Homeಮುಖಪುಟಏಮ್ಸ್ ನರ್ಸಿಂಗ್ ನೌಕರರ ಪ್ರತಿಭಟನೆಗೆ ಹೈಕೋರ್ಟ್ ತಡೆ: ಪ್ರತಿಭಟನಾಕಾರರಿಗೆ ನೋಟಿಸ್

ಏಮ್ಸ್ ನರ್ಸಿಂಗ್ ನೌಕರರ ಪ್ರತಿಭಟನೆಗೆ ಹೈಕೋರ್ಟ್ ತಡೆ: ಪ್ರತಿಭಟನಾಕಾರರಿಗೆ ನೋಟಿಸ್

"ಏಮ್ಸ್‌ನ 5000 ನರ್ಸ್ ಸಿಬ್ಬಂದಿ, ವೇತನ ಹೆಚ್ಚಳ ಸೇರಿದಂತೆ ತಮ್ಮ ದೀರ್ಘಕಾಲದ 23 ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದ್ದಾರೆ"

- Advertisement -
- Advertisement -

ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯ (ಏಮ್ಸ್) ನರ್ಸಿಂಗ್ ನೌಕರರು ತಮ್ಮ ದೀರ್ಘಕಾಲದ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಿನ್ನೆಯಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಕುರಿತು ಕೋರ್ಟ್ ಮೆಟ್ಟಿಲೇರಿದ ಆಸ್ಪತ್ರೆ, ಮುಷ್ಕರವನ್ನು ಕೊನೆಗೊಳಿಸುವಂತೆ ಮನವಿ ಸಲ್ಲಿಸಿತ್ತು.

ಇದಕ್ಕೆ ಸಂಬಂಧಿಸಿದಂತೆ ದೆಹಲಿಯ ಹೈಕೋರ್ಟ್, ‘ಮುಂದಿನ ಆದೇಶದವರೆಗೆ ಮುಷ್ಕರ ನಡೆಸುವುದನ್ನು ತಡೆಯಲಾಗುವುದು ಮತ್ತು ಆಸ್ಪತ್ರೆಯ ಮನವಿಗೆ ಸ್ಪಂದಿಸಿ’ ಎಂದು ಪ್ರತಿಭಟನಾಕಾರರಿಗೆ ನೋಟಿಸ್ ನೀಡಿದೆ.

ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಮುಷ್ಕರವನ್ನು ಕೊನೆಗೊಳಿಸಬೇಕು ಆಸ್ಪತ್ರೆ ಕೇಳಿಕೊಂಡಿತ್ತು. ಜೊತೆಗೆ ಇದನ್ನು ಕಾನೂನುಬಾಹಿರ ಎಂದು ಕರೆದು, ಕೈಗಾರಿಕಾ ವಿವಾದ ಕಾಯ್ದೆಯನ್ನು ಉಲ್ಲಂಘಿಸಿದೆ ಎಂದು ಹೇಳಿತ್ತು.

ಇದನ್ನೂ ಓದಿ: ರಜನಿಯ ಹೊಸ ರಾಜಕೀಯ ಪಕ್ಷದ ಹೆಸರು ಮಕ್ಕಳ್ ಸೇವೈ ಕಚ್ಚಿ? ಚಿಹ್ನೆ ಆಟೋ ರಿಕ್ಷಾ?

ಆಸ್ಪತ್ರೆಯ ವಿವಾದಗಳನ್ನು ಗಮನಿಸಿದ ನ್ಯಾಯಮೂರ್ತಿ ನವೀನ್ ಚಾವ್ಲಾ ಅವರ ಏಕ-ಸದಸ್ಯ ನ್ಯಾಯಪೀಠವು “ನರ್ಸಿಂಗ್ ನೌಕರರ ಬೇಡಿಕೆಗಳನ್ನು ಆಸ್ಪತ್ರೆಯು ಪರಿಗಣಿಸುತ್ತಿದೆ. ಆದರೆ ಸಧ್ಯಕ್ಕೆ, ಮುಂದಿನ ಆದೇಶದವರೆಗೆ ಮುಷ್ಕರವನ್ನು ಮುಂದುವರಿಸುವುದನ್ನು ತಡೆಯಲಾಗುತ್ತಿದೆ” ಎಂದು ಹೇಳಿದರು.

ಆಸ್ಪತ್ರೆ ಇಂದು ಸಂಜೆ ದಾದಿಯರನ್ನು ಮಾತುಕತೆಗೆ ಕರೆದಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಏಮ್ಸ್‌ನ 5000 ನರ್ಸ್ ಸಿಬ್ಬಂದಿ, ವೇತನ ಹೆಚ್ಚಳ ಸೇರಿದಂತೆ ತಮ್ಮ ದೀರ್ಘಕಾಲದ 23 ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದ್ದಾರೆ. ಪ್ರಧಾನ ವೈದ್ಯಕೀಯ ಸಂಸ್ಥೆಯ ಉದ್ಯೋಗದ ನಿಯಮಗಳನ್ನು ಖಾಯಂ ಕೆಲಸದಿಂದ ಗುತ್ತಿಗೆ ಆಧಾರಕ್ಕೆ ಪರಿವರ್ತಿಸಿದೆ ಎಂದು ಹೋರಾಟಗಾರರು ಆರೋಪಿಸಿದ್ದಾರೆ.

ಇದನ್ನೂ ಓದಿ: ರಾಮ ಸಮಾಜವಾದಿ ಪಕ್ಷಕ್ಕೆ ಸೇರಿದವ, ನಾವು ರಾಮ ಭಕ್ತರು: ಅಖಿಲೇಶ್ ಯಾದವ್

“ಕೊರೊನಾ ಅವಧಿಯಲ್ಲಿ ಮಾಡಿದ ಅದ್ಭುತ ಸೇವೆಗಾಗಿ ಏಮ್ಸ್ ಕುಟುಂಬದ ಬಗ್ಗೆ ನನಗೆ ತುಂಬಾ ಹೆಮ್ಮೆ ಇದೆ. ರಾಷ್ಟ್ರವೂ ಹೆಮ್ಮೆಪಡುತ್ತದೆ. ದುರದೃಷ್ಟವಶಾತ್, ಈ ಸಾಂಕ್ರಾಮಿಕ ಸಮಯದಲ್ಲಿ, ನರ್ಸಿಂಗ್ ನೌಕರರ ಸಂಘವು ಮುಷ್ಕರ ನಡೆಸುತ್ತಿದೆ. ಒಕ್ಕೂಟವು ಮಂಡಿಸಿರುವ 23 ಬೇಡಿಕೆಗಳಲ್ಲಿ ಬಹುತೇಕ ಎಲ್ಲಾ ಬೇಡಿಕೆಗಳನ್ನು ಏಮ್ಸ್ ಆಡಳಿತ ಮತ್ತು ಸರ್ಕಾರ ಈಡೇರಿಸಿದೆ” ಎಂದು ಏಮ್ಸ್ ನಿರ್ದೇಶಕ ಪ್ರೊ.ರಂದೀಪ್ ಗುಲೇರಿಯಾ ಏಮ್ಸ್ ನರ್ಸಸ್ ಯೂನಿಯನ್‌ಗೆ ವೀಡಿಯೊ ಸಂದೇಶದಲ್ಲಿ ತಿಳಿಸಿದ್ದರು.

“ಆದರೆ, ಏಮ್ಸ್ ನರ್ಸ್‌ಗಳು ಈ ಬೇಡಿಕೆಗಳನ್ನು ಬಹಳ ಸಮಯದಿಂದ ಮುಂದಿಡುತ್ತಿದ್ದಾರೆ ಎಂದು ಯೂನಿಯನ್‌ನ ವಕ್ತಾರರು ತಿಳಿಸಿದ್ದಾರೆ. ಕಳೆದ ವರ್ಷ, ಸರ್ಕಾರವು ಅವರನ್ನು ಸಭೆಗೆ ಕರೆದು ಅವರ ಸಮಸ್ಯೆಗಳಿಗೆ ಪರಿಹಾರವನ್ನು ನೀಡುವ ಭರವಸೆ ನೀಡಿದ್ದರು” ಎಂದಿದ್ದಾರೆ.

ಇದನ್ನೂ ಓದಿ:  ಹೋರಾಟನಿರತ ರೈತರನ್ನು ವಿರೋಧ ಪಕ್ಷಗಳು ದಾರಿ ತಪ್ಪಿಸುತ್ತಿವೆ: ನರೇಂದ್ರ ಮೋದಿ

“ಪ್ರೊಫೆಸರ್ ರಂದೀಪ್ ಗುಲೇರಿಯಾ ಅವರ ಬಗ್ಗೆ ನಮಗೆ ಅತ್ಯಂತ ಗೌರವವಿದೆ. ಆದರೆ ನಮ್ಮ ಎಲ್ಲ ಬೇಡಿಕೆಗಳನ್ನು ಈಗಾಗಲೇ ಈಡೇರಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಹಾಗಾದರೆ ಈಗೀನ ಈ ಎಲ್ಲಾ ಭರವಸೆಗಳು ಯಾವುವು..?” ಎಂದು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ಕಸ್ತೂರ್‌ಬಾ vs ಗಾಂಧಿ ಪುಸ್ತಕದ ಆಯ್ದ ಅಧ್ಯಾಯ: ಕಷ್ಟವಾದರೂ ಇಷ್ಟಪಟ್ಟು ಬದುಕಿದ ಕಸ್ತೂರ್‌ಬಾ ಗಾಂಧಿ…

“6 ನೇ ವೇತನ ಆಯೋಗದ ಶಿಫಾರಸುಗಳ ಬಗ್ಗೆ ನರ್ಸ್‌ಗಳಲ್ಲಿ ತಪ್ಪು ಭಾವನೆ ಇದೆ. ಇದರ ಬಗ್ಗೆ ಒಕ್ಕೂಟದೊಂದಿಗೆ ಅನೇಕ ಸಭೆಗಳನ್ನು ನಡೆಸಿ, ವಿವರಿಸಲಾಗಿದೆ. ಅದೇನೇ ಇದ್ದರೂ, ಅವರ ಬೇಡಿಕೆಗಳನ್ನು ಸಹಾನುಭೂತಿಯಿಂದ ಮತ್ತೆ ಹೊಸದಾಗಿ ಪರಿಗಣಿಸಲು ಸರ್ಕಾರ ಸಿದ್ಧವಿದೆ ಎಂದು ಗುಲೇರಿಯಾ ಹೇಳಿದ್ದಾರೆ.

“ಆದಾಗ್ಯೂ, ಒಂದು ದೇಶವು ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡುತ್ತಿರುವಾಗ, ನರ್ಸ್ ಯೂನಿಯನ್ ಮುಷ್ಕರ ನಡೆಸಲು ನಿರ್ಧರಿಸಿದೆ ಎಂಬುದು ಸೂಕ್ತವಲ್ಲವೆಂದು ತೋರುತ್ತದೆ. ನಿಮ್ಮೆಲ್ಲರಿಗೂ ಕೆಲಸಕ್ಕೆ ಮರಳಲು ಮತ್ತು ನಮಗೆ ಸಹಾಯ ಮಾಡಿ ಎಂದು ನಾನು ಮನವಿ ಮಾಡುತ್ತೇನೆ” ಎಂದು ಪ್ರೊಫೆಸರ್ ಗುಲೇರಿಯಾ ಮನವಿ ಮಾಡಿದ್ದಾರೆ.


ಇದನ್ನೂ ಓದಿ: ರಿಪಬ್ಲಿಕ್ ಟಿವಿ ಸಿಇಒ ವಿಕಾಸ್ ಖಂಚಂದಾನಿಗೆ 14 ದಿನಗಳ ನ್ಯಾಯಾಂಗ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...