Homeಮುಖಪುಟಸರ್ಕಾರಿ ಜಮೀನಿನಲ್ಲಿರುವ ಅಕ್ರಮ ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿಸುವಂತೆ ಸೂಚಿಸಿದ ಕೇರಳ ಹೈಕೋರ್ಟ್‌

ಸರ್ಕಾರಿ ಜಮೀನಿನಲ್ಲಿರುವ ಅಕ್ರಮ ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿಸುವಂತೆ ಸೂಚಿಸಿದ ಕೇರಳ ಹೈಕೋರ್ಟ್‌

- Advertisement -
- Advertisement -

ಕೇರಳ ಹೈಕೋರ್ಟ್ ರಾಜ್ಯದಾದ್ಯಂತ ಸರ್ಕಾರಿ ಜಮೀನಿನಲ್ಲಿರುವ ಅಕ್ರಮ ಧಾರ್ಮಿಕ ರಚನೆಗಳನ್ನು ತೆಗೆದುಹಾಕಲು ಆದೇಶಿಸಿದ್ದು, ಇಂತಹ ಅನಧಿಕೃತ ನಿರ್ಮಾಣಗಳು ವಿವಿಧ ಧಾರ್ಮಿಕ ಸಮುದಾಯಗಳ ನಡುವೆ ಘರ್ಷಣೆಯನ್ನು ಉಂಟುಮಾಡಬಹುದು ಎಂದು ಹೇಳಿದೆ.

ಸರ್ಕಾರಿ ಭೂಮಿಯಲ್ಲಿ ಅಕ್ರಮವಾಗಿ ತಲೆ ಎತ್ತಿರುವ ಎಲ್ಲಾ ಧಾರ್ಮಿಕ ಕಟ್ಟಡಗಳನ್ನು ಕೆಡವುವಂತೆ ಕೇರಳ ಹೈಕೋರ್ಟ್ ಮಹತ್ವದ ಆದೇಶವೊಂದರಲ್ಲಿ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.  ಈ ಕುರಿತು ಆದೇಶವನ್ನು ಹೊರಡಿಸಿದ ನ್ಯಾಯಮೂರ್ತಿ ಪಿ.ವಿ.ಕುಂಞಕೃಷ್ಣನ್, ಈ ಕುರಿತು ಕೈಗೊಂಡ ಕ್ರಮಗಳ ಕುರಿತು ಒಂದು ವರ್ಷದೊಳಗೆ ಹೈಕೋಟ್‌ನ ರಿಜಿಸ್ಟ್ರಾರ್ ಜನರಲ್‌ಗೆ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ.

ಹಿಂದೂ, ಕ್ರಿಶ್ಚಿಯನ್, ಮುಸ್ಲಿಂ ಅಥವಾ ಇತರ ಯಾವುದೇ ಧರ್ಮವನ್ನು ತೆರವು ಪ್ರಕ್ರಿಯೆಯಲ್ಲಿ ಪರಿಗಣಿಸಬಾರದು. ಸರ್ಕಾರಿ ಭೂಮಿಯಲ್ಲಿ ಅನಧಿಕೃತ ಧಾರ್ಮಿಕ ಕೇಂದ್ರಗಳಿಗೆ ಅವಕಾಶ ನೀಡಬಾರದು ಎಂದು ನಿರ್ದೇಶನ ನೀಡಿದ್ದಾರೆ.

ದೇವರು ಸರ್ವವ್ಯಾಪಿಯಾಗಿದ್ದಾನೆ, ಆದ್ದರಿಂದ ಧಾರ್ಮಿಕ ಕಟ್ಟಡಗಳನ್ನು ನಿರ್ಮಿಸಲು ಭಕ್ತರು ಸರ್ಕಾರಿ ಭೂಮಿಯನ್ನು ಅತಿಕ್ರಮಿಸಬೇಕಾಗಿಲ್ಲ. ಅದನ್ನು ಭೂರಹಿತರಿಗೆ ಹಂಚಲಿ, ಇದರಿಂದ ದೇವರು ಹೆಚ್ಚು ಸಂತೋಷ ಪಡುತ್ತಾನೆ ಮತ್ತು ಆಶೀರ್ವಾದವನ್ನು ನೀಡುತ್ತಾನೆ ಎಂದು ನ್ಯಾಯಮೂರ್ತಿಗಳು ಹೇಳಿದ್ದಾರೆ.

ಸರ್ಕಾರಿ ಭೂಮಿಯಲ್ಲಿ ಯಾವುದೇ ಧಾರ್ಮಿಕ ಕಟ್ಟಡಗಳು ಅಥವಾ ಇತರ ರಚನೆಗಳು ಅಸ್ತಿತ್ವದಲ್ಲಿವೆಯೇ ಎಂಬುದನ್ನು ತಹಸೀಲ್ದಾರ್ ಮತ್ತು ಗ್ರಾಮಾಧಿಕಾರಿಗಳ ಮೂಲಕ ತನಿಖೆ ಮಾಡಲು ಮುಖ್ಯ ಕಾರ್ಯದರ್ಶಿ ಜಿಲ್ಲಾಧಿಕಾರಿಗಳಿಗೆ ಸೂಚಿಸಬೇಕು. ಅನಧಿಕೃತ ಕಟ್ಟಡಗಳು ಕಂಡುಬಂದಲ್ಲಿ ಸಾರ್ವಜನಿಕರು ಈ ಬಗ್ಗೆ ಸಂಬಂಧಪಟ್ಟ ಜಿಲ್ಲಾಧಿಕಾರಿಗಳ ಗಮನಕ್ಕೂ ತರಬಹುದು. ಜಿಲ್ಲಾಧಿಕಾರಿ ಆರು ತಿಂಗಳೊಳಗೆ ಈ ಬಗ್ಗೆ ತನಿಖೆ ಪೂರ್ಣಗೊಳಿಸಬೇಕು. ಅಕ್ರಮ ಕಟ್ಟಡಗಳು ಕಂಡು ಬಂದರೆ ಆರು ತಿಂಗಳೊಳಗೆ ಪೊಲೀಸರ ನೆರವಿನಿಂದ ಅದನ್ನು ನೆಲಸಮ ಮಾಡಬೇಕು ಎಂದು ಹೈಕೋರ್ಟ್‌ ತೀರ್ಪಿನ ವೇಳೆ ಹೇಳಿದೆ.

ಕೇರಳದ ಪ್ಲಾಂಟೇಶನ್ ಕಾರ್ಪೊರೇಷನ್ ಸಲ್ಲಿಸಿದ ರಿಟ್ ಅರ್ಜಿಗೆ ಪ್ರತಿಕ್ರಿಯೆಯಾಗಿ ಹೈಕೋರ್ಟ್‌ ಈ ಆದೇಶವನ್ನು ನೀಡಿದೆ. ದೀರ್ಘಾವಧಿಯ ಲೀಸ್‌ನಲ್ಲಿ ನೀಡಲಾದ ತನ್ನ ಆಸ್ತಿಗಳನ್ನು ಒತ್ತುವರಿ ಮಾಡಿಕೊಂಡಿರುವವರನ್ನು ತೆರವುಗೊಳಿಸಿ ಸರ್ಕಾರಿ ಭೂಮಿಯನ್ನು ರಕ್ಷಿಸುವಂತೆ ಕೋರಿ ಹೈಕೋರ್ಟ್‌ ಮೊರೆ ಹೋಗಲಾಗಿತ್ತು. ಪಥನಂತಿಟ್ಟದಲ್ಲಿರುವ ಚಂದನಪಲ್ಲಿ ಎಸ್ಟೇಟ್‌ನ ಸಿ ವಿಭಾಗದಲ್ಲಿ ಅತಿಕ್ರಮಣ ಮತ್ತು ಅನಧಿಕೃತ ಕಟ್ಟಡಗಳ ನಿರ್ಮಾಣದ ಬಗ್ಗೆ ಅರ್ಜಿಯಲ್ಲಿ ಹೇಳಲಾಗಿತ್ತು. ಅರ್ಜಿಯನ್ನು ಪರಿಗಣಿಸಿದ ಹೈಕೋರ್ಟ್, ಅತಿಕ್ರಮಣದಾರರನ್ನು ತೆರವು ಮಾಡುವಂತೆ ಹಾಗೂ ಆಸ್ತಿಯಲ್ಲಿರುವ ಅಕ್ರಮ ಕಟ್ಟಡಗಳನ್ನು ಆರು ತಿಂಗಳೊಳಗೆ ತೆರವುಗೊಳಿಸುವಂತೆ ಪತ್ತನಂತಿಟ್ಟ ಜಿಲ್ಲಾಧಿಕಾರಿ, ಡಿಜಿಪಿ, ಪತ್ತನಂತಿಟ್ಟ ಜಿಲ್ಲಾ ಪೊಲೀಸ್ ಮುಖ್ಯಸ್ಥರು, ಅಡೂರು ಆರ್‌ಡಿಒ, ಕೊನ್ನಿ ವಿಭಾಗೀಯ ಅರಣ್ಯಾಧಿಕಾರಿಗೆ ನಿರ್ದೇಶನವನ್ನು ನೀಡಿದೆ.

ಇದನ್ನು ಓದಿ: ಕನ್ಯಾಕುಮಾರಿಯಲ್ಲಿ ಮೋದಿ ಧ್ಯಾನ: ವಿವೇಕಾನಂದ ಸ್ಮಾರಕಕ್ಕೆ ತೆರಳದಂತೆ ಪ್ರವಾಸಿಗಳಿಗೆ ನಿರ್ಬಂಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...