HomeಮುಖಪುಟNICE ನಲ್ಲಿ ಯೋಜನೆಯಲ್ಲಿ 'ನೈಸ್' ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

- Advertisement -
- Advertisement -

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ ‘ನೈಸ್’ ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್‌ಪ್ರೈಸಸ್ (NICE) ಹಾಗೂ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (KIADB) ಸಲ್ಲಿಸಿದ್ದ ಮೇಲ್ಮನವಿಗಳನ್ನು ವಜಾಗೊಳಿಸುವ ವೇಳೆ ನ್ಯಾಯಾಲಯ ಈ ಐತಿಹಾಸಿಕ ಮತ್ತು ಖಂಡನೀಯ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ.

ನ್ಯಾಯಮೂರ್ತಿಗಳಾದ ಡಿ.ಕೆ. ಸಿಂಗ್ ಮತ್ತು ಟಿ.ಎಂ. ನದಾಫ್ ಅವರನ್ನೊಳಗೊಂಡ ವಿಭಾಗೀಯ ಪೀಠವು ಈ ಪ್ರಮುಖ ಆದೇಶ ನೀಡಿದ್ದು, ನೈಸ್ ಯೋಜನೆಯಲ್ಲಿ ನೈಸ್ ಎನ್ನುವಂಥದ್ದು ಏನೂ ಇಲ್ಲ ಎಂದು ಖಾರವಾಗಿ ಹೇಳಿದೆ. ತಲೆಮಾರುಗಳಿಂದ ಕೃಷಿ ಮಾಡಿಕೊಂಡು ಬದುಕುತ್ತಿದ್ದ ಬಡ ರೈತರ ಜಮೀನುಗಳನ್ನು ಸಂವಿಧಾನದ 300A ವಿಧಿಯಡಿ ನೀಡಬೇಕಾದ ನ್ಯಾಯಯುತ ಪರಿಹಾರವನ್ನೂ ನೀಡದೆ ಬಲವಂತವಾಗಿ ಕಸಿದುಕೊಳ್ಳಲಾಗಿದೆ ಎಂದು ಕೋರ್ಟ್ ಅಸಮಾಧಾನ ಹೊರಹಾಕಿದೆ. 2025ರ ಜುಲೈ 4ರಂದು ರೈತರ ಪರವಾಗಿ ಏಕಸದಸ್ಯ ಪೀಠ ನೀಡಿದ್ದ ಆದೇಶವನ್ನು ಪ್ರಶ್ನಿಸಿ ನೈಸ್ ಸಂಸ್ಥೆ ಹಾಗೂ ಕೆಐಎಡಿಬಿ ಮೇಲ್ಮನವಿ ಸಲ್ಲಿಸಿದ್ದವು. ಆದರೆ, ಭೂಮಿ ಸ್ವಾಧೀನಪಡಿಸಿಕೊಂಡ ಮೂಲ ಉದ್ದೇಶಕ್ಕಾಗಿಯೇ ಅದನ್ನು ಬಳಸಲಾಗಿಲ್ಲ ಎಂಬ ಏಕಸದಸ್ಯ ಪೀಠದ ತೀರ್ಮಾನವನ್ನು ವಿಭಾಗೀಯ ಪೀಠವೂ ಎತ್ತಿಹಿಡಿದಿದೆ.

ಎಕ್ಸ್‌ಪ್ರೆಸ್‌ವೇ, ಪೆರಿಫೆರಲ್ ರಸ್ತೆ, ಲಿಂಕ್ ರಸ್ತೆ, ಟೋಲ್ ಪ್ಲಾಜಾ ಮತ್ತು ಇಂಟರ್‌ಚೇಂಜ್ ನಿರ್ಮಾಣಕ್ಕಾಗಿ ರೈತರ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾಗಿತ್ತು. ಆದರೆ, 2003ರಿಂದ 2009ರ ನಡುವೆ ಅಂತಿಮ ಅಧಿಸೂಚನೆಗಳು ಹೊರಬಿದ್ದಿದ್ದರೂ, ಸತತ 11ರಿಂದ 23 ವರ್ಷಗಳು ಕಳೆದರೂ ಪರಿಹಾರ ನಿಗದಿಪಡಿಸುವ ‘ಅವಾರ್ಡ್’ ಪ್ರಕಟಿಸದಿರುವುದು ಮತ್ತು ಅದಕ್ಕೆ ಸೂಕ್ತ ಕಾರಣ ನೀಡದಿರುವುದು ಇಡೀ ಭೂಸ್ವಾಧೀನ ಪ್ರಕ್ರಿಯೆಯನ್ನೇ ಕಾನೂನುಬಾಹಿರವಾಗಿಸುತ್ತದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಅವರು 2026ರ ಜುಲೈ 28ರಂದು ಸಲ್ಲಿಸಿದ ಪ್ರಮಾಣಪತ್ರವನ್ನು ಉಲ್ಲೇಖಿಸಿದ ಹೈಕೋರ್ಟ್, ಕಳೆದ 25-26 ವರ್ಷಗಳಲ್ಲಿ ಪ್ರಸ್ತಾವಿತ 111 ಕಿಲೋಮೀಟರ್ ಎಕ್ಸ್‌ಪ್ರೆಸ್‌ವೇ ಪೈಕಿ ನಿರ್ಮಾಣವಾಗಿರುವುದು ಕೇವಲ 5 ಕಿಲೋಮೀಟರ್ ಮಾತ್ರ ಎನ್ನುವ ಆಘಾತಕಾರಿ ಸತ್ಯವನ್ನು ಹೊರಹಾಕಿದೆ.

ರಸ್ತೆ ನಿರ್ಮಾಣಕ್ಕೆಂದು ಪಡೆದ ಭೂಮಿಯನ್ನು ನೈಸ್ ಸಂಸ್ಥೆಯು ತನ್ನ ಖಾಸಗಿ ರಿಯಲ್ ಎಸ್ಟೇಟ್ ಲಾಭಕ್ಕಾಗಿ ಬಳಸಿಕೊಂಡಿದೆ ಎಂಬ ಅಂಶವೂ ವಿಚಾರಣೆ ವೇಳೆ ಬಯಲಾಗಿದೆ. ಮಾದವಾರ, ಕೆಂಗೇರಿ, ಪಿಳ್ಳಗನಹಳ್ಳಿ, ವರಹಸಂದ್ರ ಸೇರಿದಂತೆ ವಿವಿಧ ಭಾಗಗಳ 110 ಎಕರೆಗೂ ಅಧಿಕ ಭೂಮಿಯನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸಲು ನೈಸ್ ಸಂಸ್ಥೆಯು ಹಲವು ಜಂಟಿ ಅಭಿವೃದ್ಧಿ ಒಪ್ಪಂದಗಳನ್ನು (JDA) ಮಾಡಿಕೊಂಡಿರುವುದನ್ನು ನ್ಯಾಯಾಲಯ ಗಂಭೀರವಾಗಿ ಪರಿಗಣಿಸಿದೆ. ಸುಮಾರು 20 ಸಾವಿರ ಎಕರೆಗೂ ಅಧಿಕ ಭೂ ಬ್ಯಾಂಕ್ ಮೇಲೆ ಕುಳಿತಿರುವ ಸಂಸ್ಥೆಯು, ಸುಪ್ರೀಂ ಕೋರ್ಟ್ ಆದೇಶ ಹಾಗೂ ಫ್ರೇಮ್‌ವರ್ಕ್ ಒಪ್ಪಂದದ (FWA) ಉಲ್ಲಂಘನೆ ಮಾಡಿ ಭೂಮಿಯನ್ನೇ ಬಂಡವಾಳವಾಗಿಸಿಕೊಂಡು ಅಕ್ರಮವಾಗಿ ಟೋಲ್ ಸಂಗ್ರಹಿಸುತ್ತಿದೆ ಎಂದು ಪೀಠ ವಾಗ್ದಾಳಿ ನಡೆಸಿದೆ.

ಈ ಪ್ರಕರಣದಲ್ಲಿ ನಡೆದಿರುವ ಬೃಹತ್ ವಂಚನೆ ಹಾಗೂ ಅಕ್ರಮಗಳ ಕುರಿತು ಸ್ವತಂತ್ರ ತಜ್ಞರ ತಂಡದಿಂದ ಸಮಗ್ರ ತನಿಖೆ ಮತ್ತು ಫೊರೆನ್ಸಿಕ್ ಆಡಿಟ್ ನಡೆಸಬೇಕಾದ ತುರ್ತು ಅಗತ್ಯವಿದೆ ಎಂದು ಉಚ್ಚ ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಆದರೆ, ಪ್ರಸ್ತುತ ರಾಜ್ಯ ಸರ್ಕಾರವೇ ಈ ಯೋಜನಾ ಪ್ರವರ್ತಕರಿಗೆ ನೆರವಾಗುವ ರೀತಿಯಲ್ಲಿ ವರ್ತಿಸುತ್ತಿರುವುದು ಕಂಡುಬರುತ್ತಿದೆ ಎಂದು ಹೇಳಿರುವ ಹೈಕೋರ್ಟ್, ಸರ್ಕಾರದ ಕಡೆಯಿಂದ ನಿಷ್ಪಕ್ಷಪಾತ ತನಿಖೆ ನಡೆಯುವ ಬಗ್ಗೆ ನಮಗೆ ತೀವ್ರ ಅನುಮಾನವಿದೆ ಎಂದು ಸರ್ಕಾರದ ಧೋರಣೆಯನ್ನು ತೀವ್ರವಾಗಿ ಖಂಡಿಸಿದೆ.

1990ರ ದಶಕದ ಮಧ್ಯಭಾಗದಲ್ಲಿ ಆರಂಭಗೊಂಡು, 1997ರ ಏಪ್ರಿಲ್‌ನಲ್ಲಿ ಫ್ರೇಮ್‌ವರ್ಕ್ ಒಪ್ಪಂದಕ್ಕೆ ಸಹಿ ಹಾಕಿದ್ದ ಈ ಬೃಹತ್ ಯೋಜನೆ, ಮೂರು ದಶಕಗಳು ಕಳೆದರೂ ಪೂರ್ಣಗೊಳ್ಳದೆ ಕೇವಲ ರಿಯಲ್ ಎಸ್ಟೇಟ್ ದಂಧೆಯಾಗಿ ಮಾರ್ಪಟ್ಟಿದೆ. ಪೆರಿಫೆರಲ್ ಮತ್ತು ಲಿಂಕ್ ರಸ್ತೆಗಳು ನಿರ್ಮಾಣವಾಗಿದ್ದರೂ, ಪ್ರಮುಖ 111 ಕಿ.ಮೀ. ಎಕ್ಸ್‌ಪ್ರೆಸ್‌ವೇ ಹಾಗೂ ಟೌನ್‌ಶಿಪ್‌ಗಳು ಕೇವಲ ಕಾಗದದಲ್ಲೇ ಉಳಿದಿದ್ದು, ರೈತರ ಬದುಕಿನ ಜೊತೆ ಚೆಲ್ಲಾಟವಾಡಿದ ನೈಸ್ ಸಂಸ್ಥೆಯ ಮುಖವಾಡವನ್ನು ಹೈಕೋರ್ಟ್‌ ತೀರ್ಪು ಸಂಪೂರ್ಣವಾಗಿ ಕಳಚಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...