Homeಮುಖಪುಟಅಕ್ಬರ್-ಸೀತಾ ಸಿಂಹಗಳ ಹೆಸರು ಬದಲಿಸಲು ಹೈಕೋರ್ಟ್ ಸೂಚನೆ

ಅಕ್ಬರ್-ಸೀತಾ ಸಿಂಹಗಳ ಹೆಸರು ಬದಲಿಸಲು ಹೈಕೋರ್ಟ್ ಸೂಚನೆ

- Advertisement -
- Advertisement -

ಹಿಂದುತ್ವ ಸಂಘಟನೆಗಳು ವಿವಾದ ಸೃಷ್ಟಿಸಿದ್ದ ‘ಅಕ್ಬರ್ ಮತ್ತು ಸೀತಾ’ ಸಿಂಹಗಳ ಹೆಸರು ಬದಲಿಸುವಂತೆ ಕಲ್ಕತ್ತಾ ಹೈಕೋರ್ಟ್ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಆದೇಶಿಸಿದೆ.

ತ್ರಿಪುರಾದಿಂದ ಪಶ್ಚಿಮ ಬಂಗಾಳಕ್ಕೆ ಇತ್ತೀಚೆಗೆ ತರಲಾಗಿದ್ದ ಅಕ್ಬರ್ ಮತ್ತು ಲೀಲಾ ಎಂಬ ಜೋಡಿ ಸಿಂಹಗಳನ್ನು ಒಂದೇ ಕಡೆ ಇರಿಸಲಾಗಿತ್ತು. ಇದರ ವಿರುದ್ದ ವಿಶ್ವ ಹಿಂದೂ ಪರಿಷತ್ ನ್ಯಾಯಾಲಯದ ಮೆಟ್ಟಿಲೇರಿತ್ತು.

ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೌಗತ ಭಟ್ಟಾಚಾರ್ಯ ಅವರ ಏಕಸದಸ್ಯ ಪೀಠ, ವಿವಾದದಿಂದ ದೂರವಿರಲು ಸಿಂಹಗಳ ಹೆಸರು ಬದಲಿಸುವಂತೆ ರಾಜ್ಯ ಸರ್ಕಾರಕ್ಕೆ ಮೌಖಿಕ ಆದೇಶ ನೀಡಿದೆ ಎಂದು ಲೈವ್ ಲಾ ವರದಿ ಮಾಡಿದೆ.

“ನೀವು ಸಿಂಹಕ್ಕೆ ಹಿಂದೂ ದೇವತೆ, ಮುಸ್ಲಿಂ ಪ್ರವಾದಿ, ಕ್ರಿಶ್ಚಿಯನ್ ದೇವರು, ಸ್ವಾತಂತ್ರ್ಯ ಹೋರಾಟಗಾರರು ಅಥವಾ ನೊಬೆಲ್ ಪ್ರಶಸ್ತಿ ವಿಜೇತರ ಹೆಸರನ್ನು ಇಡುತ್ತೀರಾ? ಸಾಮಾನ್ಯವಾಗಿ ನಮ್ಮ ದೇಶದ ಜನರು ಗೌರವಿಸುವ ಯಾರ ಹೆಸರನ್ನಾದರೂ ಇಡುತ್ತೀರಾ? ಎಂದು ನ್ಯಾಯಮೂರ್ತಿ ಭಟ್ಟಾಚಾರ್ಯ ಪ್ರಶ್ನಿಸಿದ್ದಾರೆ ಎಂದು ತಿಳಿದು ಬಂದಿದೆ.

ಪಶ್ಚಿಮ ಬಂಗಾಳದ ಸರ್ಕಾರದ ಪರ ನ್ಯಾಯಾಲಯಕ್ಕೆ ಹಾಜರಾಗಿದ್ದ ಹೆಚ್ಚುವರಿ ಅಡ್ವೊಕೇಟ್ ಜನರಲ್ (ಎಎಜಿ) ತ್ರಿಪುರಾದಲ್ಲೇ ಸಿಂಹಗಳಿಗೆ ಹೆಸರು ಇಡಲಾಗಿದೆ. ರಾಜ್ಯ ಸರ್ಕಾರ ಈಗಾಗಲೇ ಸಿಂಹಗಳಿಗೆ ಮರುನಾಮಕರಣ ಮಾಡಲು ಯೋಚಿಸುತ್ತಿದೆ ಎಂದು ಹೇಳಿದ್ದಾರೆ ಎಂದು ವರದಿಗಳು ತಿಳಿಸಿವೆ.

‘ದೇವರು, ಪೌರಾಣಿಕ ನಾಯಕರು, ಸ್ವಾತಂತ್ರ್ಯ ಹೋರಾಟಗಾರರು ಅಥವಾ ನೊಬೆಲ್ ಪ್ರಶಸ್ತಿ ವಿಜೇತರ’ ಹೆಸರುಗಳನ್ನು ಪ್ರಾಣಿಗಳಿಗೆ ಇಡುವುದರ ಹಿಂದಿನ ಕಾರಣವನ್ನು ನ್ಯಾಯಾಲಯವು ಪ್ರಶ್ನಿಸಿದೆ. ತ್ರಿಪುರ ನೀಡಿದ ಹೆಸರುಗಳನ್ನು ರಾಜ್ಯ ಏಕೆ ಪ್ರಶ್ನಿಸಲಿಲ್ಲ? ಎಂದು ಕೇಳಿದೆ.

ವಿಶ್ವ ಹಿಂದೂ ಪರಿಷತ್ ಸಲ್ಲಿಸಿರುವ ಅರ್ಜಿಯನ್ನು ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (ಪಿಐಎಲ್) ಎಂದು ಮರು ವರ್ಗೀಕರಿಸಲು ನ್ಯಾಯಾಲಯವು ನಿರ್ದೇಶಿಸಿದೆ ಮತ್ತು ಪಿಐಎಲ್‌ಗಳನ್ನು ಆಲಿಸುವ ಸಾಮಾನ್ಯ ಪೀಠಕ್ಕೆ ಮರುನಿರ್ದೇಶಿಸಿದೆ.

ಇದನ್ನೂ ಓದಿ: ‘ಕೇಂದ್ರದಲ್ಲಿರುವ ಭ್ರಷ್ಟ ಸರ್ಕಾರವನ್ನು ಸೋಲಿಸಿ’: ಬಿಜೆಪಿಗೆ ಮುಜುಗರ ತಂದಿಟ್ಟ ತಮ್ಮದೇ ಪ್ರೋಮೋ ಸಾಂಗ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...