Homeಮುಖಪುಟಎಸಿಬಿ ರದ್ದು ಮಾಡಿದ ಹೈಕೋರ್ಟ್: ಏನಂತಾರೆ ರಾಜಕಾರಣಿಗಳು?

ಎಸಿಬಿ ರದ್ದು ಮಾಡಿದ ಹೈಕೋರ್ಟ್: ಏನಂತಾರೆ ರಾಜಕಾರಣಿಗಳು?

- Advertisement -
- Advertisement -

ಸಿದ್ದರಾಮಯ್ಯ ಸರ್ಕಾರ ಹುಟ್ಟುಹಾಕಿದ್ದ ಕರ್ನಾಟಕ ಭ್ರಷ್ಟಾಚಾರ ನಿಗ್ರಹ ದಳವನ್ನು (ಎಸಿಬಿ) ಕರ್ನಾಟಕ ಹೈಕೋರ್ಟ್‌ ರದ್ದುಪಡಿಸಿದ್ದು, ಲೋಕಾಯುಕ್ತಕ್ಕೆ ಮರುಜೀವ ನೀಡಿದೆ.

ಎಸಿಬಿಯಲ್ಲಿ ಬಾಕಿ ಉಳಿದಿರುವ ಎಲ್ಲಾ ಪ್ರಕರಣಗಳನ್ನು ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗಕ್ಕೆ ವರ್ಗಾಯಿಸಲು ಕೋರ್ಟ್ ಆದೇಶಿಸಿದೆ.

2016 ರಲ್ಲಿ ಲೋಕಾಯುಕ್ತ ಅಧಿಕಾರವನ್ನು ಮೊಟಕುಗೊಳಿಸಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಎಸಿಬಿ ರಚನೆ ಮಾಡಿತ್ತು. ಇದನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಅರ್ಜಿಗಳು ದಾಖಲಾಗಿದ್ದವು. ವಿಚಾರಣೆ ನಡೆಸಿದ ಜಸ್ಟೀಸ್‌ ಬಿ ವೀರಪ್ಪ ಹಾಗೂ ಜಸ್ಟೀಸ್‌‌ ಕೆ.ಎಸ್. ಹೇಮಲೇಖ ಅವರಿದ್ದ ಪೀಠ ತೀರ್ಪು ನೀಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಎಸಿಬಿಯ ರಚನೆಯನ್ನು ಪ್ರಶ್ನಿಸಿ ವಕೀಲ ಚಿದಾನಂದ ಅರಸ್, ವಕೀಲರ ಸಂಘ ಮತ್ತು ಸಾಮಾಜಿಕ ಹೋರಾಟಗಾರ ಎಸ್‌.ಆರ್‌.ಹಿರೇಮಠ ಅವರ ಸಮಾಜ ಪರಿವರ್ತನಾ ಸಮುದಾಯ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳಿಗೆ ಸಂಬಂಧಿಸಿದಂತೆ ಈ ಆದೇಶ ನೀಡಲಾಗಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, “ಕೋರ್ಟ್ ಆದೇಶವನ್ನು ನಾನು ಗಮನಿಸಿಲ್ಲ. ನೋಡಿದ ಬಳಿಕ ಪ್ರತಿಕ್ರಿಯೆ ನೀಡುತ್ತೇನೆ” ಎಂದಿದ್ದಾರೆ.

“ಲೋಕಾಯುಕ್ತದ ಬೇರ್ಪಡಿಸಿ ಎಸಿಬಿ ರಚಿಸಿದ್ದೆವು. ಹೈಕೋರ್ಟ್ ತೀರ್ಮಾನ ಗೌರವಿಸುತ್ತೇವೆ. ಆದೇಶ ಏನಿದೆ ಎನ್ನುವುದನ್ನು ನೋಡಿಲ್ಲ. ಆದೇಶ ನೋಡಿದ ನಂತರ ಪ್ರತಿಕ್ರಿಯಿಸುತ್ತೇನೆ” ಎಂದಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪ್ರತಿಕ್ರಿಯೆ ನೀಡಿದ್ದು, “ಎಸಿಬಿ ರದ್ದುಗೊಳಿಸಿರುವ ಮಾಹಿತಿ ಬಂದಿದೆ. ತೀರ್ಪಿನ ಸಮಗ್ರ ಅಂಶದ ಬಗ್ಗೆ ರಾಜ್ಯ ಸರ್ಕಾರದ ಅಡ್ವೋಕೇಟ್ ಜನರಲ್ ಜತೆ ಚರ್ಚೆ ನಡೆಸಿದ ಬಳಿಕ ಪ್ರತಿಕ್ರಿಯೆ ನೀಡುತ್ತೇನೆ” ಎಂದಿದ್ದಾರೆ.

ಭ್ರಷ್ಟಾಚಾರ ನಿಲ್ಲುತ್ತದೆ ಎಂಬ ಭರವಸೆ ಇಲ್ಲ: ಎಚ್.ಡಿ.ಕೆ.

“ಎಸಿಬಿ ರದ್ದು ಮಾಡಿ ಲೋಕಾಯುಕ್ತದಲ್ಲಿ ಭ್ರಷ್ಟಾಚಾರ ನಿಲ್ಲಿಸುತ್ತಾರೆ ಎಂಬ ನಂಬಿಕೆ ನನಗೆ ಇಲ್ಲ” ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.

“ಕುರಿ ಕಾಯುವುದಕ್ಕೆ ತೋಳ ಬಿಡುತ್ತಾರೆ ಎನ್ನುತ್ತಾರಲ್ಲ ಹಾಗೆ ಇದು. ಲೋಕಾಯುಕ್ತದಿಂದ ಶುದ್ಧ ಆಗುತ್ತದೆ ಎಂದು ಭಾವಿಸಿಲ್ಲ. ಮೊದಲು ವಿಧಾನಸೌಧದ ಮೂರನೇ ಮಹಡಿ ಶುದ್ಧವಾಗಬೇಕು” ಎಂದು ಸರಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ.

ಇದನ್ನೂ ಓದಿರಿ: ಯುಪಿ: ಮಹಿಳೆ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದ ಬಿಜೆಪಿ ಮುಖಂಡ ಕೊನೆಗೂ ಅರೆಸ್ಟ್‌

“ಕಾಂಗ್ರೆಸ್ ಸರಕಾರದ ಕಾಲದಲ್ಲಿ ಎಸಿಬಿ ರಚನೆ ಮಾಡಲಾಗಿತ್ತು. ಆ ಸರಕಾರದ ವಿರುದ್ಧ ಬಂದಿದ್ದ ಅನೇಕ‌ ಆರೋಪಗಳನ್ನು ಮೂಲೆಗುಂಪು ಮಾಡುವ ನಿಟ್ಟಿನಲ್ಲಿ ಎಸಿಬಿ ರಚನೆಯಾಗಿತ್ತು. ವಿಧಾನ ಮಂಡಲದಲ್ಲಿ ಕಾಯಿದೆ ತಂದು ಎಸಿಬಿಯನ್ನು ರಚನೆ ಮಾಡಿದ್ದಲ್ಲ ಅದು. ಆ ಸರಕಾರ ಮುಖಭಂಗದಿಂದ ಪಾರಾಗಲು ಎಸಿಬಿ ರಚನೆ ಮಾಡಿತ್ತು” ಎಂದು ಕುಮಾರಸ್ವಾಮಿ ಅವರು ಟೀಕಿಸಿದರು.

“ಐದು ವರ್ಷ ಆಡಳಿತ ನಡೆಸಿದ ಕಾಂಗ್ರೆಸ್ ಸರಕಾರ ತರಾತುರಿಯಲ್ಲಿ ಮಾಡಿದ ಆಗಿನ ಲೋಪದೋಷ ಮುಚ್ಚಿಕೊಳ್ಳಲು ಮಾಡಿದ ತನಿಖಾ ಸಂಸ್ಥೆಯೇ ಎಸಿಬಿ. ನಾನು ಮುಖ್ಯಮಂತ್ರಿ ಆಗಿದ್ದಾಗ ಮತ್ತೊಬ್ಬರ ಮರ್ಜಿನಲ್ಲಿ ಇದ್ದೆ. ಹೀಗಾಗಿ ಎಸಿಬಿಯನ್ನು ರದ್ದು ಮಾಡಲು ನನ್ನಿಂದ ಆಗಲಿಲ್ಲ. ನನ್ನ ಸರಕಾರ ತೆಗೆದು ಅಧಿಕಾರಕ್ಕೆ ಬಂದ ಬಿಜೆಪಿಯು ಎಸಿಬಿಯನ್ನು ರದ್ದು ಮಾಡಲು ಮೂರು ವರ್ಷಗಳಿಂದ ಆಸಕ್ತಿಯನ್ನೆ ತೋರಲಿಲ್ಲ. ಈಗ ರಾಜ್ಯ ಹೈಕೋರ್ಟ್ ಎಸಿಬಿಯನ್ನು ರದ್ದುಗೊಳಿಸುವ ಆದೇಶ ಮಾಡಿದೆ. ಎಸಿಬಿಗೆ ನೀಡಲಾಗಿದ್ದ ಪೊಲೀಸ್ ಠಾಣೆ ಸ್ಥಾನಮಾನವನ್ನು ಮರಳಿ ಲೋಕಾಯುಕ್ತ ಸಂಸ್ಥೆಗೆ ನೀಡಿದೆ” ಎಂದು ತಿಳಿಸಿದ್ದಾರೆ.

ಹೈಕೋರ್ಟ್‌ನಿಂದ ಎಸಿಬಿ ರದ್ದು: ಪೃಥ್ವಿ ರೆಡ್ಡಿ ಸ್ವಾಗತ

ಎಸಿಬಿಯನ್ನು ರದ್ದುಪಡಿಸುವ ಹೈಕೋರ್ಟ್‌ ಆದೇಶವನ್ನು ಆಮ್‌ ಆದ್ಮಿ ಪಾರ್ಟಿ ಸ್ವಾಗತಿಸಿದ್ದು, ಆರು ವರ್ಷಗಳ ಸುದೀರ್ಘ ಹೋರಾಟಕ್ಕೆ ಕೊನೆಗೂ ಯಶಸ್ಸು ಸಿಕ್ಕಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಹೇಳಿದ್ದಾರೆ.

ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಪೃಥ್ವಿ ರೆಡ್ಡಿ, “ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು 2016ರಲ್ಲಿ ಲೋಕಾಯುಕ್ತದ ಅಧಿಕಾರವನ್ನು ಮೊಟಕುಗೊಳಿಸಿ ಎಸಿಬಿ ರಚಿಸಿದಾಗ, ಸರ್ಕಾರದ ವಿರುದ್ಧ ಆಮ್‌ ಆದ್ಮಿ ಪಾರ್ಟಿ ನಾಯಕರು ಎಂಟು ದಿನಗಳ ಉಪವಾಸ ಸತ್ಯಾಗ್ರಹ ಮಾಡಿದ್ದೆವು. ನಂತರ ಸಿದ್ದರಾಮಯ್ಯ ಜೊತೆ ಎಎಪಿ ನಿಯೋಗವು ಚರ್ಚಿಸಿದ್ದರೂ ಮಾತುಕತೆ ಫಲಪ್ರದವಾಗಿರಲಿಲ್ಲ. ಕಳೆದ ಆರು ವರ್ಷಗಳಲ್ಲಿ ಎಸಿಬಿ ರದ್ದು ಪಡಿಸಬೇಕೆಂದು ಆಗ್ರಹಿಸಿ ಎಎಪಿ ನಾನಾ ರೀತಿಯ ಹೋರಾಟ ಮಾಡಿದೆ. ಈಗ ಹೈಕೋರ್ಟ್‌ ಮಧ್ಯಪ್ರವೇಶಿಸಿ ಎಸಿಬಿಯನ್ನು ವಜಾ ಮಾಡಿ, ಅಲ್ಲಿನ ಪ್ರಕರಣಗಳನ್ನು ಲೋಕಾಯುಕ್ತಕ್ಕೆ ವರ್ಗಾಯಿಸಿರುವುದು ಸಂತಸ ತಂದಿದೆ” ಎಂದಿದ್ದಾರೆ.

ಇದನ್ನೂ ಓದಿರಿ: ಸಚಿವ ಬಿಸಿ ನಾಗೇಶ್‌ ನೇತೃತ್ವದ ಮೆರವಣಿಗೆಯಲ್ಲಿ ರಾಷ್ಟ್ರಧ್ವಜಕ್ಕಿಂತ ಎತ್ತರದಲ್ಲಿ ಎಬಿವಿಪಿ ಧ್ವಜ ಹಾರಾಟ!

“ಕೇವಲ ಎಸಿಬಿಯನ್ನು ವಜಾ ಮಾಡಿದರೆ ಸಾಲದು. ಲೋಕಾಯುಕ್ತ ಸಂಸ್ಥೆಗೆ ಹಿಂದೆ ಇದ್ದಂತಹ ಪರಮಾಧಿಕಾರ ಮರಳಿ ಸಿಗಬೇಕು. ಆದರೆ ಭ್ರಷ್ಟಾಚಾರದಲ್ಲಿ ಮುಳುಗಿರುವ ಬಿಜೆಪಿ ಸರ್ಕಾರವು ಲೋಕಾಯುಕ್ತಕ್ಕೆ ಹೆಚ್ಚಿನ ಅಧಿಕಾರ ನೀಡಲಿದೆ ಎಂದು ನಿರೀಕ್ಷಿಸುವುದು ಕೂಡ ಅಸಾಧ್ಯ. ಅಧಿಕಾರ ಸಿಕ್ಕರೆ ಮೊದಲ ಸಚಿವ ಸಂಪುಟದಲ್ಲೇ ಲೋಕಾಯುಕ್ತಕ್ಕೆ ಹೆಚ್ಚಿನ ಅಧಿಕಾರ ನೀಡುವುದಾಗಿ ಪ್ರಣಾಳಿಕೆಯಲ್ಲಿ ಹೇಳಿದ್ದ ಬಿಜೆಪಿಯು ಮೂರು ವರ್ಷವಾದರೂ ಈ ಕುರಿತು ಕ್ರಮ ಕೈಗೊಂಡಿಲ್ಲ. ಲೋಕಾಯುಕ್ತವು ಸರ್ಕಾರದ ಕೈಗೊಂಬೆಯಾಗಿರಬೇಕೆಂದು ಬಿಜೆಪಿ ಸರ್ಕಾರ ಬಯಸುತ್ತಿದೆ” ಎಂದು ಪೃಥ್ವಿ ರೆಡ್ಡಿ ಎಚ್ಚರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...