Homeಕರ್ನಾಟಕರಾಜಕಾರಣಿಗಳು, ರೈತರು, ಹೋರಾಟಗಾರರ ವಿರುದ್ಧದ 43 ಪ್ರಕರಣ ಹಿಂತೆಗೆತ : ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌

ರಾಜಕಾರಣಿಗಳು, ರೈತರು, ಹೋರಾಟಗಾರರ ವಿರುದ್ಧದ 43 ಪ್ರಕರಣ ಹಿಂತೆಗೆತ : ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌

- Advertisement -
- Advertisement -

ಹಾಲಿ ಕೇಂದ್ರ ಮತ್ತು ರಾಜ್ಯ ಸಚಿವರು, ಮಾಜಿ ಸಚಿವರು, ಹಾಲಿ ಮತ್ತು ಮಾಜಿ ಶಾಸಕರು, ಕನ್ನಡಪರ ಹೋರಾಟಗಾರರು, ರೈತ ಮುಖಂಡರು, ವಿವಿಧ ಸಂಘಟನೆಗಳ ಪದಾಧಿಕಾರಿಗಳಿಗೆ ಸಂಬಂಧಿಸಿದಂತೆ ರಾಜ್ಯದ ವಿವಿಧ ಪೊಲೀಸ್‌ ಠಾಣೆಗಳಲ್ಲಿ ದಾಖಲಾಗಿರುವ 43 ಕ್ರಿಮಿನಲ್‌ ಪ್ರಕರಣಗಳನ್ನು ಹಿಂಪಡೆಯುವುದಕ್ಕೆ ಆಕ್ಷೇಪಿಸಿ ಸಲ್ಲಿಸಿರುವ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಗುರುವಾರ (ಫೆ.27) ನೋಟಿಸ್‌ ಜಾರಿ ಮಾಡಿದೆ.

ಬೆಂಗಳೂರು ಮೂಲದ ವಕೀಲ ಗಿರೀಶ್ ಭಾರದ್ವಾಜ್ ಸಲ್ಲಿಸಿದ್ದ ಅರ್ಜಿಗೆ ಪ್ರತಿಕ್ರಿಯಿಸುವಂತೆ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಮತ್ತು ನ್ಯಾಯಮೂರ್ತಿ ಎಂ.ಐ. ಅರುಣ್ ಅವರನ್ನೊಳಗೊಂಡ ವಿಭಾಗೀಯ ಪೀಠವು, ಪ್ರಾಸಿಕ್ಯೂಷನ್, ಕಾನೂನು ಮತ್ತು ಪೊಲೀಸ್ ಇಲಾಖೆಗಳಿಗೆ ನಿರ್ದೇಶನ ನೀಡಿ, ಮಾರ್ಚ್ 17ಕ್ಕೆ ವಿಚಾರಣೆಯನ್ನು ಮುಂದೂಡಿದೆ.

ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ 43 ಪ್ರಕರಣಗಳನ್ನು ಹಿಂಪಡೆಯಲು ಸಿಆರ್‌ಪಿಸಿಯ ಸೆಕ್ಷನ್ 321 ರ ಅಡಿಯಲ್ಲಿ ಪಬ್ಲಿಕ್ ಪ್ರಾಸಿಕ್ಯೂಟರ್‌ಗಳಿಗೆ ನಿರ್ದೇಶನ ನೀಡಿ ರಾಜ್ಯ ಸರ್ಕಾರವು ಅಕ್ಟೋಬರ್ 15, 2024 ರಂದು ಹೊರಡಿಸಿದ ಅಧಿಸೂಚನೆಯನ್ನು ಅರ್ಜಿದಾರರು ಪ್ರಶ್ನಿಸಿದ್ದಾರೆ.

ಅರ್ಜಿದಾರ ಪರ ವಕೀಲ ವೆಂಕಟೇಶ್‌ ದಳವಾಯಿ ಅವರು ವಾದ ಮಂಡಿಸಿ “ರಾಜ್ಯ ಸರ್ಕಾರವು ಸರ್ಕಾರಿ ಅಭಿಯೋಜಕರಿಗೆ ನಿರ್ದೇಶನ ನೀಡಲಾಗದು. ಸಿಆರ್‌ಪಿಸಿ ಸೆಕ್ಷನ್‌ 321ರ ಅಡಿ ಸರ್ಕಾರಿ ಅಭಿಯೋಜಕರಿಗೆ ಅಂತಿಮ ನಿರ್ಣಯ ತೆಗೆದುಕೊಳ್ಳುವ ಅಧಿಕಾರವಿದೆ. ಸರ್ಕಾರಿ ಅಭಿಯೋಜಕರ ಕಚೇರಿಯು ಅಂಚೆ ಕಚೇರಿಯ ರೀತಿ ನಡೆದುಕೊಳ್ಳಲಾಗದು ಎಂದು ಸುಪ್ರೀಂ ಕೋರ್ಟ್‌ ತೀರ್ಪೊಂದರಲ್ಲಿ ಹೇಳಿದೆ. ಪ್ರಕರಣ ಹಿಂಡೆಯುವಂತೆ ಅಭಿಯೋಜಕರಿಗೆ ಸರ್ಕಾರ ಒತ್ತಡ ಹಾಕಲಾಗದು. ಪ್ರಕರಣಗಳನ್ನು ಹಿಂಪಡೆಯಲು ಅರ್ಹವಾಗಿಲ್ಲ ಎಂದು ಕಾನೂನು ಮತ್ತು ಅಭಿಯೋಜನಾ ಇಲಾಖೆಯು ಟಿಪ್ಪಣಿಯಲ್ಲಿ ಹೇಳಿವೆ. ಅದಾಗ್ಯೂ, ಸರ್ಕಾರ ಆದೇಶ ಮಾಡಿದೆ” ಎಂದಿದ್ದಾರೆ.

“ಹಲವು ಆರೋಪಿಗಳ ಮೇಲೆ ದೊಂಬಿ, ಕೊಲೆ ಪ್ರಯತ್ನ, ಪೊಲೀಸ್‌ ಅಧಿಕಾರಿಗಳ ಮೇಲೆ ಹಲ್ಲೆ ಮತ್ತು ಅತಿಕ್ರಮ ಪ್ರವೇಶದಂಥ ಗಂಭೀರ ಆರೋಪಗಳಿವೆ. ಸಾಮಾಜಿಕ ಮಾಧ್ಯಮದಲ್ಲಿನ ಪೋಸ್ಟ್‌ಗೆ ಆಕ್ಷೇಪಿಸಿ ಹುಬ್ಬಳ್ಳಿಯಲ್ಲಿ ಒಂದು ಕೋಮಿನವರು ಹಳೇ ಹುಬ್ಬಳ್ಳಿ ಠಾಣೆಯ ಮೇಲೆ ಕಲ್ಲು ತೂರಾಟ ನಡೆಸಿದ್ದ ಸಂಬಂಧ ದಾಖಲಾಗಿರುವ ಪ್ರಕರಣವೂ ಇದರಲ್ಲಿ ಸೇರಿದೆ. ಹಾಗಾಗಿ, ಪ್ರಕರಣ ಹಿಂಪಡೆಯುವ ಸರ್ಕಾರದ ಆದೇಶವನ್ನು ಅಮಾನತುಗೊಳಿಸಬೇಕು” ಎಂದು ಕೋರಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಪೀಠ “ವಿಚಾರಣಾಧೀನ ನ್ಯಾಯಾಲಯುವ ಇನ್ನಷ್ಟೇ ಸರ್ಕಾರಿ ಅಭಿಯೋಜಕರ ಅರ್ಜಿಯನ್ನು ಪರಿಶೀಲಿಸಬೇಕಿದೆ. ಇದಕ್ಕೂ ಮೊದಲೇ ನಾವು ನಿರ್ಧರಿಸಲಾಗದು. ಈ ಆದೇಶವನ್ನು ವಿಚಾರಣಾಧೀನ ನ್ಯಾಯಾಲಯಕ್ಕೆ ತೋರಿಸಿದರೆ ಪ್ರಕರಣ ಹಿಂಪಡೆಯಲು ಯಾವುದೇ ನ್ಯಾಯಾಲಯ ಅನುಮತಿಸುವುದಿಲ್ಲ. ಒಂದೊಮ್ಮೆ ಸಕ್ಷಮ ನ್ಯಾಯಾಲಯ ಅದಕ್ಕೆ ಅನುಮತಿಸಿದರೆ ಅಪಾಯ ತಂದುಕೊಳ್ಳಲಿದೆ” ಎಂದು ಮೌಖಿಕವಾಗಿ ಹೇಳಿದೆ.

ಇಡ್ಲಿ ತಯಾರಿಕೆಯಲ್ಲಿ ಪ್ಲಾಸ್ಟಿಕ್‌ ಬಳಕೆ; ರಾಜ್ಯದ 52 ಹೋಟೆಲ್‌ಗಳ ವಿರುದ್ಧ ಕ್ರಮ – ದಿನೇಶ್ ಗುಂಡೂರಾವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...