗದಿಂದ ವರದಿ ಬರಲಿ. ನಾವು ಪಕ್ಷಪಾತಿಗಳಾಗಿದ್ದೇವೆ ಎನಿಸಬಾರದು. ಇದು ಒಂದು ತಿಂಗಳ ವಿಚಾರವಷ್ಟೆ” ಎಂದರು.

ಆಗ ಹೈಕೋರ್ಟ್‌ “ಮುಚ್ಚಿದ ಲಕೋಟೆಯಲ್ಲಿ ವರದಿ ಸಲ್ಲಿಸಿ” ಎಂದಿತು. ಇದಕ್ಕೆ ಎಜಿ ಅವರು “ಕಳೆದ ವಿಚಾರಣೆಯಲ್ಲಿ ಪ್ರಕರಣವನ್ನು ಸಿಐಡಿಗೆ ನೀಡಲಾಗಿದೆ ಎಂದು ಹೇಳಿದ್ದೇನೆ. ಆ ದಿನವೇ ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಲಾಗಿದೆ. ಇದನ್ನು ಆರೋಪಿಗಳು ಜಾಮೀನು ಅರ್ಜಿಯಲ್ಲಿ ಬಳಸಿಕೊಳ್ಳುತ್ತಾರೆ” ಎಂದರು. ಇದಕ್ಕೆ ಪೀಠವು “ಮುಚ್ಚಿದ ಲಕೋಟೆಯಲ್ಲಿ ವರದಿ ಸಲ್ಲಿಸಿ” ಎಂದಿತು.

ಮುಂದಿನ ವಿಚಾರಣೆ ಜೂನ್ 12ಕ್ಕೆ ನಿಗದಿಯಾಗಿದೆ

Credit: livelaw.in

ಶ್ರೀರಾಮನ ಅವಹೇಳನ ಆರೋಪ: ಚಿಂತಕ ಕೆ.ಎಸ್ ಭಗವಾನ್‌ ಖುಲಾಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...