Homeಕರ್ನಾಟಕಹೈಕೋರ್ಟ್‌ನಿಂದ ಧರ್ಮಸ್ಥಳ ಪ್ರಕರಣದ ಸುದ್ದಿ ಪ್ರಸಾರಕ್ಕೆ ಹಸಿರು ನಿಶಾನೆ: ವಿಚಾರಣಾ ನ್ಯಾಯಾಲಯದ ಆದೇಶ ರದ್ದು

ಹೈಕೋರ್ಟ್‌ನಿಂದ ಧರ್ಮಸ್ಥಳ ಪ್ರಕರಣದ ಸುದ್ದಿ ಪ್ರಸಾರಕ್ಕೆ ಹಸಿರು ನಿಶಾನೆ: ವಿಚಾರಣಾ ನ್ಯಾಯಾಲಯದ ಆದೇಶ ರದ್ದು

- Advertisement -
- Advertisement -

ಬೆಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂಬ ಗಂಭೀರ ಆರೋಪಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರ ಮಾಡುವುದನ್ನು ತಡೆಹಿಡಿಯುವ ವಿಚಾರಣಾ ನ್ಯಾಯಾಲಯದ ಆದೇಶವನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ. ಈ ಮಹತ್ವದ ನಿರ್ಧಾರದ ಮೂಲಕ, ಪ್ರಕರಣಕ್ಕೆ ಸಂಬಂಧಿಸಿದಂತೆ ಮುಕ್ತವಾಗಿ ವರದಿ ಮಾಡಲು ಮಾಧ್ಯಮಗಳಿಗೆ ಅವಕಾಶ ಕಲ್ಪಿಸಲಾಗಿದೆ.

ಡಿ. ಹರ್ಷೇಂದ್ರ ಕುಮಾರ್ ಅವರ ವಿರುದ್ಧ ಯಾವುದೇ ಸುದ್ದಿ ಪ್ರಕಟಿಸದಂತೆ ಮಾಧ್ಯಮಗಳನ್ನು ನಿರ್ಬಂಧಿಸಿ ಬೆಂಗಳೂರಿನ ಹೆಚ್ಚುವರಿ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯವು ಜುಲೈ 8, 2025 ರಂದು ನೀಡಿದ್ದ ಏಕಪಕ್ಷೀಯ ಪ್ರತಿಬಂಧಕ ಆದೇಶವನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ವಜಾಗೊಳಿಸಿದೆ. ಈ ಆದೇಶವು ಪತ್ರಿಕಾ ಸ್ವಾತಂತ್ರ್ಯ ಮತ್ತು ಸಾರ್ವಜನಿಕ ಹಿತಾಸಕ್ತಿಯ ದೃಷ್ಟಿಯಿಂದ ಮಹತ್ವ ಪಡೆದುಕೊಂಡಿದೆ.

ದಕ್ಷಿಣ ಕನ್ನಡದ ‘ಕುಡ್ಲ ರ‍್ಯಾಂಪೇಜ್‌’ ಯೂಟ್ಯೂಬ್ ಚಾನೆಲ್‌ನ ಪ್ರಧಾನ ಸಂಪಾದಕ ಅಜಯ್‌ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠ, ಈ ಆದೇಶವನ್ನು ಹೊರಡಿಸಿದೆ. ಅಲ್ಲದೆ, ಈ ಮಧ್ಯಂತರ ಅರ್ಜಿಯನ್ನು ಹೊಸದಾಗಿ ಮತ್ತು ನ್ಯಾಯಯುತವಾಗಿ ಪರಿಗಣಿಸುವಂತೆ ಪ್ರಕರಣವನ್ನು ಮತ್ತೆ ವಿಚಾರಣಾ ನ್ಯಾಯಾಲಯಕ್ಕೆ ಕಳುಹಿಸಲಾಗಿದೆ. ವಿಚಾರಣಾ ನ್ಯಾಯಾಲಯವು ಈ ಆದೇಶದಲ್ಲಿರುವ ಅಂಶಗಳನ್ನು ಗಣನೆಗೆ ತೆಗೆದುಕೊಳ್ಳಬೇಕು ಹಾಗೂ ಮಧ್ಯಂತರ ಅರ್ಜಿಯನ್ನು ತುರ್ತಾಗಿ ನಿರ್ಧರಿಸಬೇಕು ಎಂದು ಹೈಕೋರ್ಟ್ ಸ್ಪಷ್ಟ ನಿರ್ದೇಶನ ನೀಡಿದೆ. ಈ ಮೂಲಕ, ವಿಚಾರಣಾ ನ್ಯಾಯಾಲಯವು ಎಲ್ಲಾ ಪಕ್ಷಗಳ ವಾದಗಳನ್ನು ಆಲಿಸಿ ಸಮಂಜಸ ನಿರ್ಧಾರ ತೆಗೆದುಕೊಳ್ಳಲು ಅವಕಾಶ ಕಲ್ಪಿಸಿದೆ.

ಪ್ರಕರಣದ ಹಿನ್ನೆಲೆ ಮತ್ತು ಕಾನೂನು ಹೋರಾಟ

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂಬ ಆರೋಪವು ಸಾರ್ವಜನಿಕ ವಲಯದಲ್ಲಿ ದೊಡ್ಡ ಸಂಚಲನ ಮೂಡಿಸಿತ್ತು. ಈ ವಿಷಯಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳು ವರದಿ ಮಾಡಿದಾಗ, ಹರ್ಷೇಂದ್ರ ಕುಮಾರ್ ಅವರು ತಮ್ಮ ವಿರುದ್ಧ ಮಾಧ್ಯಮಗಳು ಸುಳ್ಳು ಮತ್ತು ಮಾನಹಾನಿಕರ ಹೇಳಿಕೆಗಳನ್ನು ಪ್ರಸಾರ ಮಾಡುತ್ತಿವೆ ಎಂದು ಆರೋಪಿಸಿ ಕಾನೂನು ಹೋರಾಟಕ್ಕೆ ಇಳಿದಿದ್ದರು.

ಬೆಂಗಳೂರಿನ ಹೆಚ್ಚುವರಿ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ದಾವೆ ಹೂಡಿದ ಅವರು, ತಮ್ಮ ಕುಟುಂಬ ಮತ್ತು ಸಂಸ್ಥೆಗಳ ವಿರುದ್ಧ ಆನ್‌ಲೈನ್‌ ಮತ್ತು ಮಾಧ್ಯಮಗಳಲ್ಲಿ ಮಾನಹಾನಿಕರ ವರದಿಗಳನ್ನು ಪ್ರಸಾರ ಮಾಡುವುದನ್ನು ತಡೆಯುವಂತೆ ಕೋರಿದ್ದರು. ಈ ದಾವೆಯ ವಿಚಾರಣೆ ನಡೆಸಿದ ನ್ಯಾಯಾಲಯವು, ಡಿಜಿಟಲ್, ಸಾಮಾಜಿಕ ಮತ್ತು ಮುದ್ರಣ ಮಾಧ್ಯಮಗಳಲ್ಲಿ ಯಾವುದೇ ಮಾನಹಾನಿಕರ ವಿಷಯ ಪ್ರಸಾರ ಮಾಡದಂತೆ ಮಾಧ್ಯಮ ಸಂಸ್ಥೆಗಳು ಮತ್ತು ಇತರ ವ್ಯಕ್ತಿಗಳಿಗೆ ಏಕಪಕ್ಷೀಯವಾಗಿ ನಿರ್ಬಂಧ ಹೇರಿ ಆದೇಶ ಹೊರಡಿಸಿತ್ತು.

ಈ ಆದೇಶವು ಮಾಧ್ಯಮದ ಸ್ವಾತಂತ್ರ್ಯಕ್ಕೆ ಧಕ್ಕೆಯಾಗಿದೆ ಎಂದು ವಾದಿಸಿ, ಕುಡ್ಲ ರ‍್ಯಾಂಪೇಜ್‌ ಯೂಟ್ಯೂಬ್ ಚಾನೆಲ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯ ವಿಚಾರಣೆಯ ನಂತರ, ಹೈಕೋರ್ಟ್ ವಿಚಾರಣಾ ನ್ಯಾಯಾಲಯದ ಆದೇಶವನ್ನು ರದ್ದುಗೊಳಿಸಿದೆ.

ಈ ಆದೇಶದಿಂದಾಗಿ, ಈ ಪ್ರಕರಣಕ್ಕೆ ಸಂಬಂಧಿಸಿದ ಯಾವುದೇ ಸುದ್ದಿಯನ್ನು ಮಾಧ್ಯಮಗಳು ವರದಿ ಮಾಡಬಹುದೇ ಎಂಬ ಗೊಂದಲಕ್ಕೆ ತೆರೆ ಬಿದ್ದಿದ್ದು, ಈಗ ನ್ಯಾಯಾಲಯದ ನಿರ್ದೇಶನದಂತೆ ವಿಚಾರಣಾ ನ್ಯಾಯಾಲಯದ ಮುಂದಿನ ಆದೇಶವನ್ನು ನಿರೀಕ್ಷಿಸಲಾಗಿದೆ. ಈ ಪ್ರಕರಣವು ಪತ್ರಿಕಾ ಸ್ವಾತಂತ್ರ್ಯ ಮತ್ತು ವೈಯಕ್ತಿಕ ಘನತೆಯ ನಡುವಿನ ಸೂಕ್ಷ್ಮ ಸಮತೋಲನದ ಕುರಿತು ಮತ್ತೊಮ್ಮೆ ಚರ್ಚೆಗೆ ಕಾರಣವಾಗಿದೆ.

ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣದಲ್ಲಿ ದೋಷಿ: ವಿಶೇಷ ನ್ಯಾಯಾಲಯದಿಂದ ತೀರ್ಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...