Homeಕರ್ನಾಟಕಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರ ನೇಮಕಾತಿ ಪ್ರಶ್ನಿಸಿದ ಅರ್ಜಿ ವಜಾ

ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರ ನೇಮಕಾತಿ ಪ್ರಶ್ನಿಸಿದ ಅರ್ಜಿ ವಜಾ

- Advertisement -
- Advertisement -

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ (ಕೆಎಸ್‌ಪಿಸಿಆರ್‌) ಅಧ್ಯಕ್ಷರಾಗಿ ಕೆ ನಾಗಣ್ಣ ಗೌಡ ಅವರ ನೇಮಕವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

2022ರ ಅಕ್ಟೋಬರ್ 21 ರಂದು ನಾಗಣ್ಣ ಗೌಡ ಅವರನ್ನು ಆಯೋಗದ ಅಧ್ಯಕ್ಷರನ್ನಾಗಿ ನೇಮಿಸಲಾಗಿತ್ತು.

ಈ ಹುದ್ದೆಯ ಆಕಾಂಕ್ಷಿಯಾಗಿದ್ದ ಅರ್ಜಿದಾರ ಅಶೋಕ್ ಡಿ ಸನದಿ, ನಾಗಣ್ಣ ಗೌಡ ಅವರು ಆಗಿನ ಆಡಳಿತಾರೂಢ ಬಿಜೆಪಿ ಸರ್ಕಾರಕ್ಕೆ ನಿಕಟವರ್ತಿಯಾಗಿದ್ದು, ರಾಜಕೀಯ ಪ್ರಾಬಲ್ಯ ಬಳಸಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕೋರ್ಟ್‌ ಮೊರೆ ಹೋಗಿದ್ದರು.

ಮತ್ತೊಂದೆಡೆ ನಾಗಣ್ಣ ಗೌಡ ಅವರು ವಾದಿಸಿ 2020ರಲ್ಲಿ ಬಿಜೆಪಿಯೊಂದಿಗಿನ ಸಂಬಂಧವನ್ನು ಕಡಿದುಕೊಂಡಿರುವುದಾಗಿ ಕೋರ್ಟ್‌ನ ಗಮನಕ್ಕೆ ತಂದಿದ್ದಾರೆ ಮತ್ತು ಕಳೆದ ಹಲವಾರು ವರ್ಷಗಳಿಂದ ಮಕ್ಕಳ ಹಕ್ಕುಗಳ ರಕ್ಷಣೆಗೆ ನಾನು ಕೂಡ ತೊಡಗಿಸಿಕೊಂಡಿದ್ದೇನೆ ಎಂದು ಹೇಳಿದ್ದಾರೆ.

ಅನುಭವ ಸೇರಿದಂತೆ ಇತರ ವಿಷಯಗಳಲ್ಲಿ ಯಾರು ಉತ್ತಮ ಅರ್ಹತೆ ಹೊಂದಿದ್ದಾರೆ ಎಂಬುದನ್ನು ಉಚ್ಚ ನ್ಯಾಯಾಲಯವು ನಿರ್ಧರಿಸುವುದಿಲ್ಲ ಮತ್ತು ಆಯ್ಕೆ ಸಮಿತಿಯು ಮಾಡಿದ ನೇಮಕಾತಿಯನ್ನು ರದ್ದು ಮಾಡುವುದಿಲ್ಲ ಎಂದು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಹೇಳಿದ್ದಾರೆ.

ನ್ಯಾಯಾಂಗ ಪರಿಶೀಲನೆಯ ಅಧಿಕಾರವನ್ನು ಚಲಾಯಿಸುವಾಗ, ಆಯ್ಕೆ ಸಮಿತಿಯ ಅಧಿಕಾರವನ್ನು ಪ್ರಶ್ನಿಸಲು ಸಾಧ್ಯವಿಲ್ಲ ಅಥವಾ ಆಯ್ಕೆ ಸಮಿತಿಯು ನೀಡಿದ ಅಂಕಗಳು ಅವರ ಕಾರ್ಯಕ್ಷಮತೆಗೆ ಅನುಗುಣವಾಗಿಲ್ಲವೇ ಎಂಬುದನ್ನು ಪರಿಶೀಲಿಸಲು ಮೇಲ್ಮನವಿ ಮೂಲಕ ಸಾಧ್ಯವಿಲ್ಲ ಎಂದು ಹೇಳಿದೆ.

ಅರ್ಜಿಗಳನ್ನು ಆಹ್ವಾನಿಸುವ ಅಧಿಸೂಚನೆಗೆ 15 ತಿಂಗಳ ಮೊದಲು ಗೌಡರು ಸೆ. 2020ರಂದು ಬಿಜೆಪಿಗೆ ರಾಜೀನಾಮೆ ನೀಡಿದ್ದರು ಎಂದು ನ್ಯಾಯಾಲಯವು ಗಮನಿಸಿದೆ. ಅರ್ಜಿ ವಿಚಾರಣೆ ನಡೆಸಿ ನ್ಯಾಯಾಲಯವು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರ ನೇಮಕಾತಿ ಪ್ರಶ್ನಿಸಿದ ಅರ್ಜಿಯನ್ನು ವಜಾ ಮಾಡಿದೆ.

ಇದನ್ನು ಓದಿ: ಮಹಾರಾಷ್ಟ್ರ: ಬಿಜೆಪಿ ರಾಜ್ಯಾಧ್ಯಕ್ಷರ ಜೂಜಾಟದ ಫೋಟೋ ಹಂಚಿಕೊಂಡ ರಾವುತ್: ವಿವಾದ

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...