Homeಕರ್ನಾಟಕಉನ್ನತ ಶಿಕ್ಷಣದಲ್ಲಿ ಕನ್ನಡ ಕಡ್ಡಾಯಗೊಳಿಸಲು ಒತ್ತಾಯಿಸಬೇಡಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ಉನ್ನತ ಶಿಕ್ಷಣದಲ್ಲಿ ಕನ್ನಡ ಕಡ್ಡಾಯಗೊಳಿಸಲು ಒತ್ತಾಯಿಸಬೇಡಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

- Advertisement -
- Advertisement -

ಮುಂದಿನ ಆದೇಶದವರೆಗೆ ಉನ್ನತ ಶಿಕ್ಷಣದಲ್ಲಿ ಕನ್ನಡವನ್ನು ಕಡ್ಡಾಯಗೊಳಿಸುವಂತೆ ಒತ್ತಾಯಿಸಬೇಡಿ ಎಂದು ಕರ್ನಾಟಕ ಹೈಕೋರ್ಟ್ ಗುರುವಾರ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಎನ್‌ಇಪಿ 2020 ರ ಉದ್ದೇಶದ ಅನುಷ್ಠಾನದ ಆಧಾರದ ಮೇಲೆ ಪದವಿಪೂರ್ವ ಕೋರ್ಸ್‌ಗಳಲ್ಲಿ ಕನ್ನಡವನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು.

ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ನಂತರ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ತಿ ಮತ್ತು ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ಅವರ ವಿಭಾಗೀಯ ಪೀಠವು ಮಧ್ಯಂತರ ಆದೇಶ ನೀಡಿದೆ.

“ಎನ್ಇಪಿ 2020 ರ ಅನುಷ್ಠಾನದ ಆಧಾರದ ಮೇಲೆ ಉನ್ನತ ಅಧ್ಯಯನಗಳಲ್ಲಿ ಕನ್ನಡವನ್ನು ಕಡ್ಡಾಯ ವಿಷಯವಾಗಿ ಅಳವಡಿಸುವ ವಿಚಾರದಲ್ಲಿ ಮುಂದಿನ ಆದೇಶದವರೆಗೆ ಭಾಷೆಯನ್ನು ಕಡ್ಡಾಯಗೊಳಿಸುವಂತೆ ಒತ್ತಾಯಿಸಬಾರದು’’ ಎಂದು ನ್ಯಾಯಾಲಯ ಮಧ್ಯಂತರ ಆದೇಶದಲ್ಲಿ ತಿಳಿಸಿದೆ.

ಇದನ್ನೂ ಓದಿ: ಕನ್ನಡಪರ ಹೋರಾಟಗಾರರನ್ನು ಬೆಂಬಲಿಸಿದ ಕನ್ನಡ ಚಿತ್ರರಂಗ

ಸಂಸ್ಕೃತ ಭಾರತಿ ಕರ್ನಾಟಕ ಟ್ರಸ್ಟ್ ಮತ್ತು ಬೆಂಗಳೂರಿನ ಬಸವನಗುಡಿಯ ವಿಜಯ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಕೆ.ಜಿ.ಶಿವಕುಮಾರ್ ಮತ್ತಿತರರು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಾಲಯ ಈ ತೀರ್ಪು ನೀಡಿದೆ.

ಕನ್ನಡವನ್ನು ಕಡ್ಡಾಯ ಭಾಷೆಯನ್ನಾಗಿ ಮಾಡುವ ರಾಜ್ಯ ಸರ್ಕಾರದ ನಿರ್ಧಾರದ ಕುರಿತು ಕೇಂದ್ರದ ಜೊತೆಗೆ ಸಮಾಲೋಚಿಸಬೇಕಿದೆ. ಕೇಂದ್ರ ಸರ್ಕಾರದ ನಿಲುವಿನ ಸಮಾಲೋಚನೆ ನಂತರ ತಿಳಿಸಲಾಗುವುದು ಎಂದು ಹೆಚ್ಚುವರಿ ಸಾಲಿಸಿಟರ್ ಜನರಲ್ ಎಂ.ಬಿ.ನರಗುಂದ ತಿಳಿಸಿದ್ದು, ಸಮಾಲೋಚಿಸಿ ನಿರ್ಧಾರ ತೆಗೆದುಕೊಳ್ಳಬೇಕಾಗಿರುವುದರಿಂದ ನಿಲುವನ್ನು ಸ್ಪಷ್ಟಪಡಿಸಲು ಸಮಯ ಕೋರಿದ್ದಾರೆ.

ಅಡ್ವೊಕೇಟ್ ಜನರಲ್ ಪ್ರಭುಲಿಂಗ ಕೆ ನಾವಡಗಿ , ಈಗಾಗಲೇ ನಾಲ್ಕು ಲಕ್ಷ ವಿದ್ಯಾರ್ಥಿಗಳು ಕನ್ನಡವನ್ನು ಒಂದು ವಿಷಯವಾಗಿ ಆಯ್ಕೆ ಮಾಡಿಕೊಂಡು ಪ್ರವೇಶ ಪಡೆದಿದ್ದು, ಈ ಹಂತದಲ್ಲಿ ಪ್ರವೇಶಗಳು ಬಹುತೇಕ ಮುಗಿದಿವೆ. ಅರ್ಜಿದಾರರು-ವಿದ್ಯಾರ್ಥಿಗಳು ಈಗಾಗಲೇ 12ನೇ ತರಗತಿವರೆಗೆ ಕನ್ನಡ ಭಾಷೆಯನ್ನು ಅಧ್ಯಯನ ಮಾಡಿದ್ದು, ಉನ್ನತ ವ್ಯಾಸಂಗದಲ್ಲಿ ಕನ್ನಡ ಭಾಷೆಯನ್ನು ಅಧ್ಯಯನ ಮಾಡಲು ಯಾವುದೇ ವಿರೋಧ ವ್ಯಕ್ತಪಡಿಸುವಂತಿಲ್ಲ ಎಂದು ವಾದಿಸಿದ್ದರು.


ಇದನ್ನೂ ಓದಿ: ಬಾವುಟಕ್ಕೆ ಬೆಂಕಿ ಇಟ್ಟವರನ್ನು ಶಿಕ್ಷಿಸಿ, ನಮ್ಮ ಧ್ವಜ ಹಿಡಿದ ಭುಜಗಳನ್ನು ರಕ್ಷಿಸಿ: ಡಾ.ಹಂಸಲೇಖ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಗೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ: ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ

0
ಲೋಕಸಭೆ ಚುನಾವಣೆಯಲ್ಲಿ ಕೊಪ್ಪಳ ಕ್ಷೇತ್ರದ ಟಿಕೆಟ್‌ ಕೈತಪ್ಪಿದ ಹಿನ್ನೆಲೆ ಬಿಜೆಪಿ ವಿರುದ್ದ ಮುನಿಸಿಕೊಂಡಿದ್ದ ಹಾಲಿ ಸಂಸದ ಸಂಗಣ್ಣ ಕರಡಿ ಅವರು ತಮ್ಮ ಸಂಸದ ಸ್ಥಾನಕ್ಕೆ ಮತ್ತು ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ...